Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ಬೆಂಗಳೂರು: ಯುವತಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ನಿವಾಸಿ ಮೋನಿಕಾ(20) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಬಿಎಂಟಿಸಿ ಬಸ್ ಹತ್ತಲು ಮುಂದಾಗುತ್ತಿದ್ದಂತೆ ಯುವತಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಆಕೆಯ ಮೇಲೆ ಬಸ್ ಹರಿದಿದೆ. ಯುವತಿ ನಗರದ ಕತ್ರಿಗುಪ್ಪೆಯಲ್ಲಿ ಮೋನಿಕಾ ವಾಸವಾಗಿದ್ದು ಕೊಂಡು ಬೊಮ್ಮನಹಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆ ಸುಮಾರಿನಲ್ಲಿ ದೇವೇಗೌಡ ಪೆಟ್ರೋಲ್ ಬಂಕ್,ಚಿನ್ನಮ ಜಂಕ್ಷನ್ ಸಮೀಪ ಮೋನಿಕಾ ಅವರು ಬಿಎಂಟಿಸಿ ಬಸ್ ಹತ್ತಲು ಹೋದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಆವೇಳೆ ಮೋನಿಕಾ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 15ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕದಿಂದ ಕುಂಭ ಮೇಳಕ್ಕೆ ತೆರಳಿದ್ದ ಬೆಳಗಾವಿಯ ತಾಯಿ, ಮಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ(50) ಮತ್ತು ಅವರ ಮಗಳು ಮೇಘಾ(18) ಹತ್ತರವಾಠ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಮತ್ತೋರ್ವ ವ್ಯಕ್ತಿ ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಪವಿತ್ರ ಸ್ನಾನದಲ್ಲಿ ಪಾಲ್ಕೊಳ್ಳಲೆಂದು ಕರ್ನಾಟದ ಬೆಳಗಾವಿಯಿಂದ ಸುಮಾರು 60 ಜನರ ತಂಡ ಎರಡು ಬಸ್ಗಳಲ್ಲಿ ತೆರಳಿದ್ದರು. ಇದರಲ್ಲಿ ನಮ್ಮ ಜೊತೆಗೆ 9 ಜನರು ಇದ್ದರು. ಅದರಲ್ಲಿ ನಾಲ್ಕೈದು ಜನ ಕಾಣಿಸುತ್ತಿಲ್ಲ ಎಂದು ಸ್ಥಳದಲ್ಲಿದ್ದ ಮಹಿಳೆಯೊಬ್ಬರು ಪ್ರತಿಕ್ರಿಯೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಮೈಸೂರು: ಉತ್ತರಪ್ರದೇಶದ ಮಿರ್ಜಾಪುರ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತಪಟ್ಟವರು. ಪ್ರಯಾಗ್ ರಾಜ್ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದಾಗ ಉತ್ತರಪ್ರದೇಶದ ಮಿರ್ಜಾಪುರ ಬಳಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಯುವಕರು ಎರಡು ಕಾರುಗಳಲ್ಲಿ ಪ್ರಯಾಗ್ರಾಜ್ ಯಾತ್ರೆಗೆ ಹೋಗಿದ್ದರು. ಅಪಘಾತದದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ. ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕಾರ್ತಿಕ್ ಬೇರೆಯವರ ಜಮೀನು ಗುತ್ತಿಗೆ ಪಡೆದು ಬೇಸಾಯ ಮಾಡುವುದಕ್ಕಾಗಿ ಬ್ಯಾಂಕ್ ಹಾಗೂ ಖಾಸಗಿಯವರ ಬಿಳಿ ಕೈಸಾಲ ಸೇರಿ ಒಟ್ಟು ₹4 ಲಕ್ಷ ಸಾಲ ಪಡೆದಿದ್ದರು ನಿರೀಕ್ಷೆಯಂತೆ ಬೆಳೆ ಬೆಳೆಯದೆ ಸಂಕಷ್ಟಕ್ಕೆ ಸಿಲುಕಿದ್ದರು ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಈ ಕುರಿತು ಧನ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾವಿಗೆ ಹಾರಿ ರೈತ ಆತ್ಮಹತ್ಯೆ: ಬಸವಕಲ್ಯಾಣ ತಾಲೂಕಿನ ಇಲ್ಲಾಳ ಗ್ರಾಮದ ರೈತ ಜಗದೀಶರೆಡ್ಡಿ ಪ್ರಲ್ಹಾದರೆಡ್ಡಿ (49) ತಮ್ಮ ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಮಂಗಳವಾರ ನಸುಕಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಈ ಹಿಂದೆ ಎರಡೂವರೆ ಎಕರೆ ಜಮೀನು ಇತ್ತು ರೇಷ್ಮೆ ಹಾಗೂ ಇತರೆ…
ಬೆಂಗಳೂರು: 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಮೊಬೈಲ್ ಗೀಳಿನಿಂದಾಗಿ ಬಾಲಕ ಸಾವಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ತನ್ನ 9 ವರ್ಷದ ತಂಗಿಯ ಎದುರೇ ಬಾಲಕ ನೇಣು ಬಿಗಿದುಕೊಂಡಿದ್ದಾನೆ. ಆಕೆ ಅಣ್ಣ ಏನು ಮಾಡುತ್ತಿದ್ದಾನೆ ಎನ್ನುವುದು ತಿಳಿಯದೇ ನೋಡುತ್ತಾ ನಿಂತಿದ್ದಳು ಎನ್ನಲಾಗಿದೆ. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಆತನ ತಾಯಿ ಬಂದಿದ್ದರು. ತಕ್ಷಣವೇ ಬಾಲಕನನ್ನು ನೆರೆಹೊರೆಯವರ ಸಹಕಾರದಿಂದ ಆಸ್ಪತ್ರೆಗೆ ಕರೆದೊಯ್ಯಲಾಯ್ತು, ಆದರೆ ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಜೋಧ್ ಪುರ: ತುರ್ತು ಬಾಗಿಲು ತೆರೆದಿದ್ದಕ್ಕಾಗಿ ಜೋಧ್ ಪುರದಿಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ. ನಿರ್ಗಮನದ ಸಮಯದಲ್ಲಿ ಪ್ರಯಾಣಿಕ ತುರ್ತು ನಿರ್ಗಮನ ಫ್ಲಾಪ್ ನ್ನು ತೆರೆದಿದ್ದರ ಪರಿಣಾಮ ವಿಮಾನ ಟೇಕ್ ಆಫ್ ಆಗುವುದು 20 ನಿಮಿಷಗಳ ವಿಳಂಬವಾಯಿತು. ಕ್ಯಾಬಿನ್ ಸಿಬ್ಬಂದಿ ಸುರಕ್ಷತಾ ಸೂಚನೆಗಳನ್ನು ನೀಡುತ್ತಿದ್ದಾಗ ಮತ್ತು ವಿಮಾನವು ಟೇಕ್ ಆಫ್ ಆಗಲು ಸಿದ್ಧವಾದಾಗ ಈ ಘಟನೆ ಸಂಭವಿಸಿದೆ. ಬ್ಯಾಂಕ್ ಉದ್ಯೋಗಿ ಸಿರಾಜ್ ಕಿದ್ವಾಯಿ ಬಂಧಿತ ಪ್ರಯಾಣಿಕನಾಗಿದ್ದಾರೆ. ತಾನು ಆಕಸ್ಮಿಕವಾಗಿ ತುರ್ತು ನಿರ್ಗಮನ ಫ್ಲಾಪ್ ತೆರೆದಿರುವುದಾಗಿ ಪ್ರಯಾಣಿಕ ಹೇಳಿದ್ದಾರೆ. ಈ ವೇಳೆ , ವಿಮಾನ ಸಿಬ್ಬಂದಿ ತ್ವರಿತವಾಗಿ ಕ್ರಮ ಕೈಗೊಂಡರು ಮತ್ತು ಪೈಲಟ್‌ಗೆ ತಕ್ಷಣವೇ ಎಚ್ಚರಿಕೆ ನೀಡಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪ್ರಯಾಗ್ರಾಜ್: ಮಹಾಕುಂಭ ಮೇಳದಲ್ಲಿ ಅಮೃತ ಸ್ನಾನದ ವೇಳೆ ನಡೆದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ. ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡಿಂಗ್ ದಾಟಲು ಕೆಲವರು ಯತ್ನಿಸಿದ್ದು, ಈ ವೇಳೆ ಕೆಲ ಭಕ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ಭೂಮಿ ಥಿಯೇಟರ್ ಹಾಗೂ ಜನಸ್ಪಂದನ ಟ್ರಸ್ಟ್ ಇವರ ಸಹಯೋಗದೊಂದಿಗೆ ತಿಪಟೂರಿನ ಬಯಲು ರಂಗ ಮಂದಿರದಲ್ಲಿ ಇದೇ ತಿಂಗಳು ಫೆಬ್ರವರಿ 2ನೇ ತಾರೀಖಿನವರೆಗೆ ನಾಟಕವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರ್ ತಿಳಿಸಿದರು. ನಾಲ್ಕು ದಿನಗಳ ಕಾಲ ನಡೆಯುವ ರಂಗ ಉತ್ಸವದ ಪ್ರಯುಕ್ತ ಮಾಲತಿ ಮಾಧವ್, ಅಂಕದ ಪರದೆ, ತಿಂಡಿಗೆ ಬಂದ ತುಂಡೇರಾಯ, ಹಾಗೂ ಬಾಬಾ ಮರ್ಲಿಂಗ್ ಫಾರ್ಮ್ ಕೊಡಿಹಳ್ಳಿ ಎಂಬ ನಾಟಕದ ಪ್ರದರ್ಶನವು ನಡೆಯಲಿದ್ದು, ಕಲಾಸಕ್ತರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು. ಜನ ಸ್ಪಂದನ ಟ್ರಸ್ಟ್ ನ ಅಧ್ಯಕ್ಷ ಸಿ.ಬಿ. ಶಶಿಧರ್ ಮಾತನಾಡಿ, ತಿಪಟೂರು ನಗರದ ಭೂಮಿ ಥಿಯೇಟರ್ ಸುಮಾರು 30 ವರ್ಷಗಳಿಂದ ರಂಗಭೂಮಿಗೆ ತನ್ನದೇ ಕೊಡುಗೆಗಳನ್ನು ನೀಡಿದ್ದು, ಮುಂದೆಯೂ ತಿಪಟೂರು ಸತೀಶ್ ರವರ ಮೂಲಕ ಇನ್ನು ಅನೇಕ ನಾಟಕಗಳನ್ನು ನಗರದಲ್ಲಿ ನಡೆಸಲಾಗುವುದು ಎಂದರು. ಈ ಕಾರ್ಯಕ್ರಮಗಳನ್ನು ಸಾರ್ವಜನಿಕರು ಪ್ರೋತ್ಸಾಹಿಸಬೇಕು ಮತ್ತು ಈ ಮೂಲಕ ಯಶಸ್ವಿಗೊಳಿಸಬೇಕೆಂದು ತಿಳಿಸಿದರು ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ದ್ವಿಚಕ್ರ ವಾಹನದಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದನ್ನು ಕಂಡು ದಂಡ ವಿಧಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರು ಯುವಕರನ್ನು ಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತುಮಕೂರು ನಗರದ ರಾಣಿ ಚೆನ್ನಮ್ಮ ಸರ್ಕಲ್ ಬಳಿ ಇರುವ ರಿಂಗ್ ರಸ್ತೆಯಲ್ಲಿ ಜನವರಿ 27 ರಂದು ಸಂಜೆ 7:30ರಲ್ಲಿ ಘಟನೆ ನಡೆದಿದೆ. ತುಮಕೂರು ನಗರದ ಮೊಹಮದ್ ಇಸ್ಮಾಯಿಲ್, ಮೊಹಮದ್ ಅಬ್ಬಾಸ್, ಅದ್ಮಾನ್ ಅಹಮದ್, ಮೊಹಮದ್ ಅಲೀ ಬಂಧಿತ ಆರೋಪಿಗಲಾಗಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ಮಹಿಳಾ ಪಿ.ಎಸ್.ಐ. ಟಿ.ಎಸ್. ಚಂದ್ರಕಲಾ ಮತ್ತು ಎ.ಎಸ್.ಐ. ಮೋಹನ್ ಕುಮಾರ್ ಕೆ. ಹಾಗೂ ಸಿಬ್ಬಂದಿ ತಮ್ಮರಾಯ ಮಾಡಕರಿರವರುಗಳು ರಾಣಿ ಚೆನ್ನಮ್ಮ ಸರ್ಕಲ್ ಬಳಿ ಅನುಚಿತವಾಗಿ ವರ್ತಿಸಿದ್ದರು. ಈ ವೇಳೆ ಸರ್ವಿಸ್ ರಸ್ತೆಯಿಂದ ರಿಂಗ್ ರಸ್ತೆಗೆ KA–06–EV–3695 ನೇ ನಂಬರಿನ ಹೋಂಡಾ ಆಕ್ಟಿವಾ ಸ್ಕೂಟರ್ ನಲ್ಲಿ 4 ಜನ ಯುವಕರು ಒಂದೇ ದ್ವಿಚಕ್ರ ವಾಹನದಲ್ಲಿ ಕುಳಿತುಕೊಂಡು, ಯಾವುದೇ ಹೆಲ್ಮೇಟ್ ಧರಿಸದೆ, ರಾಂಗ್ ರೂಟಿನಲ್ಲಿ ತಮ್ಮ ದ್ವಿಚಕ್ರ…
ತಿಪಟೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸೋಮವಾರ ರಾತ್ರಿ ಕಳ್ಳರು ಲಕ್ಷಾಂತರ ಮೌಲ್ಯದ ಸುಮಾರು 3,635 ಕೆ.ಜಿ. ಕೊಬ್ಬರಿ ಕಳವು ಮಾಡುವ ಮೂಲಕ ಕೈಚಳಕ ತೋರಿಸಿದ್ದಾರೆ. ಎಪಿಎಂಸಿ ಮಾರುಕಟ್ಟೆಯ ಮುಖ್ಯದ್ವಾರದ ಬೀಗ ಒಡೆದು ಕಳ್ಳರು ಘಟಕಿನಕೆರೆ ಮೂಲದ ನಾಗರಾಜ್ ಎಂಬುವರ ಒಡೆತನಕ್ಕೆ ಸೇರಿದ ಗಂಗಾ ಟ್ರೇಡರ್ಸ್ ನ ಕಂಪೌಂಡ್ ಹಾಗೂ ಅಂಗಡಿ ಬಾಗಿಲು ಬೀಗ ಮುರಿದು 3,645 ಕೆ.ಜಿ. ತೂಕದ ಕೊಬ್ಬರಿಯನ್ನು ಕಳ್ಳತನ ಮಾಡಲಾಗಿದೆ. ಏಷಿಯಾ ಖಂಡದಲ್ಲಿಯೇ ದೊಡ್ಡ ಮಾರುಕಟ್ಟೆಯ ಕಾವಲುಗಾರರ ಕಣ್ ತಪ್ಪಿಸಿ ಕಳವು ಮಾಡಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದು. ಮಾರುಕಟ್ಟೆಯಲ್ಲಿ ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಬಲ್ಲಮೂಲಗಳ ಪ್ರಕಾರ, 4 ಟನ್ ಕೊಬ್ಬರಿಯನ್ನ ಲಾರಿಯಲ್ಲಿ ತುಂಬಿ ಸಾಗಿಸಲಾಗಿದೆ. ಇಷ್ಟೊಂದು ರಾಜಾರೋಷವಾಗಿ ಕಳ್ಳತನವಾಗಿರುವುದು, ಎಪಿಎಂಸಿ ಮಾರುಕಟ್ಟೆ ವೈಫಲ್ಯವನ್ನ ತೋರಿಸುತ್ತಿದ್ದು, ಕಳ್ಳರು ಪೂರ್ವ ನಿಯೋಜಿತ ಸಂಚುರೂಪಿಸಿ ಕಳ್ಳತನ ಮಾಡಿದ್ದಾರೆ. ಕದಿಯಲು ಬಂದ ಕಳ್ಳರು ಚಾಕು ಹಾಗೂ ಕಾರದ ಪುಡಿಯನ್ನು ತಂದಿದ್ದು, ಕಾರದಪುಡಿಯನ್ನು ಅಲ್ಲೇ ಚೆಲ್ಲಿ ಹೋಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಅಧಿಕಾರಿಗಳು, ತಿಪಟೂರು ಡಿವೈಎಸ್ಪಿ…