Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾ ಗೌಡ ಮತ್ತು ತಂಡದ ವಿಚಾರಣೆಯನ್ನು ಕೋರ್ಟ್ ಎಪ್ರಿಲ್ 8ಕ್ಕೆ ಮುಂದೂಡಿದೆ. 57ನೇ ಸೆಷನ್ಸ್ ಕೋರ್ಟ್ ನಲ್ಲಿ ಆರೋಪಿಗಳಾದ ಪವಿತ್ರ ಗೌಡ, ದರ್ಶನ್ ಮತ್ತು ಗ್ಯಾಂಗ್ ನ ವಿಚಾರಣೆ ನಡೆಯಿತು. ಕೋರ್ಟ್ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಆಗಲು ಪೊಲೀಸರು ಒತ್ತಡ ಹೇರುತ್ತಿದ್ದಾರೆ. ಬೇರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗಿ ಅಂತ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದರು. ವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ. ಏಪ್ರಿಲ್ 8 ಕ್ಕೆ ವಿಚಾರಣೆ ಮುಂದೂಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಬಸ್ ಮತ್ತು ಬಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ ನಂತರ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ. ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ ಸಹ ಕರ್ನಾಟಕಕ್ಕೆ ಬಸ್ಗಳ ಕಾರ್ಯಾಚರಣೆಯನ್ನು ನಿಲ್ಲಿಸಿದೆ” ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ವಿವರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬಳ್ಳಾರಿ ಜಿಲ್ಲೆ ಮೀನಹಳ್ಳಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಫೆಬ್ರವರಿ 3 ರಿಂದ 14ರವರೆಗೆ ಏರ್ಪಡಿಸಿದ್ದ ಪುನರ್ಮನನ ತರಬೇತಿಯಲ್ಲಿ ಜಿಲ್ಲೆಯ ಗುಬ್ಬಿ ತಾಲ್ಲೂಕು ಘಟಕಾಧಿಕಾರಿ(ಪ್ರಭಾರ) ಮಲ್ಲಿಕಾರ್ಜುನಯ್ಯ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಲ್ಲಿಕಾರ್ಜುನಯ್ಯ ಅವರಿಗೆ ಚಿನ್ನದ ಪದಕ ಲಭಿಸಿರುವುದು ಇತರೆ ಗೃಹರಕ್ಷಕರಿಗೆ ಪ್ರೇರಣೆಯಾಗಿದ್ದು, ಜಿಲ್ಲೆಗೆ ಹೆಮ್ಮೆ ತರುವ ಸಂಗತಿಯಾಗಿದೆ ಎಂದು ಗೃಹರಕ್ಷಕ ದಳ ಘಟಕ ಕಚೇರಿಯ ಅಧಿಕಾರಿ/ಸಿಬ್ಬಂದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪದಕ ಗಳಿಸಿದ ಮಲ್ಲಿಕಾರ್ಜುನಯ್ಯ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿ.ಮರಿಯಪ್ಪ, ಉಪ ಸಮಾದೇಷ್ಟ ಆರ್. ರಾಜೇಂದ್ರನ್, ಬೋಧಕರಾದ ಶಿವಪ್ರಸಾದ್, ಸಹಾಯಕ ಬೋಧಕ ಶ್ರೀನಿವಾಸ್, ಸೇರಿದಂತೆ ಮತ್ತಿತರರು ಅಭಿನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ತುಮಕೂರು ತಾಲ್ಲೂಕು ಕೋರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಫೆಬ್ರವರಿ 28ರಂದು “ತುಮಕೂರು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ. ಸಮ್ಮೇಳನದ ಅಂಗವಾಗಿ ಅಂದು ಬೆಳಿಗ್ಗೆ 7:30 ಗಂಟೆಗೆ ಧ್ವಜಾರೋಹಣ, 8:30 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ, 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮ ನಡೆಯಲಿವೆ. ಸಮ್ಮೇಳನದ ಪ್ರಯುಕ್ತ ಫೆಬ್ರವರಿ 28ರ ಮಧ್ಯಾಹ್ನ 12 ಗಂಟೆಗೆ ಸಮ್ಮೇಳನಾಧ್ಯಕ್ಷ ಎಂ.ನಂಜಯ್ಯ ಅವರ ಸಾಹಿತ್ಯಾವಲೋಕನ; 12:45 ಗಂಟೆಗೆ ಕೋರಾ–ಸ್ಥಳೀಯ ಸಾಂಸ್ಕೃತಿಕತೆ, ಶೈಕ್ಷಣಿಕ ನಗರಿಯಿಂದ–ಕೈಗಾರಿಕಾ ನಗರಿಯತ್ತ ತುಮಕೂರು, ಜಾನಪದ ಕಲೆ ಮತ್ತು ಸಾಹಿತ್ಯದ ಮೇಲೆ ನಗರೀಕರಣದ ಪ್ರಭಾವ; 2:30 ಗಂಟೆಗೆ ರಂಗಭೂಮಿ ಮತ್ತು ಸಂಗೀತ, 3:30 ಗಂಟೆಗೆ ಕವಿ ಸಮಯ ಗೋಷ್ಠಿಗಳು ನಡೆಯಲಿವೆ. ಸಂಜೆ 4:45 ಗಂಟೆಗೆ ಆಜೀವ ಸದಸ್ಯರ ಬಹಿರಂಗ ಅಧಿವೇಶನ, 5 ಗಂಟೆಗೆ ಸನ್ಮಾನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಚಿಕ್ಕಬೆಳ್ಳಾವಿ…
ತುಮಕೂರು: ಜಿಲ್ಲೆಯಲ್ಲಿ ಬಿಎಸ್’ಎನ್’ಎಲ್ ವ್ಯಾಪ್ತಿಗೊಳಪಡುವ ಖಾಲಿ ಜಾಗಗಳನ್ನು ಬಾಡಿಗೆ ನೀಡಲು ಉದ್ದೇಶಿಸಿದೆ. ಕೇಂದ್ರ/ ರಾಜ್ಯ ಸರ್ಕಾರ, ಖಾಸಗಿ ವಲಯದ ಉದ್ಯಮ, ಬ್ಯಾಂಕುಗಳಿಗೆ ಆದ್ಯತೆ ನೀಡಲಾಗುವುದು. ಬಾಡಿಗೆ ಆಧಾರದ ಮೇಲೆ ಖಾಲಿ ಜಾಗದ ಅವಶ್ಯಕತೆ ಇರುವವರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9422041190/ 9486101729ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಶಿರಾ: ಅನ್ನದಾತನ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜನಸ್ನೇಹಿ ಆಡಳಿತ ನೀಡುವುದೇ ನನ್ನ ಆದ್ಯತೆ, ಕೃಷಿ ಚಟುವಟಿಕೆಗಳಿಗೆ ಪೂರಕವಾಗುವ ರೀತಿ ಸಾಲ ಸೌಲಭ್ಯ ನೀಡಿ ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದೇನೆ ನನ್ನ ಗುರಿ ಎಂದು ಕಾಮಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರದ ಸಂಘದ ನೂತನ ಕೆ.ಎನ್. ಮಂಜುನಾಥ್ ಹೇಳಿದರು. ಶಿರಾ ತಾಲೂಕಿನ ಕಾಮಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪರಸ್ಪರ ಸಹಕಾರ , ಸೇವಾ ಮನೋಭಾವ ದೊಂದಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಮುನ್ನಡೆಸಿದಾಗ ಸಂಘ ಆರ್ಥಿಕ ಅಭಿವೃದ್ಧಿ ಕಾಣಲು ಸಾಧ್ಯ. ಸಂಘಕ್ಕೆ ಆಗಮಿಸುವ ರೈತರಿಗೆ ಅತ್ಯಂತ ಗೌರವಪೂರ್ವಕವಾಗಿ ಮಾತನಾಡಿಸುವ ಮೂಲಕ ಉತ್ತಮ ಆಡಳಿತ ನೀಡುವಂತಹ ಪ್ರವೃತ್ತಿಯನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳಬೇಕು, ಮುಂಗಾರು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ರೀತಿ ರಸಗೊಬ್ಬರ ವಿತರಣೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು…
ಶಿರಾ: ತಾಲೂಕಿನ ದ್ವಾರನ ಕುಂಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ. ತಿಮ್ಮಯ್ಯ, ಉಪಾಧ್ಯಕ್ಷರಾಗಿ ದಯಾವತಿ ಅವಿರೋಧ ಆಯ್ಕೆಯಾದರು. ನೂತನ ನಿರ್ದೇಶಕ ಶ್ರೀನಿವಾಸ್ ಬಾಬು, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ನರಸಿಂಹೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಶ್ ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾದ ಸೋಮಶೇಖರ ಕೆ.ಸಿ. ಕೃಷ್ಣೇಗೌಡ, ದೊಡ್ಡಿರಪ್ಪ, ಕೆ.ಸಿ .ದೊಡ್ಡ ತಿಮ್ಮಯ್ಯ, ಮಹಾಂತೇಶ ,ನಾಗಮ್ಮ, ಕೆ.ಎನ್. ನರಸಿಂಹಯ್ಯ , ಶ್ರೀನಿವಾಸ್, ಡಿ.ಎಸ್. ರಂಗನಾಥ್, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ವಿಠಲ್, ಕಾರ್ಯದರ್ಶಿ ಜಗದೀಶ್, ಮುಖಂಡ ಶ್ರೀರಾಮಯ್ಯ, ಮಾಜಿ ಅಧ್ಯಕ್ಷ ಹನುಮೇಗೌಡ, ಬಾಲೆಗೌಡ, ದ್ವಾರಕೀಶ್ ಗೌಡ, ರಾಕೇಶ್ ಬಾಬು, ಉಮೇಶ್, ಶಾಸಮರು ಶ್ರೀಧರ, ರಂಗಸ್ವಾಮಿಗೌಡ ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೀದರ್: ಜಿಲ್ಲಾ ಕಮಲನಗರ ತಾಲ್ಲೂಕಿನ ದಾಬಾಕಾದಲ್ಲಿ ಏಕತಾ ಫೌಂಡೇಶನ್ ಅಧ್ಯಕ್ಷರಾದ ರವಿಸ್ವಾಮಿ ಅವರ ಹುಟ್ಟು ಹಬ್ಬದ ನಿಮಿತ್ತ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಯುವ ಮುಖಂಡರಾದ ಧನಾಜಿ ಕಾಂಬಳೆ ಅವರ ನೇತೃತ್ವದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂತೋಷ ಜಾಧವ್, ಅಮೂಲ್ ಬಿರಾದಾರ, ಪ್ರಶಾಂತ, ನಿಖಿಲ್ ಜಾಧವ್, ಪ್ರಸುರಾಮ ಲಕ್ಷ್ಮಣ ಜಾಧವ್, ವಿಶ್ವಭರ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ, ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರು ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಡವರಿಗೆ ಹಣ ಕೊಡುವುದು ಬಿಜೆಪಿಯವರಿಗೆ ಮನಸ್ಸಿಲ್ಲ ಎಂದರೆ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ ಎಂದು ಅವರು ಹೇಳಿದರು. ಬಿಜೆಪಿಯವರು ಬಡವರ ಪರ ಇಲ್ಲ. ಪ್ರತಿಭಟನೆ ಮೂಲಕ ಸಾರ್ವಜನಿಕವಾಗಿ ಅದನ್ನು ಹೇಳಲು ಹೊರಟಿದ್ದಾರೆ. ಇದೆಲ್ಲವನ್ನು ಜನ ಗಮನಿಸುತ್ತಾರೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಶಿಶು ಮಾರಾಟ ಆರೋಪದ ಹಿನ್ನೆಲೆಯಲ್ಲಿ ಮಗುವಿನ ತಂದೆ– ತಾಯಿ ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ನಗರದಲ್ಲಿ ನಡೆದಿದೆ. ಮಗುವಿನ ತಾಯಿ ಮೊನಿಷಾ (21), ತಂದೆ ಶ್ರೀನಂದ (24), ಅಂಗನವಾಡಿ ಕಾರ್ಯಕರ್ತೆ ಜ್ಯೋತಿ (45), ಮಗುವನ್ನ ಖರೀದಿಸಿದ್ದ ಮುಬಾರಕ್ ಪಾಷ (36) ಹಾಗೂ ಮಗುವಿನ ತಂದೆಯ ಸ್ನೇಹಿತೆ ಜ್ಯೋತಿ (32) ಬಂಧಿತ ಆರೋಪಿಗಳು ಆಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಮೂಲದ ಶ್ರೀನಂದ ಮತ್ತು ಮೊನಿಷಾ ಇಬ್ಬರು ಅವಿವಾಹಿತರಾಗಿದ್ದರು. ಫೆಬ್ರವರಿ 20 ರಂದು ಮೊನಿಷಾಗೆ ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಇನ್ನು ಮದುವೆಯಾಗದ ಕಾರಣ ಮಗುವನ್ನ ಮನೆಗೆ ಕರೆದೊಯ್ಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮಗುವನ್ನ ಮಾರಾಟ ಮಾಡಿದ್ದರು. ಅಂಗನವಾಡಿ ಆಶಾ ಕಾರ್ಯಕರ್ತೆ ಜ್ಯೋತಿ ಮೂಲಕ ಮಗು ಮಾರಾಟ ಮಾಡಿದ್ದರು. ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಜ್ಯೋತಿ ಮೂಲಕ ಮಗುಗವನ್ನು ಕೊತ್ತಗೆರೆ ಗ್ರಾಮದ ಮುಬಾರಕ್ ಪಾಷ ಎಂಬುವರಿಗೆ 60 ಸಾವಿರಕ್ಕೆ ಮಗು ಮಾರಾಟ ಮಾಡಲಾಗಿತ್ತು. ಘಟನೆ ಸಂಬಂಧ ಮಹಿಳಾ…