Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ರಾಯಚೂರು: ರೈತನೊಬ್ಬನಿಂದ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಲಿಂಗಸುಗೂರು ತಾಲೂಕಿನ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓಗೆ ರಾಯಚೂರು ಜಿಲ್ಲಾ ನ್ಯಾಯಾಲಯವು 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2017ರಲ್ಲಿ ಗೋರೆಬಾಳ ತಾಂಡಾದ ಚೇತನ ಎಂಬ ರೈತರು ತಮ್ಮ ಜಮೀನಿನಲ್ಲಿ ಶೇಡ್ ನಿರ್ಮಾಣ ಮಾಡಲು ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅನುದಾನ ಬಿಡುಗಡೆ ಮಾಡಲು ಆಗಿನ ಪಿಡಿಓ ಮಹ್ಮದ್ ಖಾಜಾ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಚೇತನ್ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ದೂರು ನೀಡಿದ್ದರು. ಲಂಚದ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹ್ಮದ್ ಖಾಜಾರನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಈ ಪ್ರಕರಣ ಒಂದು ಕುತೂಹಲಕಾರಿ ತಿರುವು ಪಡೆದುಕೊಂಡಿತ್ತು. ಪಿಡಿಓ ವಿರುದ್ಧ ದೂರು ನೀಡಿದ್ದ ಚೇತನ್, ನ್ಯಾಯಾಲಯದ ಮುಂದೆ ವಿಚಾರಣೆ ವೇಳೆ ತನ್ನ ಹೇಳಿಕೆಯನ್ನು ಬದಲಿಸಿ…
ಬೆಂಗಳೂರು: ನಗರದ ರಾಜರಾಜೇಶ್ವರಿ ನಗರದಲ್ಲಿ (RR Nagar) ಮನಕಲಕುವ ಘಟನೆಯೊಂದು ನಡೆದಿದ್ದು, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಮಗನೇ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ. ಆರ್ ಆರ್ ನಗರದ ಬೆಮಲ್ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. 72 ವರ್ಷದ ಸಾವಿತ್ರಮ್ಮ ಕೊಲೆಯಾದ ದುರ್ದೈವಿ. ಮಗ ವೆಂಕಟೇಶ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಮೃತ ಸಾವಿತ್ರಮ್ಮ ಅವರು ಕಳೆದ ಕೆಲವು ದಿನಗಳಿಂದ ಸ್ಟ್ರೋಕ್ (ಪಾರ್ಶ್ವವಾಯು) ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಸ್ಥಿತಿಯನ್ನು ನೋಡಿ ನೊಂದಿದ್ದ ಮಗ ವೆಂಕಟೇಶ್, ಅವಸ್ಥೆ ತಾಳಲಾರದೆ ಅಥವಾ ತಾಯಿಯ ಆರೈಕೆ ಮಾಡಲಾಗದೆ ಈ ಹಂತಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ಮನೆಯ ಮೂರನೇ ಮಹಡಿಯಿಂದ ತಾಯಿಯನ್ನು ಕೆಳಕ್ಕೆ ತಳ್ಳಿ ಆತ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಆರ್.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಮಗ ವೆಂಕಟೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ…
ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ತೃತೀಯ ಭಾಷೆಯ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಗ್ರೇಡ್ ಗಳನ್ನು ನೀಡುವ ಬದಲು, ಕಡ್ಡಾಯವಾಗಿ ಅಂಕಗಳನ್ನೇ (Marks) ನೀಡಬೇಕು ಎಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಕೇವಲ ಗ್ರೇಡ್‌ಗಳನ್ನು ನೀಡುವ ನಿರ್ಧಾರವನ್ನು ಮಾಡಿತ್ತು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜಿ. ನರೇಂದರ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ನಿರ್ದೇಶನ ನೀಡಿದೆ. ಪ್ರಥಮ ಮತ್ತು ದ್ವಿತೀಯ ಭಾಷೆಗಳಿಗೆ ಅಂಕಗಳನ್ನು ನೀಡಿ, ಕೇವಲ ತೃತೀಯ ಭಾಷೆಗೆ ಗ್ರೇಡ್ ನೀಡುವುದು ಸರಿಯಲ್ಲ. ಇದು ವಿದ್ಯಾರ್ಥಿಗಳ ನಡುವೆ ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಉನ್ನತ ಶಿಕ್ಷಣದ ಪ್ರವೇಶಾತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಟ್ಟು ಅಂಕಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ…
ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಸಂಕನಗೌಡ ಅವರು ಸುಮಾರು 8 ವರ್ಷಗಳ ಸುದೀರ್ಘ ನಾಪತ್ತೆಯ ನಂತರ ದಿಢೀರ್ ಎಂದು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ತಾವು ನಾಪತ್ತೆಯಾಗಲು ಕಾರಣವೇನು ಮತ್ತು ಇಷ್ಟು ವರ್ಷ ಎಲ್ಲಿದ್ದರು ಎಂಬ ಎಳೆಎಳೆಯಾದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಸಿನಿಮಾ ನಿರ್ಮಾಣ, ಹೋಟೆಲ್ ಉದ್ಯಮ ಮತ್ತು ಮೈನಿಂಗ್ ನಲ್ಲಿ ಹೂಡಿಕೆ ಮಾಡಿದ್ದ ಹಣವೆಲ್ಲ ನಷ್ಟವಾಗಿತ್ತು. ಸುಮಾರು 8 ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದ ಮಲ್ಲಿಕಾರ್ಜುನ್, ಸಾಲಗಾರರ ಕಾಟಕ್ಕೆ ಹೆದರಿ 2018ರ ಜುಲೈನಲ್ಲಿ ಬೆಂಗಳೂರು ಬಿಟ್ಟಿದ್ದರು. ಸಾಲದ ಹೊರೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆಯನ್ನೂ ಮಾಡಿದ್ದರು. ಆದರೆ ನಂತರ ಹೆಂಡತಿ-ಮಕ್ಕಳಿಗೆ ಪತ್ರ ಬರೆದಿಟ್ಟು ಊರು ಬಿಟ್ಟ ಅವರು, ಕೆಲ ಕಾಲ ನೇಪಾಳದಲ್ಲಿ ತಲೆಮರೆಸಿಕೊಂಡಿದ್ದರು ಅಂತಾ ತಿಳಿಸಿದರು. ದರ್ಶನ್ ಮತ್ತು ದಿನಕರ್ ತೂಗುದೀಪ ಅವರು ತನ್ನನ್ನು ಸ್ವಂತ ಅಣ್ಣನಂತೆ ನೋಡಿಕೊಂಡಿದ್ದರು ಎಂದು ಮಲ್ಲಿಕಾರ್ಜುನ್ ಸ್ಮರಿಸಿದ್ದಾರೆ. ಕಳೆದ ಒಂದೂವರೆ ವರ್ಷದ ಹಿಂದೆಯೇ ಮರಳಿ…
ಮಧುಗಿರಿ: ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ನ್ಯಾಯಾಧೀಶೆ ಕಾಂತಮ್ಮ ಅವರು ಪಟ್ಟಣದ ಲೋಕೋಪಯೋಗಿ ಇಲಾಖೆಯ (PWD) ವಸತಿ ಗೃಹದಲ್ಲಿ ವಾಸವಿದ್ದರು. ಗುರುವಾರ ಮುಂಜಾನೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರಾದ ಕಾಂತಮ್ಮ ಅವರು ಅವಿವಾಹಿತರಾಗಿದ್ದರು. 2025ರ ಜೂನ್ ತಿಂಗಳಿನಿಂದ ಮಧುಗಿರಿಯಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಗುಬ್ಬಿ: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು. ಮಹಿಳೆಯರಿಗೆ ಅವಕಾಶ ಸಿಕ್ಕರೆ ಪ್ರಾಮಾಣಿಕ ಕೆಲಸವನ್ನು ನಿರೀಕ್ಷೆ ಮಾಡಬಹುದು ಎಂದು ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟರು. ಗುಬ್ಬಿ ಪಟ್ಟಣದ ಬಿಲ್ಲೆಪಾಳ್ಯ ಗ್ರಾಮದಲ್ಲಿ 37 ಲಕ್ಷ ಅನುದಾನದಲ್ಲಿ ರಸ್ತೆ ಕಾಮಗಾರಿ, ಬಲದಂಡೆ ಕೋಡಿ ಚರಂಡಿ ಕಾಮಗಾರಿಗೆ 75 ಲಕ್ಷ, ಬಸವ ನಗರದ ರಸ್ತೆ ಕಾಮಗಾರಿಗೆ 1 ಕೋಟಿ, ಸುಭಾಷ್ ನಗರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ 69 ಲಕ್ಷ ಅನುದಾನ ಮತ್ತು ಪಟ್ಟಣದ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ 9 ಕೋಟಿ ಅನುದಾನದ ಎಲ್ಲಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಒಟ್ಟಿಗೆ ಜಾರಿಗೊಳ್ಳುವ ಸಾಧ್ಯತೆ ಇದೆ. ಎಲ್ಲಾ ರಂಗದಲ್ಲಿಯೂ ಮಹಿಳೆಯರೇ ಮುಂದೆ ಇದ್ದು ನಮ್ಮ ತಾಲೂಕಿನಲ್ಲಿಯೂ ಮಹಿಳಾ ಅಧಿಕಾರಿಗಳು ಹೆಚ್ಚಾಗಿದ್ದಾರೆ. ಪ್ರಾಮಾಣಿಕ ಕೆಲಸ…
ಚಿಕ್ಕನಾಯಕನಹಳ್ಳಿ: ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಕೈ ಬಿಡಲಾಗಿದೆ. ಈ ಬಗ್ಗೆ ಸದನದಲ್ಲಿ ಮಾತನಾಡಲಾಗುವುದು. ಈ ವಿಷಯವಾಗಿ ಇಂದೇ ಸರ್ಕಾರಕ್ಕೆ ಪತ್ರ ಬರೆದು ಶಿಕ್ಷಣವನ್ನು ಸಂವಿಧಾನ ಪೀಠಿಕೆಯಲ್ಲಿ ಸೇರಿಸಲು ಒತ್ತಾಯಿಸಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು. ಅವರು ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ರವರ 119ನೇ ಜನ್ಮ ದಿನ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ಎಲ್ಲಾ ದಾರ್ಶನಿಕರ ಜಯಂತಿಯನ್ನು ಒಂದೇ ದಿನ ಮಾಡಿದ್ದೆವು. ಅದರಿಂದ ನಾವೆಲ್ಲರು ಒಂದೇ ಎಂಬ ಭಾವನೆ ಮೂಡಿತ್ತು. ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು, ಅದೇ ರೀತಿ ನಾವೂ ಸಹ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಡುತ್ತಿದ್ದೇವೆ, ಎಲ್ಲಾ ಸಮುದಾಯದವರನ್ನು ಒಟ್ಟಿಗೆ ತೆಗೆದು ಕೊಂಡು ಹೋಗುತ್ತಿದ್ದೇವೆ ಎಂದರು. ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಆ ವ್ಯಕ್ತಿಗೆ ಸಿಗದೇ ಇರುವಂತಹ ಸೌಲಭ್ಯವನ್ನು ನೀಡಿದಾಗಲೇ ಅಂಬೇಡ್ಕರ್ ಕಂಡಂತಹ…
ತುಮಕೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ತಾಲೂಕು ಘಟಕಕ್ಕೆ ನಡೆದ ಚುನಾವಣೆಯಲ್ಲಿ 9 ಮಹಿಳಾ ಸದಸ್ಯರು ಸೇರಿದಂತೆ 26 ಶಿಕ್ಷಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ತಾಲೂಕು ಘಟಕದ ಚುನಾವಣೆಗಾಗಿ ತಾಲೂಕು ಚುನಾವಣಾಧಿಕಾರಿಯಾಗಿ ಡಯಟ್‌ನ ನಿವೃತ್ತ ಉಪನ್ಯಾಸಕ ಕೆ.ಕೃಷ್ಣಮೂರ್ತಿ 10 ಏಪ್ರಿಲ್ 2026 ರಂದು ಅಧಿಸೂಚನೆ ಹೊರಡಿಸಿದ್ದರು. ಏಪ್ರಿಲ್ 14ರಂದು ಚುನಾವಣಾ ಪ್ರಕ್ರಿಯೆಗಳು ನಡೆದು, 9 ಮಹಿಳಾ ಮೀಸಲು ಸೇರಿದಂತೆ ಒಟ್ಟು 26 ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿರುವ ಅಷ್ಟೂ ಸ್ಥಾನಗಳ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಕೃಷ್ಣಮೂರ್ತಿ ಘೋಷಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ತಾಲೂಕು ಘಟಕದ ಅಧ್ಯಕ್ಷ ಪಿ.ಜಿ.ತಿಮ್ಮೇಗೌಡ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಪರಮೇಶ್, ನಿಕಟಪೂರ್ವ ಕಾರ್ಯದರ್ಶಿ ಕೆ.ನಾಗರಾಜು ಅವರುಗಳು ಅವಿರೋಧ ಆಯ್ಕೆಗೆ ಶ್ರಮಿಸಿದ್ದರು. ಅವಿರೋಧ ಆಯ್ಕೆಯಾದ ಸದಸ್ಯರು: ಸಾಮಾನ್ಯ ಕ್ಷೇತ್ರಗಳು: ದಿನೇಶ್…
ತಿಪಟೂರು: ಅಸ್ಪೃಶ್ಯತಾ ಆಚರಣೆ, ಮರ್ಯಾದೆಗೇಡು ಹತ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಅಣಿಯಾಗಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ರಾಜಶೇಖರ್ ಕೆ. ತಿಳಿಸಿದರು. ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತಿಪಟೂರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ತಿಪಟೂರು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ತಿಪಟೂರು ಸಹಯೋಗದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಮ್ಮ ಸುತ್ತ ಮುತ್ತ ಜಾತಿ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಿ ವಿದ್ಯಾರ್ಥಿಗಳು ಸಮ ಸಮಾಜ ನಿರ್ಮಾಣಕ್ಕೆ ಅಣಿಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ನಡೆಸಲಾಗಿದ್ದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಬಿ.ಎ. ತೃತೀಯ ವರ್ಷದ ವಿದ್ಯಾರ್ಥಿನಿ ಅಶ್ವಿನಿ. ಡಿ.ಬಿ. ಪ್ರಥಮ…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. “ಒಳ ಮೀಸಲಾತಿ ಜಾರಿಯ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಶೇಕಡಾವಾರು ವ್ಯತ್ಯಾಸಗಳ ಬಗ್ಗೆ ಜಗಳವಾಡುವುದು ಅನಾವಶ್ಯಕ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮೀಸಲಾತಿ ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಕಾರ್ಯಕ್ರಮವಾಗಿದೆ. ಸಮಾಜದಲ್ಲಿ ಶೋಷಿತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಡಲು ಇದನ್ನು ರೂಪಿಸಲಾಗಿದೆ ಎಂದು ಡಿಕೆಶಿ ಪ್ರತಿಪಾದಿಸಿದರು. ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಸುಮಾರು 80,000 ಕೋಟಿ ರೂ. ನೀಡಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರವೊಂದೇ ಎಸ್ ಟಿಪಿ (SCP) ಮತ್ತು ಟಿಎಸ್‌ಪಿ (TSP) ಕಾಯ್ದೆಗಳಡಿ 29,000 ಕೋಟಿ ರೂ.ಗಳ ಬೃಹತ್ ಅನುದಾನ ನೀಡಿದೆ ಎಂದು ಅವರು ಮಾಹಿತಿ ನೀಡಿದರು. ಒಳ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ. ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ ಎಂದು ಅವರು ಟೀಕಿಸಿದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಯಲ್ಲಿ…