Author: admin

ತುಮಕೂರು: ಜಿಲ್ಲಾಡಳಿತದ ವತಿಯಿಂದ “ರನ್ನ ವೈಭವ ರಥಯಾತ್ರೆ”ಯನ್ನು ಗೌರವಾಯುತವಾಗಿ ಜಿಲ್ಲೆಗೆ ಬರಮಾಡಿಕೊಳ್ಳಲಾಯಿತು. ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ಧಲಿಂಗಪ್ಪ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತ ಕನ್ನಡಾಭಿಮಾನಿಗಳು ಪುಷ್ಪಾರ್ಚನೆ ಮಾಡುವ ಮೂಲಕ ರನ್ನ ರಥಯಾತ್ರೆಯನ್ನು ಬರಮಾಡಿಕೊಂಡರು. ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಸಚಿವರು ಹಾಗೂ ಅಧಿಕಾರಿಗಳು ಬೆಂಗಳೂರಿನಲ್ಲಿ ‘ರನ್ನ ವೈಭವ ರಥ ಯಾತ್ರೆ’ಗೆ ಇಂದು ಚಾಲನೆ ನೀಡಿ ಬೀಳ್ಕೊಟ್ಟಿದ್ದು, ರಥಯಾತ್ರೆಯು ಮೊದಲ ಜಿಲ್ಲೆಯಾಗಿ ತುಮಕೂರಿಗೆ ಪ್ರವೇಶಿಸಿದೆ. ಈ ಯಾತ್ರೆಯು ಚಿತ್ರದುರ್ಗ, ಹೊಸಪೇಟೆ ಮೂಲಕ ಬಾಗಲಕೋಟೆ ಜಿಲ್ಲೆಯನ್ನು ತಲುಪಲಿದೆ ಎಂದು ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆಯಲಿರುವ ರನ್ನ ವೈಭವ–2025 ಪ್ರಯುಕ್ತ ಈ ರಥಯಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಡು ಬಡತನದ ಬಳೆಗಾರ ವೃತ್ತಿಯ ಕುಟುಂಬದಿಂದ ಬಂದ ರನ್ನನು ಸಾಹಸ ಭೀಮ ವಿಜಯಂ(ಗದಾಯುದ್ಧ), ಪರಶುರಾಮಚರಿತ, ಚಕ್ರೇಶ್ವರ ತೀರ್ಥ ಎಂಬ ಮಹಾನ್ ಕಾವ್ಯಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ತನ್ನದೇ…

Read More

ತುಮಕೂರು: ವಿಕಲಚೇತನರಿಗೆ ಅಂಗ ವೈಕಲ್ಯ ಇರಬಹುದು. ಆದರೆ ಅವರಲ್ಲಿ ಹೃದಯವಂತಿಕೆಯಿದೆ. ನಾಗರಿಕರಾದ ನಾವು ಒಮ್ಮೆ ಹೃದಯ ಕೆದಕಿ ನೋಡಿಕೊಳ್ಳಬೇಕು. ಅಲ್ಲಿ ಶ್ರೀಮಂತಿಕೆಯೇ ಇಲ್ಲ. ಎಲ್ಲರೂ ಹೃದಯ ಶೂನ್ಯರಾಗಿದ್ದಾರೆ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದಜೀ ಮಹಾರಾಜ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೊಬಲಿಟಿ ಇಂಡಿಯಾ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ‘ಹಿರಿಯ ನಾಗರಿಕರಿಗೆ ನೆರವು ಮತ್ತು ಸಾಮಾಜಿಕ ಆರೈಕೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತ ತಂದೆ–ತಾಯಿಯನ್ನು ಬೀದಿಪಾಲುಮಾಡುವ ಕೆಳಮಟ್ಟಕ್ಕೆ ಇಳಿದಿದ್ದೇವೆ. ಹಾಗಾದರೆ ಶಾಲೆ, ಕಾಲೇಜುಗಳಲ್ಲಿ ನಮಗೆ ನೀಡುವ ಶಿಕ್ಷಣ ಎಂಥದ್ದು ಪ್ರಶ್ನೆ ಹುಟ್ಟುತ್ತದೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಣಕ್ಕಿಂತ ಹೆಚ್ಚಾಗಿ ಸಂಸ್ಕಾರ ಕಲಿಸಬೇಕು ಎಂದರು. ಪಾವಗಡ ಆಶ್ರಮದ ವತಿಯಿಂದ 19,000 ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಎಲ್ಲವನ್ನು ಸರ್ಕಾರದ ಮೇಲೆ ಹಾಕಬೇಡಿ; ನಮ್ಮ ಕರ್ತವ್ಯವೂ ಇದೆ ಎನ್ನುವುದನ್ನು ಮರೆಯಬೇಡಿ ಎಂದರು. ವಯಸ್ಸಾದವರನ್ನು ಮೂಲೆಗೆ ಕೂರಿಸಿ ಅವರಲ್ಲಿ ನಕಾರಾತ್ಮಕತೆಯನ್ನು ತುಂಬುತ್ತಿದ್ದೇವೆ.…

Read More

ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ದ್ವಿತೀಯ ಪಿಯುಸಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು ಎಂದು ಸೂಚಿಸಿದರು. ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 13; ಕೊರಟಗೆರೆ ತಾಲ್ಲೂಕಿನಲ್ಲಿ 1; ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲ್ಲೂಕಿನಲ್ಲಿ ತಲಾ 2; ಕುಣಿಗಲ್, ತಿಪಟೂರು, ಪಾವಗಡ ತಾಲ್ಲೂಕಿನಲ್ಲಿ ತಲಾ 3; ಶಿರಾ ತಾಲ್ಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ…

Read More

ತುಮಕೂರು: ಛತ್ರಪತಿ ಶಿವಾಜಿ ಮಹಾರಾಜರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾ ಪರಾಕ್ರಮಿಯಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ ಹಾಗೂ ಕರ್ನಾಟಕ ಮರಾಠ ಕ್ಷತ್ರಿಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ‘ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿವಾಜಿಯವರಲ್ಲಿದ್ದ ದೇಶಭಕ್ತಿ, ಆತ್ಮಗೌರವವನ್ನು ಈಗಿನ ಯುವಕರು ಅಳವಡಿಸಿಕೊಳ್ಳಬೇಕು. ಮರಾಠ ಸಮುದಾಯದ ಯುವಕರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾವಂತರಾಗಿ, ಭವಿಷ್ಯವನ್ನು ಉತ್ತಮವಾಗಿಸಿಕೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ತಿನ ಗೌರವಾಧ್ಯಕ್ಷ ನಾಗೇಶ್ ರಾವ್ ಗಾಯಕ್ವಾಡ್ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಅನನ್ಯ ವ್ಯಕ್ತಿತ್ವವನ್ನು ಹೊಂದಿದ್ದ ಮಹಾನ್ ಶಕ್ತಿಶಾಲಿ ಆಡಳಿತಗಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಾವಿಂದು ಗೌರವಯುತವಾಗಿ ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರ ಜೀವನ…

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ಬಿಜೆಪಿ ತೆರೆ ಎಳೆದಿದ್ದು, ರೇಖಾ ಗುಪ್ತಾ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ರೇಖಾ ಗುಪ್ತಾ (ಶಾಲಿಮಾರ್ ಬಾಗ್ ಶಾಸಕಿ) ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷೆಯೂ ಆಗಿದ್ದಾರೆ. 29,595 ಮತಗಳ ಅಂತರದಿಂದ ತಮ್ಮ ಸ್ಥಾನವನ್ನು ಗೆದ್ದಿದ್ದಾರೆ. ಈ ಬಿಜೆಪಿ ಶಾಸಕರ ಸಭೆಯಲ್ಲಿ ಸಿಎಂ ಹೆಸರನ್ನು ಅಂತಿಮಗೊಳಿಸಲಾಗಿದೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ನಾಳೆ (ಫೆಬ್ರವರಿ 20) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಎಕ್ಸ್ನಲ್ಲಿ ಬರೆದು ಈ ಕುರಿತು ಹಂಚಿಕೊಂಡ ಅವರು, ನಾವು ಮೊದಲಿನಿಂದಲೂ ಸಿಬಿಐ ತನಿಖೆಗಾಗಿ ಒತ್ತಾಯಿಸುತ್ತಿದ್ದೆವು, ಸಿಬಿಐ ತನಿಖೆಯಿಂದ ಮಾತ್ರ ಸಾವಿರಾರು ನಿವೇಶನಗಳು ಲೂಟಿಯಾಗಿರುವ ಮುಡಾ ಹಗರಣದಲ್ಲಿ ನ್ಯಾಯ ಸಿಗಲು ಸಾಧ್ಯ ಎಂದರು. ಆದರೆ ಸಿದ್ದರಾಮಯ್ಯನವರ 14 ನಿವೇಶನಗಳು, ಲೂಟಿಯಾಗಿರುವ ಸಾವಿರಾರು ನಿವೇಶನಗಳನ್ನು ಹಾಗೂ ಲೂಟಿ ಮಾಡಿದ ಭ್ರಷ್ಟ ಅಧಿಕಾರಿಗಳು ಹಾಗೂ ಪ್ರಭಾವಿಗಳನ್ನು ರಕ್ಷಿಸುತ್ತಿದೆ. ರಾಜ್ಯ ಕಂಡು ಕೇಳರಿಯದ ಬಹುದೊಡ್ಡ ಭ್ರಷ್ಟ ಹಗರಣದ ಪಾರದರ್ಶಕ ತನಿಖೆ ನಡೆಯಬೇಕೆಂದರೆ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರದಿಂದ ಅಂತರ ಕಾಯ್ದುಕೊಂಡ ತನಿಖಾ ಸಂಸ್ಥೆಯಿಂದ ಮಾತ್ರ ಸಾಧ್ಯ ಎಂಬುದು ನ್ಯಾಯ ನಿರೀಕ್ಷಿಸುವ ಪ್ರತಿಯೊಬ್ಬರೂ ಒಪ್ಪುವ ಮಾತು. ಈಗಲೂ ಬಿಜೆಪಿ ತನ್ನ ನಿಲುವನ್ನು ಬದಲಿಸುವ ಪ್ರಶ್ನೆಯೇ ಇಲ್ಲ, ಮುಡಾ ಹಗರಣದ ತನಿಖೆ ಸಿಬಿಐನಿಂದ ನಡೆಯಬೇಕೆಂಬುದೇ ನಮ್ಮ ಒತ್ತಾಯವಾಗಿದೆ.…

Read More

ಕಾರವಾರ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪತಿ, ಪತ್ನಿ ಹಾಗೂ ಏಳು ತಿಂಗಳು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ನಡೆದಿದೆ. ಕೊಪ್ಪಳದ ಆರ್.ವೆಂಕಟೇಶ್, ಅವರ ಪತ್ನಿ ಚೈತ್ರಾ ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತ ವೆಂಕಟೇಶ ಅವರ ಸಹೋದರ ಶ್ರೀಕಾಂತ ರೆಡ್ಡಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಕಾರಿನಲ್ಲಿ ಹೊರಟಿದ್ದ ಇಡೀ ಕುಟುಂಬ ದುರಂತ ಅಂತ್ಯಕಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನಲ್ಲಿ ಯುವತಿಯ ಮೃತದೇಹ ಬಿದ್ದಿದ್ದರೆ, ಪಕ್ಕದ ಮರದಲ್ಲಿ ಯುವಕನ ದೇಹ ಪತ್ತೆಯಾಗಿದೆ. ಯುವತಿಯನ್ನ ಸಾಯಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಬೆಂಗಳೂರು ನೋಂದಣಿಯ ಯೆಲ್ಲೋ ಬೋರ್ಡ್ ಕಾರಿನಲ್ಲಿ ಇಬ್ಬರು ಬಂದಿದ್ದಾರೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವತಿಯ ವೇಲ್ನಿಂದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ದೊಡ್ಡಬಳ್ಳಾಪುರ: ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ 18 ವರ್ಷದ ರಾಹುಲ್, 20 ವರ್ಷದ ಬಿಕೇಶ್ ಮತ್ತು 24 ವರ್ಷದ ಲಲನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೂವರು ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದಿದ್ದರು. ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ವಿಜಯಪುರ: ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಡವರು, ನಿರ್ಗತಿಕರಿಗೆ ತಲುಪ ಬೇಕು, ಶ್ರೀಮಂತರಿಗಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಕೀ ಯೋಜನೆಯನ್ನು ಉಳ್ಳವರು ತೆಗೆದುಕೊಳ್ಳಬಾರದು, ಬಡವರಿಗೆ ಹೋಗಬೇಕು. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಲು ಸರ್ಕಾರಿ ಮಟ್ಟದಲ್ಲಿ ಯಾವುದೇ ಚರ್ಚೆ ಇಲ್ಲ. ಆದರೆ, ಶ್ರೀಮಂತರು, ಉಳ್ಳವರು ಯೋಜನೆ ಪ್ರಯೋಜನಗಳನ್ನು ಸ್ವಯಂ ಪ್ರೇರಣೆಯಿಂದ ಬಿಡಬೇಕೆಂಬುದು ನನ್ನ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ. ಸರ್ಕಾರವೇ ಶ್ರೀಮಂತರನ್ನು ಗೃಹಲಕ್ಷ್ಮೀ ಯೋಜನೆಯಿಂದ ತೆಗೆದುಹಾಕುವ ಕೆಲಸ ಮಾಡಬೇಕು. ಯೋಜನೆಯಿಂದ ಇನ್ನೂ ಹೊರಗುಳಿದಿರುವ ಬಡವರನ್ನು ಸೇರ್ಪಡೆಗೊಳಿಸಬೇಕೆಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More