Author: admin

ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ತಿಪಟೂರು ಗ್ರಾಮಾಂತರ ಹಾಗೂ ಬೆಳಗರಹಳ್ಳಿಯ ಡಾ. ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯ ಜಂಟಿ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪರಿಸರ ಜಾಗೃತಿ, ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನೊಣವಿನಕೆರೆ ವಲಯದ ಹೆಡಗರಹಳ್ಳಿ ಕಾರ್ಯಕ್ಷೇತ್ರಕ್ಕೆ ಒಳಪಡುವ ಬೆಳಗರಹಳ್ಳಿಯ ಡಾ. ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಗಣ್ಯರ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಗಿಡನಾಟಿ ಮಾಡುವ ಮೂಲಕ ಚಾಲನೆ ನೀಡಲಾಯಿತು. 2026ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯವಾದ “ಪ್ರಕೃತಿಯಿಂದ ಪ್ರೇರಿತ ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ” ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ಯುವರಾಜ್ ಅವರು, “ಆಡು ಮುಟ್ಟದ ಸೊಪ್ಪಿಲ್ಲ, ಪೂಜ್ಯ ಖಾವಂದರು ಯೋಜಿಸದ ಕಾರ್ಯಕ್ರಮವಿಲ್ಲ” ಎಂದು ಧರ್ಮಸ್ಥಳದ ಪೂಜ್ಯ ಹೆಗ್ಗಡೆಯವರ ಪರಿಸರ ಕಾಳಜಿಯನ್ನು ಶ್ಲಾಘಿಸಿದರು. ಮುಂದುವರಿದು ಮಾತನಾಡಿದ ಅವರು, “ಪಳೆಯುಳಿಕೆ ಇಂಧನ ಮುಕ್ತ ವಾಹನಗಳ ಬಳಕೆ, ರಾಸಾಯನಿಕ ಮುಕ್ತ ಕೃಷಿ ಪದ್ಧತಿ,…

Read More

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ದೊಡ್ಡ ಬಂಡಾಯದ ಬಿಸಿ ತಟ್ಟಿದೆ. ತಮಗೆ ಹಂಚಿಕೆ ಮಾಡಲಾದ ಖಾತೆ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ಹಾಗೂ 9 ಬಾರಿಯ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮಾಧ್ಯಮಗಳ ಮುಂಭಾಗದಲ್ಲಿ ರಾಜೀನಾಮೆ ಪತ್ರ ಸಿದ್ಧಪಡಿಸಿದ ರಾಮಲಿಂಗಾರೆಡ್ಡಿ, ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಬೇಸರ ಹೊರಹಾಕಿದ್ದಾರೆ. “ನನಗೆ ಜಲಸಂಪನ್ಮೂಲ ಖಾತೆಗೆ ಹೋಗಲು ಮನಸ್ಸು ಒಪ್ಪುತ್ತಿಲ್ಲ. ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಆದರೆ ಖಾತೆ ಕೊಡುವಾಗ ಮಾತ್ರ ಹೀಗೇಕೆ?” ಎಂದು ಪ್ರಶ್ನಿಸಿದ್ದಾರೆ. 2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ ಸಾರಿಗೆ ಖಾತೆ ನೀಡಲಾಯಿತು. ಆ ಸಂದರ್ಭದಲ್ಲಿ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ಅವರು…

Read More

ಬೆಂಗಳೂರು: ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜೂನ್ 3, 2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶಗಳನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ನಿರ್ಧಾರದಿಂದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಂದ ದೂರದ ಶಾಲೆ ಹಾಗೂ ಕಾಲೇಜುಗಳಿಗೆ ಸಂಚರಿಸುವ ವಿದ್ಯಾರ್ಥಿಗಳ ಮೇಲಿನ ಸಾರಿಗೆ ವೆಚ್ಚದ ಹೊರೆ ಕಡಿಮೆಯಾಗಲಿದೆ. ಸರ್ಕಾರದ ಈ ಕ್ರಮವು ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡುವ ಜೊತೆಗೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಉಚಿತ ಬಸ್ ಪಾಸ್ ಯೋಜನೆಯ ಅನುಷ್ಠಾನ, ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾರ್ಗಸೂಚಿಗಳನ್ನು…

Read More

ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಿವಾಸಗಳಿಗೆ ಭೇಟಿ ನೀಡಿದರು. ಹೊಸದಾಗಿ ಜವಾಬ್ದಾರಿ ವಹಿಸಿಕೊಂಡಿರುವ ಉಭಯ ನಾಯಕರಿಗೆ ಶ್ರೀಗಳು ವಿಶೇಷ ಆಶೀರ್ವಾದ ಹಾಗೂ ಮಾರ್ಗದರ್ಶನ ನೀಡಿರುವುದು ರಾಜ್ಯದ ರಾಜಕೀಯ ಮತ್ತು ಆಧ್ಯಾತ್ಮಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಮಹತ್ವ ಪಡೆದುಕೊಂಡಿದೆ. ಮೊದಲು ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಪೂಜ್ಯ ಶ್ರೀಗಳನ್ನು ಮುಖ್ಯಮಂತ್ರಿಯವರು ಭಕ್ತಿಪೂರ್ವಕವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು. ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದ ಬಳಿಕ ಕೆಲಕಾಲ ಪ್ರಸ್ತುತ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀಗಳು, “ಆಡಳಿತದಲ್ಲಿ ನೈತಿಕತೆ, ಪಾರದರ್ಶಕತೆ ಮತ್ತು ಮಾನವೀಯ ಮೌಲ್ಯಗಳ ಪಾಲನೆ ಮುಖ್ಯ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಸೇವಾ ಮನೋಭಾವದಿಂದ ಮುನ್ನಡೆಯಬೇಕು ಹಾಗೂ ನಾಡಿನ ಧಾರ್ಮಿಕ-ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು”…

Read More

ಬೆಂಗಳೂರು: ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಮಾಜಿ ಸಚಿವ ಸಂತೋಷ್ ಲಾಡ್ ತೀವ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. ರಾಜ್ಯ ರಾಜಕೀಯದ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತನಾಡಿದ ಲಾಡ್, ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ನೇಮಕವನ್ನು ಮುಕ್ತಕಂಠದಿಂದ ಸ್ವಾಗತಿಸಿದರು. “ಹರಿಪ್ರಸಾದ್ ಅವರು ಕರ್ನಾಟಕ ರಾಜಕಾರಣದ ದಿಗ್ಗಜರು, ಅದಕ್ಕಾಗಿಯೇ ಹೈಕಮಾಂಡ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದೆ. ಈ ನಾಯಕತ್ವ ಬದಲಾವಣೆಯು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದರು. ಮುಂದುವರಿದು ಮಾತನಾಡಿದ ಅವರು, “ಮುಂದಿನ ಪಟ್ಟಿಯಲ್ಲಿ ನನಗೂ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಭರವಸೆಯಿದೆ. ಎಲ್ಲರ ಒಗ್ಗಟ್ಟಿನೊಂದಿಗೆ 2028ರಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವು ಎದುರು ನೋಡುತ್ತಿದ್ದೇವೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಮತ್ತು ಡಿಸಿಎಂ ಜಿ.ಪರಮೇಶ್ವರ ಅವರಿಗೆ ನನ್ನ…

Read More

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ವದಂತಿಗಳನ್ನು ಹಿರಿಯ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. “ಪಕ್ಷದಲ್ಲಿ ನನಗೆ ಯಾವುದೇ ಅನ್ಯಾಯವಾಗಿಲ್ಲ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತನಾಗಿದ್ದೇನೆ” ಎಂದು ಅವರು ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆಯ ಆಕಾಂಕ್ಷಿಗಳಲ್ಲಿ ತಾವು ಕೂಡ ಒಬ್ಬರಾಗಿದ್ದನ್ನು ಒಪ್ಪಿಕೊಂಡರು. “ಹೌದು, ನನಗೂ ಮುಖ್ಯಮಂತ್ರಿಯಾಗುವ ಆಸೆ ಇತ್ತು. ಆದರೆ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ, ಪಕ್ಷದ ಶಿಸ್ತಿನ ಸೈನಿಕರಾಗಿ ನಾವು ಅದನ್ನು ಸ್ವೀಕರಿಸಬೇಕು. ನನ್ನ ಅನುಭವವನ್ನು ಕಡೆಗಣಿಸಲಾಗಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ತಮ್ಮ ಮೇಲೆ ವಿಶ್ವಾಸವಿಟ್ಟು ಉಪಮುಖ್ಯಮಂತ್ರಿ ಜವಾಬ್ದಾರಿ ನೀಡಿದ ಕಾಂಗ್ರೆಸ್ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನನ್ನನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇದನ್ನು ಜನರಿಗೆ ಸೇವೆ ಸಲ್ಲಿಸಲು ಮತ್ತು ಕಾಂಗ್ರೆಸ್ ಸಿದ್ಧಾಂತ ಹಾಗೂ ಪ್ರಣಾಳಿಕೆಗೆ ಅನುಗುಣವಾಗಿ ಕೆಲಸ ಮಾಡಲು ಸಿಕ್ಕ ಮತ್ತೊಂದು ಅವಕಾಶವೆಂದು ಪರಿಗಣಿಸುತ್ತೇನೆ. ಜನರಿಗೆ ಮತ್ತು ರಾಜ್ಯಕ್ಕೆ…

Read More

ಬೆಂಗಳೂರು: ತುಮಕೂರು ಜಿಲ್ಲೆಯ ತಿಪಟೂರು ಸಮೀಪದ ನೊಣವಿನಕೆರೆಯಲ್ಲಿರುವ ಶ್ರೀ ಕಾಡಸಿದ್ದೇಶ್ವರ ಮಠದ ಸಂತ ವೀರ ಗಂಗಾಧರ ಅಜ್ಜಯ್ಯರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೀವನದಲ್ಲಿ ಅತ್ಯಂತ ವಿಶೇಷ ಹಾಗೂ ವಿಶಿಷ್ಟ ಸ್ಥಾನವನ್ನು ಹೊಂದಿದ್ದಾರೆ. ತಮ್ಮ ರಾಜಕೀಯ ಜೀವನದ ಅತ್ಯುನ್ನತ ಹಂತವನ್ನು ತಲುಪಿ, ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿರುವ ಈ ಮಹತ್ವದ ಸಂದರ್ಭದಲ್ಲೂ ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯರ ಹೆಸರನ್ನು ಸ್ಮರಿಸಿದ್ದಾರೆ. ತಮ್ಮ ರಾಜಕೀಯ ಬದುಕಿನ ಪ್ರತಿಯೊಂದು ಪ್ರಮುಖ ಘಟ್ಟಗಳಲ್ಲೂ ಅಜ್ಜಯ್ಯರನ್ನು ನೆನೆಯುವ ಸಂಪ್ರದಾಯವನ್ನು ರೂಢಿಸಿಕೊಂಡು ಬಂದಿರುವ ಡಿಕೆಶಿ ಅವರನ್ನು ಹತ್ತಿರದಿಂದ ಬಲ್ಲವರಿಗೆ ಇದೇನೂ ಆಶ್ಚರ್ಯದ ಸಂಗತಿಯಲ್ಲ. ಪ್ರಮುಖ ಒಕ್ಕಲಿಗ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯರ ಮೇಲಿನ ತಮ್ಮ ಅಪಾರ ಭಕ್ತಿಯ ಬಗ್ಗೆ ಹಲವು ಬಾರಿ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಅಜ್ಜಯ್ಯರನ್ನು ತಮ್ಮ ಜೀವನದ ದಾರಿದೀಪ ಮತ್ತು ಮಾರ್ಗದರ್ಶಕ ಶಕ್ತಿ ಎಂದು ಅವರು ಪರಿಗಣಿಸುತ್ತಾರೆ. ವೀರಶೈವ–ಲಿಂಗಾಯತ ಪರಂಪರೆಗೆ ಸೇರಿದ ನೊಣವಿನಕೆರೆಯ ಈ ಮಠವು ಈ ಭಾಗದ ಪ್ರಮುಖ ಆಧ್ಯಾತ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ.…

Read More

ನವದೆಹಲಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಪ್ರಕ್ರಿಯೆ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್‌ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಬಿ.ಕೆ. ಹರಿಪ್ರಸಾದ್ ಅವರು ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಸಚಿವರ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಈ ಬೆಳವಣಿಗೆಯ ನಡುವೆ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹರಿಪ್ರಸಾದ್‌ ಅವರೊಂದಿಗೆ ಚರ್ಚಿಸಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಮನವೊಲಿಸಿದರು. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಅವರು ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಒಪ್ಪಿಗೆ…

Read More

ಬೆಂಗಳೂರು: “ಈ ಮುಖ್ಯಮಂತ್ರಿ ಕುರ್ಚಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸ್ವತ್ತಲ್ಲ, ಇದು ರಾಜ್ಯದ ಜನತೆಗೆ ಸೇರಿದ್ದು. ಜನತೆ ನೀಡಿರುವ ಈ ಅಧಿಕಾರವನ್ನು ನಾನು ಸಂಪೂರ್ಣವಾಗಿ ಅವರ ಸೇವೆಗೇ ಮುಡಿಪಾಗಿಡುತ್ತೇನೆ,” ಎಂದು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಮೊದಲ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಿ ನಂತರ ಅವರು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ನನ್ನ ವೈಯಕ್ತಿಕ ವಿಚಾರಗಳನ್ನು ಬದಿಗೊತ್ತಿ, ರಾಜ್ಯದ ಜನರ ಸೇವೆ ಮಾಡುವ ದೃಢ ಸಂಕಲ್ಪದೊಂದಿಗೆ ಈ ಜವಾಬ್ದಾರಿಯನ್ನು ಸ್ವೀಕರಿಸಿದ್ದೇನೆ. ‘ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ’ ಎಂಬ ಮಾತಿನಲ್ಲಿ ನನಗೆ ಅಪಾರ ನಂಬಿಕೆಯಿದೆ. ನಮ್ಮ ಬೇರುಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಸಿಎಂ ಹೇಳಿದರು. ಇದೊಂದು ಹೊಸ ಆರಂಭ. ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಜನತೆ ನನಗೆ ಹೊಸ ಅವಕಾಶ ನೀಡಿದ್ದಾರೆ. ಅಧಿಕಾರದ ಬಾಕಿ ಇರುವ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದ ಕಲ್ಯಾಣಕ್ಕಾಗಿ ಮತ್ತು ಜನರಿಗಾಗಿ…

Read More

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಹಾಗೂ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. “ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು…” ಎಂದು ಹೆಮ್ಮೆಯಿಂದ ಮಾತು ಆರಂಭಿಸಿದ ಅವರು, ತಮ್ಮ ಆರಾಧ್ಯ ದೈವ ‘ವೀರ ಗಂಗಾಧರ ಅಜ್ಜಯ್ಯ’ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವಿಶೇಷ ಸಂದರ್ಭದಲ್ಲಿ ಸಾಂಪ್ರದಾಯಿಕ ರೇಷ್ಮೆ ಪಂಚೆ, ಜುಬ್ಬ ಹಾಗೂ ಶಲ್ಯ ಧರಿಸಿದ್ದ ಡಿಕೆಶಿ ಅವರ ನಡೆ ಎಲ್ಲರ ಗಮನ ಸೆಳೆಯಿತು. ರಾಜಭವನಕ್ಕೆ ಬರುವ ಮುನ್ನ ಸದಾಶಿವನಗರದ ತಮ್ಮ ನಿವಾಸದಲ್ಲಿ ಐದಕ್ಕೂ ಹೆಚ್ಚು ಪುರೋಹಿತರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಹೊರಟಿದ್ದರು. ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಗ್ರ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ…

Read More