Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 76 ನೇ ಗಣರಾಜ್ಯೋತ್ಸವದಂದು ರಾಷ್ಟ್ರಕ್ಕೆ ನೀಡಿದ ಸಂದೇಶದಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧಾರ್ಮಿಕ ಮೂಲಭೂತವಾದದಲ್ಲಿ ಮುಳುಗಿರುವ ದ್ವೇಷಪೂರಿತ ಅಜೆಂಡಾವು ಕಳೆದ 10 ವರ್ಷಗಳಿಂದ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಮತ್ತು ಪ್ರತಿ ಪವಿತ್ರ ಸಂವಿಧಾನದ ತತ್ವವನ್ನು ಸರ್ವಾಧಿಕಾರಿ ಆಡಳಿತದಿಂದ ತುಂಡುಗಳಾಗಿ ಚೂರುಚೂರು ಮಾಡಲಾಗುತ್ತಿದೆ ಎಂದಿದ್ದಾರೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಿಂದುಳಿದ ಯುವಕರನ್ನು ರಾಷ್ಟ್ರೀಯತೆ ಮತ್ತು ಧಾರ್ಮಿಕ ಪಾರಮ್ಯದ ಧ್ವಜವನ್ನು ಹಿಡಿಯುವಂತೆ ಮಾಡುವ ಮೂಲಕ ಹುಸಿ-ರಾಷ್ಟ್ರೀಯತೆಯನ್ನು ಅಭ್ಯಾಸ ಮಾಡಿಸುತ್ತಿದೆ, ಆದರೆ ಅವರಿಗೆ ಉದ್ಯೋಗವನ್ನು ಪಡೆಯಲು ಏನನ್ನೂ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ. 76 ನೇ ಗಣರಾಜ್ಯೋತ್ಸವದಂದು ರಾಷ್ಟ್ರಕ್ಕೆ ನೀಡಿದ ಸಂದೇಶದಲ್ಲಿ, ಖರ್ಗೆ ಅವರು ಸಂವಿಧಾನದ ವಿಚಾರಗಳು ಮತ್ತು ಆದರ್ಶಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತತ್ವವನ್ನು ಜನರು ಸಂರಕ್ಷಿಸಲು ಮತ್ತು ರಕ್ಷಿಸಲು ಇದು ಸುಸಮಯವಾಗಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ವೇಳೆ ಕಳೆದ 13 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಕೃತಜ್ಞತೆ ಸಲ್ಲಿಸಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ ಬಂದಿದ್ದೇನೆ. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಶ್ರೇಷ್ಟ ಸಂವಿಧಾನದ ಫಲವಾಗಿ ಭಾರತವು ವಿಶ್ವದಲ್ಲಿ 4ನೇ ಆರ್ಥಿಕ ದೇಶವಾಗಿ ಬೆಳೆದಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಸಾದ ಸೇವಿಸಿದರು. ಬಳಿಕ ಮಠದ ಆವರಣದಲ್ಲಿ ಧ್ವಜಾರೋಹಣಾ ನೆರವೇರಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ಹೇಳಿದರು. 76 ವರ್ಷಗಳಲ್ಲಿ ಭಾರತ ಅನೇಕ ಸಾಧನೆಗಳನ್ನು ಮಾಡಿದೆ. ಬಡತನ, ಹಸಿವು, ಅನಕ್ಷರತೆಯಿಂದ ಬಳಲುತ್ತಿದ್ದ ಅಂದಿನ ಭಾರತ, ಬಲಿಷ್ಟ ಭಾರತವಾಗಿ ಬೆಳೆದಿದೆ. ಪ್ರಪಂಚದಲ್ಲಿ 4ನೇ ಆರ್ಥಿಕತೆಯ ದೇಶವಾಗಿದೆ. ಇದರಲ್ಲಿ ಪ್ರತಿಯೊಬ್ಬ ಭಾರತೀಯನ ಶ್ರಮವಿದೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಸಿಗಲಿ ಎಂದು ಆಶಿಸಿದರು. ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರು ಇಡೀ ದೇಶದಲ್ಲಿ ಯಾವುದೇ ಒಂದು ಧಾರ್ಮಿಕ ಸಂಸ್ಥೆ ನೀಡದಂತಹ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕೋಟ್ಯಂತರ ಬಡ ಮಕ್ಕಳಿಗೆ…
ಬೀದರ್: ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಗೌರವ ನಮನ ಸಲ್ಲಿಸಿ ಧ್ವಜರೋಹಣೆ ಮಾಡುವ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. 1950 ಜನವರಿ 26 ರಂದು ಸಂವಿಧಾನವನ್ನು ನಮ್ಮನ್ನು ನಾವು ಅರ್ಪಿಸಿಕೊಂಡು ಅಂಗೀಕರಿಸಿ ಶಾಸನವಾಗಿ ವಿಧಿಸಿಕೊಂಡಿರುತ್ತೇವೆ. ಈ ಸವಿ ನೆನಪಿನಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು , ಸಂವಿಧಾನವು ಪ್ರಜೆಗಳಿಗೆ ಅತಿಮೂಲ್ಯವಾದ ಮೂಲಭೂತ ಹಕ್ಕುಗಳನ್ನು ನೀಡಿದ್ದು, ಅದರ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಸಂದೇಶ ನೀಡಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ಹಿನ್ನೆಲೆ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್ ಆರಂಭವಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ನಡೆಯಿತು. ಪ್ರೊ. ಬಿ.ಪಿ.ಮಲ್ಲಿಕಾರ್ಜುನ ಸ್ವಾಮಿ, ಸಂಯೋಜಕರು, ತಿಪಟೂರು ಸ್ನಾತಕೋತ್ತರ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ ಮತ್ತು ಒಂಬುಡ್ಸಮನ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯ ಸಂವಿಧಾನ ಸಭೆಯು 26 ನವೆಂಬರ್ 1949ರಂದು ಅಂಗೀಕರಿಸಿತು ಮತ್ತು 26 ಜನವರಿ 1950ರಂದು ಜಾರಿಗೆ ಬಂದಿತು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ಭಾರತೀಯ ಸಂವಿಧಾನ ಅಂಗೀಕಾರದೊಂದಿಗೆ ತನ್ನನ್ನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿತು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು., ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು, ತುಮಕೂರಿನ ಟೂಡಾ ಲೇಔಟ್,ರಾಜೀವ್ ಗಾಂಧಿನಗರ, ಹೇಮಾವತಿ ಬಡಾವಣೆಯ “ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ…
ತುಮಕೂರು: 76 ನೇ ಗಣರಾಜ್ಯೋತ್ಸವ ಹಿನ್ನೆಲೆ, ತುಮಕೂರು ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಿಂದ ಧ್ವಜಾರೋಹಣ ನಡೆಯಿತು. ತುಮಕೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಧ್ವಜರೋಹಣ ನಡೆಸಲಾಯ್ತು. ಶಾಸಕರಾದ ಜ್ಯೋತಿಗಣೇಶ್, ಸುರೇಶ ಗೌಡ, ಪರಿಷತ್ ಸದಸ್ಯ ರಾಜೇಂದ್ರ, ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು. ಪೊಲೀಸ್, ರಕ್ಷಣಾಪಡೆ, ಮಾಜಿ ಸೈನಿಕರು ಮತ್ತು ಮಕ್ಕಳಿಂದ ಪಥಸಂಚಲನ ನಡೆಯಿತು. ತುಮಕೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅದ್ದೂರಿ ಪಥಸಂಚಲನ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ, ಅಬ್ದುಲ್ ಖಾದರ್, ಕೆಎಸ್ಪಿಎಸ್, ಡಿಎಆರ್ ಡಿಎಸ್ಪಿ ಪರಮೇಶ್ ಹಾಗೂ ನಗರದ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ ಸಿಬ್ಬಂದಿಗಳು, ಉಪಸ್ಥಿತರಿದ್ದು. ಧ್ವಜಕ್ಕೆ ಗೌರವ ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ, ಅಪರೂಪದ ಶೋಲಾ ಕಾಡು ಸುಟ್ಟು ಕರಕಲಾಗಿದೆ. ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಅರಣ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದೆ. ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಕಳೆದ ವಾರವಷ್ಟೇ ಚಾರ್ಮಾಡಿ ಘಾಟಿಯ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚಿಗೆ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಕಳೆದ ರಾತ್ರಿ ಮತ್ತೆ ಚಾರ್ಮಾಡಿ ತಪ್ಪಲಿನ ಅರಣ್ಯಕ್ಕೆ ಬೆಂಕಿ ಬಿದ್ದು ಮತ್ತೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ರಸ್ತೆ ಬದಿ ಇದ್ದ ಬೆಂಕಿಯನ್ನು ನಂದಿಸಿದ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಏರಿ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ 2 ಸಾವಿರ ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತಿರುವ ರಾಜ್ಯ ಸರಕಾರ, ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಉತ್ತಮ ಆಡಳಿತಕ್ಕೆ ರಾಜ್ಯ ಮಾದರಿಯಾಗಿತ್ತು. ಅದನ್ನು ನಾಶ ಮಾಡಲು ಇವರು ಹೊರಟಿದ್ದಾರೆ. ರೈತ ಮಹಿಳೆಯರು ಮತ್ತು ಬಡ ಮಹಿಳೆಯರೇ ಹೆಚ್ಚಾಗಿ ಮೈಕ್ರೋ ಫೈನಾನ್ಸ್ ಗಳಿಗೆ ಗುರಿಯಾಗುತ್ತಿದ್ದು ಇವರೆಲ್ಲರೂ ತಮ್ಮ ಮನೆ ಊರುಗಳನ್ನು ಬಿಟ್ಟು ಹೋಗುತ್ತಿದ್ದಾರೆ ಎಂದು ದೂರಿದ್ದಾರೆ. ಮಂಡ್ಯ ಜಿಲ್ಲೆ ಒಂದರಲ್ಲಿಯೇ 60 ಮೈಕ್ರೋ ಫೈನಾನ್ಸ್ ಗಳಿವೆ. ಅದರಲ್ಲಿ 14-15 ಫೈನಾನ್ಸ್ ಗಳು ಪರವಾನಗಿ ಪಡೆದಿವೆ. ಉಳಿದವು ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುತ್ತಾ ಜನರಿಗೆ ತೊಂದರೆ ಕೊಡುತ್ತಿವೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…