Author: admin

ಬೆಂಗಳೂರು/ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಬೈಲಾವನ್ನು ರದ್ದುಪಡಿಸಿ ಅಧ್ಯಕ್ಷರು ಮತ್ತಿತರ ಸದಸ್ಯರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿ ಹೊಸದಾಗಿ ಪ್ರತಿಷ್ಠಾನವನ್ನು ಪುನರ್ ಸ್ಥಾಪಿಸಲು ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಒತ್ತಾಯಿಸಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ಸರ್ಕಾರ ಮುಖ್ಯ ಕಾರ್ಯದರ್ಶಿ ಗಳು, ಕಾರ್ಯದರ್ಶಿ ಕುವೆಂಪು ಪ್ರತಿಷ್ಠಾನ ಮತ್ತು ಜಿಲ್ಲಾಧಿಕಾರಿ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಇ—ಮೇಲ್ ಮೂಲಕ ಮನವಿ ಸಲ್ಲಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕುಪ್ಪಳಿ ರಾಷ್ಟ್ರಕವಿ ಕುವೆಂಪು ಹೆಸರು ಹೇಳಿದ ತಕ್ಷಣ ಸಾಹಿತ್ಯ ಕ್ಷೇತ್ರ ಮಾತ್ರವಲ್ಲ ಕನ್ನಡಿಗರ ಮೈ ನವಿರೇಳಿಸುವ ಮತ್ತು ಕನ್ನಡ ಅಭಿಮಾನಿಗಳ ದೇಹದಲ್ಲಿ ವಿದ್ಯುತ್  ಸಂಚಾರವನ್ನುಂಟು ಮಾಡುವ ಅದ್ಭುತ ಶಕ್ತಿಯನ್ನು ಹೊಂದಿರುವ ನೆಚ್ಚಿನ ಕುವೆಂಪುರವರ ಹೆಸರಿನಲ್ಲಿ ಸ್ಥಾಪನೆಗೊಂಡ ಕುವೆಂಪು ಪ್ರತಿಷ್ಠಾನವು ಸಾಕಷ್ಟು ಒಳ್ಳೆಯ ಕೆಲಸಗಳನ್ನು ನಿರ್ವಹಿಸುತ್ತಿರುವುದು ಶ್ಲಾಘನೀಯ. ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರತಿಷ್ಠಾನವು ಸರ್ವ ಜನಾಂಗ ಪ್ರತಿನಿಧಿಸುವ ಪ್ರತಿಷ್ಠಾನವಾಗದೆ ಒಂದು…

Read More

ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಮಾರ್ಚ್ 4 ರಿಂದ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್/ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಒದಗಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ 25ರ ಸಂಜೆ 5 ರಿಂದ 26ರ ಮಧ್ಯರಾತ್ರಿ 12 ಗಂಟೆಯವರೆಗೆ ಮಾಂಸ ಮಾರಾಟ ನಿಷೇಧಿತ ದಿನವೆಂದು ಘೋಷಿಸಲಾಗುವುದು. ಈ ಅವಧಿಯಲ್ಲಿ ಮಾಂಸ ಮಾರಾಟ ಮಾಡುವುದು, ಸಂಗ್ರಹಣೆ ಮಾಡುವುದನ್ನು ನಿಷೇಧಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚತಕ್ಕದ್ದು ಎಂದು ಪಾಲಿಕೆ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಬೇಸಿಗೆ ಸಮೀಪಿಸುತ್ತಿರುವುದರಿಂದ ಜನ–ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಪಾವಗಡ ತಾಲ್ಲೂಕು ನಾಗೇನಹಳ್ಳಿಗೆ ಬುಧವಾರ ಸಂಜೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಜನರಿಗೆ ನೀರು ಒದಗಿಸುವಲ್ಲಿ ನಿರ್ಲಕ್ಷತೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು. ಗ್ರಾಮಸ್ಥರಿಂದ ಬೇಡಿಕೆ:- ನಾಗೇನಹಳ್ಳಿ ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕಕ್ಕೆ ಕಾಯಿನ್ ಪದ್ಧತಿಯನ್ನು ಅಳವಡಿಸಬೇಕೆಂದು ಗ್ರಾಮಸ್ಥರ ಮನವಿಯನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಗ್ರಾಮೀಣ ನೀರು ಸರಬರಾಜು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಸವಲಿಂಗಪ್ಪ ಅವರಿಗೆ ಕೂಡಲೇ ಕಾಯಿನ್ ಪದ್ಧತಿ ಅಳವಡಿಸಲು ಸೂಚನೆ ನೀಡಿದರು. ಗ್ರಾಮಗಳಿಗೆ ಪ್ರತೀ ದಿನ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಿದರಲ್ಲದೆ ರಸ್ತೆ ಬದಿಯಲ್ಲಿ ತಿಪ್ಪೆ, ಕಸದ ರಾಶಿಯನ್ನು ಕಂಡ ಅವರು ಗ್ರಾಮದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿರಬೇಕು. ನೈರ್ಮಲ್ಯತೆ…

Read More

ತುಮಕೂರು: ಬೆವಿಕಂ ಪಾವಗಡ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಪಾವಗಡ, ವೆಂಕಟಾಪುರ, ಶೈಲಾಪುರ, ನಾಗಲಮಡಿಕೆ, ಮಂಗಳವಾಡ, ಕಿಲ್ಲಾರ್ಲಹಳ್ಳಿ, ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ ಉಪಸ್ಥಾವರಗಳಿಂದ ಸರಬರಾಜಾಗುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ 20ರವರೆಗೆ 35 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಮೊಬೈಲ್ ಫೋನ್, ರಿಸ್ಟ್ ವಾಚ್, ಬ್ಲೂಟೂತ್ ಸೇರಿದಂತೆ ವಿದ್ಯುನ್ಮಾನ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವುದನ್ನು ನಿರ್ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ದ್ವಿತೀಯ ಪಿಯುಸಿ ಪರೀಕ್ಷೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಯಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಪ್ರತಿ ಕೇಂದ್ರದ ಚಟುವಟಿಕೆಗಳನ್ನು ಜಿಲ್ಲಾಡಳಿತದ ಕಚೇರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ವೆಬ್ಕಾಸ್ಟಿಂಗ್ ಮೂಲಕ ನಿಗಾವಹಿಸಲಾಗುವುದು ಎಂದು ತಿಳಿಸಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಯಾವುದೇ ಲೋಪದೋಷಗಳಿಲ್ಲದಂತೆ ಶಾಂತಿಯುತವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.…

Read More

ಬೀದರ್ : ಕಾಶಿ ಬಳಿ ಲಾರಿ ಮತ್ತು ಕ್ರೊಸರ್ ನಡುವೆ ಭೀಕರ ರಸ್ತೆ ಅಪಘಾತವಾಗಿ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ನಡೆದಿದೆ. ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ದುರ್ಮರಣವಾಗಿದ್ದು ಒಂದೇ ಕುಟುಂಬದ ಮೂರು ಜನ ಸೇರಿದಂತೆ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಶಿಯಿಂದ 20 ಕಿಲೋ ಮೀಟರ ದೂರದಲ್ಲಿ ಲಾರಿಗೆ ಹಿಂಬದಿಯಿಂದ ರಭಸವಾಗಿ ಕ್ರೂಸರ್ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿದ್ದು ಉಳಿದ 7 ಜನರ ಸ್ಥಿತಿ ಗಂಭೀರವಾಗಿದೆ. 57 ವರ್ಷದ ಲಕ್ಷ್ಮಿ, 62 ವರ್ಷದ ನೀಲ್ಲಮ್ಮ, 45 ವರ್ಷದ ಸಂತೋಷ, 40 ವರ್ಷದ ಸುನೀತಾ, ಕಲಾವತಿ ಸೇರಿದಂತೆ ಐದು ಜನ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಪ್ರಯಾಗ್ ರಾಜ್ ನಿಂದ ಕಾಶಿ ಕಡೆ ಹೋಗುವಾಗ ಭೀಕರ ರಸ್ತೆ ಅಪಘಾತವಾಗಿ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದೇ ಒಂದೇ ಗಾಡಿಯಲ್ಲಿ ಕುಂಭ ಮೇಳಕ್ಕೆ ತೆರಳಿದ್ದ 13 ಜನರಲ್ಲಿ…

Read More

ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ–ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ. ಕಾಂಪ್ಲೆಕ್ಸ್ ನಲ್ಲಿಂದು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಂದೋಲನದಲ್ಲಿ ಇ–ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಲು ಮಾಲೀಕರಿಗೆ ನಿಗದಿತ ಅರ್ಜಿಯನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ವೀಕರಿಸಲು ವಾರ್ಡ್ ವಾರು ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ಸೀಮಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಿ ತಮ್ಮ ಆಸ್ತಿಯನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಬಹುದಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸ್ಥಳಗಳಲ್ಲಿ ಬಿ–ಖಾತಾ ರಿಜಿಸ್ಟರ್ ದಾಖಲಾತಿ ಆಂದೋಲನ ನಡೆಯಲಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಹಣವನ್ನು ಪಾವತಿಸಬೇಕು. ಇದರಿಂದ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೆರವಾಗುತ್ತದೆ ಎಂದು ತಿಳಿಸಿದರು. ಸಾರ್ವಜನಿಕರು ತಮ್ಮ ಆಸ್ತಿಗೆ…

Read More

ಪಾವಗಡ: ಟ್ರ್ಯಾಕ್ಟರ್ ಹರಿದು ಪೌರಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಪಾವಗಡ ಪಟ್ಟಣದ ಶನಿಮಹಾತ್ಮ ವೃತ್ತದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಯಲ್ಲಿ ಜರುಗಿದೆ. ಪಾವಗಡ ಪೊಲೀಸರು ಕಳ್ಳತನಗಳನ್ನು ನಿಯಂತ್ರಿಸಲು ಪಟ್ಟಣದ ನಾಲ್ಕು ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸುತ್ತಿದ್ದಾರೆ, ಪಟ್ಟಣದ ವಿವಿಧಡೆ ಇರುವಂತಹ ಬ್ಯಾರಿಕೆಡ್ ಗಳನ್ನು ಖಾಸಗಿ ಟ್ರ್ಯಾಕ್ಟರ್ ನಲ್ಲಿ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಪೊಲೀಸರು ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜು ಎನ್ನುವವರನ್ನು ಕರೆದುಕೊಂಡು ಬ್ಯಾರಿಕೇಡ್ ಗಳನ್ನು ಸಾಗಿಸುತ್ತಿದ್ದರು. ಎಂಎಜಿ ಸರ್ಕಲ್ ನಲ್ಲಿರುವಂತಹ ಬ್ಯಾರಿಕೆಡ್ ಗಳನ್ನು ಚಳ್ಳಕೆರೆ ಕ್ರಾಸ್ ಕಡೆ ಸಾಗಿಸುವ ಮಾರ್ಗ ಮಧ್ಯೆ ಪಟ್ಟಣದ ಶನಿ ಮಹಾತ್ಮ ವೃತ್ತದಲ್ಲಿ ಇದ್ದಕ್ಕಿದ್ದಂತೆ ಮಂಜುನಾಥ ಕೆಳಗೆ ಬಿದ್ದಿದ್ದು, ಆತನ ತಲೆಯ ಮೇಲೆ ಟ್ರ್ಯಾಕ್ಟರ್ ಹರಿದಿದೆ. ಕೂಡಲೇ ಸ್ಥಳೀಯರ ನೆರವಿನಿಂದ ಆತನನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಐದು ಗಂಟೆಯಲ್ಲಿ ಪುರಸಭೆಯ ಕಾಯಂ ನೌಕರ ಮಂಜುನಾಥ್ ಮೃತಪಟ್ಟಿದ್ದಾನೆ. ಆಸ್ಪತ್ರೆ…

Read More

ಕೊರಟಗೆರೆ : ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಗ್ರಾಮದಲ್ಲಿ ಶಾಲಾ ಮಕ್ಕಳಿಂದ ‘ನಮ್ಮ ಸಂಸ್ಕೃತಿ ನಮ್ಮ ವೈಭವ’ ಎಂಬ ಕಾರ್ಯಕ್ರಮವನ್ನು ಹಾಗೂ ಶಾಲಾ ವಾರ್ಷಿಕೋತ್ಸವವನ್ನು ವಿಶೇಷವಾಗಿ ವಿಜೃಂಭಣೆಯಿಂದ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ದಿವ್ಯಸಾಹಿತ್ಯವನ್ನು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪರಪೂಜ್ಯ ಶ್ರೀ ಹನುಮಂತನಾಥ ಸ್ವಾಮೀಜಿ ಹಾಗೂ ಶ್ರೀ ಶಿವಕುಮಾರ ಸ್ವಾಮಿ ಚಿಕ್ಕಣ್ಣ ಸ್ವಾಮಿ ಸುಕ್ಷೇತ್ರ ಹೆಟ್ಟೂರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ ಮಾತನಾಡಿ, ಹೊಸಕೋಟೆ ಗ್ರಾಮವು ತಾಲೂಕಿನ ವಿಶೇಷತೆ ಕೂಡ ಆಗಿದ್ದು, ಇದೇ ಗ್ರಾಮದಲ್ಲಿ ಓದಿ ಜಿಲ್ಲೆಯಾದ್ಯಂತ ಹೆಸರು ಮಾಡಿರುವ ಹಾಗೂ ಊರಿಗೆ ಕೀರ್ತಿ ತಂದಿರುವ ಮಾಜಿ ಜಿಲ್ಲಾ ಪಂಚಾ ಯಿತಿ ಅಧ್ಯಕ್ಷ ಪ್ರೇಮ ಮಾಲಿಂಗಪ್ಪನವರು ಹಾಗೂ ಅನೇಕ ಮಹನೀಯರು ಇದೇ ಊರಿನವರು. ಹೊಸಕೋಟೆ ಗ್ರಾಮವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ಮಕ್ಕಳ ಜಾನಪದ ವೇಷಭೂಷಣ ನೋಡಿದರೆ, ಹಿಂದಿನ ಕಾಲದ ಹಳೆಯ ಹಳ್ಳಿಯ ಸೊಬಗು ನಮ್ಮ ಮುಂದೆ…

Read More