Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಯಾದಗಿರಿ: ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಹೇಳಿಕೆ ನೀಡಿದ್ದು, ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ ಎಂದಿದ್ದಾರೆ. ಅಬ್ಬೆತುಮಕೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದು ರೈತರ, ವರ್ತಕರ ಹಾಗೂ ಮಠದ ಭಕ್ತರ ಆಸೆ. ಎಲ್ಲಾ ಜನರ ಸಂಕಲ್ಪದಿಂದ ಒಂದು ದಿನ ಸಿಎಂ ಆಗೇ ಆಗ್ತಾರೆ. ಯಾವ ದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬುವುದನ್ನು ಹೇಳೋಕೆ ಆಗಲ್ಲ ಎಂದರು. ಅಬ್ಬೆತುಮಕೂರು ವಿಶ್ವಾರಾಧ್ಯರ ಗದ್ದುಗೆಗೂ ಬಂದಿದ್ದೇನೆ. ಅವರ ಆಶೀರ್ವಾದವೂ ಡಿಕೆಶಿಗೆ ಸಿಗಲಿ. ಆ ಪರಮಾತ್ಮನ ಆಶೀರ್ವಾದವೂ ಡಿಕೆಶಿಗೆ ಸಿಗಲಿ ಎಂದು ಸ್ವಾಮೀಜಿ ಪ್ರಾರ್ಥನೆ ಮಾಡಿದ್ದಾರೆ. ರಾಜ ಪ್ರತ್ಯಕ್ಷ್ಯ ದೇವರಾಗಲಿ ಎಂದು ಹಾರೈಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ದಲಿತರ ಹಣ ದುರ್ಬಳಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಂದೋಲನ ರೂಪಿಸಿದೆ. ಅದಕ್ಕೆ ಬಿಜೆಪಿಯ ದಲಿತಪರ ಚಿಂತನೆ, ಅವರ ಪರವಾದ ಯೋಜನೆಗಳೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಈ ವಿಷಯವನ್ನು ತೀಕ್ಷ್ಣವಾಗಿ ಪರಿಗಣಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು. ಕೌನ್ಸಿಲರ್ ಚುನಾವಣೆ ಹತ್ತಿರದಲ್ಲಿರುವಂತೆ ಕಾಣುತ್ತಿದೆ. ಕೋರ್ಟಿನ ಆದೇಶದ ಕಾರಣ ಚುನಾವಣೆ ನಡೆಯುವ ಸಾಧ್ಯತೆ ಇದೆ. ನಾವು ಜನರನ್ನು ಭೇಟಿ ಮಾಡಿ ಮನೆಮನೆಗೆ ಹೋಗಿ ಅವರನ್ನು ಪ್ರೇರೇಪಿಸಬೇಕು. ಬಿಜೆಪಿ ಕಾರ್ಯಕರ್ತರನ್ನು ನಾವು ಉತ್ತೇಜಿಸಬೇಕು ಎಂದು ಮನವಿ ಮಾಡಿದರು. ಈ ಹೋರಾಟಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ಧಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು. ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್ , ಎಲ್ಲ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಈ ಮನೆಹಾಳ ಕಾಂಗ್ರೆಸ್ ಸರಕಾರ ನೀಡಿದೆ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ರಾಯಚೂರು: ಎರಡು ಕುಟುಂಬಗಳ ಮಧ್ಯೆ ನಡೆದಿದ್ದ ಮಾರಾಮಾರಿಯನ್ನು ಬಿಡಿಸಲು ಹೋಗಿದ್ದ ವ್ಯಕ್ತಿಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದಲ್ಲಿ ನಡೆದಿದೆ. ಮಡುವು ಗ್ರಾಮದಲ್ಲಿ ಮಾರ್ಚ್ 3ರ ರಾತ್ರಿ ನಡೆದಿದ್ದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಮಾನ್ವಿ ಪೊಲೀಸರು ಉರುಕುಂದ, ವೇಂಕಟೇಶ್, ಗೋಕಯ್ಯ, ತಿಮ್ಮಪ್ಪ ಸೇರಿ ಏಳು ಜನರು ಬಂಧಿಸಿದ್ದಾರೆ. ದೂರು, ಪ್ರತಿ ದೂರು ದಾಖಲಾಗಿದೆ. ಗ್ರಾಮದ ಹೊರ ಭಾಗದಲ್ಲಿ ಹಳ್ಳದ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾಮಗಾರಿಯ ಬೋರ್ಡ್ಗೆ ಆರೋಪಿ ವಿರೇಶ್ ಟ್ರ್ಯಾಕ್ಟರ್ ಗುದ್ದಿಸಿದ್ದ ಈ ವಿಚಾರವಾಗಿ ಕಾಮಗಾರಿ ಮಾಡಿಸುತ್ತಿದ್ದ ವೆಂಕೋಬಾ ಹಾಗೂ ವಿರೇಶ್ ನಡುವೆ ಗಲಾಟೆ ನಡೆದಿದೆ. ವೆಂಕೋಬಾ ಹಾಗೂ ವಿರೇಶ್ ನ ಕುಟುಂಬಗಳ ನಡುವೆ ಈ ವಿಚಾರಕ್ಕೆ ಹೊಡೆದಾಟ ನಡೆದಿತ್ತು. ಈ ವೇಲೆ ಜಗಳ ಬಿಡಿಸಲು ಭೀಮಪ್ಪ ಹೋಗಿದ್ದು, ಈ ವೇಳೆ ಭೀಮಪ್ಪನನ್ನು ದೊಣ್ಣೆ, ರಾಡ್ ಗಳಿಂದ ಹೊಡೆದು ವಿರೇಶ್ ಹಾಗೂ ಆತನ ಕಡೆಯವರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.…
ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಲಾರಿ ಚಾಲಕ ಶೇಖರ್ ಹಾಗೂ ಟ್ರಕ್‌ನ ಚಾಲಕ ಉತ್ತರ ಪ್ರದೇಶ ಅಲಿಗಡ ಜಲ್ಲೆಯ ಉದಲ ಇಲಿಯಾಸ್ ಪುರದ ನಿವಾಸಿ ಜುಬುರುದ್ದೀನ್ (52) ಮತ್ತು ಕ್ಲಿನರ್ ಮಹಮ್ಮದ್ ಖೈಫ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಂದು ಬೆಳಿಗ್ಗೆ 5.30ರ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಬೆಂಗಳೂರಿನಿಂದ ಮುಂಬೈಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಿಂದಾಗಿ ಎರಡೂ ವಾಹನಗಳೂ ಜಖಂಗೊಂಡಿದ್ದು, ರಸ್ತೆ ಯಲ್ಲಿ ಕಲ್ಲಂಗಡಿ ಹಣ್ಣು ಬಿದ್ದು ಹರಡಿಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್ ಜಾತ್ಯತೀತ ದಳದ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಮಂಗಳವಾರ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಹಾಗೂ ಇತರ ನಾಯಕರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಬುಧವಾರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸ್ವಂತ ಹಣವೆಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಯಾವಾಗ ಬೇಕೋ ಆಗ ಮಾತ್ರ ಜಮೆ ಮಾಡುತ್ತಾರೆ. ಬಹುತೇಕ ಚುನಾವಣಾ ಸಂದರ್ಭದಲ್ಲೇ ಗೃಹಲಕ್ಷ್ಮಿ ಹಣ ಬಿಡುಗಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರಾದ ಶರವಣ, ಮಂಜೇಗೌಡ, ಎಂ.ಟಿ.ಕೃಷ್ಣಪ್ಪ, ಶಾರದ ಪೂರ್ವಿನಾಯಕ್, ಕರ್ರೆಯಮ, ಹರೀಶ್‌ಗೌಡ, ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ವ್ಯವಸ್ಥೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲವೆಡೆ ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ. ಅದು ಬಡವರಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಗ್ಯಾರಂಟಿ ಬಿಟ್ಟು ಕೊಡುವ ವ್ಯವಸ್ಥೆ ತರುವ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಮಾಹಿತಿ ನೀಡಿದ್ದೇನೆ. ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ, ಮೂರು ತಿಂಗಳ ಕಂತುಗಳು ಬಾಕಿ ಉಳಿದಿವೆ. ಈಗ ಅದನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಸದನದ ಕಾರ್ಯಕಲಾಪಗಳ ನೇರಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರ ಮಾತು ಪ್ರಸಾರವಾಗುತ್ತಿಲ್ಲ ಎಂದು ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಸಂಬಂಧ ಪಟ್ಟ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಕಲಾಪವನ್ನು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಗಿತ್ತು. ಭೋಜನ ವಿರಾಮದ ಬಳಿಕವೂ ಪ್ರತಿಪಕ್ಷ ನಾಯಕರ ಭಾಷಣ ಪ್ರಸಾರವಾಗಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ಬಗ್ಗೆ ತನಿಖೆ ಕೈಗೊಂಡು ಸಂಬಂಧಪಟ್ಟ ಮುಖ್ಯಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಇದಕ್ಕೆ ಬಿಜೆಪಿ ಸದಸ್ಯರು ಕಿರಿಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳದೆ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದಾದ ಕೆಲವು…
ಬೆಂಗಳೂರು: ಯಡಿಯೂರಪ್ಪ ಲಿಂಗಾಯತರೇ ಅಲ್ಲ, ಬಳೆಗಾರ ಶೆಟ್ಟರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಮತ್ತೆ ಯಡಿಯೂರಪ್ಪ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದಿದ್ದಾರೆ. ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲ್ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದರು. ಆದರೆ ಅವರು ವೀರಶೈವರು ಮತ್ತು ಪಂಚಮಸಾಲಿಗಳಿಗೆ ಮೀಸಲಾತಿ ನೀಡದೆ, ಮೋಸ ಮಾಡಿದರು ಎಂದು ಯತ್ನಾಳ್ ಆರೋಪಿಸಿದರು. ಬಿಜೆಪಿಯನ್ನು ಯಡಿಯೂರಪ್ಪ ಲಿಂಗಾಯತರ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಅನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ನಮ್ಮ ಆಕ್ಷೇಪ ಇರುವುದು ಕುಟುಂಬ ರಾಜಕಾರಣದ ಬಗ್ಗೆ ಮಾತ್ರ ಎಂದು ಯತ್ನಾಳ್ ಹೇಳಿದರು. ರೇಣುಕಾಚಾರ್ಯ ಯತ್ನಾಳ್ ಅವರನ್ನು ನಾಯಿ ನರಿ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಿಗಳಿಗೆ ನಿಯತ್ತು ಇದೆ. ಆದರೆ ಹಂದಿಗಳಿಗೆ ನಿಯತ್ತು…
ತುಮಕೂರು: ಶಿರಾ ತಾಲೂಕಿನಲ್ಲಿ ಪ್ರತಿನಿತ್ಯ 50 ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಹೈನುಗಾರಿಕೆ ಬಗ್ಗೆ ರೈತರಿಗೆ ಹೆಚ್ಚು ತರಬೇತಿ ನೀಡಿ 1 ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವುದು ಈ ನಮ್ಮ ಗುರಿ, ಪ್ರತಿದಿನ 25 ಲೀಟರ್ ಹಾಲು ಉತ್ಪಾದನೆ ಮಾಡಿ ಡೈರಿಗೆ ಹಾಕುವ 160 ರೈತರಿಗೆ ತರಬೇತಿ ನೀಡಿ, ಉತ್ಪಾದನೆಯಲ್ಲಿ ಹೆಚ್ಚಳ ಮಾಡಿಕೊಳ್ಳುವಂತೆ ಅರಿವು ಮೂಡಿಸಲಾಗಿದ್ದು, ಹೆಚ್ಚು ಹಾಲು ಉತ್ಪಾದನೆಯಿಂದ ಬಡ ರೈತ ಕುಟುಂಬಗಳ ಆರ್ಥಿಕ ಸದೃಢತೆಗೆ ಮತ್ತಷ್ಟು ಬಲ ನೀಡಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು. ಶಿರಾ ನಗರದ ನಂದಿನಿ ಕ್ಷೀರ ಭವನದಲ್ಲಿರುವ ಡಾ.ವರ್ಗಿಸ್ ಕುರಿಯನ್ ಸಭಾಂಗಣದಲ್ಲಿ ಮಂಗಳವಾರ ಪ್ರಗತಿಪರ ಹಾಲು ಉತ್ಪಾದಕರಿಗೆ ಆಯೋಜಿಸಿದ್ದ ವೈಜ್ಞಾನಿಕ ಹೈನುಗಾರಿಕೆ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ಹೈನುಗಾರಿಕೆ ಬಗ್ಗೆ ಸಂಪನ್ಮೂಲ ವ್ಯಕ್ತಿ ನೀಡುವಂತಹ ಮಾಹಿತಿಯನ್ನು ಪಡೆದು ತಮ್ಮ ಹೈನುಗಾರಿಕೆಯಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಹಾಲು ಉತ್ಪಾದಕರಾಗಬಹುದು. ಹಾಲು ಉತ್ಪಾದಕರು ಮ್ಯಾಟ್ ಸೇರಿದಂತೆ…