Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಅಮೃತಸರ/ಜಮ್ಮು: ಪಂಜಾಬ್ ನ ಪಠಾಣ್ ಕೋಟ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ಪಡೆಗಳು ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದಿದೆ. ಗಡಿ ಭದ್ರತಾಪಡೆ ಸಿಬ್ಬಂದಿಯೂ ಉದ್ದಕ್ಕೂ ಬಾರ್ಡರ್ ಔಟ್ ಪೋಸ್ಟ್ ತಶ್ವತನ್ ಪ್ರದೇಶದಲ್ಲಿ ಕೆಲವು ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ್ದರು. ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ ಮಾಡಲಾಗುತ್ತಿದೆ. ಘಟನೆಯ ಬಗ್ಗೆ ಪಾಕಿಸ್ತಾನ ರೇಂಜರ್ಗಳೊಂದಿಗೆ ತೀವ್ರ ಪ್ರತಿಭಟನೆಯನ್ನು ದಾಖಲಿಸಲಾಗುವುದು ಎಂದು ಬಿಎಸ್ಎಫ್, ಜಮ್ಮು ಗಡಿರೇಖೆಯ ವಕ್ತಾರರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: ಅಮೆರಿಕದಲ್ಲಿ ಕಠಿಣ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಇದೀಗ ಭಾರತವೂ ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ. ಮಾ.10 ರಂದು ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಭಾರತದಲ್ಲಿ ಪಾಸ್ ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ಮತ್ತು ವಲಸೆ ಕಾಯ್ದೆ 2000, ಇವು ಪ್ರಸ್ತುತ ಭಾರತದಲ್ಲಿ ವಿದೇಶಿಯರಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ನಿಯಂತ್ರಿಸುತ್ತವೆ. ಪ್ರಸ್ತಾವಿತ ಕಾಯ್ದೆಯು ಅಸ್ತಿತ್ವದಲ್ಲಿರುವ 4 ಕಾನೂನುಗಳನ್ನು ರದ್ದುಗೊಳಿಸಿ, ನೂತನ ಕಾನೂನು ಜಾರಿಗೆ ತರುವ ಸಾಧ್ಯತೆಯಿದೆ ಎನ್ನಲಾಗಿದೆ. ಮಸೂದೆಯು 35 ಷರತ್ತುಗಳು ಮತ್ತು ಹಲವಾರು ಕಾನೂನುಗಳನ್ನು ಒಳಗೊಂಡಿರುವ 6 ಅಧ್ಯಾಯಗಳನ್ನು ಹೊಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಪ್ರಯಾಗ್ ರಾಜ್: ಜನವರಿ 13 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಶಿವರಾತ್ರಿಯ ದಿನವಾದ ಇಂದು ಅಂತಿಮ ಪುಣ್ಯ ಸ್ನಾನದೊಂದಿಗೆ ಅಂತ್ಯವಾಗಲಿದೆ. ತ್ರಿವೇಣಿ ಸಂಗಮದಲ್ಲಿ ಇಂದು ಬೆಳಗ್ಗೆಯಿಂದಲೇ 41 ಲಕ್ಷ ಜನ ಪವಿತ್ರ ಸ್ನಾನ ಮಾಡಿದ್ದಾರೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಮಹಾಕುಂಭಮೇಳದ ಕೊನೆಯ ವಿಶೇಷ ಸ್ನಾನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ, ಸಂಜೆ 6 ಗಂಟೆಯಿಂದ ಪ್ರಯಾಗ್ ರಾಜ್ ನಾದ್ಯಂತ ವಾಹನ ರಹಿತ ವಲಯವನ್ನು ಜಾರಿಗೆ ತರಲಾಗಿತ್ತು. ಜನಸಂದಣಿಯ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಆಡಳಿತವು ಈ ನಿರ್ಬಂಧಗಳನ್ನು ವಿಧಿಸಿದೆ. ಆದರೆ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿರುಚ್ಚಿ: ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಹಾಶಿವರಾತ್ರಿ ದಿನದ ಹಿನ್ನೆಲೆ ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಕುಟುಂಬ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಿರುಚ್ಚಿ–ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ್ತಲೈ ಬಳಿ ತಿರುಪುರ ಕಡೆಗೆ ಬರುತ್ತಿದ್ದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ನ ಕೆಳಭಾಗಕ್ಕೆ ನುಗ್ಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತಿಪಟೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಿಪಟೂರು ತಾಲೂಕು ಘಟಕದ ವತಿಯಿಂದ ಮಾರ್ಚ್ 1ರಂದು ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಪಟೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್. ಈ ರಮೇಶ್ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜನಪ್ರಿಯ ಶಾಸಕರಾದ ಕೆ.ಷಡಕ್ಷರಿ ಅವರು ಉದ್ಘಾಟಿಸಲಿದ್ದು, ನಿವೃತ್ತ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ಅಧ್ಯಕ್ಷ ಎನ್. ನರಸಿಂಹರಾಜು ಅವರು ಸನ್ಮಾನಿಸಲಿದ್ದಾರೆ. ಇದೇ ದಿನ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಗೂ ಶಂಕರ್ ಆಪ್ಟಿಕಲ್ಸ್ ತಿಪಟೂರು ಇವರಿಂದ ಉಚಿತ ಕಣ್ಣಿನ ಪರೀಕ್ಷೆಯನ್ನು ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಹಾಗೂ ನಿವೃತ್ತಿ ನೌಕರರು ಪಡೆಯಬೇಕು ಎಂದು ಇದೇ ವೇಳೆ ಅವರು ತಿಳಿಸಿದರು. ವರದಿ: ಆನಂದ್…
ಹಾವೇರಿ: ಸಾರಿಗೆ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಿಂದ ರಾಣೇಬೆನ್ನೂರು ಕಡೆಗೆ ಹೊರಟಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: ಗ್ಯಾರೆಂಟಿ ಯೋಜನೆಗಳು ಹೊರೆಯಾಗುತ್ತಿವೆ ಎನ್ನುವುದು ಗೊತ್ತಿದ್ದರೂ, ಬಡವರಿಗಾಗಿ ನಾವು ಸಹಿಸಿಕೊಳ್ಳಬೇಕು ಎನ್ನುವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ. ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು ಎಂದು ಪರಮೇಶ್ವರ್ ಅವರ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು , ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅವರ ಸೋದರ ಮಲ್ಲಿಕಾರ್ಜುನ ಮತ್ತು ಜಮೀನು ಮಾಲೀಕ ದೇವರಾಜು ವಿರುದ್ಧ ದಾಖಲಾದ ಪ್ರಕರಣವನ್ನು ತಾನೇ ವಾದಿಸಲು ದೂರುದಾರ ಸ್ನೇಹಮಯಿ ಕೃಷ್ಣ ಸಿದ್ಧತೆ ನಡೆದಿದ್ದಾರೆ. ಮುಡಾ 50:50 ಹಗರಣ ವಿಚಾರವಾಗಿ ಇದೀಗ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾದ ಮಂಡಿಸಲು ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ತನಿಖೆಯ ಬಗ್ಗೆ ಅಗತ್ಯ ದಾಖಲೆಗಳನ್ನು ಮತ್ತು ಅಂತಿಮ ವರದಿಯನ್ನು ಮಾರ್ಚ್ 1, 2025 ರೊಳಗೆ ಕೃಷ್ಣ ಅವರಿಗೆ ಸಲ್ಲಿಸುವಂತೆ ನ್ಯಾಯಾಲಯ ಸೋಮವಾರ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ. ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ನಡೆ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ತನಿಖಾ ಸಂಸ್ಥೆ ಪ್ರಭಾವಕ್ಕೆ ಒಳಗಾಗಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೀದರ್: ಕೊಡಗು, ಹಾಸನ, ಚಿಕ್ಕಮಗಳೂರು ಸುತ್ತಮುತ್ತ ಕಾಡಿನಿಂದ ಹೊರಬಂದು ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ಸಮಸ್ಯೆ ಹೆಚ್ಚಾಗಿದ್ದು, 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸಲು ಯೋಜಿಸಲಾಗಿದೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ಆನೆ ಧಾಮದಲ್ಲಿ ಆನೆಗಳಿಗೆ ಅಗತ್ಯ ಆಹಾರ, ನೀರು ಲಭ್ಯವಾಗುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ಕಾಡಿನ ಹೊರಗೆ ಓಡಾಡುವ 150ಕ್ಕೂ ಹೆಚ್ಚು ಆನೆಗಳನ್ನು ಗುರುತಿಸಲಾಗಿದ್ದು, ಮಿನಿ ಖೆಡ್ಡಾ ಕಾರ್ಯಾಚರಣೆ ರೂಪದಲ್ಲಿ ಆನೆಗಳನ್ನು ಧಾಮಕ್ಕೆ ಕಳುಹಿಸಬೇಕಾಗುತ್ತದೆ. ಆದರೆ ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಿನ್ನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಒಬ್ಬ ಯುವಕ ಮತ್ತು ಇಂದು ಕೋಲಾರ ಜಿಲ್ಲೆ ಕಾನಸಮುದ್ರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ತೀವ್ರ ನೋವು ತಂದಿದೆ. ಮೃತರ ಕುಟುಂಬದೊಂದಿಗೆ ಸರ್ಕಾರ ಇದೆ. ಅವರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ಹೇಳಿದ್ದಾರೆ. ಮೃತರ ಹತ್ತಿರದ ಸಂಬಂಧಿಕರಿಗೆ ಕೂಡಲೇ ಪರಿಹಾರದ ಮೊತ್ತ ನೀಡಲು ಸೂಚಿಸಲಾಗಿದೆ. ಈ ಎಲ್ಲ ದುರ್ಘಟನೆಗಳು ಬೆಳಗಿನ…