Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ತುಮಕೂರು: ಶಿರಾ–ಅಮರಪುರ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಗುಂಡಿ ಬಿದ್ದಿರುವ ಕಾರಣ ಹಲವಾರು ಅಪಘಾತಗಳು ಸಂಭವಿಸಿ, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕೈಕಾಲು ಫ್ಯಾಕ್ಚರ್ ಕೂಡ ಆಗಿದೆ. ಹಾಗಾಗಿ ಶಿರಾ ಅಮರಾಪುರ ಯಮ ಸ್ವರೂಪಿ ರಸ್ತೆ ಶೀಘ್ರ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಶಿರಾ ತಾಲೂಕಿನ ತೊಗರ ಗುಂಟೆ ಗೇಟ್ ಬಳಿ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ. ಮಲ್ಲೇಶ್, ಮೇಲ್ಕುಂಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಟಿ.ಡಿ. ನರಸಿಂಹಮೂರ್ತಿ, ಬಂದ ಕುಂಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ, ಚಂದ್ರ ಕುಮಾರ, ಟಿ.ಡಿ.ಕೃಷ್ಣ, ರಾಜು, ರಮೇಶ್, ಅಶೋಕ್ ಚಿಕ್ಕಣ್ಣ , ಆಫ್ರೋಜ್ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು. ಪ್ರತಿಭಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಎಇಇ ರಮೇಶ್, ಡಿ ವೈ ಎಸ್ ಪಿ ಶೇಖರ್,…
ತುಮಕೂರು: ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಭೇಟಿ ನೀಡಿ ವಿವಿಧ ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವರು ಫೆ.27ರ ಬೆಳಿಗ್ಗೆ 10.30 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಳಿಗ್ಗೆ 11 ಗಂಟೆಗೆ ನಗರದ ಇಂದಿರಾ ಕ್ಯಾಂಟೀನ್ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಪರಿಶೀಲಿಸಲಿದ್ದಾರೆ. ನಂತರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಗರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 2.45 ಗಂಟೆಗೆ ಶಿರಾ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ 3 ಗಂಟೆಗೆ ಶಿರಾ ನಗರಸಭೆಗೆ ಭೇಟಿ ನೀಡಿ 4 ಗಂಟೆಗೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4…
ತುಮಕೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೆಬ್ರವರಿ 28ರಂದು ಬೆಳಿಗ್ಗೆ 10:30 ಗಂಟೆಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಜಿಲ್ಲಾ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ 2017 ಅಕ್ಟೋಬರ್ 31ರ ಪೂರ್ವದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಮಂಜೂರಾದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ವಿದ್ಯಾರ್ಹತೆ ಹೊಂದಿಲ್ಲದ/ಹೊಂದಿರುವ ಹಾಗೂ ಅನುಕಂಪದ ಆಧಾರದ ಮೇಲೆ ನೇಮಕಗೊಂಡು, ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆಯಾಗದೇ ಸೇವೆ ಸಲ್ಲಿಸುತ್ತಿರುವ ಸುಮಾರು 766 ಸಿಬ್ಬಂದಿಗಳಿಗೆ ಅನುಮೋದನಾ ಪತ್ರ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಲಾನಯನ ಅಭಿವೃದ್ಧಿ ಇಲಾಖೆ, ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ ಹಾಗೂ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟದ ಸಹಯೋಗದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ಬೆಂಗಳೂರಿನ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ರೈತ ಉತ್ಪಾದಕ ಸಂಸ್ಥೆ(ಎಫ್.ಪಿ.ಓ.)ಗಳ ಮೇಳವನ್ನು ಆಯೋಜಿಸಲಾಗಿದೆ. ಮೇಳವನ್ನು ಅಂದು ಬೆಳಿಗ್ಗೆ 10:30 ಗಂಟೆಗೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆವಹಿಸಲಿದ್ದಾರೆ. ರೈತರನ್ನು ಒಟ್ಟುಗೂಡಿಸಿ ಅವರ ಉತ್ಪಾದನೆ ಹಾಗೂ ಮಾರುಕಟ್ಟೆ ಸಾಮರ್ಥ್ಯವನ್ನು ವೃದ್ಧಿಸಲು ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸುವುದು ಸೂಕ್ತವೆಂದು ಪರಿಗಣಿಸಿ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಭಾರತ ಸರ್ಕಾರವು 2013ರಲ್ಲಿ 1956ರ ಕಂಪನಿ ಕಾಯ್ದೆಗೆ ತಿದ್ದುಪಡಿ ತಂದು ಕಂಪನಿ ಕಾಯ್ದೆಯಡಿ ರೈತ ಉತ್ಪಾದಕರ ಸಂಸ್ಥೆಗಳನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ. ರೈತ ಉತ್ಪಾದಕರ ಸಂಸ್ಥೆಯು ಪ್ರಾಥಮಿಕ ಸಂಸ್ಥೆಯಾಗಿದ್ದು, ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಂಡ ಸದಸ್ಯ ರೈತರಿಗೆ ತಾಂತ್ರಿಕ ಸಲಹೆ, ಸಾಮರ್ಥ್ಯ ಬಲವರ್ಧನೆ, ಉತ್ತಮ ಗುಣಮಟ್ಟದ ಪರಿಕರಗಳನ್ನು ಪೂರೈಸುವುದು, ಬೆಳೆದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮುಖಾಂತರ…
ಬೀದರ್: ಬೀದರ್ ಜಿಲ್ಲಾ ಕಮಲನಗರ ತಾಲ್ಲೂಕಿನ ಹೊಕ್ರಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ ಭಂಡಾರಕುಮಠಾ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಯಿತು. ಹೊಕ್ರಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸ್ಥಳವೆಂದು ಗುರುತಿಸಲಾದ ಡೊಂಗರಗಾಂವ ಕ್ರಾಸ್ ಮೂಲಕ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ ಹೊಕ್ರಣಾ ಪೊಲೀಸ್ ಠಾಣೆಯ ಪಿ.ಎಸ್.ಐ ಶೇಕಶಾಹ ಪಟೇಲ್ ರವರು, ಭಂಡಾರಕುಮಠಾ ಗ್ರಾಮ ಪಂಚಾಯತ್ ನ್ನು ಸಂಪರ್ಕಿಸಿ ಪಂಚಾಯತ್ ನ ಸಹಯೋಗದೊಂದಿಗೆ 6 ಬ್ಯಾರಿಕೆಡ್ ಗಳನ್ನು ಪಡೆದು ವಾಹನಗಳ ವೇಗ ಕಡಿಮೆ ಆಗುವಂತೆ ಅಳವಡಿಸಿದ್ದಾರೆ. ಅಮಾಯಕರ ಪ್ರಾಣ ರಕ್ಷಣೆ, ಅಪಘಾತ ತಡೆಯಲು ಮುಂಜಾಗೃತ ಕ್ರಮವಾಗಿ ಕಾರ್ಯ ಪ್ರವರ್ತರಾದ ಹೊಕ್ರಣಾ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಔರಾದ: ಪಟ್ಟಣದ ಆರಾಧ್ಯ ದೈವ ಶ್ರೀ ಅಮರೇಶ್ವರರ ಜಾತ್ರೆ ನಿಮಿತ್ತ ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಸಿಂಧೆ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ, ನೆರವೇರಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಸುನಿಲ ಕುಮಾರ ದೇಶಮುಖ, ಅಭಂಗರಾವ್ ಗಡದೆ, ಡಾ.ಮಹೇಶ್ ಫುಲಾರಿ, ಪಿ.ಎಸ್.ಐ.ವಾಸಿಮ್ ಪಟೇಲ್, ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೆ.ಆರ್.ಪೇಟೆ: ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮವಾಗಿ ಮನೆಯೊಂದು ಆಹುತಿಯಾಗಿರುವ ಸ್ಥಳಕ್ಕೆ ಮನ್ಮುಲ್ ನಿರ್ದೇಶಕರಾದ ಡಾಲು ರವಿ ಅವರು ಗ್ರಾಮಕ್ಕೆ ಭೇಟಿ ಕೊಟ್ಟ ಸಾಂತ್ವನ ಹೇಳಿ ಧನಸಹಾಯ ನೀಡಿದರು. ತಾಲ್ಲೂಕು ಸಂತೆಬಾಚಹಳ್ಳಿ ಹೋಬಳಿ ಹರಿಯಾಲದಮ್ಮ ದೇವಸ್ಥಾನ ಮಾರೇನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯು ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ. ಮನೆಯ ಬೀರುವಿನಲ್ಲಿದ್ದ 1ಲಕ್ಷದ 80 ಸಾವಿರ ನಗದು ಹಣ, 90 ಗ್ರಾಂ ಚಿನ್ನ,50ಗ್ರಾಂ ಬೆಳ್ಳಿ ಹಾಗೂ ಬಟ್ಟೆಬರೆಗಳು,ಜಮೀನು ಸಂಬಂಧಿಸಿದ ರೆಕಾರ್ಡ್ಸ್‌ಗಳು,ಅಂಗವಿಕಲರ ಪ್ರಮಾಣ ಪತ್ರಗಳು ಸೇರಿದಂತೆ ಮನೆಯಲ್ಲಿದ್ದ ಪಾತ್ರೆಗಳು ಸಂಪೂರ್ಣವಾಗಿ ಭಸ್ಮವಾಗಿವೆ ಎಂದು ಕುಟುಂಬದ ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡರು. ಯಲಾದಹಳ್ಳಿ ಗ್ರಾಮದ ಮೂರ್ತಿ ಶಾರದಮ್ಮ ಅವರು ಮಾರೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ದಂಪತಿಗಳಿಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಪಯಣ ಬೆಳೆಸಿದ್ದ ಸಂದರ್ಭದಲ್ಲಿ ಈ ಘಟನೆಯು ಸಂಭವಿಸಿದೆ. ಘಟನೆಯ ಸ್ಥಳಕ್ಕೆ ವಿಷಯ ತಿಳಿದ ಮನ್ಮುಲ್ ನಿರ್ದೇಶಕರಾದ ಡಾಲು ರವಿ ಆಗಮಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ಧನ ಸಹಾಯ ಮಾಡುವ…
ಬೆಂಗಳೂರು: ಮೂಡಾ ಹಗರಣವನ್ನು ಸಿಬಿಐಗೆ ವಹಿಸಿ ತನಿಖೆ ಎದುರಿಸಿ. ತಾವು ಸತ್ಯವಂತರಾಗಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ ನವರೇ, ಲೋಕಾಯುಕ್ತ ತನಿಖೆ ಬಗ್ಗೆ ನಿಮ್ಮ ಪರಮಾಪ್ತ ಸಚಿವ ಕೆ.ಎನ್.ರಾಜಣ್ಣ ಅವರು ಏನು ಹೇಳಿದ್ದಾರೆ ನೋಡಿ ಎಂದು ವ್ಯಂಗ್ಯವಾಡಿದ್ದಾರೆ. ಯಾವುದೇ ಪ್ರಕರಣವನ್ನ ಲೋಕಾಯುಕ್ತ ತನಿಖೆಗೆ ಕೊಡುವುದೂ ಒಂದೇ, ಸ್ಮಶಾನಕ್ಕೆ ಹೋಗುವುದೂ ಒಂದೇ ಎಂದು ಸರ್ಟಿಫಿಕೇಟ್ ಕೊಡುವ ಮೂಲಕ ಮೂಡಾ ಹಗರಣವನ್ನು ತಾವು ಹೇಗೆ ಮುಚ್ಚಿಹಾಕಿ ಸತ್ಯವನ್ನು ಸಮಾಧಿ ಮಾಡಲು ಹೊರಟಿದ್ದೀರಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಗ್ಯಾರಂಟಿಗಳಿಗೆ ಮುಂದುವರೆಯುವ ಗ್ಯಾರಂಟಿ ಇಲ್ಲ!! ಅಧಿಕಾರಕ್ಕೇರಲು ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಗ್ಯಾರಂಟಿಗಳನ್ನು ಬಂದ್ ಮಾಡಲು ಹೊರಟಿದೆ ಎಂದು ಟೀಕಿಸಿದ್ದಾರೆ. ನಮ್ಮತುಮಕೂರಿನ…
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕ ನಿಗದಿ ಮಾಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ಡಿಬಿಟಿ ವರ್ಗಾವಣೆಯನ್ನು ಖಚಿತಪಡಿಸಬೇಕೆಂದು ಒತ್ತಾಯಿಸಿರುವ ಅವರು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಯ ಹಣ ಬಿಡುಗಡೆ ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು ಎಂದಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ…
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕ ನಿಗದಿ ಮಾಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ಡಿಬಿಟಿ ವರ್ಗಾವಣೆಯನ್ನು ಖಚಿತಪಡಿಸಬೇಕೆಂದು ಒತ್ತಾಯಿಸಿರುವ ಅವರು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಯ ಹಣ ಬಿಡುಗಡೆ ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು ಎಂದಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ…