Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ತುರುವೇಕೆರೆ: ತಾಲೂಕಿನ ಮಲ್ಲಾಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಶನಿವಾರ ತುರುವೇಕೆರೆ ಮಲ್ಲಾಘಟ್ಟ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಮಲ್ಲಾಘಟ್ಟದ ಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಮಾಣವಚನ ಸ್ವೀಕಾರ ವೇಳೆ ಹಿಂದೂ ಸಂಪ್ರದಾಯ ಅನುಸರಿಸಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣಿಗಿಂತ ಭಕ್ತಿ ಮುಖ್ಯ. ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ ವೈಯಕ್ತಿಕವಾದದ್ದು. ಪ್ರಮಾಣವಚನ ಕಾರ್ಯಕ್ರಮಕ್ಕೆ ಹಿಂದೂ, ಕ್ರೈಸ್ತ, ಸಿಖ್, ಬೌದ್ಧ ಸೇರಿದಂತೆ ಎಲ್ಲಾ ಧರ್ಮಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿತ್ತು ಎಂದರಲ್ಲದೆ ರಾಜ್ಯದ ಹಿತ ಕಾಪಾಡುವ ಜವಾಬ್ದಾರಿ ತಮ್ಮ ಮೇಲಿದ್ದು ಎಲ್ಲ ಧರ್ಮಗಳ ಆಶೀರ್ವಾದ ಪಡೆಯುವ ಉದ್ದೇಶದಿಂದ ಆ ರೀತಿಯ ಕಾರ್ಯಕ್ರಮ ನಡೆಸಲಾಗಿತ್ತು ಎಂದು ಸ್ಪಷ್ಟಪಡಿಸಿದರು. ಮಲ್ಲಾಘಟ್ಟದ ಗಂಗಾಧರೇಶ್ವರನಿಗೆ ಹರಕೆ ಹೊತ್ತಿದ್ದೀರಾ ಎಂಬ ಪ್ರಶ್ನೆಗೆ, ಯಾವುದೇ ಹರಕೆ ಇಲ್ಲ. ಇದು ನನ್ನ…
ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡು ಬೀಳ್ಕೊಡುಗೆ ಮಾಡಿದರು. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಲ್ಲೂಕಿನ ಅಂಚೆಪಾಳ್ಯ ರಾಷ್ಟ್ರೀಯ ದಾರಿ 75 ರ ಮೂಲಕ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡು ಸಿದ್ದೇಶ್ವರ ಅಜ್ಜಯ್ಯನ ಮಠಕ್ಕೆ ತೆರಳುವ ಮಾರ್ಗ ಮಧ್ಯೆ ಕುಣಿಗಲ್ ತಾಲ್ಲೂಕಿನ ಗಡಿ ಗ್ರಾಮವಾದ ಅಂಚೆಪಾಳ್ಯದ ಕೈಗಾರಿಕಾ ವಲಯದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ನೇತೃತ್ವದಲ್ಲಿ ಕುಣಿಗಲ್ ತಾಲ್ಲೂಕಿನ ಸಾವಿರಾರು ಅಭಿಮಾನಿಗಳು ನೂತನ ಮುಖ್ಯಮಂತ್ರಿಗಳನ್ನ ಸ್ವಾಗತಿಸಿ ಬೃಹದಾಕಾರವಾದ ಸೇಬಿನ ಹಾರವನ್ನ ಹಾಕಿ ಪಟಾಕಿ ಸಿಡಿಸಿ ಡಿ.ಕೆ., ಡಿ.ಕೆ., ಎಂdu ಮುಖ್ಯಮಂತ್ರಿಗೆ ಜಯ ಘೋಷಣೆ ಕೂಗಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು, ನೆರೆದಿದ್ದ ಕಾರ್ಯಕರ್ತರತ್ತ ಕೈ ಬಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೋಗಟ್ಟ ರಾಜಣ್ಣ, ಕೆಪಿಸಿಸಿ ಸದಸ್ಯರಾದ ಬೇಗೂರು ನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಗೌಡ, ಜಿಲ್ಲಾ ಪಂಚಾಯಿತಿ ಮಾಜಿ…
ಬೆಂಗಳೂರು: ಐದು ವರ್ಷದ (ವರದಿಗಳ ಪ್ರಕಾರ ಆರು ವರ್ಷ) ಮಗಳನ್ನು ಕೊಲೆ ಮಾಡಿದ ಆರೋಪದ ಮೇಲೆ 39 ವರ್ಷದ ಮಹಿಳೆ ಮತ್ತು ಆಕೆಯ ಲಿವ್-ಇನ್ ಸಂಗಾತಿಯ ವಿರುದ್ಧ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆನ್ನೆಲಾ ಎಂಬ ಮಗು ಈ ವರ್ಷದ ಮಾರ್ಚ್ 25 ರಂದು ಶವವಾಗಿ ಪತ್ತೆಯಾಗಿತ್ತು. ಇದೀಗ ಮಗುವಿನ ತಂದೆ ನೀಡಿದ ದೂರಿನ ಮೇರೆಗೆ ಆಕೆಯ ಪತ್ನಿ ಪ್ರಿಯಾಂಕಾ ಮತ್ತು ಆಕೆಯ ಲಿವ್-ಇನ್ ಸಂಗಾತಿ ಮೋಹನ್ ಜಿ ವಿರುದ್ಧ ಕೊಲೆ (BNS ಸೆಕ್ಷನ್ 103), ಸಾಕ್ಷ್ಯ ನಾಶ (ಸೆಕ್ಷನ್ 238) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ಮೋಹನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರರ ಪ್ರಕಾರ, ಅವರು 2007 ರಲ್ಲಿ ಪ್ರಿಯಾಂಕಾ ಅವರನ್ನು ವಿವಾಹವಾಗಿದ್ದರು ಮತ್ತು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಆದರೆ ದಂಪತಿ ನಡುವೆ ವೈವಾಹಿಕ ಭಿನ್ನಾಭಿಪ್ರಾಯ ತಲೆದೋರಿತ್ತು. 2025 ರಲ್ಲಿ ಪ್ರಿಯಾಂಕಾ ತನ್ನ ಹಳೇ ಸ್ನೇಹಿತ…
ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಮುಗುಳೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳ ವೋಲ್ವೇಜ್ ಸ್ಥಿತಿ ಉತ್ತಮಪಡಿಸಲು ಮತ್ತು ಭವಿಷ್ಯದಲ್ಲಿ ವಿದ್ಯುತ್ ಹೊರೆ ಸರಿದೂಗಿಸುವ ಸಲುವಾಗಿ ಮುಗುಳೂರು ಗ್ರಾಮದಲ್ಲಿ ಉದ್ದೇಶಿತ 2×20ಎಂ.ವಿ.ಎ, 110/11ಕೆವಿ ವಿದ್ಯುತ್ ಉಪಸ್ಥಾವರ ಮತ್ತು ಹಾಲಿ ಇರುವ 110ಕೆವಿ ಕೆ.ಬಿ.ಕ್ರಾಸ್–ಮಾಯಸಂದ್ರ ಮಾರ್ಗದಿಂದ ಉದ್ದೇಶಿತ ಉಪಸ್ಥಾವರದವರೆಗೆ 4.270ಕಿಮೀ ಉದ್ದದ 110ಕೆವಿ ಲಿಲೋ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯು ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಕೆ.ವಲಿಗೇರಹಳ್ಳಿ ಗ್ರಾಮದ ಸರ್ವೆ 6, ಬೊಮ್ಮನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 116, 110, 88, 98, 97, 96, 95, 22, 77, 76, 75, 74, 30, 22, 29, 31, 169, ಮುಗುಳೂರು ಗ್ರಾಮದ ಸರ್ವೆ ಸಂಖ್ಯೆ 215, 220, 214, 212, 211, 193, 192, 191, 201, 199, 190ರಲ್ಲಿ ಹಾದು ಹೋಗುತ್ತದೆ. ಈ ಯೋಜನೆಯ ಬಗ್ಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ…
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ ಸೇವಾಸಿಂಧು https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. 2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದರೆ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.…
ತುಮಕೂರು: ಸರ್ಕಾರ ನಿಗದಿಪಡಿಸಿರುವ ಸುತ್ತೋಲೆ ಆದೇಶವನ್ನು ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆಯಲ್ಲಿ ಓರ್ವ ರಾಜಸ್ವ ನಿರೀಕ್ಷಕರು ಹಾಗೂ ಮೂವರು ಗ್ರಾಮ ಆಡಳಿತಾಧಿಕಾರಿಗಳಿಗೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಸೂಚನಾ ಪತ್ರ ರವಾನಿಸಿದ್ದಾರೆ. ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಶಿಷ್ಟಾಚಾರ ಪಾಲನೆ ಮಾಡುವುದು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರ ಕರ್ತವ್ಯವಾಗಿರುತ್ತದೆ. ಆದರೆ, ಈ ತಾಲ್ಲೂಕಿನಲ್ಲಿ ತಹಸಿಲ್ದಾರ್ ಅವರ ಶಿಷ್ಟಾಚಾರವನ್ನು ಕಸಬಾ ಹೋಬಳಿ ಟೌನ್ ವ್ಯಾಪ್ತಿಗೆ ಸೇರುವ ಗ್ರಾಮ ಆಡಳಿತಾಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ಪಾಲನೆ ಮಾಡದೆ ಸರ್ಕಾರದ ಸುತ್ತೋಲೆಯನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ. ಶಿಷ್ಟಾಚಾರ ಪಾಲನೆ ಮಾಡುವ ಬಗ್ಗೆ ಈಗಾಗಲೇ ಸಭೆಗಳಲ್ಲಿ ಸೂಚಿಸಿದ್ದರೂ ಸಹ ಕ್ರಮ ವಹಿಸಿರುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದಕಾರಣ, ಕೆಳಕಂಡ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ಪ್ರತಿನಿತ್ಯ ಬೆಳಗ್ಗೆ 9.30ಕ್ಕೆ ತಾಲ್ಲೂಕು ಕಚೇರಿಗೆ ಹಾಜರಾಗಿ ತಹಶೀಲ್ದಾರ್ ಅವರನ್ನು ಭೇಟಿ ಮಾಡುವುದು ಮತ್ತು ಸಂಜೆ 6ಗಂಟೆಗೆ ತಾಲ್ಲೂಕು ಕಚೇರಿಯಲ್ಲಿ ತಹಸಿಲ್ದಾರ್ ಅವರನ್ನು ಭೇಟಿ ಮಾಡಲು…
ತುಮಕೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್ ಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ, ಮುಂಬರುವ ತಮ್ಮ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ರಾಜ್ಯದ ಹೆಚ್ಚಿನ ಅಭಿವೃದ್ಧಿ ಹಾಗೂ ಜನ ಕಲ್ಯಾಣಕ್ಕಾಗಿ ಕೆಲಸ ಮಾಡಲಿ ಎಂದು ಅವರು ಹಾರೈಸಿದ್ದಾರೆ. ಆದರೆ, ನೂತನ ಸಂಪುಟ ರಚನೆ ಮತ್ತು ಕಾಂಗ್ರೆಸ್ ನ ಆಂತರಿಕ ರಾಜಕೀಯದ ಕುರಿತು ಶಾಸಕ ಸುರೇಶ್ ಗೌಡ ತೀವ್ರ ಅಸಮಾಧಾನ ಹಾಗೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇವತ್ತಿನ ಸಂಪುಟ ರಚನೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಇದರಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಆಯ್ಕೆಯ ಒಬ್ಬನೇ ಒಬ್ಬ ಸಚಿವರೂ ಇದ್ದಂತೆ ಕಾಣುತ್ತಿಲ್ಲ. ಯಾವುದೇ ಒಬ್ಬ ಹೊಸ ನಾಯಕ ಅಧಿಕಾರಕ್ಕೆ ಬಂದಾಗ, ತಮ್ಮದೇ ಆದ ಆಯ್ಕೆಯ ಜನರನ್ನು ಇಟ್ಟುಕೊಂಡು ಆಡಳಿತ ನಡೆಸಲು ಬಯಸುವುದು ಸಹಜ. ಆದರೆ, ಕಾಂಗ್ರೆಸ್ ಪಕ್ಷದೊಳಗಿರುವ ಆಂತರಿಕ ಹಿತಾಸಕ್ತಿಗಳು ಹಾಗೂ ಬಣ ರಾಜಕೀಯದ ಕಾರಣದಿಂದಾಗಿ ಎಲ್ಲರೂ ಸೇರಿಕೊಂಡು ಶಿವಕುಮಾರ್ ಅವರ ಕೈಕಾಲುಗಳನ್ನು…
ತುಮಕೂರು: ನಿರುದ್ಯೋಗಿ ಯುವಕ–ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುಮಕೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಇಂಟಿಗ್ರೇಟೆಡ್ ಪರ್ಸನಲ್ ಸರ್ವೀಸ್ ಲಿಮಿಟೆಡ್ ಸಂಸ್ಥೆಯು ಜಂಟಿಯಾಗಿ ಜೂನ್ 9ರಂದು ನೇರ ಸಂದರ್ಶನವನ್ನು (Walk–in Interview) ಆಯೋಜಿಸಿದೆ. ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಖಾಲಿ ಇರುವ ಹುದ್ದೆಗಳ ವಿವರಗಳು: ಡಾಟಾ ಎಂಟ್ರಿ ಆಪರೇಟರ್ (Data Entry Operator) ಟೆಲಿಕಾಲರ್ಸ್ (Telecallers) ಡೆಲಿವರಿ ಬಾಯ್ಸ್ (Delivery Boys) ಫೀಲ್ಡ್ ಟೆಕ್ನೀಷಿಯನ್ (Field Technician) ಫೀಲ್ಡ್ ಎಕ್ಸಿಕ್ಯೂಟಿವ್ (Field Executive) ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ (Field Sales Executive) ರೀಟೇಲ್ ಡಿಸೈನ್ ಕನ್ಸಲ್ಟೆಂಟ್ (Retail Design Consultant) ಸಂದರ್ಶನದ ಸಮಯ ಮತ್ತು ಸ್ಥಳ: ದಿನಾಂಕ: ಜೂನ್ 9 ಸಮಯ: ಬೆಳಿಗ್ಗೆ 10:00 ಗಂಟೆಯಿಂದ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ. ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ,…
ಪಾವಗಡ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ಆವರಣದಲ್ಲಿ ಮಂಗಳವಾರ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಸಿಡಿಪಿಓ ಸುನಿತಾ ಅವರು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಭೂಮಿಯ ವಾತಾವರಣದ ಸಮತೋಲನ ಕಾಪಾಡಲು ಪ್ರಕೃತಿ ರಕ್ಷಣೆ ಅತ್ಯಗತ್ಯ. ಪ್ರಕೃತಿಯನ್ನು ಹಾಳು ಮಾಡಿದರೆ ಮನುಷ್ಯನ ಉಳಿವೇ ಪ್ರಶ್ನೆ. ಗಿಡ-ಮರ ಬೆಳೆಸಿ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ನಾಗರಾಜ್, ಪಿಡಿಓ ರಂಗಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ವಸಂತ್ ಕುಮಾರ್, ಶಿಕ್ಷಕರಾದ ಪೃಥ್ವಿರಾಜ್, ಸರಸ್ವತಿ, ಪ್ರಕಾಶ್, ಜಯಣ್ಣ, ಇಲಾಖೆಯ ನಂದೀಶ್ ಹಾಗೂ ಅಂಗನವಾಡಿ ಶಿಕ್ಷಕರು ಉಪಸ್ಥಿತರಿದ್ದರು. ಸಿ.ಕೆ.ಪುರ ಸರ್ಕಾರಿ ಮಾದರಿ ಶಾಲೆ, ಶಾಂತಿನಿಕೇತನ, ಜ್ಞಾನವಾಹಿನಿ ಮತ್ತು ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆಯ ಕುರಿತು ತಮ್ಮ ಕಲ್ಪನೆಯನ್ನು ಚಿತ್ರಗಳ ಮೂಲಕ ಅನಾವರಣಗೊಳಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ…
ತುಮಕೂರು: ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಸಬಲೀಕರಣದ ಉದ್ದೇಶದಿಂದ ತುಮಕೂರು ನಗರ ಪೊಲೀಸ್ ಇಲಾಖೆಯ ‘ಅಕ್ಕಪಡೆ’ ತಂಡ ನಗರದಾದ್ಯಂತ ವಿಶೇಷ ಜಾಗೃತಿ ಅಭಿಯಾನವನ್ನು ನಿರಂತರವಾಗಿ ನಡೆಸುತ್ತಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಖ್ಯ ನೇತೃತ್ವದಲ್ಲಿ, ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ತಕ್ಷಣದ ರಕ್ಷಣೆ ಒದಗಿಸುವುದರ ಜೊತೆಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ತುಮಕೂರು ವಿಶ್ವವಿದ್ಯಾನಿಲಯದ ಮುಂಭಾಗ, ಗೆದ್ದಲಹಳ್ಳಿ ಸಿಗ್ನಲ್, ಜಿಲ್ಲಾ ಆಸ್ಪತ್ರೆ ಹಾಗೂ ಮಾರುಕಟ್ಟೆ ಪ್ರದೇಶ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಅಕ್ಕಪಡೆ ವಾಹನಗಳು ದಿನವೂ ಸಂಚರಿಸುತ್ತಿವೆ. ಕಾಲೇಜಿಗೆ ತೆರಳುವ ವಿದ್ಯಾರ್ಥಿನಿಯರು ಮತ್ತು ಹಾಸ್ಟೆಲ್‌ಗಳಲ್ಲಿ ವಾಸಿಸುವ ಹೆಣ್ಣುಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸಂಜೆ ವೇಳೆಯಲ್ಲಿ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗಿ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ…