Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ತುಮಕೂರು: ಗೃಹ ಸಚಿವ ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಕನ್ನಡ ಧ್ವಜ ಸ್ತಂಭ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರೆವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೊರಟಗೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಓರ್ವ ಎಎಸ್ ಪಿ, ಇಬ್ಬರು ಡಿವೈಎಸ್ ಪಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿತ್ತು. 2022 ನವೆಂಬರ್ 2 ರಂದು ಕನ್ನಡ ಧ್ವಜ ಸ್ತಂಭವನ್ನ ನಿರ್ಮಿಸಲಾಗಿತ್ತು. ಕೊರಟಗೆರೆ ಪಟ್ಟಣ ಪಂಚಾಯ್ತಿಯಿಂದ ಅನುಮತಿ ಪಡೆಯದೇ ಕನ್ನಡ ಧ್ವಜ ನಿರ್ಮಾಣ ಮಾಡಲಾಗಿತ್ತು. ವಾಹನ ಸಂಚಾರಕ್ಕೆ ಅಡಚಣೆ ಆಗುತ್ತೆ ಎಂದು ಕನ್ನಡ ಧ್ವಜ ಸ್ತಂಭವನ್ನು ಫೆಬ್ರವರಿ 23 ರಂದು ತಡರಾತ್ರಿ ಕೊರಟಗೆರೆ ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಾರ್ಯಚರಣೆ ನಡೆಸಿ ತೆರವುಗೊಳಿಸಲಾಗಿತ್ತು. ತುಮಕೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಕೊರಟಗೆರೆಯಲ್ಲಿ ಧ್ವಜಸ್ತಂಭ ತೆರವುಗೊಳಿಸಿ ಕನ್ನಡದ ಕುಲಕೋಟಿಗೆ…
ತುಮಕೂರು: 1965ರಿಂದ ಉಳುಮೆ ಮಾಡಿಕೊಂಡು ಬಂದಿದ್ದೇವೆ ಸ್ವಾಮಿ? ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅದರ ಬದಲು ಒಂದು ತೊಟ್ಟು ವಿಷ ಕೊಟ್ಟುಬಿಡಿ ನೆಮ್ಮದಿಯಿಂದ ಪ್ರಾಣ ಬಿಡುತ್ತೇವೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಾರ ಪುರ ಗ್ರಾಮದ ಸುಮಾರು ನೂರಕ್ಕೂ ಹೆಚ್ಚು ದಲಿತ ಕುಟುಂಬಗಳು ಅಳಲು ತೋಡಿಕೊಂಡಿದ್ದಾರೆ. ನಮ್ಮ ತಾತ ಮುತ್ತಾತರ ಕಾಲದಿಂದಲೂ ನಾವು ಈ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದೇವೆ. ಈ ಜಮೀನಿನಲ್ಲಿ ಸುಮಾರು 73 ಜನರಿಗೆ ಜಮೀನು ಮಂಜೂರು ಮಾಡಿ ಕೊಟ್ಟಿರುತ್ತಾರೆ. ಇಲ್ಲಿ ನಾವು ತೆಂಗು, ಅಡಿಕೆ, ರಾಗಿ ಮುಂತಾದ ಬೆಳೆಗಳನ್ನು ಮೊದಲಿನಿಂದಲೂ ಬೆಳೆದುಕೊಂಡು ಬಂದಿದ್ದೇವೆ, ಇದರ ಬಗ್ಗೆ ಸುಮಾರು 50 ವರ್ಷದಿಂದ ಆಡಳಿತ ನಡೆಸುತ್ತಿರುವ ಶಾಸಕರುಗಳಿಗೆ ಗಮನಕ್ಕೆ ತಂದರು, ಯಾವ ಪಕ್ಷದ ಶಾಸಕರೂ ನಮ್ಮ ಅಳಲನ್ನು ಕೇಳುತ್ತಾ ಇಲ್ಲ, ವೋಟು ಕೇಳೋದಕ್ಕೆ ಮಾತ್ರ ಬರ್ತಾರೆ, ಆದರೆ ನಮ್ಮ ಸಮಸ್ಯೆ ಬಗೆಹರಿಸುವ ಕೆಲಸ ಯಾವ ಪಕ್ಷದ ಜನಪ್ರತಿನಿಧಿಯೂ ಮಾಡುತ್ತಾ ಇಲ್ಲ ಎಂದು ಆಕ್ರೋಶ…
ಆಳಪ್ಪುಳ: ಗಂಟಲಲ್ಲಿ ಜೀವಂತ ಮೀನು ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಮೀನು ಹಿಡಿಯುತ್ತಿದ್ದ ವೇಳೆ ಈ ಘಟನೆ ಆಕಸ್ಮಿಕವಾಗಿ ನಡೆದಿದೆ ಎಂದು ತಿಳಿದು ಬಂದಿದೆ. ಪುತ್ತುಪ್ಪಳ್ಳಿ ನಿವಾಸಿ ಆದರ್ಶ್ ಅಲಿಯಾಸ್ ಉನ್ನಿ(25) ಮೃತಪಟ್ಟ ಯುವಕನಾಗಿದ್ದಾನೆ. ಭಾನುವಾರ ಸಂಜೆ ಸುಮಾರು 4:30ರ ವೇಳೆ ಈ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಭತ್ತದ ಗದ್ದೆಯಲ್ಲಿ ಮೀನು ಹಿಡಿಯಲು ಉನ್ನಿ ತೆರಳಿದ್ದು, ಈ ವೇಳೆ ಒಂದು ಮೀನನ್ನು ಹಿಡಿದು, ಬಾಯಲ್ಲಿ ಹಿಡಿದುಕೊಂಡು ಇನ್ನೊಂದು ಮೀನನ್ನು ಹಿಡಿಯಲು ಆತ ಯತ್ನಿಸಿದ್ದಾನೆ. ಈ ವೇಳೆ ಏಕಾಏಕಿ ಮೀನು ಗಂಟಲೊಳಗೆ ನುಗ್ಗಿದೆ. ಸ್ನೇಹಿತರು ಮೀನನ್ನು ಹೊರ ತೆಗೆಯಲು ಸಾಕಷ್ಟು ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ, ಬಳಿಕ ತಕ್ಷಣವೇ ಓಚಿರಾದ ಖಾಸಗಿ ಆಸ್ಪತ್ರೆಗೆ ಆತನನ್ನು ಕರೆದೊಯ್ಯಲಾಯಿತು. ಆದರೆ, ಆದರ್ಶ್ ನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆ ಸಂಬಂಧ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
2023 ಸೆಪ್ಟಂಬರ್ ತಿಂಗಳಿನಲ್ಲಿ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಯನ್ನು ರಾಜ್ಯಪಾಲರ ಬದಲಿ ರಾಜ್ಯ ಸರ್ಕಾರವೇ ಇನ್ನು ಮುಂದೆ ಮಾಡುವ ನಿರ್ಧಾರ ಹಾಗೂ ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿಯನ್ನು ತಂದು ಮುಖ್ಯಮಂತ್ರಿಗಳನ್ನು ವಿಶ್ವವಿದ್ಯಾಲಯದ ಚಾನ್ಸಲರ್ ಆಗಿ ಮಾಡಿ, ಕುಲಪತಿಗಳ ನೇಮಕಾತಿಯನ್ನು ಇನ್ನು ಮುಂದೆ ಮುಖ್ಯಮಂತ್ರಿಗಳೇ ಮಾಡುವ ಅಧಿಕಾರ ನೀಡಿರುವ ನಿರ್ಧಾರವು ಅತ್ಯಂತ ಸ್ವಾಗತಾರ್ಹವಾಗಿದ್ದು, ಅನೇಕ ಪ್ರಾಧ್ಯಾಪಕರ, ಬುದ್ಧಿಜೀವಿಗಳ ಹಾಗೂ ಶಿಕ್ಷಣ ತಜ್ಞರ ಪ್ರಸಂಶೆಗೆ ಪಾತ್ರವಾಗಿತ್ತು. ಈ ಹಿಂದೆಯೂ ಸಹ ಕುಲಪತಿಗಳ ನೇಮಕಾತಿಯಲ್ಲಿ ಇರುವ ತೊಂದರೆಗಳನ್ನು ನಿವಾರಿಸಲು ಇಂತಹ ಕ್ರಮಗಳನ್ನು ತೆಗೆದುಕೊಳ್ಳಲು ಹಿಂದಿನ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಗಳು ಸಹ ಆಲೋಚಿಸಿ, ಅನೇಕ ಬಾರಿ ಪ್ರಯತ್ನಿಸಿರುವುದು ನಮ್ಮಲ್ಲೆರಿಗೂ ತಿಳಿದ ವಿಷಯವಾಗಿರುತ್ತದೆ. ಈಗಿನ ಪದ್ಧತಿಯಾದ ʼಶೋಧನಾ ಸಮಿತಿʼಯಿಂದ ಶಿಪಾರಸ್ಸು ಮಾಡಿದ ಮೂರು ಪ್ರಾಧ್ಯಾಪಕರುಗಳ ಹೆಸರುಗಳನ್ನು ಸರ್ಕಾರದಿಂದ ರಾಜ್ಯಪಾಲರಿಗೆ ಕಳುಹಿಸಿ, ರಾಜ್ಯಪಾಲರು ಕೆಲವು ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದೊಂದಿಗೆ…
ಸತ್ನಾ: ಮಾಲಿಕನನ್ನು ರಕ್ಷಿಸಲು ಹುಲಿಯೊಂದಿಗೆ ಹೋರಾಡಿದ ಸಾಕು ನಾಯಿಯೊಂದು ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಫೆಬ್ರವರಿ 26ರಂದು ಬಾಂಧವಗಢ ಹುಲಿ ಅಭಯಾರಣ್ಯದ ಬಳಿ ಈ ಘಟನೆ ನಡೆದಿದೆ. ಶಿವಂ ಬಡ್ಗೈಯಾ ಎಂಬವರು ತಮ್ಮ ಸಾಕು ನಾಯಿ ಜರ್ಮನ್ ಶೆಫರ್ಡ್‌ನೊಂದಿಗೆ ಮನೆಯ ಹೊರಗೆ ಇದ್ದಾಗ, ಹತ್ತಿರದ ಕಾಡಿನಿಂದ ಬಂದ ಹುಲಿ ಶಿವಂ ಬಡ್ಗೈಯಾ ಮೇಲೆ ದಾಳಿ ಮಾಡಲು ಯತ್ನಿಸಿದೆ> ಈ ವೇಳೆ ಸಾಕು ನಾಯಿ ಮಾಲಿಕನಿಗೆ ಅಡ್ಡ ನಿಂತು ಹುಲಿ ಜೊತೆಗೆ ಹೋರಾಡಿದೆ. ಹುಲಿ ನಾಯಿಯನ್ನು ಕಚ್ಚಿ ಎಳೆದೊಯ್ದರೂ, ನಾಯಿ ಹುಲಿಯೊಂದಿಗೆ ತೀವ್ರವಾಗಿ ಹೋರಾಡಿದೆ. ಅಂತಿಮವಾಗಿ ನಾಯಿಯನ್ನು ಬಿಟ್ಟು ಹುಲಿ ಕಾಡಿಗೆ ಹೋಗಿತ್ತು. ತಕ್ಷಣವೇ ನಾಯಿಯನ್ನು ಪಶುವೈದ್ಯರ ಬಳಿಗೆ ಕರೆದೊಯ್ಯಲಾಯಿತು, ಆದರೆ ನಾಯಿ ವಿಪರೀತ ರಕ್ತಸ್ರಾವದಿಂದ ಸಾವನ್ನಪ್ಪಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಲಕ್ನೋ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾ ಮಾಡಿದ್ದಾರೆ. ಎಂಥದೇ ಬಿಕ್ಕಟ್ಟಿನ ಪರಿಸ್ಥಿತಿ ಎದುರಾದರೂ ತಾವು ಬದುಕಿರುವವರೆಗೂ ಪಕ್ಷದಲ್ಲಿನ ಯಾರೂ ತಮ್ಮ ಉತ್ತರಾಧಿಕಾರಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಪಕ್ಷದ ಪ್ರಮುಖ ಸಭೆಯ ನಂತರ ಮಾಯಾವತಿ ಈ ನಿರ್ಧಾರ ಘೋಷಣೆ ಮಾಡಿದ್ದಾರೆ. ಮಾಯಾವತಿಯವರ ತಂದೆ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಮತ್ತು ರಾಜ್ಯಸಭಾ ಸಂಸದ ರಾಮ್ಜಿ ಗೌತಮ್ ಇಬ್ಬರನ್ನೂ ಪಕ್ಷದ ಹೊಸ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಲಾಗಿದೆ. ಬಹುಜನ ಸಮುದಾಯದ ಅಭಿವೃದ್ಧಿ ಉತ್ತರ ಪ್ರದೇಶದ ಪ್ರಗತಿಗೆ ಮಾತ್ರವಲ್ಲ, ಇಡೀ ದೇಶದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು ಮಾಯಾವತಿ ಪ್ರತಿಪಾದಿಸಿದರು. ಪಕ್ಷದ ಉಪಾಧ್ಯಕ್ಷರೂ ಆಗಿರುವ ಆನಂದ್ ಕುಮಾರ್ ಅವರು ತಮ್ಮ ಅನುಪಸ್ಥಿತಿಯಲ್ಲಿ ಆದಾಯ ತೆರಿಗೆ ಮತ್ತು ವ್ಯಾಜ್ಯಗಳಿಗೆ ಸಂಬಂಧಿಸಿದ ವಿಷಯಗಳು ಸೇರಿದಂತೆ ಪಕ್ಷದ ಚಟುವಟಿಕೆಗಳನ್ನು ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು. ಆಕಾಶ್ ಆನಂದ್ ಅವರನ್ನು ಪಕ್ಷದ ಪದಾಧಿಕಾರಿ ಹುದ್ದೆಗಳಿಂದ ವಜಾಗೊಳಿಸುತ್ತಿರುವುದು…
ಉತ್ತರ ಪ್ರದೇಶ: ಶಾಸಕರೊಬ್ಬರ ಕಾರು ಡಿಕ್ಕಿ ಹೊಡೆದ ಪರಿಣಾಮ 4 ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ದಯಾರಾಮ ಪೂರ್ವ ಪಹಾಡಾಪುರ ಬಳಿ ನಡೆದಿದೆ. ಕತ್ರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬವನ್ ಸಿಂಗ್ ಅವರಿಗೆ ಸೇರಿದ ಕಾರು ಅಪಘಾತಕ್ಕೆ ಕಾರಣವಾದ ಕಾರು ಎಂದು ತಿಳಿದು ಬಂದಿದೆ. ರಾಜೇಶ್ ಕುಮಾರ್ ಯಾದವ್ ಎಂಬವರ ನಾಲ್ಕು ವರ್ಷದ ಪುತ್ರಿ ಅಪಘಾತದಲ್ಲಿ ಮೃತಪಟ್ಟವರು. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ವೇಳೆ ಕಾರಿನಲ್ಲಿ ಶಾಸಕರು ಪ್ರಯಾಣಿಸುತ್ತಿರಲಿಲ್ಲ. ಚಾಲಕ ಮತ್ತು ಶಾಸಕರ ಕುಟುಂಬ ಸದಸ್ಯರೊಬ್ಬರು ಕಾರಲ್ಲಿ ತೆರಳುವಾಗ ಘಟನೆ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಯಲಹಂಕ: ಬೈಕ್ ವ್ಹೀಲಿಂಗ್ ಮಾಡಿದ ಯುವಕರಿಗೆ ರಾಜಾನುಕುಂಟೆ ಪೊಲೀಸರು ಬಿಸಿಮುಟ್ಟಿಸಿದ್ದು, ಯುವಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, 2 ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕಿಡಿಗೇಡಿಗಳು ರಾಜಾನುಕುಂಟೆ–ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕ ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದರು. ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು ಗಸ್ತು ಮಾಡುವ ವೇಳೆ ಇದನ್ನು ಪೊಲೀಸರು ಗಮನಿಸಿ ಪ್ರಕರಣ ದಾಖಲಿಸಿದ್ದಾರೆ. ಬೈಕ್ ವ್ಹೀಲಿಂಗ್ ಮಾಡಿದ ಯುವಕರು ಬೆಂಗಳೂರಿನ ಗಂಗಮ್ಮ ಸರ್ಕಲ್ನ ರಾಮಚಂದ್ರಪುರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕಾಶ ಭೂಮಿಗೆ ಇಳಿದರೂ ಸರಿ, ಬಂದ್ ದಿನಾಂಕ ಬದಲಾಯಿಸುವುದಿಲ್ಲ ಎಂದಿದ್ದಾರೆ. ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು ಎಂದು ಒತ್ತಾಯಿಸಿದರು. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳು ಅಭಿವೃದ್ಧಿಯಾಗಬೇಕಾಗಿದೆ. ಕೇಂದ್ರ ಸರ್ಕಾರವು ರಾಜ್ಯವನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಂದೆಂದೂ ಕಂಡಿರದ ಬಂದ್ ಆಗಬೇಕು. ಈಗಾಗಲೇ 1900ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಈ ಬಂದ್ ಕನ್ನಡಿಗರಿಗಾಗಿ ನಡೆಯುತ್ತಿರುವ ಬಂದ್ ಆಗಿದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ವಿಜಯನಗರ: ಸಾಹೇಬ್ರು ಹೇಳಿರೋದರಲ್ಲಿ ತಪ್ಪಿಲ್ಲ, ನೀರಿನ ವಿಚಾರ ಬಂದಾಗ ಎಲ್ಲ ಕಲಾವಿದರೂ ಬೆಂಬಲಿಸಬೇಕು. ಡಾ.ರಾಜ್ ಕುಮಾರ್ ಅವರು ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟ ಮಾಡಿದ್ದಾರೆ. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು ಎಂದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದು ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಡಿಕೆಶಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಂಪಿಯಲ್ಲಿ ಮಾತನಾಡಿದ ಅವರು, ಚಿತ್ರರಂಗದ ನಟ್ಟು ಬೋಲ್ಟು ಟೈಟ್ ಮಾಡುತ್ತೇನೆ ಎಂದು ಡಿಸಿಎಂ ಡಿಕೆಶಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಅವರ ಹೇಳಿಕೆಗೆ ನನ್ನ ಸಹಮತವಿದೆ ಎಂದು ತಿಳಿಸಿದರು. ಸದ್ಯ ನನಗೆ ಯಾವುದೇ ಹೊಸ ಚಿತ್ರಗಳಿಲ್ಲ, ಯೋಜನೆಗಳಿಲ್ಲ, ಸಚಿವ ಜಮೀರ್ ಅಹ್ಮದ್ ಅವರು ಮತ್ತು ವಿಜಯನಗರ ಜಿಲ್ಲಾಡಳಿತ ನನಗೆ ಆಹ್ವಾನ ನೀಡಿದ್ದರು. ಹಾಗಾಗಿ ಬಂದಿದ್ದೇನೆ, ಖುಷಿ ಆಯ್ತು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…