Author: admin

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ ಗೆ ವಿಧಿಸಲಾಗಿದ್ದ ಷರತ್ತು ಸಡಿಲಗೊಳಿಸಲಾಗಿದ್ದು, ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ಆದೇಶ ಹೊರಡಿಸಿದೆ. ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ಆದರೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶ ಹೊರಡಿಸಿದೆ. ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂಬ ಹಲವು ಅಂಶಗಳನ್ನು ನಟ ದರ್ಶನ್ ನ್ಯಾಯಾಲಯದ ಮುಂದಿಟ್ಟಿದ್ದರು.  ಇದೀಗ ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣಕ್ಕೆ ಅವಕಾಶ ಕೋರಿ ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬಳ್ಳಾರಿ: ಒಂದು ಕೈಯಲ್ಲಿ ಕೊಟ್ಟಂತೆ ಮಾಡಿ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದು ಕಾಂಗ್ರೆಸ್ ನ ಜಾಯಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯ ಸುಮಾರು ರೂ. 25,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ದ ಮೊದಲ ವರ್ಷ 34 ಸಾವಿರ ಕೋಟಿ ದಲಿತರಿಗೆ ಮೀಸಲಿಟ್ಟಿದ್ದಾಗಿ ಮುಖ್ಯಮಂತ್ರಿಗಳು ಭಾಷಣ ಮಾಡಿದ್ದರು. ಇದು ಸುಳ್ಳು; ಹೇಳಿದ್ದು ಮಾತ್ರ. ಅದರಲ್ಲಿ 11,144 ಕೋಟಿ ಮೊತ್ತವನ್ನು ಗ್ಯಾರಂಟಿಗೆ ಕೊಟ್ಟಿದ್ದಾರೆ. ಎರಡನೇ ವರ್ಷದಲ್ಲಿ ಇಲ್ಲಿಂದ 14,366 ಕೋಟಿಯನ್ನು ಗ್ಯಾರಂಟಿಗಳಿಗೆ ಕೊಟ್ಟರು ಎಂದು ದೂರಿದರು. ದಲಿತರ ಹಣವನ್ನು ಈ ಸರಕಾರ ದುರುಪಯೋಗ ಮಾಡುತ್ತಿದೆ ಎಂಬ ವಿಚಾರವನ್ನು ತಿಳಿಸಲು ಮಾನ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 14 ತಂಡಗಳನ್ನು ರಚಿಸಿದ್ದಾರೆ. 28 ಸಂಸದೀಯ ಕ್ಷೇತ್ರಗಳಿದ್ದು, ಒಂದೊಂದು ತಂಡವು 2 ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದೆ ಎಂದು ವಿವರ…

Read More

ತುಮಕೂರು:   ನೆನ್ನೆ ಜಿಲ್ಲೆಯ ಕುಣಿಗಲ್ ನ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದ ಯುವತಿಯ ಶವ ಇಂದು ಪತ್ತೆ ಆಗಿದೆ. ಸೊಬಗಾನಹಳ್ಳಿ ಗ್ರಾಮದ ಇಂಜಿನಿಯರಿಂಗ್ ಉದ್ಯೋಗಿಯಾಗಿದ್ದ ಯುವತಿಯ ದೇಹ ಇಂದು ಶವವಾಗಿ ಪತ್ತೆಯಾಗಿದ್ದು  ಸ್ಕೂಬಾ ಡೈ ಮೂಲಕ ಈಶ್ವರ್ ಮಲ್ಪೆ  ಪತ್ತೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಮುಳ್ಳು ತಂತಿಗೆ ಸಿಲುಕಿ ಕರಡಿ ಒದ್ದಾಡಿರೋ ಘಟನೆ ತುಮಕೂರು ಗ್ರಾಮಾಂತರದ ಮೈದಾಳದಲ್ಲಿ ನಡೆದಿದೆ. ರಾತ್ರಿ ಆಹಾರ ಹರಸಿ ತೋಟಕ್ಕೆ ಬಂದಿದ್ದ ಕರಡಿ, ಮುಳ್ಳು ತಂತಿ ಬೇಲಿಗೆ ಸಿಲುಕಿ ಒದ್ದಾದಿದೆ. ಈ ವೇಳೆ ಕರಡಿ ಅರಚಾಟ ಕೇಳಿ ಬೆಚ್ಚಿದ ಗ್ರಾಮಸ್ಥರು ಅರಣ್ಯಾ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತುಮಕೂರು ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ  ಕರಡಿ ರಕ್ಷಣೆ ಕಾರ್ಯಾಚರಣೆ ನಡೆಸಿದ್ದು, ಕರಡಿ ಅಪಾತದಿಂದ ಪಾರಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ(General & I.T) ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್. ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶ ಪಡೆಯಲು ಮಾರ್ಚ್ 31 ಕಡೆಯ ದಿನವಾಗಿದೆ. ಪ್ರಥಮ ವರ್ಷದ ಪ್ರವೇಶಾತಿಗಾಗಿ ಬಿ.ಎ. ತರಗತಿಗೆ 8400 ರೂ., ಬಿ.ಕಾಂ.–8900 ರೂ., ಬಿ.ಸಿ.ಎ/ಬಿ.ಎಸ್ಸಿ.–23900 ರೂ., ಬಿ.ಬಿ.ಎ./ಬಿ.ಎಲ್.ಐ.ಎಸ್ಸಿ/ಎಂ.ಕಾಂ.–12400 ರೂ., ಬಿ.ಎಸ್. ಡಬ್ಲ್ಯೂ.–12900 ರೂ., ಎಂ.ಎ.–10600 ರೂ., ಎಂ.ಸಿ.ಜೆ.–16200,. ಎಂ.ಬಿ.ಎ.–29900, ಎಂ.ಎಸ್ಸಿ./ಎಂ.ಸಿ.ಎ.-29700, ಎಂ.ಎಸ್. ಡಬ್ಲ್ಯೂ-.-21300, ಎಂ.ಎಲ್.ಐ.ಎಸ್ಸಿ.–18150 ರೂ.ಗಳ ಶುಲ್ಕ ನಿಗದಿಪಡಿಸಲಾಗಿದೆ. ಪದವಿಪೂರ್ವ ಹಾಗೂ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ…

Read More

ತುಮಕೂರು:  ಬೆವಿಕಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ಗೋಪುರ ನಿರ್ಮಾಣ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾರ್ಚ್ 2 ಹಾಗೂ 9ರಂದು  ವಿದ್ಯುತ್ ವ್ಯತ್ಯಯವಾಗಲಿದೆ. ಮೆಳೇಕೋಟೆ, ಬೆಳ್ಳಾವಿ, ಹೆಗ್ಗೆರೆ, ಮಲ್ಲಸಂದ್ರ, ಬಡ್ಡಿಹಳ್ಳಿ, ದೊಡ್ಡ ಸಾರಂಗಿ ಉಪಸ್ಥಾವರಗಳಿಗೆ ಒಳಪಡುವ ಗ್ರಾಮ/ನಗರ/ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ 8 ಗಂಟೆ ಹಾಗೂ ಸಂಜೆ 4 ರಿಂದ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ರೈತರು ಕೃಷಿ ಬಳಕೆಗಾಗಿ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಬೇಸಿಗೆ ಕಾಲವಾಗಿರುವ ಹಿನ್ನೆಲೆಯಲ್ಲಿ ರೈತರ ಬೆಳೆಗಳಿಗೆ ನೀರಿನ ಅಭಾವದ ಕಾರಣ ತುರ್ತಾಗಿ ವಿದ್ಯುಚ್ಛಕ್ತಿಯನ್ನು ಪಡೆಯಲು ಅನುಕೂಲವಾಗುವ ದೃಷ್ಟಿಯಿಂದ, ನೋಂದಣಿ ಪ್ರಮಾಣ ಪತ್ರವನ್ನು ನೀಡುವ ವಿಧಾನವನ್ನು ಸರಳೀಕರಿಸಬೇಕು. ಜಿಲ್ಲಾ ಅಂತರ್ಜಲ ಕಚೇರಿಯಲ್ಲಿ ಅರ್ಜಿ ಶುಲ್ಕ ಮತ್ತು ದಂಡ ಪಾವತಿಸಿ ಸ್ವೀಕೃತಿ ಪತ್ರ ಪಡೆದು ಬೆಸ್ಕಾಂ ಕಚೇರಿಗೆ ಸಲ್ಲಿಸಿ ವಿದ್ಯುಚ್ಛಕ್ತಿ ಪಡೆಯಲು ಹಾಗೂ ತದನಂತರ ನೋಂದಣಿ ಪ್ರಮಾಣ ಪತ್ರ ಪಡೆದುಕೊಳ್ಳಲು ರೈತರಿಗೆ ಅನುವು ಮಾಡಿಕೊಡಬೇಕು ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ) ಅಧಿನಿಯಮ–2012 ಮತ್ತು ನಿಯಮಾವಳಿ–2012ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಂತರ್ಜಲ ಅತಿಬಳಕೆ ತಾಲ್ಲೂಕುಗಳೆಂದು ಅಧಿಸೂಚಿಸಲಾಗಿರುವ ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ಕೊರಟಗೆರೆ, ಮಧುಗಿರಿ ಹಾಗೂ ತುಮಕೂರು ಸೇರಿದಂತೆ…

Read More

ತುಮಕೂರು:  ಕೃಷಿ ಇಲಾಖೆ, ಕೃಷಿ ಪದವೀದರ ಅಧಿಕಾರಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಶ್ರೀ ಸಿದ್ದಗಂಗಾ ಮಠದ ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಜಂಟಿ ಕೃಷಿ ನಿರ್ದೇಶಕರ ಕಚೇರಿ, ತುಮಕೂರು ಹಾಗೂ ಮಧುಗಿರಿಯ ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರಗಳ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಕೃಷಿ ಪರಿಕರ ಸರಬರಾಜುದಾರರು ಹಾಗೂ ವಿತರಕರು ಈ ಶಿಬಿರದಲ್ಲಿ ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು. ಶಿಬಿರದಲ್ಲಿ ರಕ್ತ ಸಂಗ್ರಹಣೆ ಮತ್ತು ವಿತರಣಾ ವಾಹನದ ಮೂಲಕ ಅಗತ್ಯ ಮಂದಿಗೆ ಪೂರೈಸಲು ರಕ್ತ ಸಂಗ್ರಹಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಕೃಷಿ ಇಲಾಖೆಯ ಸಾಮಾಜಿಕ ಜವಾಬ್ದಾರಿಯನ್ನು ಪರಿಗಣಿಸಿ, ಜಿಲ್ಲಾ ಆಸ್ಪತ್ರೆಯ ವತಿಯಿಂದ ಕೃಷಿ ಇಲಾಖೆಗೆ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು :  ಬೆಳಗಾವಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಕೆ ಎಸ್ ಆರ್ ಟಿ‌ ಸಿ‌ ನಿವೃತ್ತ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ಕನ್ನಡಪರ, ದಲಿತ, ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ತುಮಕೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲಾಯಿತು.  ಎಂಇಎಸ್  ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಲಾಯಿತು. ಎಂಇಎಸ್ ಪುಂಡರನ್ನ ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಒತ್ತಾಯ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.  ವಿವಿಧ ಸಂಘಟನೆಗಳಿಂದ ತುಮಕೂರು ಜಿಲ್ಲಾಧಿಕಾರಿ‌ ಕಚೇರಿ ಎದುರು ಪ್ರತಿಭಟನೆ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಎಂಜಿನಿಯರಿಂಗ್ ಉದ್ಯೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ದೊಡ್ಡಕೆರೆಯಲ್ಲಿ ನಡೆದಿದ್ದು, ಶೋಧ ಕಾರ್ಯಕ್ಕೆ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಸಹ ಅಗ್ನಿಶಾಮಕ ಸಿಬ್ಬಂದಿಗೆ ಸಾಥ್ ನೀಡಿದರು. ಖುದ್ದು ಅಗ್ನಿಶಾಮಕ ದಳದೊಂದಿಗೆ ಕೆರೆಗೆ ಇಳಿದ ಶಾಸಕ ರಂಗನಾಥ್  ಲೈಫ್ ಜಾಕೆಟ್ ಧರಿಸಿ ಯುವತಿಯ ಶವಕ್ಕಾಗಿ ಶೋಧ ನಡೆಸಿದರು. ಸುಮಾ, ಕಣ್ಮರೆಯಾಗಿರುವ ಎಂಜಿನಿಯರ ಆಗಿದ್ದಾರೆ. ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿ ಆಗಿದ್ದು ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದರು. ನಿನ್ನೆ ಬೆಂಗಳೂರಿನಿಂದ‌ ಗ್ರಾಮಕ್ಕೆ ವಾಪಸ್ ಬಂದಿರುವ ಸುಮ, ಕುಣಿಗಲ್ ದೊಡ್ಡಕೆರೆ ಬಳಿ ಸುಮಾಳ ಬ್ಯಾಗ್, ಮೊಬೈಲ್ ಬಸ್ ನಲ್ಲಿ ಪ್ರಯಾಣಿಸಿದ ಟಿಕೆಟ್ ಚಪ್ಪಲಿ ಪತ್ತೆಯಾಗಿತ್ತು. ಕುಣಿಗಲ್ ದೊಡ್ಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More