Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ನವದೆಹಲಿ: ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ, ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ದೆಹಲಿಯಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ, ಅವರದ್ದು ಬ್ರಿಟೀಷ್ ರ ಮೆಂಟಾಲಿಟಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಅಂತಾ ಹೇಳಿದ್ರು ಬಸ್ ನಿಲ್ಲಿಸಿದ್ರು, ಡಿಪೋದಿಂದ ಬಸ್ ಬಿಡುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ. ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೇ ಗೊತ್ತಿಲ್ಲ ಅಂದ್ರೆ ಹೇಗೆ? ಅಂತ ಪ್ರಶ್ನಿಸಿದರು. ಮುಂದುವರೆದು, 10 ಕೆಜಿ ಕೊಡ್ತಿವಿ ಅಂದಿದ್ರು ಈಗ ಅಕ್ಕಿ ಕೊಡ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ…
ಬೆಂಗಳೂರು: ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್ಎಸ್ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದ ಎಂದು ಹೇಳಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೋಲ್ಕತ್ತಾ: ಮಹಾಕುಂಭ ಮೇಳದಲ್ಲಿನ ಅವ್ಯವಸ್ಥೆ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಮಾರ್ಪಟ್ಟಿದೆ. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ‘ಮೇಳ’ದಲ್ಲಿ ಕಾಲ್ತುಳಿತದ ಪರಿಸ್ಥಿತಿ ಸಾಮಾನ್ಯವಾಗಿದೆ. ಆದರೆ, ನೀವು ಏನು ಮಾಡಿದ್ದೀರಿ ಎಂಬುದು ಮುಖ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಸಾಬೀತುಪಡಿಸಲು ಬಿಜೆಪಿಗೆ ಇದೇ ವೇಳೆ ಅವರು ಸವಾಲೆಸೆದರು. ಬಿಜೆಪಿ ತನ್ನ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ಧರ್ಮವನ್ನು ಬಳಸುತ್ತಿದೆ.…
ಬೆಂಗಳೂರು: ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೆಚ್ಚಿನ ತಪಾಸಣೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇಂದು ವೈದ್ಯರು ತಪಾಸಣೆ ನಡೆಸಿದ ನಂತರ ಅಗತ್ಯಬಿದ್ದರೆ ಆಸ್ಪತ್ರೆಗೆ ದಾಖಲಾಗಬಹುದು ಎಂದು ಹೇಳಲಾಗಿದೆ. ಕೆಲಸದ ಒತ್ತಡ, ನಿರಂತರ ಪ್ರವಾಸಗಳಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ಕುಮಾರಸ್ವಾಮಿಯವರು ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡು ಸ್ವಲ್ಪ ದಿನ ವಿಶ್ರಾಂತಿ ಪಡೆದು ನಂತರ ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಐತಿಹಾಸಿಕ ಪ್ರಯಾಗ್ರಾಜ್ ನ ಕುಂಭ ಮೇಳದಲ್ಲಿ ಭಗವಹಿಸಿದ್ದ ನಾಗಸಾಧು ಧನಂಜಯ ಗುರೂಜಿ ಇಂದು ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣದ ಸಮೀಪ ಇರುವ ಹೆಗ್ಗೆರೆ ಗ್ರಾಮದಲ್ಲಿರುವ ಶಿವಲಿಂಗ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ನಾಗಸಾಧು ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಗ್ರಾಮಸ್ಥರೆಲ್ಲರೂ ಅವರಿಗೆ ಭವ್ಯವಾದ ಪೂರ್ಣ ಕುಂಭ ಸ್ವಾಗತವನ್ನು ನೀಡಿದರು. ಹುಳಿಯಾರು ಸಮೀಪದ ಹೆಗ್ಗೆರೆಯ ಚೋಳರ ಕಾಲದಲ್ಲಿ ಪ್ರತಿಷ್ಠಾಪಿಸಲಾಗಿರುವ ಮಹಾರುದ್ರ ಶಿವಾಲಯದ ಬಗ್ಗೆ ಕುಂಭಮೇಳದಲ್ಲಿ ಅವರು ಪ್ರಸ್ತಾಪ ಮಾಡಿದ್ದರು. ನಾಗ ಸಾಧು ಧನಂಜಯ್ ಗುರುಜಿ ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿ ಸೇರಿದಂತೆ ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಕಂಚೀಪುರ, ಯಳನಾಡು, ದಸೂಡಿ, ಹುಳಿಯಾರು, ಶ್ರೀರಾಂಪುರ ಮುಂತಾದ ಭಾಗದಿಂದ ಭಕ್ತ ಸಮೂಹ ಆಗಮಿಸಿ ನಾಗಸಾಧುವಿನ ದರ್ಶನ ಪಡೆದರು. ನಂತರ ಧನಂಜಯ್ ಗುರೂಜಿ ಅವರು ಶಿವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತಿಪಟೂರು: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ಹಾಲ್ಕುರಿಕೆ ಗ್ರಾಮದ ಶ್ರೀವೀರಭದ್ರೇಶ್ವರ ಹಾಗೂ ಪಾರ್ಥೇಶ್ವರಸ್ವಾಮಿ ದೇವಸ್ಥಾನದ ನವೀಕರಣಕ್ಕೆ 2 ಲಕ್ಷ ರೂ. ಮೊತ್ತದ DDಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲೂಕಿನ ಯೋಜನಾಧಿಕಾರಿಯಾದ ಉದಯ್ ಯವರು ದೇವಸ್ಥಾನ ಆಡಳಿತ ಸಮಿತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಸಮಿತಿಯ ಪ್ರಮುಖರಾದ ನಂಜುಂಡಯ್ಯ ಪರಮೇಶ್ವರಯ್ಯ ಹಾಗೂ ಸಾರ್ಥವಳ್ಳಿ ವಲಯದ ಮೇಲ್ವಿಚಾರಕರದ ಪ್ರದೀಪ್ ಹಾಗೂ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು ಸ್ವ– ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ: ಲೋಕಸಭಾ ಮತಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರು, ರಾಜೀವ್ ಗಾಂಧಿ ವಸತಿ ನಿಗಮ (ನಿ), ಬೆಂಗಳೂರು ಅಡಿಯಲ್ಲಿ ‘ಆವಾಸ್ ಪ್ಲಸ್ 2024’ ವಸತಿ ಆಪ್ ಮೂಲಕ ವಸತಿ/ನಿವೇಶನ ರಹಿತರ ಸಮೀಕ್ಷೆ ಪ್ರಾರಂಭಗೊಂಡಿದ್ದು, ಬೀದರ್ ಜಿಲ್ಲಾ ಭಾಲ್ಕಿ ತಾಲ್ಲೂಕಿನ ಲಂಜವಾಡ್ ಗ್ರಾಮದಲ್ಲಿ ಅಧಿಕೃತವಾಗಿ ಚಾಲನೆ ನೀಡಿ ಪಿ.ಎಂ.ಎ.ವೈ (ಗ್ರಾಮೀಣ) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪತ್ರ ನೀಡಿ ಶುಭ ಹಾರೈಸಿದರು. ಸಮೀಕ್ಷೆಗೆ ಮುನ್ನ, ಪಿ.ಎಂ.ಎ.ವೈ.(ಗ್ರಾಮೀಣ) ಅಡಿಯಲ್ಲಿ ಆಯ್ಕೆಯಾದ ಸೋಮಪುರ ಗ್ರಾಮದ ಫಲಾನುಭವಿಗಳ ಜಿ.ಪಿ.ಎಸ್. ಕಾರ್ಯವನ್ನು ನೆರವೇರಿಸಿದರು. ಆವಾಸ್ ಪ್ಲಸ್ 2024 ಸಮೀಕ್ಷೆ ಸಂಪೂರ್ಣ ಪ್ರಾಮಾಣಿಕವಾಗಿ ನಡೆಯಬೇಕು. ಫಲಾನುಭವಿಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ದೊರಕಬೇಕು. ಅಲ್ಲದೆ, ಸಮೀಕ್ಷೆಯ ಪಾರದರ್ಶಕತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಮಾರಂಭದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರರು, ವಿವಿಧ ಅಧಿಕಾರಿಗಳು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳನ್ನು ಹೊಂದಿರುವವರು ಬಿ–ಖಾತಾಗೆ ದಾಖಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಆಸ್ತಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ಕೊಟ್ಟಿದೆ. ಬಿ–ಖಾತಾ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರು ಮೂರು ತಿಂಗಳೊಳಗೆ ಬಿ–ಖಾತಾಗೆ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿ-ಖಾತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರಿಗೆ ಬಿ–ಖಾತಾ ನೀಡಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 18ರಿಂದ ಮೂರು ತಿಂಗಳೊಳಗೆ ನಗರ ಸ್ಥಳೀಯ ಸಂಸ್ಥೆಯ ಅನಧಿಕೃತ ಬಡಾವಣೆಯಲ್ಲಿನ ನಿವೇಶನದಾರರಿಗೆ ಬಿ–ಖಾತಾ ನೀಡುವ ಕಾರ್ಯವನ್ನು ಆಂದೋಲನ ರೀತಿಯಲ್ಲಿ ಆರಂಭಿಸಿದ್ದೇವೆ ಎಂದು ಹೇಳಿದರು. ಜಿಲ್ಲೆಯ…
ತುಮಕೂರು: ರಾಜ್ಯದ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆಯುವ “ರನ್ನ ವೈಭವ–2025”ರ ಅಂಗವಾಗಿ ಫೆಬ್ರವರಿ 19 ರಿಂದ 22ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ “ರನ್ನ ರಥಯಾತ್ರೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ 19ರಂದು ಮಧ್ಯಾಹ್ನ 1:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರನ್ನ ರಥಯಾತ್ರೆಯು ಆಗಮಿಸಲಿದೆ. ಈ ರಥಯಾತ್ರೆಯನ್ನು ಜಿಲ್ಲಾಡಳಿತದಿಂದ ಗೌರವಯುತವಾಗಿ ಸ್ವೀಕರಿಸಿ ಬೀಳ್ಕೊಡಲಾಗುವುದು. ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಸರ್ಕಾರಿ ನೌಕರರ ಸಂಘ, ಕನ್ನಡ ಪರ ಸಂಘ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು/ಪದಾಧಿಕಾರಿಗಳು, ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಪ್ರಕಟಣೆಯಲ್ಲಿ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಫೆಬ್ರವರಿ 19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ” ಕಾರ್ಯಕ್ರಮವನ್ನು ಆಚರಿಸಲಾಗುವುದು. ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುತ್ತಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ, ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4