Author: admin

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶಗಳು ಮತ್ತು ಅಶ್ಲೀಲ ವಿಡಿಯೋಗಳನ್ನು ಕಳುಹಿಸುವ ಮೂಲಕ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ನವೀನ್ ಕೆ. ಎಂದು ಗುರುತಿಸಲಾಗಿದ್ದು, ವೈಟ್‌ ಫೀಲ್ಡ್‌ನಲ್ಲಿರುವ ಕಂಪನಿಯೊಂದರಲ್ಲಿ ಡೆಲಿವರಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರಿಗೆ ನವೀನ್‌ ಝೆಡ್ ಎಂಬ ಫೇಸ್‌ ಬುಕ್ ಬಳಕೆದಾರ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಆಕೆ ಆತನ ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿಕೊಳ್ಳದಿದ್ದರೂ, ಆರೋಪಿ ಮೆಸೆಂಜರ್ ಮೂಲಕ ಕಳೆದ ಮೂರು ತಿಂಗಳಿನಿಂದ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ನಟಿ ಅವನನ್ನು ಬ್ಲಾಕ್ ಮಾಡಿದ ನಂತರ, ಆ ವ್ಯಕ್ತಿ ಹಲವಾರು ಹೊಸ ನಕಲಿ ಖಾತೆಗಳನ್ನು ಸೃಷ್ಟಿಸಿ ತನ್ನ ಖಾಸಗಿ ಭಾಗಗಳನ್ನು ಒಳಗೊಂಡಂತೆ ಹಲವಾರು ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ್ದಾನೆ. ಪದೇ ಪದೆ ಎಚ್ಚರಿಕೆ ನೀಡಿದ್ದರೂ ಕಿರುಕುಳ ಮುಂದುವರೆದಿದೆ ಎಂದು ಅವರು ಆರೋಪಿಸಿದ್ದಾರೆ. ನವೆಂಬರ್ 1 ರಂದು ಆರೋಪಿ ಮತ್ತೆ ಆಕೆಗೆ ಸಂದೇಶ ಕಳುಹಿಸಿದಾಗ, ಮಹಿಳೆ ಇಲ್ಲಿನ ರೆಸ್ಟೋರೆಂಟ್‌…

Read More

ಬೆಂಗಳೂರು: ಭಾರತದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪರಿಶಿಷ್ಟ ಪಂಗಡಗಳನ್ನು ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಪಕ್ಷದ ರಾಜ್ಯ ಪ್ರಧಾನ ಕಚೇರಿ ‘ಜಗನ್ನಾಥ ಭವನ’ದಲ್ಲಿ ನಡೆದ ಬಿಜೆಪಿಯ ಎಸ್‌ ಟಿ ಮೋರ್ಚಾ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, 2014 ರಿಂದ ಸಮುದಾಯವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಬುಡಕಟ್ಟು ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಯೋಜನೆಗಳ ಬಗ್ಗಮ ಮಾಹಿತಿ ನೀಡಿದರು. ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯನ್ನು ‘ಜನಜಾತಿಯ ಗೌರವ್ ದಿವಸ್’ ಎಂದು ಘೋಷಿಸುವ ಮೋದಿಯವರ ನಿರ್ಧಾರವನ್ನು ಶ್ಲಾಘಿಸಿದರು. ಇದು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬುಡಕಟ್ಟು ಜನಾಂಗದವರ ಪಾತ್ರವನ್ನು ಮತ್ತು ಸ್ಥಳೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವ ಅವರ ಪ್ರಯತ್ನಗಳನ್ನು ಅಂಗೀಕರಿಸುತ್ತದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು: ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ.ಮೇಟಿ ಮಂಗಳವಾರ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಕಾರಣ ಕೆಲ ದಿನಗಳಿಂದ ಬೆಂಗಳೂರಿನ ಜಯನಗರದ  ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಅವರ ಪಾರ್ಥಿವ ಶರೀರದ ದರ್ಶನ ಮಾಡಿದ್ದಾರೆ. ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಕೂಡಗಿ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ದೊಡ್ಡ ನಿಂಗಯ್ಯರವರು ಬಲಿಯಾದ ಹಿನ್ನೆಲೆಯಲ್ಲಿ ಗ್ರಾಮದ ಕುಟುಂಬಗಳಿಗೆ ಅರಣ್ಯ ಇಲಾಖೆ ವತಿಯಿಂದ ಸೋಮವಾರ ಆಹಾರ ಕಿಟ್ ವಿತರಿಸಿದರು. ತಾಲೂಕಿನ ಕೂಡಗಿ ಗ್ರಾಮದಲ್ಲಿ ಶುಕ್ರವಾರದಂದು ಹುಲಿ ದಾಳಿಗೆ ದೊಡ್ಡ ನಿಂಗಯ್ಯ ರವರು ಮೃತಪಟ್ಟ  ಹಿನ್ನೆಲೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಸಾರ್ವಜನಿಕರ ಸಭೆ ನಡೆಸಿದ್ದು, ಹುಲಿ ದಾಳಿಗೆ ಹೆದರಿ ರೈತರು  ಜಮೀನುಗಳಿಗೆ ಹೋಗಲು ಭಯಪಡುವದರಿಂದ ಅರಣ್ಯ ಇಲಾಖೆ ವತಿಯಿಂದ ಕೂಡಗಿ ಮತ್ತು ಕುರ್ಣೇಗಾಲ ಗ್ರಾಮದ ಕುಟುಂಬಗಳಿಗೆ ಆಹಾರ ಕಿಟ್ ನೀಡಬೇಕು ಎಂದು ಸೂಚನೆ ನೀಡಿದ್ದರು. ಈ ಸೂಚನೆ ಮೇರೆಗೆ ಮೇರೆಗೆ ಕಿಟ್ ವಿತರಿಸಲಾಯಿತು. ಮೊಳೆಯೂರು ವಲಯ ಅರಣ್ಯಾಧಿಕಾರಿ ಅಮೃತಾ ಮಾಯಪ್ಪ ಈ ಸಂದರ್ಭದಲ್ಲಿ ಮಾತನಾಡಿ, ದೊಡ್ಡ ನಿಂಗಯ್ಯನವರ ಹಿನ್ನೆಲೆಯಲ್ಲಿ ಈ ಭಾಗದ ಜನರು ಕೂಲಿ ಹಾಗೂ ಜಮೀನಿನಲ್ಲಿ ಕೆಲಸ ಮಾಡಲು ಹೋಗುತ್ತಿಲ್ಲವಾದ್ದರಿಂದ ಮೂರು ದಿನಗಳಿಂದ  ಆಹಾರದ ಕಿಟ್ ನೀಡುತ್ತಿದ್ದೇವೆ. 100 ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹಾಗೂ ಡ್ರೋನ್ ಕ್ಯಾಮರಾ ಮತ್ತು ಸಾಕಾನೆ…

Read More

ಸರಗೂರು:  ತಾಲೂಕಿನ ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಶಾಸಕ, ಅರಣ್ಯ ಮತ್ತು ವಸತಿ ವಿಹಾರ ಸಂಸ್ಥೆಗಳ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು. ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಸೋಮವಾರ ಮುಳ್ಳೂರು–ಬಿರ್ವಾಳ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸರಗೂರು ಈ ಮೊದಲು ಹೋಬಳಿ ಕೇಂದ್ರವಾಗಿತ್ತು. ಆನಂತರ ಕೋಟೆಯಿಂದ ಬೇರ್ಪಟ್ಟು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಿತ್ತು. ಹೀಗಾಗಿ ಸರಗೂರು ಹೋಬಳಿ ಕೇಂದ್ರವಾಗಿಯೇ ಇದೆ. ಅದನ್ನು ಹೀಗಾಗಿ ಸರಗೂರು ಹೋಬಳಿ ಎಂಬುದನ್ನು ತೆಗೆದುಹಾಕಿ ಮುಳ್ಳೂರನ್ನು ಹೋಬಳಿ ಕೇಂದ್ರವನ್ನಾಗಿ ಮಾಡಲು ಸರಕಾರದೊಂದಿಗೆ ಚರ್ಚಿಸಿ ಮಾಡಲಾಗುವುದು ಎಂದು ಅವರು ಹೇಳಿದರು. ಪಿಯು ಕಾಲೇಜು: ಮುಳ್ಳೂರು ಭಾಗದ ಹತ್ತಾರು ಗ್ರಾಮಗಳಿಗೆ ಹೃದಯ ಭಾಗವಾಗಿದ್ದು, ಜನಸಂಖ್ಯೆಯು ಹೆಚ್ಚಿದೆ. ಇಲ್ಲಿಂದ ನೂರಾರು ವಿದ್ಯಾರ್ಥಿಗಳು ನಂಜನಗೂಡು, ಸರಗೂರು, ಹೆಡಿಯಾಲಕ್ಕೆ ಹೋಗುತ್ತಿರುವುದು ಗಮನಕ್ಕೆ ಬಂದಿದ್ದು, ಪಿಯು ಕಾಲೇಜು ಮಂಜೂರಿಗೆ ಶ್ರಮಿಸಲಾಗುವುದು. ಇದಲ್ಲದೆ ಬ್ಯಾಂಕ್ ತೆರೆಯಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಚರ್ಚಿಸಲಾಗುವುದು…

Read More

ಕೊರಟಗೆರೆ : ಬೀದಿ ಬದಿ ವ್ಯಾಪಾರಿಗಳು ಸುರಕ್ಷಿತ ಸ್ಥಳದಲ್ಲಿ ಕುಳಿತು ವ್ಯಾಪಾರ ಮಾಡದೇ ನಡು ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ವ್ಯಾಪಾರದ ವೇಳೆ ವಾಹನಗಳಿಂದ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ದ ಪ.ಪಂ. ಸದಸ್ಯರು ಸೋಮವಾರ ಸಾಮಾನ್ಯ ಸಭೆಯಲ್ಲಿ ಅಸಾಮಾಧಾನ ವ್ಯಕ್ತಪಡಿಸಿದ್ದು ಕಂಡು ಬಂದಿತ್ತು. ಪ.ಪಂ ಅಧ್ಯಕ್ಷೆ ಅನಿತಾ ನೇತೃತ್ವದಲ್ಲಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮುಂಜಾನೆ 5 ರಿಂದಲೇ ಪೋಸ್ಟ್ ಆಫೀಸ್ ಹತ್ತಿರ ನಡು ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರದ ವಹಿವಾಟುವಿನಲ್ಲಿ ತೊಡಗಿದ್ದು, ಖಾಸಗಿ ಬಸ್‌ ಗಳು ನಗರದೊಳಗೆ ವೇಗವಾಗಿ ಸಂಚರಿಸುವುದರಿಂದ ರಸ್ತೆಯಲ್ಲಿ ವ್ಯಾಪಾರ ಮಾಡುವ ಜನರಿಗೆ ನೋವುಂಟಾದರೆ ಹೊಣೆ ಯಾರು? ಇದಕ್ಕೆ ಪ.ಪಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸುರಕ್ಷಿತ ಸ್ಥಳದಲ್ಲಿ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಿ ಮುಂದೆ ನಡೆಯುವ ದುರಂತವನ್ನು ತಪ್ಪಿಸುವಂತೆ ಒತ್ತಾಯ ಮಾಡಿದರು.  ಬೀದಿ ನಾಯಿಗಳ ಶಾಸ್ತ್ರ ಚಿಕಿತ್ಸೆಗೆ ಚಿಂತನೆ: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಬಲಿಯಾಗುತ್ತಿರುವ ಪ್ರಕರಣಗಳ ಸಂಖೈ ದಿನನಿತ್ಯ…

Read More

ಕೊರಟಗೆರೆ: ಉದ್ಯೋಗ ಹರಸಿ ಬೆಂಗಳೂರಿಗೆ ಪ್ರಯಾಣಿಸುವಂತಹ ಸಮಸ್ಯೆ, ಆದರೆ ವಾರದ ಮೊದಲ ದಿನ ಸೋಮವಾರ ಮಾತ್ರ ಪ್ರಯಾಣಿಕರು ಗಂಟೆ ಗಟ್ಟಲೆ ಬಸ್‌ ಗಾಗಿ ಕಾಯುವಂತಹ ಪರಿಸ್ಥಿತಿ ಎದುರಾಗಿದ್ದು, ಬೇಸತ್ತ ಪ್ರಯಾಣಿಕರು ಸೋಮವಾರ ಮುಂಜಾನೆ ಕೆಎಸ್‌ ಆರ್‌ ಟಿಸಿ ಬಸ್ ತಡೆದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಾವಗಡ, ಮಧುಗಿರಿ ಮಾರ್ಗದಿಂದ ಬರುವಂತಹ ಕೆಎಸ್‌ ಆರ್‌ ಟಿಸಿ ಬಸ್‌ ಗಳು ಭರ್ತಿಯಾಗಿ ಬರುತ್ತಿರುವ ಕಾರಣ ನಿಲ್ದಾಣದಲ್ಲಿ ನಿಲ್ಲಿಸುತ್ತಿಲ್ಲಾ, ಕೆಲ ಬಸ್‌ಗಳು ಪಟ್ಟಣದೊಳಗೆ ಬಾರದೆ ಬೈಪಾಸ್ ಮೂಲಕವೇ ಹೋಗುತ್ತಿವೆ, ಎಂದು ಗಂಟೆ ಗಟ್ಟಲೆ ಬಸ್‌ಗಾಗಿ ಕಾದು ಬೇಸೆತ್ತು ಕೆಲ ನಿಮಿಷಗಳ ಕಾಲ ಬಸ್ ತಡೆದು ಆಕ್ರೋಶ ಹೊರಹಾಕಿದ್ದಾರೆ. ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವ ತನಕ ಬಸ್ ಮುಂದಕ್ಕೆ ಬಿಡುವುದಿಲ್ಲಾ, ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಬರಲು ಹೇಳಿ ಪ್ರಯಾಣಿಕರ ನೋವನ್ನು ಗಮನಿಸುವಂತೆ ತಿಳಿಸಿ ಎಂದು ಪ್ರಯಾಣಿಕರು ಸಾರಿಗೆ ಬಸ್ ಚಾಲಕ, ನಿರ್ವಾಹಕರಿಗೆ ಸೂಚನೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ಮಧ್ಯಪ್ರವೇಶದಿಂದ ಪ್ರಯಾಣಿಕರು ಮತ್ತು…

Read More

ಮಂಡ್ಯ: ಮಂಡ್ಯ ಜಿಲ್ಲೆಯ ಸಗ್ಯ ಗ್ರಾಮದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ರೈತ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಪ್ರಕಾರ, ರೈತ ರಮೇಶ್ (38) ಎಂಬುವವರು ತಮ್ಮ ಹೊಲದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿಗಳಿಗೆ ತಗುಲಿವೆ. ಇದರಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತೆಲಂಗಾಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದಲ್ಲಿ ನಡೆದಿದೆ. ಚೆವೆಲ್ಲಾ ಎಸಿಪಿ ಬಿ ಕಿಶನ್ ಪ್ರಕಾರ, ಆರ್‌ ಟಿಸಿ ಬಸ್ ತಂಡೂರಿನಲ್ಲಿ ಹೊರಟಿದ್ದು, ಚೆವೆಲ್ಲಾ ತಲುಪಬೇಕಿತ್ತು. “ಟ್ರಕ್ ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿತ್ತು. ಈ ಅಪಘಾತದಲ್ಲಿ ಟ್ರಕ್ ಚಾಲಕ ಮತ್ತು ಹಲವು ಬಸ್ ಪ್ರಯಾಣಿಕರು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ” ಎಂದು ಎಸಿಸಿ ಇಂದು ಮುಂಜಾನೆ ಹೇಳಿದ್ದರು. ಇದಾದ ಬಳಿಕ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿ 24ಕ್ಕೆ ತಲುಪಿದೆ. ರಾಜೇಂದ್ರನಗರ ಡಿಸಿಪಿ ಯೋಗೇಶ್ ಗೌತಮ್, “ಟ್ರಕ್ ಚಾಲಕ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತ ಸಂಭವಿಸಿದೆಯೇ ಅಥವಾ ತಪ್ಪು ದಿಕ್ಕಿನಲ್ಲಿ ಚಾಲನೆ ಮಾಡುತ್ತಿದ್ದನೇ ಎಂದು ನಾವು ಪರಿಶೀಲಿಸಬೇಕಾಗಿದೆ” ಎಂದಿದ್ದಾರೆ. ಬಸ್‌ ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಮತ್ತು ಡಿಕ್ಕಿಯ ನಂತರ ಟ್ರಕ್‌ ನಲ್ಲಿದ್ದ ಜಲ್ಲಿಕಲ್ಲು ಪ್ರಯಾಣಿಕರ ಮೇಲೆ…

Read More

ಬೆಳಗಾವಿ: ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ. ಖಾನಾಪುರ ತಾಲೂಕಿನ ಸುಳೇಗಾಳಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಜೊಡಾನೆಗಳು ಸಾವನ್ನಪ್ಪಿದ್ದವು. ಆನೆಗಳ ಹಿಂಡಿನಿಂದ ಬಂದ ಸರಿಸುಮಾರು ನಾಲ್ಕು ವರ್ಷಗಳ ವಯಸ್ಸಿನ ಒಂದು ಗಂಡು, ಒಂದು ಹೆಣ್ಣು ಆನೆ ಮೃತಪಟ್ಟಿದ್ದವು. ಘಟನೆ ತಿಳಿಯುತ್ತಿದ್ದಂತೆ ನಾಗರಗಾಳಿ ವಲಯದ ಆರ್‌ಎಫ್‌ ಓ ಸಚೀನ ಹೊನಮನಿ, ಡಿಎಫ್‌ ಓ ಕ್ರಾಂತಿ ಅಧಿಕಾರಿಗಳ ತಂಡದಿಂದ ಸ್ಥಳ ಪರೀಶಿಲನೆ ನಡೆಸಲಾಗಿತ್ತು. ಮೃಗಾಲಯ…

Read More