Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಉಗಾರ ಹಾಗೂ ಭೋಜ ಗ್ರಾಮಗಳಲ್ಲಿ ಜೈನ ಮಹಿಳೆಯರಿಗೆ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಉಚಿತ ಹೊಲಿಗೆ ಯಂತ್ರ ತರಬೇತಿ ಕೇಂದ್ರ ಪ್ರಾರಂಭಿಸಲಾಯಿತು. ಅದರ ಜೊತೆಗೆ ಉಗಾರ ಗ್ರಾಮದಲ್ಲಿ ರೇಶನ್ ಕಿಟ್ ವಿತರಣೆ ಮಾಡಲಾಯಿತು. ವರ್ಧಮಾನ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಜೈನ ಮಹಿಳೆಯರಿಗೆ ಆರ್ಥಿಕ ಸಶಕ್ತಿ ಕರಣದ ಅಂಗವಾಗಿ ಉಗಾರ ಹಾಗೂ ಭೋಜ ಗ್ರಾಮಗಳಲ್ಲಿ ಉಚಿತವಾಗಿ ಹೊಲಿಗೆ ತರಬೇತಿ ಕೇಂದ್ರ ಪ್ರಾರಂಭಿಸಲಾಯಿತು. ಈ ಕೇಂದ್ರಗಳಲ್ಲಿ ಬಡ ಮಹಿಳೆಯರಿಗೆ ಉಚಿತ ತರಬೇತಿ ನೀಡಿ, ಅವರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ಕೊಡಲಾಗುವುದು. ಉಗಾರ ಮತ್ತು ಭೋಜ ಗ್ರಾಮಗಳಲ್ಲಿ ಶ್ರಾವಕ- -ಶ್ರಾವಕಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ವರದಿ: ಜೆ.ರಂಗನಾಥ– ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಸಿರಾ: ಸಿರಾ ಅಮರಾಪುರ ಯಮ ಸ್ವರೂಪಿ ಗುಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಟ್ರ್ಯಾಕ್ಟರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಶಿರಾ– ಅಮರಾಪುರ ರಸ್ತೆಯ ಉಗಣೆಕಟ್ಟೆ ಬಳಿ ನಡೆದಿದೆ. ರಾಗಲ ಹಳ್ಳಿಯ ನರಸಿಂಹಮೂರ್ತಿ ಮೃತಪಟ್ಟವರಾಗಿದ್ದಾರೆ. ಯಮ ಸ್ವರೂಪಿ ಗುಂಡಿ ರಸ್ತೆ ಗುಂಡಿಗಳನ್ನು ತಪ್ಪಿಸಿಕೊಂಡು ಟ್ರ್ಯಾಕ್ಟರ್ ಸಾಗುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ನರಸಿಂಹಮೂರ್ತಿ ಆಯತಪ್ಪಿ ಕೆಳಗೆ ಬಿದ್ದಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ. ತಕ್ಷಣ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಇಸ್ಮಾಯಿಲ್ ಜಭಿ ವುಲ್ಲಾ ಖಾನ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ. ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಟಾರ್ ನಟ–ನಟಿಯರು ಗೈರಾದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದರು. ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡೋದು ಗೊತ್ತು. ಇದನ್ನು ವಾರ್ನ್ ಅಂತಾ ಆದ್ರೂ ಅಂದ್ಕೊಳಿ, ಮನವಿ ಅಂತಾ ಆದ್ರೂ ಅನ್ಕೊಳಿ ಎಂದು ಡಿಕೆಶಿ ಹೇಳಿದ್ದರು. ಈ ಸಿನಿಮಾ ನಟರ ಬಗ್ಗೆ ನನಗೆ ಬಹಳ ಸಿಟ್ಟು ಬಂದುಬಿಟ್ಟಿದೆ, ಏಕೆಂದರೆ, ಕೋವಿಡ್ ಮುಗಿದ ಸಮಯದಲ್ಲಿ ನಾವು ನಮ್ಮ ಜಲ ನಮ್ಮ ಹಕ್ಕು ಎಂಬ ಜಾಥಾ ಮಾಡಿದ್ದೆವು, ನಮ್ಮ ಜನರಿಗೆ ನೀರು ಕೊಡುವ ಉದ್ದೇಶದಿಂದಾಗಿ ನಾವು, ಸಿದ್ದರಾಮಯ್ಯನವರು ಪಾದಯಾತ್ರೆ ಮಾಡಿದ್ದೆವು. ಆದರೆ, ಆಗ ಯಾವ ನಟರೂ ಸಹ ನಮಗೆ ಬೆಂಬಲ ಕೊಡಲಿಲ್ಲ, ಸಾಧು ಕೋಕಿಲ ಮತ್ತು ದುನಿಯಾ ವಿಜಿ ಬಿಟ್ಟರೆ ಇನ್ಯಾರೂ ಸಹ ನಮಗೆ ಬೆಂಬಲ ಕೊಡಲಿಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಬಂದ ಕೂಡಲೇ ಸಾಧು…
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಬಿಜೆಪಿ ಯೋಜಿಸಿದೆ. ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಅನಂತನಾಥ ಬಸದಿಯಲ್ಲಿ ಶ್ರೀ ಪದ್ಮಾವತಿ ಮಹಿಳಾ ಮಂಡಲ ಆಯೋಜನೆ ಯಲ್ಲಿ ಶ್ರೀ ವರ್ಧಮಾನ ಪರಿಹಾರ ಸೇವಾ ಟ್ರಸ್ಟ್ ರಾಜಸ್ಥಾನದ ಬಿವಡಿ ಸಹಯೋಗದೊಂದಿಗೆ ಉಚಿತ ತರಬೇತಿ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ದೆಹಲಿಯ ಅಶೋಕ್ ಜೈನ ಆಶಾ ಸುದರ್ಶನ್ ಜೈನ್, ವಿಮಲ್ ತಾಳಿಕೋಟೆ, ಮಹೇಶ್ ಕಾಸರ್, ವಿನಾಯಕ ಶೆಟ್ಟಿ, ಭಾಗವಹಿಸಿ ಮಾರ್ಗದರ್ಶನ ನೀಡಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಕಾರ್ಯಧ್ಯಕ್ಷರಾದ ಪದ್ಮಪ್ರಕಾಶ್ ಪದ್ಮಾವತಿ ಜೈನ ಮಹಿಳಾ ಸಮಾಜದ ಪದಾಧಿಕಾರಿಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳುಉಪಸ್ಥಿತರಿದ್ದರು. ಸುಧಾ ಶಿರಗುಪ್ಪಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಸಂತ ಜೈನ್ ಕಾರ್ಯಕ್ರಮ ನಿರೂಪಿಸಿದರು. ಆರ್ಥಿಕವಾಗಿ ಹಿಂದುಳಿದವರಿಗೆ ಹೊಲಿಗೆ ತರಬೇತಿ. ತರಬೇತಿ ಪಡೆದವರಿಗೆ ಉಚಿತ ಹೊಲಿಗೆ ಯಂತ್ರಗಳ ವಿತರಣೆ ಹಾಗೂ ಆರ್ಥಿಕ ಸಹಕಾರ, ಆಹಾರದ ಕಿಟ್ ಗಳ ವಿತರಣೆ ,ಜೈನ ಮಹಿಳೆಯರ ಮಕ್ಕಳಿಗೆ ಸ್ಕಾಲರ್ಶಿಪ್ ಗಳ ವಿತರಿಸಯಿತು. ಇದಕ್ಕೆ ಬೆನ್ನೆಲುಬಾಗಿ ವರ್ಧಮಾನ ಪರಿಹಾರ ಸೇವಾ ಟ್ರಸ್ಟ್ ಎಲ್ಲಾ ರೀತಿಯ ಸಹಕಾರ…
ತುಮಕೂರು: ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿಸಲು ಈಗಾಗಲೇ ಜಿಲ್ಲೆಯಲ್ಲಿ 11 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಖರೀದಿ ಕೇಂದ್ರದಲ್ಲಿ ಮಾರ್ಚ್ 3 ರಿಂದ ರಾಗಿಯನ್ನು ರೈತರಿಂದ ಖರೀದಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲೆಯ ಕುಣಿಗಲ್, ತಿಪಟೂರು, ತುರುವೇಕೆರೆ, ಹುಳಿಯಾರು, ಚಿ.ನಾ.ಹಳ್ಳಿ, ಗುಬ್ಬಿ, ಮಧುಗಿರಿ, ತುಮಕೂರು, ಶಿರಾ, ಕೊರಟಗೆರೆ(ಹೊಸದಾಗಿ ತೆರೆಯಲಾಗಿದೆ)ಯಲ್ಲಿ ತಲಾ 1 ಹಾಗೂ ಕುಣಿಗಲ್ ನಲ್ಲಿ 2 ಸೇರಿದಂತೆ ಒಟ್ಟು 11 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಖರೀದಿ ಕೇಂದ್ರದಲ್ಲಿ ಈಗಾಗಲೇ ರೈತರ ನೋಂದಣಿ ಕಾರ್ಯ ಪ್ರಾರಂಭಿಸಲಾಗಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನಜಾಗೃತಿ ಮೂಡಿಸಲು ಜಿಲ್ಲೆಯ ಜಾನಪದ/ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರತಿ ಬೀದಿ ನಾಟಕ ಜಾನಪದ ಕಲಾತಂಡದಲ್ಲಿ ಇಬ್ಬರು ಮಹಿಳಾ ಕಲಾವಿದರು ಸೇರಿದಂತೆ 8 ಮಂದಿ ಸ್ಥಳೀಯ ಕಲಾವಿದರಿರಬೇಕು. ಇಲಾಖೆ ಯೋಜನೆಗಳ ಬಗ್ಗೆ ಬೀದಿ ನಾಟಕ ಪ್ರದರ್ಶನದ ಅನುಭವವಿರಬೇಕು. ರಾಷ್ಟ್ರೀಯ ಸಂಗೀತ ಮತ್ತು ಡ್ರಾಮಾ ಡಿವಿಜನ್ (National Songs & Drama Division)/ ಕನ್ನಡ ಮತ್ತು ಸಂಸ್ಕೃತಿ ಇಲಾಖೆ/ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಣಿಯಾಗಿರುವ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದು. ಆಸಕ್ತಿಯುಳ್ಳ ಬೀದಿ ನಾಟಕ ಜಾನಪದ ಕಲಾತಂಡಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಐಇಸಿ ವಿಭಾಗ, ತುಮಕೂರು ಇವರಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 6ರೊಳಗೆ ಸಲ್ಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ(Bird Flu) ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರದ ರೋಗೋದ್ರೇಕವಿರುವುದರಿಂದ ಶಿರಾ ತಾಲ್ಲೂಕು ಕಗ್ಗಲಡು ಗ್ರಾಮ ಸೇರಿದಂತೆ ಜಿಲ್ಲೆಯಲ್ಲಿ ವಲಸೆ ಪಕ್ಷಿಗಳು ಬರುವ ಸ್ಥಳದಲ್ಲಿ ನಿಗಾವಹಿಸಲಾಗಿದೆ. ಕೋಳಿಗಳು ಸತ್ತರೆ ಪಶುಪಾಲನಾ ಇಲಾಖೆ ಗಮನಕ್ಕೆ ತರಬೇಕೆಂದು ಜಿಲ್ಲೆಯ ಎಲ್ಲಾ ಕೋಳಿ ಫಾರಂ ಮಾಲೀಕರಿಗೆ ಸೂಚಿಸಲಾಗಿದೆ. ಹಳ್ಳಿಗಳಲ್ಲಿ ಕೋಳಿಗಳು ಸತ್ತರೆ ತಕ್ಷಣವೇ ಪ್ರಯೋಗಾಲಯಕ್ಕೆ ಕಳುಹಿಸಲು ಪಶುಪಾಲನಾ ಇಲಾಖೆಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಹಕ್ಕಿಜ್ವರ ನಿಯಂತ್ರಣ ಮಾಡಲು ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ಅಧಿಕಾರಿ ಡಾ.ನಾಗಮಣಿ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ (Rapid Response Team) ಹಾಗೂ ಒಬ್ಬ ಪಶುವೈದ್ಯ, ಇಬ್ಬರು ತಾಂತ್ರಿಕ ಸಿಬ್ಬಂದಿ ಹಾಗೂ ಇಬ್ಬರು ಡಿ ದರ್ಜೆ ನೌಕರರನ್ನೊಳಗೊಂಡ 64 ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಹಕ್ಕಿಜ್ವರದ ರೋಗೋದ್ರೇಕ ಕಂಡು ಬಂದರೆ ಅವಶ್ಯಕತೆಯಿರುವ…
ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 1ರ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು. ಜಿಲ್ಲಾ ಪಂಚಾಯತಿ ಭೌಗೋಳಿಕ ಮಾಹಿತಿ ಕೇಂದ್ರದಲ್ಲಿ ಶನಿವಾರ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 35 ಕೇಂದ್ರಗಳಲ್ಲಿ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ನಡೆಸಲು ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇರಿಸಲು 40 ಗಣಕಯಂತ್ರಗಳನ್ನು ವ್ಯವಸ್ಥೆ ಮಾಡಲಾಗಿದ್ದು, 40 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪೊಲೀಸ್ ಕಣ್ಗಾವಲಿನಲ್ಲಿ ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ಪ್ರತಿ ತಾಲ್ಲೂಕಿನಲ್ಲಿ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮೇಲುಸ್ತುವಾರಿಗಾಗಿ ಮೇಲುಸ್ತುವಾರಿ ಅಧಿಕಾರಿ, ಪ್ರತೀ ಪರೀಕ್ಷಾ ಕೊಠಡಿಗೆ ಮೇಲ್ವಿಚಾರಕರು, ಸ್ಕ್ವಾ…
ತುಮಕೂರು: ಕನ್ನಡ ಮಧ್ಯಮದಲ್ಲಿ ಓದಿದವರಿಗೆ ಉದ್ಯೋಗ ದೊರಕುವುದಿಲ್ಲ ಎಂಬ ಭ್ರಮೆಯಲ್ಲಿ ನಾವಿಂದು ಇದ್ದೇವೆ. ಸಾವಿರಾರು ವರ್ಷಗಳಿಂದಲೂ ಕನ್ನಡ ಭಾಷಿಕರು ಉದ್ಯೋಗ ಮಾಡುತ್ತಲೇ ಬರುತ್ತಿದ್ದಾರೆ. ಕನ್ನಡ ಭಾಷೆ ಬರುವವನಿಗೆ ಅದು ಒಂದಲ್ಲಾ ಒಂದು ರೀತಿ ಶಕ್ತಿಯನ್ನು ತುಂಬುತ್ತಲೇ ಇದೆ. ನಮ್ಮ ಜನ ಯಾಕೆ ಈ ರೀತಿ ಚಿಂತಿಸುತ್ತಾರೋ. ಇಂತಹ ಮನೋಭಾವನೆಯನ್ನು ಕನ್ನಡಿಗರೆಲ್ಲ ಬಿಟ್ಟುಬಿಡಬೇಕು. 20ನೇ ಶತಮಾನದಲ್ಲಿ ಬದುಕಿ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಿದ ವಿದ್ವಾಂಸರೆಲ್ಲ ಕನ್ನಡ ಮಾಧ್ಯಮದಲ್ಲಿಯೇ ಓದಿ ಬಂದವರು ಎಂಬುದನ್ನು ನಾವೆಲ್ಲಾ ನೆನಪಿನಲ್ಲಿಟ್ಟುಕೊಳ್ಳಬೇಕು. ಇಂತಹ ಕೀಳರಿಮೆಯ ಮನೊಭಾವವನ್ನು ಕನ್ನಡಿಗರು ಬಿಡಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟರು. ಅವರು ತುಮಕೂರು ಬಳಿಯ ಕೋರಾ ಗ್ರಾಮದಲ್ಲಿ ಏರ್ಪಡಿಸಿದ್ದ ತುಮಕೂರು ತಾಲ್ಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಲೇಖಕರು ಮುಕ್ತವಾಗಿ ಬರೆಯಲೂ, ಮಾತನಾಡಲೂ ಆಗದ ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಇಂದು ತರುಣ ಬರಹಗಾರರಿಗೆ ನೈತಿಕ ಸ್ಥೈರ್ಯವನ್ನು ತುಂಬುವಂತಹ ಸಾಹಿತಿಗಳ ಕೊರತೆ ಕಂಡುಬರುತ್ತಿದೆ. ಆದ್ದರಿಂದಲೇ ತರುಣ…