Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕದ ಬಸ್ ಸಂಚಾರ ಸುಗಮವಾಗಿದ್ದು ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಈ ಹಂತದಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಪರ ಸಂಘಟನೆಗಳ ಕರೆ ನೀಡಿರುವ ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯೆ ನೀಡಿದರು. ಕರ್ನಾಟಕದ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಹಲ್ಲೆಯಾದ ಘಟನೆ ನಡೆದ 8 ದಿನ ಆಗಿದೆ. ಆರಂಭದಲ್ಲಿ ಒಂದೆರೆಡು ದಿನ ಪ್ರತಿಭಟನೆಗಳಾಗಿದ್ದವು. ಯಾವುದೇ ಹಾನಿಯಾಗಿಲ್ಲ ಎಂದು ಅವರು ಹೇಳಿದರು. ಮಹಾರಾಷ್ಟ್ರದಲ್ಲೂ ನಮ್ಮ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಮಸಿ ಬಳಿದಿದ್ದರು. ಅದಕ್ಕೂ ಪ್ರತಿಭಟನೆಗಳು ನಡೆದಿವೆ ಎಂದು ಹೇಳಿದರು. ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟಗಳಿಗೆ ನಮ್ಮ ಬೆಂಬಲವಿದೆ. ಆದರೆ ಈ ಸಂದರ್ಭದಲ್ಲಿ ಬಂದ್ ಅಗತ್ಯವಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: . ಪಾವಗಡ ತಾಲೂಕಿನ ಕೆ.ಟಿ. ಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಐದು ವರ್ಷದ ಅವಧಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಒಟ್ಟು ನಾಲ್ಕು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಡಿ .ಬಿ .ಲೋಕೇಶ್ ಪಾಳೆಗಾರ್ ಹೊರತುಪಡಿಸಿ ಉಳಿದ ಮೂರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇದೇ ಸಹಕಾರ ಸಂಘದ ಚುನಾವಣೆಯಲ್ಲಿ ಮಹಿಳಾ ಮೀಸಲು ಕ್ಷೇತ್ರದಿಂದ ಎಂ.ನಾಗವೇಣಿ, ವರಲಕ್ಷ್ಮಿ ಡಿ ಹಾಗೂ ಹಿಂದುಳಿದ ವರ್ಗ ಎ.ಮುದ್ದಯ್ಯ ಮತ್ತು ಹಿಂದುಳಿದ ವರ್ಗ ಬಿ.ಕೆ.ಆರ್. ರಂಗಸ್ವಾಮಿ, ಸಾಲಗಾರರಲ್ಲದ ಕ್ಷೇತ್ರದಲ್ಲಿ ಆರ್.ಎಚ್. ನಾಗರಾಜ್ ಇವರುಗಳು ಆಯ್ಕೆಯಾಗಿರುತ್ತಾರೆ. ಒಟ್ಟು 12 ಸ್ಥಾನಗಳಿದ್ದು, ಆರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿಕೆ 6 ಸ್ಥಾನಗಳಿಗೆ ಫೆಬ್ರವರಿ 9 ನೇ ತಾರೀಕು ಚುನಾವಣೆ ನಡೆಯಲಿದೆ. ವರದಿ : ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೀದರ್: ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಗಣಿತ, ಶಿಕ್ಷಣಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗಳು ಸೋಮವಾರ ಸುಸೂತ್ರವಾಗಿ ನಡೆದವು. ಒಟ್ಟು 16,545 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,751 ವಿದ್ಯಾರ್ಥಿಗಳು ಪರೀಕ್ಷೆ ಬರೆದರು ಒಟ್ಟು 794 ವಿದ್ಯಾರ್ಥಿಗಳು ಗೈರು ಹಾಜರಾದರು. ಗಣಿತ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 13,222 ವಿದ್ಯಾರ್ಥಿಗಳ ಪೈಕಿ 12,792 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. 430 ವಿದ್ಯಾರ್ಥಿಗಳು ಗೈರಾಗಿದ್ದರು. ಶಿಕ್ಷಣಶಾಸ್ತ್ರ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 649 ವಿದ್ಯಾರ್ಥಿಗಳ ಪೈಕಿ 551 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 98 ವಿದ್ಯಾರ್ಥಿಗಳು ಗೈರಾಗಿದ್ದರು. ವ್ಯವಹಾರ ಅಧ್ಯಯನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,674 ವಿದ್ಯಾರ್ಥಿಗಳ ಪೈಕಿ 2,408 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು.266 ವಿದ್ಯಾರ್ಥಿಗಳು ಗೈರಾಗಿದ್ದರು. ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆಗಳು ನಡೆದಿದ್ದು ಯಾವುದೇ ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು : ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ ಕೃಷಿ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಮೈಸೂರು ವತಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ವಿಕಸಿತ ಬಜೆಟ್ @2047 ಛಾಯಾಚಿತ್ರ ಪ್ರದರ್ಶನಕ್ಕೆ ಪ್ರಥಮ ಬಹುಮಾನ ವಿಭಾಗದಲ್ಲಿ ಬಹುಮಾನ ದೊರೆತಿದೆ. ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ನಡೆದ ಪ್ರದರ್ಶನದಲ್ಲಿ ವಿಕಸಿತ ಭಾರತ ಬಜೆಟ್ 2025–26, ಪಿಎಂ ಇಂಟರ್ನ್ಶಿಪ್ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ವೆವ್ಸ್ 2025, ಪಿಎo ಸೂರ್ಯ ಘರ್, ವಿಕಸಿತ ಭಾರತಕ್ಕೆ ಪ್ರಧಾನ ಮಂತ್ರಿಯವರ ದೂರದೃಷ್ಠಿ 2047 ಹಾಗೂ ಇತರೆ ಯೋಜನೆಗಳ ಛಾಯಾಚಿತ್ರ ಪ್ರದರ್ಶನದ ಜೊತೆಗೆ ಯೋಜನೆಗಳ ಫಲಾನುಭವಿಗಳು ಹಂಚಿಕೊಂಡಿರುವ ಅನಿಸಿಕೆಗಳು ಮತ್ತು ಇತರೆ ಮಾಹಿತಿಯನ್ನು ವಿಡಿಯೋ ಮೂಲಕ ಬಿತ್ತರಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಇಲಾಖೆಗಳು, ಸರ್ಕಾರೇತರ ಸಂಸ್ಥೆಗಳು ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಿದ್ದಗಂಗಾ…
ಔರಾದ: ಸರ್ಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯ ಔರಾದ (ಬಾ)ನಲ್ಲಿ 2023–24ನೇ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಇನ್ನೂ ಸಿಕ್ಕಿಲ್ಲ, ಹೀಗಾಗಿ NSUI AURAD ವತಿಯಿಂದ ಔರಾದ (ಬಾ)ರವರ ಮುಖಾಂತರ ಉನ್ನತ ಶಿಕ್ಷಣ ಸಚಿವ ಡಾ.ಎಮ್.ಸಿ.ಸುಧಾಕರ ಅವರಿಗೆ ಮನವಿ ಸಲ್ಲಿಸಲಾಯಿತು. NSUI AURAD ತಾಲೂಕು ಅಧ್ಯಕ್ಷರಾದ ಚಂದು ಡಿ.ಕೆ. ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕಲ್ಬುರ್ಗಿ ವಿಶ್ವವಿದ್ಯಾಲಯ ಅಡಿಯಲ್ಲಿ ನಡೆಯುತ್ತಿರುವ ಪ್ರಥಮ ದರ್ಜೆ ಮಹಾ ವಿದ್ಯಾಲಯ ಔರಾವ (ಬಾ)ನಲ್ಲಿ 2023–24ನೇ ಸಾಲಿನಲ್ಲಿ ಉತ್ತಿರ್ಣರಾಗಿ 1 ಬಿ.ಎ. ಮತ್ತು ಬಿ.ಎಸ್.ಸಿ. ವಿದ್ಯಾರ್ಥಿಗಳ ಅಂತಿಮ ವರ್ಷದ ಅಂಕಪಟ್ಟಿ ಸುಮಾರು ಎರಡು ವರ್ಷಗಳಾದರೂ ಈವರೆಗೆ ಸಿಕ್ಕಿಲ್ಲ, ಕಾಲೇಜಿನ ಪ್ರಾಂಶುಪಾಲರಿಗೆ ಸುಮಾರು ಬಾರಿ ಕೇಳಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು. ಅಂಕಪಟ್ಟಿ ಸಿಗದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಕತ್ತಲೆ ಆಗಿದೆ. ಆದರಿಂದ ತಾವುಗಳು ಎಂಟು ದಿವಸದ ಒಳಗೆ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ವಿಶ್ವ ವಿದ್ಯಾಲಯದ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ…
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತುಮಕೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಬಿಸಿಲಿನಲ್ಲಿಯೇ ಸಾಲುಗಟ್ಟಿ ನಿಂತಿದ್ದ ರೈತರಿಗೆ ಕೂಡಲೇ ನೆರಳಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸ್ಥಳದಲ್ಲಿಯೇ ಕೃಷಿ ಉತ್ಪನ್ನ ಮಾರುಕಟ್ಟೆ ಉಪನಿರ್ದೇಶಕ ರಾಜಣ್ಣ ಹಾಗೂ ಖರೀದಿ ಅಧಿಕಾರಿ ರುದ್ರಪ್ಪ ಅವರಿಗೆ ಸೂಚನೆ ನೀಡಿದರು. ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುತ್ತಿರುವುದರಿಂದ ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಬೇಕು. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಬೇಕು. ಸರ್ಕಾರ ನಿಗಧಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ಸರ್ಕಾರವು ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಪ್ರತಿ…
ತುಮಕೂರು : ಜಿಲ್ಲೆಯಲ್ಲಿ ಏಪ್ರಿಲ್ 7, 8ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದ್ದು, ಕ್ರೀಡಾಕೂಟ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ನೌಕರರು ಕ್ರೀಡಾಕೂಟದಲ್ಲಿ ತಪ್ಪದೆ ಭಾಗವಹಿಸಬೇಕು. ಕ್ರೀಡಾಕೂಟ ಜರುಗಲಿರುವ 2 ದಿನಗಳಂದು ನೌಕರರಿಗೆ ವಸತಿ, ಊಟದ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಚಿಕಿತ್ಸಾ ವಾಹನ, ಪ್ರಥಮ ಚಿಕಿತ್ಸಾ ಘಟಕ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್. ನರಸಿಂಹರಾಜು ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವವರು ತಮ್ಮ ಹೆಸರನ್ನು ಆನ್ ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಕೂಟಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಮೇಶ್, ಜಿಲ್ಲಾ ಆರೋಗ್ಯ…
ತುಮಕೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿ ಸೇರಿದಂತೆ 2023–24ನೇ ಸಾಲಿನ ಮೆಟ್ರಿಕ್ ನಂತರದ ಕೆಲವು ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯ ಕಲ್ಪಿಸಲು ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಆನ್ ಲೈನ್ https://ssp.postmatric.karnataka.gov.in ಮೂಲಕ ಮಾರ್ಚ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770005, ದೂ.ವಾ.ಸಂ.1902ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆದು ಕಟ್ಟಡ ನಿರ್ಮಿಸುತ್ತಿರುವ ಸಾರ್ವಜನಿಕರು ಮಳೆ ನೀರು ಕೊಯ್ಲ(Rain water harvesting structure)ನ್ನು ನಿರ್ಮಿಸಿಕೊಳ್ಳಲು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೂಚಿಸಿದ್ದಾರೆ. ಎಲ್ಲಾ ವಸತಿ, ವಾಣಿಜ್ಯ ಹಾಗೂ ಇತರೆ ಕಟ್ಟಡಗಳಿಗೆ ಸಂಬಂಧಿಸಿದಂತೆ 100 ಚದರ ಮೀಟರ್ ಅಥವಾ ಹೆಚ್ಚು ಇರುವ ವಿಸ್ತೀರ್ಣದ ಕಟ್ಟಡಗಳಿಗೆ ಮಳೆ ನೀರು ಕೊಯ್ಲನ್ನು ನಿರ್ಮಿಸಿಕೊಳ್ಳಬೇಕು. ಈ ಕುರಿತು ಪಾಲಿಕೆ ವತಿಯಿಂದ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳು ಸ್ಥಳ ಪರಿಶೀಲನೆ ಮಾಡಲಿದ್ದು, ತಪ್ಪಿದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಪ್ರತಿ ದಿನ ವಿವಿಧ ಕೆಲಸಗಳ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಶಾಖೆಗಳಿಗೆ ಕಚೇರಿ ವೇಳೆಯಲ್ಲಿ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಅಧಿಕಾರಿ/ಸಿಬ್ಬಂದಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ ಅವರು, ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರನ್ನು ಸಮಾಧಾನದಿಂದ ಮಾತನಾಡಿಸಿ ಸ್ಪಂದಿಸಬೇಕು. ತಕ್ಷಣವೇ ಪರಿಹಾರ ಕೊಡಿಸಲು ಸಾಧ್ಯವಾಗದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಕ್ರಮವಹಿಸಬೇಕೆಂದು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೌಕರಿ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಜನರ ಸೇವೆ ಮಾಡುವ ಅವಕಾಶವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಸಿಬ್ಬಂದಿಗಳು ಸಕಾಲದಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡದೇ ಹೋದರೆ ಅದರ ಪರಿಣಾಮ ಜಿಲ್ಲಾಡಳಿತದ ಮೇಲೆ ಬೀರುತ್ತದೆ. ಈ ನಿಟ್ಟಿನಲ್ಲಿ ದೂರದ ಊರಿನಿಂದ ಬರುವ ರೈತರು/ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕೆಂದು ಸಿಬ್ಬಂದಿಗಳಿಗೆ ನಿರ್ದೇಶಿಸಿದರು. ಹಳೆಯ ಕಡತಗಳನ್ನು ಅಭಿಲೇಖಾಲಯಕ್ಕೆ ನೀಡಲು ಸೂಚನೆ : ನಂತರ ಮಾತನಾಡಿದ ಅವರು, ಕಳೆದ ವಾರ ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ…