Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಕೊರಟಗೆರೆ : ಹೊರರಾಜ್ಯದಿಂದ ತೋವಿನಕೆರೆಗೆ ಆಗಮಿಸಿ ಅನಧಿಕೃತವಾಗಿ ಪ್ರಾರಂಭ ಮಾಡಿರುವ ಸೆಲೂನ್ ಅಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಸವಿತಾ ಸಮಾಜದಿಂದ ತಮ್ಮ 12 ಅಂಗಡಿ ಮಳಿಗೆಗಳನ್ನು ಸ್ವಯಂ ಪ್ರೇರಿತವಾಗಿ ಕಳೆದ 3 ದಿನದಿಂದ ಮುಚ್ಚಿ ಮುಷ್ಕರಕ್ಕೆ ಕರೆ ನೀಡಿರುವ ಘಟನೆ ಇತ್ತೀಚಿಗೆ ಬೆಳಕಿಗೆ ಬಂದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ಹೊರ ರಾಜ್ಯದಿಂದ ಬಂದಿರುವ ಮುಸ್ಲಿಂ ಕುಟುಂಬವೊಂದು ಕ್ಷೌರದ ಅಂಗಡಿ ತೆರೆದಿದ್ದಾರೆ. ಇದರಿಂದ ಭಜಂತ್ರಿ ಸಮುದಾಯದ ಕುಟುಂಬಗಳಿಗೆ ಆರ್ಥಿಕವಾಗಿ ನಷ್ಟವಾಗಲಿದೆ ಎಂದು ಆರೋಪಿಸಿ, 3 ದಿನದಿಂದ ಸವಿತಾ ಸಮಾಜದ ಅಂಗಡಿ ಮಾಲೀಕರಿಂದ ಮುಷ್ಕರಕ್ಕೆ ಕರೆ ನೀಡಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸವಿತಾ ಸಮಾಜದ ಆಗ್ರಹ ಏನು? ಗ್ರಾಮ ಪಂಚಾಯಿತಿಯಿಂದ ಪರವಾನಗಿ ಪಡೆಯದೇ ಅನಧಿಕೃತವಾಗಿ ಮುಸ್ಲಿಂ ಕುಟುಂಬ ಸೆಲೂನ್ ತೆಗೆದಿದ್ದಾರೆರೇ. ಮುಸ್ಲಿಂ ಅಂಗಡಿ ಮಾಲೀಕ ಗ್ರಾಹಕರಿಂದ ಕಡಿಮೆ ಹಣ ಪಡೆದು ಕಟ್ಟಿಂಗ್ ಶೇವಿಂಗ್ ಮಾಡ್ತಾನೇ. ವಾರದಲ್ಲಿ 1 ದಿನವು ರಜೆಯಲ್ಲದೇ ಪ್ರತಿನಿತ್ಯ ಅಂಗಡಿ ತೆರೆಯುತ್ತಾರೆ. ನಾವು ಪೂರ್ವ ಕಾಲದಿಂದಲೂ…
ಬೀದರ್: ಜಿಲ್ಲಾ ಕಮಲನಗರ ತಾಲೂಕಿನ ಹಂದಿಕೆರಾ ಗ್ರಾಮದ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಉಮಾಕಾಂತ ನಾಗಮಾರಪಳ್ಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಮೂಲ ಕೇಶ್ವರಾವ್ ಬಿರಾದಾರ ಅವರ ನೇತೃತ್ವದಲ್ಲಿ ನೋಟ್ ಬುಕ್ ವಿತರಣೆ ಮಾಡಲಾಯಿತು. ಬೆಂಗಳೂರಿನ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು, ಬೀದರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಬೀದರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿರುವ ಉಮಾಕಾಂತ್ ನಾಗಮಾರಪಳ್ಳಿ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂಗದ್ ಮಾಲಕಾರಿ, ರಿತೇಶ್ ಬಿರಾದಾರ್, ಮಾರೋತಿ ಬಿರಾದಾರ್, ವಿಠ್ಠಲ್ ಬಿರಾದಾರ್, ಹರಿಓಂ, ಕೃಷ್ಣ, ಗಣೇಶ್ಇತರೆ ಶಿಕ್ಷಕರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್ : ಆಸ್ಪತ್ರೆಗೆ ಬರುವ ಸಾಮಾನ್ಯ ಹಾಗೂ ಬಡ ರೋಗಿಗಳಿಗೆ ಅಗತ್ಯ ತುರ್ತು ಔಷಧಿಗಳು ಲಭ್ಯವಾಗುವಂತೆ ಆರೋಗ್ಯಾಧಿಕಾರಿಗಳು ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು. ಬಿದ್ರಿ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹೊರ ರೋಗಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಅವರು ಮಾತನಾಡಿದರು. ಹಾವು ಮತ್ತು ನಾಯಿ ಕಡಿತ ಸೇರಿದಂತೆ ಇತರ ತುರ್ತು ಔಷಧಿಗಳು ಆಸ್ಪತ್ರೆಗೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಎಂದು ನಗರಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಶಂಕರ್ ಟಿ. ಅವರಿಗೆ ಸೂಚನೆ ನೀಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಐತಿಹಾಸಿಕ ಪ್ರಯಾಗ್‌ರಾಜ್ ನ ಕುಂಭ ಮೇಳದಲ್ಲಿ ಭಗವಹಿಸಿದ್ದ ನಾಗಸಾಧು ಧನಂಜಯ ಗುರೂಜಿ ಇಂದು ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣದ ಸಮೀಪ ಇರುವ ಹೆಗ್ಗೆರೆ ಗ್ರಾಮದಲ್ಲಿರುವ ಶಿವಲಿಂಗ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ನಾಗಸಾಧು ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಗ್ರಾಮಸ್ಥರೆಲ್ಲರೂ ಅವರಿಗೆ ಭವ್ಯವಾದ ಪೂರ್ಣ ಕುಂಭ ಸ್ವಾಗತವನ್ನು ನೀಡಿದರು. ಹುಳಿಯಾರು ಸಮೀಪದ ಹೆಗ್ಗೆರೆಯ ಚೋಳರ ಕಾಲದಲ್ಲಿ ಪ್ರತಿಷ್ಠಾಪಿಸಲಾಗಿರುವ ಮಹಾರುದ್ರ ಶಿವಾಲಯದ ಬಗ್ಗೆ ಕುಂಭಮೇಳದಲ್ಲಿ ಅವರು ಪ್ರಸ್ತಾಪ ಮಾಡಿದ್ದರು. ನಾಗ ಸಾಧು ಧನಂಜಯ್ ಗುರುಜಿ ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿ ಸೇರಿದಂತೆ ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಕಂಚೀಪುರ, ಯಳನಾಡು,ದಸೂಡಿ, ಹುಳಿಯಾರು, ಶ್ರೀರಾಂಪುರ ಮುಂತಾದ ಭಾಗದಿಂದ ಭಕ್ತ ಸಮೂಹ ಆಗಮಿಸಿ ನಾಗಸಾಧುವಿನ ದರ್ಶನ ಪಡೆದರು. ನಂತರ ಧನಂಜಯ್ ಗುರೂಜಿ ಅವರು ಶಿವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು : ನಟ ಹಾಗೂ ನಿರ್ಮಾಪಕ ಕೆ.ಮಂಜು ಅವರ ಮಗ ಶ್ರೇಯಸ್ ಸಂಚರಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಶ್ರೇಯಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಎಡ ಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ. ವಿಷಯ ತಿಳಿದ ಸ್ಥಳಕ್ಕೆ ಬಂದ ಶಿರಾ ಪೊಲೀಸ್ ಠಾಣೆ ಸಿಬ್ಬಂದಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ವಿಷಾಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ಆಗಿರುವ ಘಟನೆ ವಿಧಾನಪರಿಷತ್ ಸದಸ್ಯರೊಬ್ಬರ ಮಾಲಿಕತ್ವದ ಪ್ರೆಸಿಡೆನ್ಸಿ ಶಾಲೆಯಲ್ಲಿ ನಡೆದಿದೆ. ಬಿಜೆಪಿ ಎಂಎಲ್ ಸಿ ಚಿದಾನಂದ್ ಎಂ. ಗೌಡ ಮಾಲೀಕತ್ವದ ಪ್ರೆಸಿಡೆನ್ಸಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಫುಡ್ ಪಾಯಿಜನ್ ನಿಂದಾಗಿ ಜಿಲ್ಲೆಯ ಶಿರಾ ನಗರದ ಪ್ರೆಸಿಡೆನ್ಸಿ ಶಾಲೆಯಲ್ಲಿ ಮಕ್ಕಳಿಗೆ ವಾಂತಿ–ಭೇಧಿ ಕಾಣಿಸಿಕೊಂಡಿದೆ. ಮಂಗಳವಾರ ರಾತ್ರಿ ಊಟ ಸೇವನೆ ಬಳಿ ಮಕ್ಕಳ ಆರೋಗ್ಯದಲ್ಲಿ ಏರು ಪೇರು ಕಾಣಿಸಿಕೊಂಡಿದೆ. ನಿನ್ನೆ ಏಕಾಏಕಿ ಐವತ್ತಕ್ಕೂ ಹೆಚ್ಚು ಮಕ್ಕಳಲ್ಲಿ ಕಾಣಿಸಿಕೊಂಡ ವಾಂತಿ ಭೇಧಿಯಿಂದ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಮಕ್ಕಳಿಗೆ ವಸತಿ ಶಾಲೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರೆಸಿಡೆನ್ಸಿ ಶಾಲೆಯ ಊಟದ ವ್ಯವಸ್ಥೆ ಪರಿಶೀಲನೆ ನಡೆಸಿದ ಅಧಿಕಾರಿ ವರ್ಗ. ಮೇಲ್ನೋಟಕ್ಕೆ ಊಟದ ವ್ಯತ್ಯಾಸ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಶಾಲಾ ಮಾಲೀಕ ಎಂಎಲ್ಸಿ ಚಿದಾನಂದ ಎಂ ಗೌಡ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ರಾಜ್ಯದ 80 ತಾಲ್ಲೂಕು ಆಸ್ಪತ್ರೆಗಳಲ್ಲಿ ಆರಂಭಿಸಿರುವ ‘ಪುನೀತ್ ರಾಜ್‌ಕುಮಾರ್’ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರವರು ಹೇಳಿದರು. ನಗರದ ಶಿರಾರಸ್ತೆಯ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ಸ್ಥಾಪಿಸಿರುವ 2ನೇ ಕ್ಯಾಥ್ ಲ್ಯಾಬ್ ನ್ನು ಫೆ.19 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಿ ಅವರು ಮಾತನಾಡುತ್ತಾ, ಹೃದಯ ಜ್ಯೋತಿ ಸೌಲಭ್ಯದಿಂದ ಈವರೆಗೆ ಸುಮಾರು 250 ಕ್ಕೂ ಹೆಚ್ಚು ಜನರ ಜೀವ ಕಾಪಾಡಲಾಗಿದೆ ಎಂದು ತಿಳಿಸಿದರು. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೆ–ಕೇರ್ ಮತ್ತು ಕಿಮೋಥೊರಫಿ ಸೌಲಭ್ಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು ಸದ್ಯದಲ್ಲಿಯೇ ಈ ಯೋಜನೆಗೆ ಚಾಲನೆ ನೀಡಲಾಗುವುದು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜೊತೆಗೂಡಿ ಜನರಿಗೆ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ತುಮಕೂರಿನ ಶ್ರೀದೇವಿ ಆಸ್ಪತ್ರೆ ಮತ್ತು ಸಿದ್ದಾರ್ಥ ವೈದ್ಯಕೀಯ ಸಂಸ್ಥೆಗಳಿಗೆ ಡೆ-ಕೇರ್ ಮತ್ತು ಕಿಮೋಥೆರಫಿ ಚಿಕಿತ್ಸಾ ನಿರ್ವಹಣೆಯನ್ನು ವಹಿಸಿಕೊಂಡುವುದಾಗಿ ಸಚಿವರು ಪ್ರಕಟಿಸಿದರು.…
ತುಮಕೂರು: ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ತಾಲ್ಲೂಕು ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ತುಮಕೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 21 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಎಂ.ಜಿ.ರಸ್ತೆ, ಅಂಬೇಡ್ಕರ್ ಭವನದ ಪಕ್ಕ, ತುಮಕೂರು ಅಥವಾ ದೂ.ವಾ.ಸಂ.0816-2251736ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: 4 ಕರ್ನಾಟಕ ಬೆಟಾಲಿಯನ್ ಎನ್ ಸಿಸಿಯಲ್ಲಿ ನಡೆದ ಪಿಪ್ಪಿಂಗ್ ಕಾರ್ಯಕ್ರಮದಲ್ಲಿ ಅಸೋಸಿಯೆಟ್ ಎನ್ ಸಿಸಿ ಆಫಿಸರ್ ಗಳಾದ ತುಮಕೂರು ವಿವಿ ವಿಜ್ಞಾನ ಕಾಲೇಜಿನ ಡಾ.ಅರುಣ್ ಕುಮಾರ್ ಡಿ.ಬಿ. ಅವರಿಗೆ ಕ್ಯಾಪ್ಟನ್ ರ‍್ಯಾಂಕ್ ನಿಂದ ಮೇಜರ್ ರ‍್ಯಾಂಕ್ ನ್ನು ಹಾಗೂ ಶ್ರೀನಿವಾಸಮೂರ್ತಿ ಎಲ್. ರವರಿಗೆ ಲೆಫ್ಟಿನೆಂಟ್ ರ‍್ಯಾಂಕನ್ನು ಕಮ್ಯಾಂಡಿಂಗ್ ಆಫಿಸರ್ ಕರ್ನಲ್ ಗುರ್ಮಿತ್ ಎಸ್. ಗುಜ್ರಾಲ್ ರವರು ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಆಸೋಸಿಯೇಟ್ ಆಫಿಸರ್ ಕರ್ನಲ್ ನರೇಂದ್ರ ಭಂಡಾರಿ, ಸುಭೇದರ್ ಮೇಜರ್ ದಿನೇಶ್ ಸಿಂಗ್, ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಶೇಟ್ ಪ್ರಕಾಶ್, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಹೇಮಲತಾ, ಸುಭೇದಾರ್ ಯೋಗೀಶ್, ಜಿಸಿಐ ಭವ್ಯ, ತೇಜಸ್ವಿನಿ, ಮಂಜುಳ, ಡಾ.ನಿವೇದಿತ ದೇಸಾಯಿ, ದಿವ್ಯಶ್ರೀ ಎಲ್.ವಿ., ಪ್ರದೀಪ್ ಕುಮಾರ್, ತುಮಕೂರು ವಿವಿ ವಿಜ್ಞಾನ ಕಾಲೇಜಿನ ಹಾಗೂ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಕೆಡೆಟ್ಸ್ ಗಳು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ಮಾರ್ಚ್ 11 ರಿಂದ 21ರವರೆಗೆ ನಡೆಯಲಿರುವ ಶ್ರೀ ದಂಡಿನಮಾರಮ್ಮ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸೇರುವ ಅಂಗಡಿಗಳ ಮೇಲೆ ನೆಲವಳಿ ಸುಂಕ ವಸೂಲಿ ಮಾಡುವ ಹಕ್ಕಿನ ಹರಾಜನ್ನು ಫೆಬ್ರವರಿ 24ರಂದು ಬೆಳಿಗ್ಗೆ 11 ಗಂಟೆಗೆ ಮಧುಗಿರಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುವುದು. ಹರಾಜಿನಲ್ಲಿ ಭಾಗವಹಿಸಲಿಚ್ಛಿಸುವ ಪ್ರತಿ ಸವಾಲುದಾರರು ಸವಾಲು ಮಾಡುವ ಮುನ್ನ ತಾವಾಗಲೀ ಅಥವಾ ತಮ್ಮ ಏಜೆಂಟರ ಮೂಲಕವಾಗಲೀ 50,000 ರೂ.ಗಳ ಠೇವಣಿ ಇಡಬೇಕು. ಆಸಕ್ತರು ಹರಾಜು ಷರತ್ತು ಹಾಗೂ ಹೆಚ್ಚಿನ ವಿವರವನ್ನು ಮಧುಗಿರಿ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4