Author: admin

ಬಿಗ್‌ ಬಾಸ್‌ ಮನೆಯಿಂದ ಮಾತಿನ ಮಲ್ಲಿ ಮಲ್ಲಮ್ಮ ಔಟ್‌ ಆಗಿದ್ದಾರೆ. ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್‌ ಬಾಸ್‌ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್‌ ಪಡೆದು ಎಲಿಮಿನೇಟ್‌ ಆಗಿದ್ದಾರೆ. ಆರಂಭದಲ್ಲಿ ಮಲ್ಲಮ್ಮ ಅವರಿಗೆ ಟಾಸ್ಕ್‌ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್‌ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್‌ ಅವರು ಮನೆ ಮಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಮಲ್ಲಮ್ಮ ಹೆಚ್ಚಾಗಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್‌ ಜೊತೆ ಗುರುತಿಸಿಕೊಳ್ಳುತ್ತಿದ್ದರು. ಈ ವಾರದ ಟಾಸ್ಕ್‌ನಲ್ಲೂ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಶನಿವಾರ ಸುದೀಪ್‌ ಜೊತೆ ಮಾತನಾಡುತ್ತಿದ್ದಾಗ ನಾನು ಕಾಲೇಜಿಗೆ ಹೋಗಿರಲಿಲ್ಲ ಎಂದು ಹೇಳಿ ಕಣ್ಣೀರಿಟ್ಟಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ  ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್​ ನ್ಯಾಯಾಲಯಕ್ಕೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ಇಂದು ಹಾಜರಾದರು. ಎಲ್ಲ ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹಾಗಾಗಿ ಮುಂದಿನ ಹಂತದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕ ನಿಗದಿ ಮಾಡಿದೆ. ನವೆಂಬರ್ 10ರಂದು ವಿಚಾರಣೆಗೆ ದಿನಾಂಕ ನಿಗದಿ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಬೀದರ್‍ನ  ಕಾಂಗ್ರೆಸ್ ಮುಖಂಡ ಜಾನಸನ್ ಘೋಡೆ,  ಬಿಹಾರದ ಮುಜಾಫರ್‍ಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯೇಂದ್ರ ಚೌಧರಿ ಪರ ಸೋಮವಾರ ವಿವಿಧೆಡೆ ಪ್ರಚಾರ ನಡೆಸಿ ಗಮನ ಸೆಳೆದರು. ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ, ಮುಖಂಡರಾದ ರಾಜರತನ್ ಸಿಂಧೆ, ರತ್ನದೀಪ್ ಕಸ್ತೂರೆ, ಸ್ಥಳೀಯರು ಆದ ಅಕ್ರಂ ಪಾಶಾ, ಶೇಕ್ ಮುಜಮ್ಮಿಲ್ ಮತ್ತಿತರರು ಕ್ಷೇತ್ರದ ಲಕ್ಷ್ಮಿನಗರ, ಬ್ರಹ್ಮಪುರ, ಮೋತಿಜ್‍ ಮೈದಾನ, ತಿಲಕನಗರದಲ್ಲಿ ಮನೆಗೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪರ ಮತ ಯಾಚಿಸಿದರು. ಮುಜಾಫರ್‍ಪುರ ವಿಧಾನಸಭಾ ಕ್ಷೇತ್ರಕ್ಕೆ ನ. 6 ರಂದು ಚುನಾವಣೆ ನಡೆಯಲಿದೆ. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ. ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು ಎಂದು ಸೂಚಿಸಿದರು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ‌ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು.  ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ…

Read More

ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ತುಮಕೂರು ಮಧುಗಿರಿಯ ತೆರಿಯೂರು–ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಹಾಗೂ ಆಂಧ್ರ ಪ್ರದೇಶದ ಚೌಲೂರು ಗ್ರಾಮದ ಐವರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾಗಿರುವ ನಾಗರಾಜು ಮತ್ತು ನಿಂಗಕ್ಕ ಎಂಬವರನ್ನು ಹಿಂದೂಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತೆರಿಯೂರು ಗ್ರಾಮದ ಮಾರಪ್ಪ ದಾಸಪ್ಪ ಚಿಕ್ಕನರಸಿಂಹಯ್ಯ ಹಾಗೂ ಟಿ. ನಾಗರಾಜು ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.  ಉಳಿದವರು  ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್‌ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಹಾಗೂ ಆಂಧ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಲಾರಿಗೆ ಹಿಂದಿನಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಗುಜರಾತ್ನ ಅಮಿತ್ ಪಾಟೀಲ್ (45) ಮತ್ತು ಲತಾ (40) ಮೃತರು. ಗಾಯಾಳುಗಳಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ರಾಜ್ಯದ ತಂಡ ತಿರುಪತಿಯಲ್ಲಿ ದರ್ಶನ ಮುಗಿಸಿಕೊಂಡು ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬಂದೋಲೆ ಆದೇಶಿಸಿದ್ದಾರೆ. 2024–25 ನೇ ಸಾಲಿನ 15ನೇ ಹಣಕಾಸು ಯೋಜನೆಯನ್ನು ಸಾಮಾನ್ಯ ಸಭೆ/ಗ್ರಾಮ ಸಭೆ ಜರುಗಿಸದೆ ಗ್ರಾ.ಪಂ. ಸದಸ್ಯರಿಗೆ ಮಾಹಿತಿ ನೀಡದೆ ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿ ನಡೆಸಿ ಅದರ ಬಿಲ್ ಪಾವತಿ ಮಾಡುತ್ತಿದ್ದಾರೆ. ನಿಧಿ–1 ನಿಧಿ–2 ಖಾತೆಗಳ ಕುರಿತು ಮಾಹಿತಿ ಕೇಳಿದರೂ ಮಾಹಿತಿ ನೀಡಿಲ್ಲ. 9(ಎ)11(ಬಿ) ಬಗ್ಗೆ ಮಾಹಿತಿ ಕೇಳಿದರು ಇಲ್ಲಿಯವರೆಗೆ ನೀಡಿರುವುದಿಲ್ಲ’ ಎಂದು ಅದೇ ಗ್ರಾಮ ಪಂಚಾಯಿತಿ ಸದಸ್ಯ ದೇವೆಂದ್ರ ಬಿ. ಪವಾರ ದೂರು ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿ ನಿಧಿ–1 ಮತ್ತು ನಿಧಿ–2 ಖಾತೆಯಿಂದ ₹22 ಲಕ್ಷ ಮತ್ತು 15ನೇ ಹಣಕಾಸು ಯೋಜನೆಯಡಿ ₹37 ಲಕ್ಷ ಖರ್ಚು ಮಾಡಿದ್ದಾರೆ. 2024–25ನೇ ಸಾಲಿನ 15ನೇ ಹಣಕಾಸು ಯೋಜನೆ ಕಾಮಗಾರಿಗಳನ್ನು ಮತ್ತು ನಿಧಿ 1…

Read More

ಸರಗೂರು: ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ ಎಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪೂರ್ಣಿಮ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಶನಿವಾರದಂದು ವಿವೇಕಾನಂದ ಸ್ಮಾರಕ ಆಸ್ಪತ್ರೆ, ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆಯನ್ನು ಮಾತನಾಡಿದರೆ ಸಾಲದು, ಭಾಷೆ ಉಳಿಸಲಿಕ್ಕೆ ನಾವೆಲ್ಲ ಪ್ರಯತ್ನಿಸಬೇಕು. ನಾನು ವೈದ್ಯರಾಗಿದ್ದರೂ ಕನ್ನಡ ಮಾಧ್ಯಮದಲ್ಲಿ ನಾನು ಓದಿದ್ದು ಈಗಲೂ ಕೂಡ ನಾನು ಕನ್ನಡದಲ್ಲಿಯೇ ಸಹಿ ಮಾಡುತ್ತಿದ್ದೇನೆ, ಹೊರಗಿನಿಂದ ಬಂದವರಿಗೆ ಕನ್ನಡವನ್ನು ಕಲಿಸುವಂತರಾಗಬೇಕು, ಕನ್ನಡ ಸುಂದರವಾದ ಭಾಷೆ ನಾವು ನಮ್ಮ ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ. ಕನ್ನಡ ಭಾಷೆಗೆ ಅಪಾರವಾದ ಗೌರವವನ್ನು ನಾವೆಲ್ಲ ನೀಡಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಮತ್ತು ನಿಕಟಪೂರ್ವ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ವೈ.ಡಿ.ರಾಜಣ್ಣ ಮಾತನಾಡಿ, ಕರ್ನಾಟಕ ರಾಜ್ಯ ಉದಯವಾಗಬೇಕು ಎಂಬುದು ಕನ್ನಡ ಹೋರಾಟಗಾರರ ಒತ್ತಾಸೆ ನಾವು ನಮ್ಮ ಮಕ್ಕಳಿಗೆ…

Read More

ಬೆಂಗಳೂರು: ನಾಡಿನ ಹೆಸರಾಂತ ಬರಹಗಾರರು, ಸಾಹಿತಿಗಳು, ಕಲಾವಿದರು, ಚಿಂತಕರು ಭಾಷೆ, ನೆಲ, ಜಲ, ಅಭಿವೃದ್ಧಿಗೆ ಶ್ರಮಿಸುತ್ತಿದ್ದರು ಕೂಡ ಕೆಲವರು ರಾಜಕೀಯ ಪಕ್ಷದ ಪರವಾಗಿ ಧ್ವನಿಯೆತ್ತಿ ತಮ್ಮತನವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು ಕನ್ನಡ ಭಾಷೆ, ನೆಲ, ಜಲ  ಮತ್ತು ಕನ್ನಡ ಅಭಿವೃದ್ಧಿಗೆ ಅಪಾಯ  ತಂದೊಡ್ಡುತ್ತಿದ್ದಾರೆ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್  ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಜುಡಿಷಿಯಲ್ ಲೇಔಟ್‌ ನಲ್ಲಿ ಬಡಾವಣೆಯ ಕನ್ನಡ ಕಸ್ತೂರಿ ಸಂಘ ಹಾಗೂ  ವಿವಿಧ ಸಂಘಟನೆಗಳೊಂದಿಗೆ ಆಯೋಜಿಸಿದ್ದ ಅದ್ದೂರಿಯ 70 ನೇ ಕನ್ನಡ ರಾಜೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರದ ಕೆಲವು  ಸಮಿತಿಗಳಲ್ಲಿ, ಪ್ರಾಧಿಕಾರಗಳಲ್ಲಿ ಅಧ್ಯಕ್ಷರು, ಸದಸ್ಯರು ಆಗಲು ಮತ್ತು ಪ್ರಶಸ್ತಿಗಳನ್ನು ಪಡೆದುಕೊಳ್ಳಲು ರಾಜಕಾರಣಿಗಳ ಜೊತೆ ಲಾಭಿ ನಡೆಸಿ ಅಧಿಕಾರ ಅನುಭವಿಸಲು  ಹಾತೊರೆಯುತ್ತಿರುವುದರಿಂದ  ಕನ್ನಡ ಸಾಹಿತ್ಯದ ಬೆಳವಣಿಗೆ ಕುಂಠಿತಗೊಂಡಿದೆ ಎಂದರು. ಜೊತೆಗೆ ಉತ್ತರ ಭಾರತದಿಂದ ಉದ್ಯೋಗ ಅರಸಿ ಬರುವ ಹಿಂದಿ ಭಾಷಿಕರ ಸಂಖ್ಯೆ ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ರಾಜ್ಯ  ಸರ್ಕಾರ ವಿಫಲವಾಗಿದ್ದು,…

Read More

ಸರಗೂರು:   ಕೂಡಗಿ ಗ್ರಾಮದ  ರೈತರೊಬ್ಬರ ಮೇಲೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ ಮಹದೇವಪ್ಪ ತಿಳಿಸಿದರು. ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ಕೂಡಗಿ ಗ್ರಾಮದ ದೊಡ್ಡನಿಂಗಯ್ಯ  ಶುಕ್ರವಾರದಂದು ಹುಲಿ ದಾಳಿಗೆ ಮೃತಪಟ್ಟ ಹಿನ್ನೆಲೆ ಅವರ ಮನೆಗೆ ಶನಿವಾರ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡಿ ಕುಟುಂಬಸ್ಥರಿಗೆ ಸ್ವಾತಂನ ಹೇಳಿದರು. ನಂತರ ಗ್ರಾಮಸ್ಥರು ಮತ್ತು ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು. ಹುಲಿ ಓಡಾಟದ ಬಗ್ಗೆ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ ಮಾಹಿತಿಯನ್ನು ಸ್ಥಳೀಯ ಶಾಸಕರು ತಿಳಿಸಿದ್ದಾರೆ. ನೊಂದ ಕುಟುಂಬಕ್ಕೆ ಸರ್ಕಾರದ ಸೌಲಭ್ಯ ಯೋಜನೆಯಡಿಯಲ್ಲಿ ಮನೆ ಮತ್ತು ಸೌಲಭ್ಯಗಳನ್ನು ನೀಡಬೇಕು ಎಂದು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಮಾನವ–ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ, ಹಿಂದಿನಿಂದಲೂ ಇದೆ.…

Read More