Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ತುಮಕೂರು: ಬೆವಿಕಂ ನಗರ ಉಪವಿಭಾಗ–1 ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 27 ಮತ್ತು 28ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ಹಾಗೂ ಫೆ. 28ರಂದು ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್‌ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲ್ ಸಾಧನಗಳು ನಮ್ಮ ಜೀವನದಲ್ಲಿ ಅಗತ್ಯಭೂತ ಅಂಶವಾಗಿವೆ. ಆದರೆ, ಇವು ಸಾಕಷ್ಟು ಪ್ರಯೋಜನಗಳನ್ನು ನೀಡಿದರೂ, ಅದರೊಂದಿಗೆ ಸೈಬರ್ ಅಪರಾಧಗಳೂ ಹೆಚ್ಚುತ್ತಿವೆ. ಇಂತಹ ಸೈಬರ್ ಅಪರಾಧಗಳು, ಸೈಬರ್ ದಾಳಿಗಳು, ಹ್ಯಾಕಿಂಗ್ ಮತ್ತು ಡೇಟಾ ಹಕ್ಕುಚೂರಿಗಳು ನಾವು ಸೈಬರ್ ಜಗತ್ತಿನಲ್ಲಿ ಎಂದಿಗೂ ಎದುರಿಸಬಹುದಾದ ಅಪಾಯಗಳಾಗಿವೆ. ಇದರ ಬಗ್ಗೆ ಜಾಗೃತಿ ಮತ್ತು ಎಚ್ಚರಿಕೆಗೆ ಹೆಚ್ಚಿನ ಅಗತ್ಯವಿದೆ. ಈ ಹಿನ್ನೆಲೆ, ಆಕ್ಸ್ ಫರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್ ಹಾಗೂ ನಮ್ಮ ಪೊಲೀಸ್ ನ್ಯೂಸ್ ಸಹಯೋಗದೊಂದಿಗೆ “ಸೈಬರ್ ಜಾಗೃತಿ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸುರಕ್ಷತೆಯ ಕುರಿತು ಹೆಚ್ಚು ಅರಿವು ಮೂಡಿಸಲು ಉದ್ದೇಶಿತವಾಗಿತ್ತು. ಕಾರ್ಯಕ್ರಮವು ಪಾಲ್ಗೊಂಡು, ವಿದ್ಯಾರ್ಥಿಗಳು ತಮ್ಮ ಆನ್ ಲೈನ್ ಕ್ರಿಯಾಶೀಲತೆಯನ್ನು ಹೇಗೆ ಸುರಕ್ಷಿತವಾಗಿ ನಡೆಸಬಹುದು ಮತ್ತು ಸೈಬರ್ ಅಪರಾಧಗಳಿಂದ ಹೇಗೆ ರಕ್ಷಿಸಬಹುದು ಎಂಬುದನ್ನು ತಿಳಿದುಕೊಂಡರು. ಈ ಕಾರ್ಯಕ್ರಮದಲ್ಲಿ, ಹಿರಿಯ ವಕೀಲರು ಹಾಗೂ ಸ್ಥಾಪಕ ರೂಟ್ಸ್ ಸೈಬರ್ ಲಾ ಫರ್ಮ್ ರಂಗನಾಥ್ ಮೈಸೂರು ಪಾಲ್ಗೊಂಡರು. ಅವರು ತಮ್ಮ…
ಬೀದರ್: ಜಿಲ್ಲೆಯ ಔರಾದ ಪಟ್ಟಣದ ಆರಾಧ್ಯದೈವ ಐತಿಹಾಸಿಕ ಸುಕ್ಷೇತ್ರ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವವು ಫೆಬ್ರವರಿ 25ರಿಂದ ಮಾರ್ಚ್ 3ವರೆಗೆ ನಡೆಯಲಿದೆ. ಫೆಬ್ರವರಿ 25ರಂದು ಸಂಗೀತ ದರ್ಬಾರ್, 26ರಂದು ಅಗ್ನಿ ಪೂಜೆ (ಮಹಾಶಿವರಾತ್ರಿ), 27ರಂದು ರಥೋತ್ಸವ, 28ರಂದು ಜಂಗಿ ಕುಸ್ತಿ ನಡೆಯಲಿದೆ, ಮಾರ್ಚ್ 3ರಂದು ಪಶು ಪ್ರದರ್ಶನ ನಡೆಯಲಿದೆ. ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಸುಶೀಲ ವಾಣಿ ಕನ್ನಡ ದಿನ ಪತ್ರಿಕೆ ಸಂಪಾದಕ ಶಶಿಕಾಂತ ಆತ್ತಾರಾಮ ಕಾಂಬಳೆ, ಸುದ್ದಿ ಮೂಲ ಕನ್ನಡ ದಿನ ಪತ್ರಿಕೆ ಪತ್ರಕರ್ತ ಸುನಿಲ್ ಜಿರೋಬೆ, ಕರ್ನಾಟಕ ರಾಜ್ಯದ ಮಾಜಿ ಹಜ್ ಕಮಿಟಿ ಸದಸ್ಯರಾದ ಎಮ್.ಡಿ.ನಯೂಮ್, ಪತ್ರಕರ್ತ ಅರವಿಂದ ಮಲ್ಲಿಗೆ, ಬೆಳಕುಣಿ ( ಚೌ) ಗ್ರಾಪಂ ಸದಸ್ಯ ದೇವಿದಾಸ ಮಾಳೆಗೆ ಸ್ವಾಗತಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ನಡೆದಿದೆ. ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತಪಟ್ಟವರಾಗಿದ್ದಾರೆ. ಮೃತರಿಗೆ ಪತ್ನಿ,ಪುತ್ರಿ, ಇಬ್ಬರು ಪುತ್ರರಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿದ್ದ ನೀಲಕಂಠ ರಾವ್ ಅವರು ಸಂತಪೂರ ಗ್ರಾಮದಲ್ಲಿ ಆಸ್ಪತ್ರೆ ನಡೆಸುತ್ತಿದ್ದರು. ಸೋಮವಾರ ಬೆಳಿಗ್ಗೆ ಬೀದರ್ ನಿಂದ ಸಂತಪೂರ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದರು. ಈ ವೇಳೆ ಔರಾದ್ ಕಡೆಯಿಂದ ಬರುತ್ತಿದ್ದ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ –161ಎ ರಲ್ಲಿ ಪ್ರಗತಿಯಲ್ಲಿರುವ ಟೋಲ್ ಗೇಟ್ ಸಮೀಪ ಘಟನೆ ನಡೆದಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂತಪೂರ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತಪೂರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮಟ್ಟದಲ್ಲಿ ಅನೇಕ ಚರ್ಚೆ, ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25,000 ಸೈಬರ್ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ ಶೇ.20 ರಷ್ಟು ಪ್ರಕರಣ ಪತ್ತೆ ಹಚ್ಚಲು ಸಾಧ್ಯವಾಗುತ್ತಿದೆ. ಇನ್ನುಳಿದ ಪ್ರಕರಣ ಪತ್ತೆ ಹಾಕಲು ಸಂಶೋಧನಾತ್ಮಕವಾಗಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಅದರ ಜೊತೆಗೆ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಡಿಯಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಸೆಂಟರ್‍ನ್ನು ತುಮಕೂರಿನಲ್ಲಿ ತೆರೆಯಲು ತಯಾರಿ ನಡೆಸಲಾಗಿದೆ ಎಂದು ಗೃಹ ಸಚಿವರು ಹಾಗೂ ಸಾಹೇ ವಿವಿ ಕುಲಾಧಿಪತಿಗಳಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ನಗರದ ಕುಣಿಗಲ್ ರಸ್ತೆಯ ಎಸ್ ಎಸ್ ಐಟಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಆರಂಭಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಇಂದು (ಭಾನುವಾರ) ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಹಿಂದೆ ಗೃಹ ಸಚಿವನಾಗಿದ್ದ ಕಾಲಘಟ್ಟದಲ್ಲಿ ಇದರ ಸ್ಥಾಪನೆಗೆ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಲಾಗಿತ್ತು. ಈಗ…
ತುಮಕೂರು: ಕೆಡಿಪಿ ಸಭೆ ಎಂದು ಕರೆದು ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಕುರಿತು ಸಭೆ ಮಾಡಲಾಗುತ್ತಿದೆ ಎಂದು ಆರೋಪಿಸಿ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ ಗೌಡ ಇಂದು ನಡೆದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಅಲ್ಲದೆ ಈ ಸಂದರ್ಭದಲ್ಲಿ ಸುರೇಶ್ ಗೌಡ ಲಿಂಕ್ ಕೆನಾಲ್ ಯೋಜನೆ ಅನುಷ್ಠಾನ ಕುರಿತು ಚರ್ಚಿಸಲು ಮುಂದಾದಾಗ ಇದಕ್ಕೆ ಸಚಿವ ಪರಮೇಶ್ವರ್ ಅವಕಾಶ ನೀಡಲಿಲ್ಲ. ಅಲ್ಲದೆ ಸಭೆಯ ಕೊನೆಯ ಭಾಗದಲ್ಲಿ ಇದನ್ನು ಚರ್ಚಿಸುವ ಬಗ್ಗೆ ಸಲಹೆ ನೀಡಿದರು. ಇದರಿಂದ ಸಿಟ್ಟಿಗೆದ್ದ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ದಾಖಲೆಗಳನ್ನು ಟೇಬಲ್ ಮೇಲೆ ಬಿಟ್ಟು ಸಭೆಯಿಂದ ಹೊರ ನಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಕೆಡಿಪಿ ಸಭೆಗೆ ತಡವಾಗಿ ಬಂದ ಅಧಿಕಾರಿಗೆ ಸಚಿವ ಡಾ.ಜಿ.ಪರಮೇಶ್ವರ್ ಕ್ಲಾಸ್ ತೆಗೆದುಕೊಂಡು ಹೊರ ಕಳುಹಿಸಿದ ಘಟನೆ ತುಮಕೂರಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆಯಿತು. ಫೈಲ್ ಹಿಡಿದು ಸಭೆಗೆ ತಡವಾಗಿ ಆಗಮಿಸಿದ ಎಸ್ ಟಿ ನಿಗಮ ಅಧಿಕಾರಿಯನ್ನು ಕಂಡು ಪರಂ ಗರಂ ಆದರು. ನಿಗಮದ ಅಧಿಕಾರಿಯನ್ನ ಡೋಂಟ್ ಸ್ಟ್ಯಾಂಡ್ ಇಯರ್.. ಗೆಟ್ ಔಟ್ ಎಂದ ಹೋಂ ಮಿನಿಸ್ಟರ್ ತಡವಾಗಿ ಬಂದಿರೋದಕ್ಕೆ ಆಕ್ರೋಶ ವ್ಯಕ್ತಪಡಿಸಿ ಹೊರ ಕಳುಹಿಸಿದರು. ಸಭೆ ಆರಂಭವಾಗಿ ಮುಕ್ಕಾಲು ಗಂಟೆ ತಡವಾಗಿ ಅಧಿಕಾರಿ ಬಂದಿದ್ದು, ಇದರಿಂದ ಸಚಿವ ಪರಮೇಶ್ವರ್ ಕೆಂಡಾಮಂಡಲವಾದರು. ತಡವಾಗಿ ಬರುವ ಯಾವುದೇ ಅಧಿಕಾರಿಗಳನ್ನ ಒಳಗೆ ಬಿಡದಂತೆ ಭದ್ರತಾ ಸಿಬ್ಬಂದಿಗೆ ಸಚಿವರು ಸೂಚನೆ ನೀಡಿದರು. ಆದರೆ ತಡವಾಗಿಜನಪ್ರತಿನಿಧಿಗಳು ಬಂದರೆ ಮಾತ್ರ ಒಳಗೆ ಬಿಡುವಂತೆ ಪರಮೇಶ್ವರ್ ಸಲಹೆ ನೀಡಿದರು. ತುಮಕೂರಿನ ಜಿಲ್ಲಾ ಪಂಚಾಯಿತಿಯಲ್ಲಿ ಕೆಡಿಪಿ ಸಭೆ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು : ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಹಿರೇಮಠಕ್ಕೆ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು. ನಂತರ ಮಠದ ಶ್ರೀ ರೇವಣ ಸಿದ್ದೇಶ್ವರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ರಾಜಧಾನಿಕ ಭಾಗದಲ್ಲಿ ಅಗತ್ಯವಿರುವ ರೈಲ್ವೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವ ಸಂಕಲ್ಪ ತೊಟ್ಟಿರುವುದಾಗಿ ಸ್ವಾಮೀಜಿ ಬಳಿ ಹೇಳಿದರು. ಅಲ್ಲದೆ ಶ್ರೀಗಳ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು. ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು. ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು ಎಂದು ಹೇಳಿದರು. ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು…
ಬೆಂಗಳೂರು: ಕಾರೊಂದು ಐಟಿಪಿಎಲ್ ರಸ್ತೆಯ ದೇಸಿ ಮಸಲಾ ಹೋಟೆಲ್ ಮುಂಭಾಗ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದೆ. ಆದ್ರೆ ಸಂಜೆಯಾದ್ರೂ ಕಾರಿನಿಂದ ಯಾರೂ ಇಳಿದಿರಲಿಲ್ಲ. ಇದರಿಂದ ಅನುಮಾನಗೊಂಡ ಬೀಡದ ಅಂಗಡಿಯ ವ್ಯಕ್ತಿ ಸ್ಥಳೀಯರ ಗಮನ ಸೆಳೆದು ಕಾರಿನ ಬಳಿ ಹೋದ ವೇಳೆ ಆಘಾತ ಕಾದಿತ್ತು. 37 ವರ್ಷ ವಯಸ್ಸಿನ ಸಂತೋಷ್ ಪ್ರಸಾದ್ ಇಂದಿರಾನಗರಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಿದ್ದರು. ಗುರುವಾರ ಬೆಳಗ್ಗೆ ತಮ್ಮ ಕಚೇರಿಗೆಂದು ಕಾರಿನಲ್ಲಿ ತೆರಳಿದ್ದರು. ಅವರು ಹೈ ಶುಗರ್ನಿಂದ ಬಳಲುತ್ತಿದ್ದ ಸಂತೋಷ್, ಐಟಿಪಿಎಲ್ ರಸ್ತೆಯ ದೇಸಿ ಮಸಲಾ ಹೋಟೆಲ್ ಮುಂಭಾಗ ಬರುತ್ತಿದ್ದಂತೆಯೇ ಕಾರನ್ನು ಇದ್ದಕ್ಕಿದ್ದಂತೆ ಮರವೊಂದರ ಪಕ್ಕ ಪಾರ್ಕ್ ಮಾಡಿದ್ದರು. ಆದರೆ ಸಂಜೆಯಾದ್ರೂ ಅವರು ಕಾರಿನಿಂದ ಇಳಿದಿರಲಿಲ್ಲ. ಈ ಸ್ಥಳಕ್ಕೆ ಸ್ವಲ್ಪ ದೂರದಲ್ಲಿದ್ದ ಬೀಡಾದ ಅಂಗಡಿಯ ವ್ಯಕ್ತಿ ಇದನ್ನು ಗಮನಿಸಿ ಅನುಮಾನದಿಂದ ಕಾರಿನ ಸಮೀಪ ಹೋಗಿದ್ದು, ಒಳಗಿದ್ದ ವ್ಯಕ್ತಿಯನ್ನು ಕರೆದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ಕಾರಿನ ಗ್ಲಾಸ್ ಒಡೆದು ನೋಡಿದ ವೇಳೆ ಸಂತೋಷ್ ಮೃತಪಟ್ಟಿರುವುದು ತಿಳಿದು ಬಂದಿದೆ. ತಕ್ಷಣವೇ ಪೊಲೀಸರಿಗೆ ಅವರು…