Author: admin

ಕೊರಟಗೆರೆ: ತುಮಕೂರು ಜಿಲ್ಲಾ ಧಾರ್ಮಿಕ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಕೊರಟಗೆರೆ ತಾಲ್ಲೂಕಿನಿಂದ ಗೊಂದಿಹಳ್ಳಿ ರಂಗರಾಜು ನಾಮ ನಿರ್ದೇಶಿತರಾಗಿದ್ದಾರೆ. ತುಮಕೂರು ಜಿಲ್ಲಾ ಧಾರ್ಮಿಕ ಪರಿಷತ್ತಿಗೆ 8 ಮಂದಿ ನಿರ್ದೇಶಕರ ನಾಮನಿರ್ದೇಶನಗೊಂಡಿದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ ರವರ ಶಿಪಾರಸಿನ ಮೇರೆಗೆ ತಾಲ್ಲೂಕಿನಿಂದ  ಹಲವು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಜಿ.ಎಸ್.ರಂಗರಾಜು (ಗೊಂದಿಹಳ್ಳಿ) ನಾಮನಿರ್ದೇಶನಗೊಂಡಿದ್ದು ಜಿಲ್ಲಾಧಿಕಾರಿಗಳು ಈ ಪರಿಷತ್ತಿನ ಅಧ್ಯಕ್ಷರಾಗಿದ್ದು, ಮುಜರಾಯಿ ತಹಶೀಲ್ದಾರ್ ಪದನಿಮಿತ್ತ ಕಾರ್ಯದರ್ಶಿಯಾಗಿರುತ್ತಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:   ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಹುಲ್ ಬಿ.ಜೆ(16) ತೀವ್ರ ಹೃದಯಾಘಾತ ದಿಂದ ಮೃತ ಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿ.ಎಚ್.ಎಸ್.ನಲ್ಲಿ ನಡೆದಿದೆ ತಾಲೂಕಿನ ಭೈರಾಪುರದ  ಜಯರಾಂ ಎಂಬುವರ ಮಗ ರಾಹುಲ್,  ಶುಕ್ರವಾರ ಶಾಲೆಗೆ ಹೋಗಿ ಬಂದ ನಂತರ ಮನೆಯಲ್ಲಿ ರಾತ್ರಿ 9:30ರಲ್ಲಿ ಓದುತ್ತಿರುವಾಗ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ, ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್:  ಜಿಲ್ಲೆಯ ಔರಾದ ತಾಲೂಕಿನ  ಕೌಠಾ (ಬಿ) ಗ್ರಾಮದ ಓಂಕಾರ ಅಪ್ಪಾರಾವ ಗಾದಗೆ ಎಂಬುವರ ಮನೆಗೆ ನುಗ್ಗಿದ ಇಬ್ಬರು ಮುಸುಕುಧಾರಿಗಳು ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಓಂಕಾರ ಹಾಗೂ ಅವರ ತಂದೆ ಅಪಾರಾವ್ ಮನೆಯಲ್ಲಿ ಇರಲಿಲ್ಲ ಮನೆಯಲ್ಲಿ ಓಂಕಾರ ಅವರ ಪತ್ನಿ ಪ್ರೀತಿ ಒಬ್ಬರೇ ಇದ್ದರು. ಮನೆಯ ಹಿಂಬಾಗಿಲಿನಿಂದ ನುಗ್ಗಿದ ಇಬ್ಬರು ಮುಸುಕುಧಾರಿಗಳು ಪ್ರೀತಿ ಅವರ ಮೇಲೆ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ದರೋಡೆ ಮಾಡಿದ್ದಾರೆ ಎಂದು ಕುಂಟುಬದ ಮೂಲಗಳಿಂದ ತಿಳಿದು ಬಂದಿದೆ. ದರೋಡೆಕೋರರ ಹಲ್ಲೆಯಿಂದ ಗಾಯಗೊಂಡ ಪ್ರೀತಿ ಗಾದಗೆ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿದು ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್,ಸಂತಪೂರ ಠಾಣೆ ಪಿಎಸ್ಐ ನಂದಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸಂತಪೂರ…

Read More

ಜೈಪುರ: ರಾಜಸ್ಥಾನದ ಚಿನ್ನದ ಪದಕ ವಿಜೇತ ಕ್ರೀಡಾಪಟುವೊಬ್ಬರು  ಪವರ್‌-ಲಿಫ್ಟರ್‌ ಅಭ್ಯಾಸದ ವೇಳೆ 270 ಕೆಜಿ ರಾಡ್‌ ಕುತ್ತಿಗೆಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಜೂನಿಯರ್ ರಾಷ್ಟ್ರೀಯ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಮಹಿಳಾ ಪವರ್‌ಲಿಫ್ಟರ್ ಯಶ್ತಿಕಾ ಆಚಾರ್ಯ (17)  ಮೃತಪಟ್ಟವರಾಗಿದ್ದಾರೆ. ಅವಘಡ ನಡೆದ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ  ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯ ಸಂದರ್ಭದಲ್ಲಿ ತರಬೇತುದಾರರಿಗೂ ಗಾಯಗಳಾಗಿವೆ. ಮರಣೋತ್ತರ ಪರೀಕ್ಷೆಯ ನಂತರ ಬುಧವಾರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬಳ್ಳಾರಿ: ಬಳ್ಳಾರಿ ನಗರದ ಗ್ಲಾಸ್ ಬಜಾರ್ ಪ್ರದೇಶದಲ್ಲಿ ವಾಸವಾಗಿದ್ದ ಬಟ್ಟೆ ವ್ಯಾಪಾರಿ ದಂಪತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ನಗರದ ಗ್ಲಾಸ್ ಬಜಾರ್ ಪ್ರದೇಶದಲ್ಲಿ ವಾಸವಾಗಿದ್ದ ಶಂಕರ್ ರಾಮ್ (40) ಮತ್ತು ಶಾಂತಾದೇವಿ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. 15 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸವಾಗಿದ್ದ ದಂಪತಿ ಅನ್ನೋನ್ಯವಾಗಿಯೇ ಇದ್ದರು. ಈ ನಡುವೆ ದಂಪತಿ ಮಧ್ಯೆ ಏನಾಯಿತೋ, ಏನೋ ಗೊತ್ತಿಲ್ಲ. ಪತ್ನಿಯನ್ನು ಕೊಂದು ಶಂಕರ್ ರಾಮ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಶಂಕರ್ ರಾಮ್ ಸಂಬಂಧಿ ಇವರ ಮನೆ ಬಳಿ ಬಂದಾಗ ಬಾಗಿಲು ತೆಗೆದಿಲ್ಲ. ಕಿಟಕಿ ಮೂಲಕ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶಂಕರ್ ರಾಮ್ ಕಂಡುಬಂದಿದ್ದು, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಬ್ರೂಸ್‌ಪೇಟೆ ಠಾಣೆ ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ಶಂಕರ್ ರಾಮ್ ಅವರ ಪತ್ನಿ ಸಹ ಮೃತಪಟ್ಟಿರುವುದು…

Read More

ಬೆಂಗಳೂರು: ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ಮಾಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡ ಸದ್ಯ ಮೌನಕ್ಕೆ ಶರಣಾಗಿದೆ. ಇಲ್ಲಿಯವರೆಗೆ ಮಾಧ್ಯಮಗಳ ಎದುರು ಹಲವಾರು ಹೇಳಿಕೆಗಳನ್ನು ನೀಡುತ್ತಾ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ  ಬಿ.ಎಸ್.ಯಡಿಯೂರಪ್ಪ ವಿರುದ್ಧ ಹಲವು ಟೀಕೆಗಳನ್ನು ಮಾಡುತ್ತಿದ್ದ ಯತ್ನಾಳ್ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಯುದ್ದಕ್ಕೂ ಮುನ್ನವೇ ಶಸ್ತ್ರ ತ್ಯಾಗ ಎನ್ನುವಂತೆ ಭಿನ್ನಮತೀಯರ ಗುಂಪು ಮೌನಕ್ಕೆ ಶರಣಾಗಿದೆ. ಕೇಂದ್ರ ಶಿಸ್ತು ಸಮಿತಿ ನೋಟಿಸ್ ಬೆನ್ನಲ್ಲೇ ರೆಬಲ್ ತಂಡ ತಣ್ಣಗಾಗಿದೆ,. ಪಕ್ಷದಲ್ಲಿನ ತಟಸ್ಥ ಬಣದವರ ಬೆಂಬಲ ಇಲ್ಲದೆ ಯತ್ನಾಳ್ ಬಣ ಏಕಾಂಗಿಯಾಗಿ ಹೋರಾಟ ಮಾಡುವಂತಾಗಿದೆ. ಪದೇ ಪದೇ ತಮ್ಮ ಬಣವನ್ನು ವರಿಷ್ಠರು ನಿರ್ಲಕ್ಷಿಸುತ್ತಿದ್ದಾರೆ ಎಂಬ ಬೇಸರವೂ ರೆಬೆಲ್ ಬಣದಲ್ಲಿದೆಯಂತೆ. ವರಿಷ್ಠರ ಬೆಂಬಲ ಮತ್ತು ತಟಸ್ಥ ಬಣದ ಬೆಂಬಲ ಇಲ್ಲದೆ ಮುಂದೆ ಹೋದರೆ ಮುಖಭಂಗ ಅನುಭವಿಸಬೇಕಾಗುತ್ತದೆ ಎಂಬ ಭೀತಿಯೂ ರೆಬೆಲ್ ಬಣವನ್ನು ಕಾಡುತ್ತಿದೆ. ಹೀಗಾಗಿ ತಟಸ್ಥನಿಲುವು ತಾಳಿ, ಪಕ್ಷದಲ್ಲಿ ತಮಗೆ ನೀಡಿದ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಪ್ರತ್ಯೇಕವಾಗಿಯೇ…

Read More

ಡಿಯೋರಿಯಾ: 52 ವರ್ಷದ ವ್ಯಕ್ತಿಯೊಬ್ಬ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ನೆರೆಹೊರೆಯ ವ್ಯಕ್ತಿಯಿಂದಲೇ ಈ ಕೃತ್ಯ ನಡೆದಿದೆ. ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕೆ ತಾಯಿ ಓಡಿ ಬಂದಿದ್ದು, ಈ ವೇಳೆ ತಾಯಿಯನ್ನು ಬೆದರಿಸಿ ಸ್ಥಳದಿಂದ ಆರೋಪಿ ಓಡಿ ಹೋಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆಯ ಬೆನ್ನಲ್ಲೇ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಡಿಯೋರಿಯಾದ ಮಹರ್ಷಿ ದೇವರಾಹ ಬಾಬಾ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಫೆಬ್ರವರಿ 24ರಂದು ಬೆಳಿಗ್ಗೆ 10:30 ಗಂಟೆಗೆ 2024-25ನೇ ಸಾಲಿನ 3ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಬೆಂಗಳೂರು ನಿಮ್ಹಾನ್ಸ್ ಎಪಿಡೀಮಿಯಾಲಜಿ ವಿಭಾಗ ಜನ ಆರೋಗ್ಯ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅನುಷ್ಟಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪಾವಗಡ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು, ಸಿರಾ ಹಾಗೂ ಮಧುಗಿರಿ ಸೇರಿದಂತೆ 6 ತಾಲ್ಲೂಕುಗಳಿಗೆ ಯುವ ಪರಿವರ್ತಕರ ಆಯ್ಕೆ ಮಾಡಲಾಗುವುದು. ಯಾವುದೇ ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಮೂಲ ದಾಖಲೆಗಳೊಂದಿಗೆ ಫೆಬ್ರವರಿ 28ರೊಳಗಾಗಿ ಸಹಾಯಕ ನಿರ್ದೇಶಕ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 8549890509/ 9513073714ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು:  ಮಹಾನಗರಪಾಲಿಕೆಯ 2025–26ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಕುರಿತು ಫೆಬ್ರವರಿ 28ರಂದು ಮಧ್ಯಾಹ್ನ 3:30 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ 2ನೇ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಸಂಘ, ನರ್ಸಿಂಗ್ ಹೋಮ್ಸ್ ಸಂಘಗಳ ಪದಾಧಿಕಾರಿ, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ/ಸೂಚನೆಗಳನ್ನು ನೀಡಿ, ಆಯವ್ಯಯವನ್ನು ಪ್ರಗತಿಶೀಲವಾಗಿ ರೂಪಿಸಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More