Subscribe to Updates
Get the latest creative news from FooBar about art, design and business.
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
- ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
- ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
Author: admin
ತುಮಕೂರು: ಹಿಂದಿನ ಕಾಲದಲ್ಲಿ ಪರಿಸರದಲ್ಲಿ ಪ್ರಾಣಿ ಪಕ್ಷಿ ಕೀಟಗಳು ಹೇರಳವಾಗಿದ್ದವು. ತಂತ್ರಜ್ಞಾನ ಬಳಕೆ ಹೆಚ್ಚಿದಂತೆ ಕಾಡು, ವನ್ಯಜೀವಿ ಸಂತತಿ ನಶಿಸುತ್ತಿದೆ. ಎಷ್ಟೋ ಪ್ರಭೇದಗಳು ಈಗಾಗಲೇ ಸಂಪೂರ್ಣ ನಾಶಹೊಂದಿವೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪರಿಸರ ವಿಜ್ಞಾನ ವಿಭಾಗ ಸೋಮವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪರಿಸರ ಸಂರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಮುಂದಿನ ಪೀಳಿಗೆಗೆ ನೀರು, ಗಾಳಿ, ಬೆಳಕು, ಮಣ್ಣು ಮುಂತಾದ ಮೂಲಭೂತ ಘಟಕಗಳನ್ನು ಉಳಿಸಬೇಕು. ಇಲ್ಲವಾದರೆ ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ ಎಂದರು. ಕುಲಸಚಿವೆ ನಾಹಿದಾ ಜûಮ್ ಜûಮ್ ಮಾತನಾಡಿ, ಕರ್ನಾಟಕ ಹಾಗೂ ಇತರೆ ರಾಜ್ಯಗಳಲ್ಲಿ ನೈಸರ್ಗಿಕ ಮತ್ತು ಮಾನವ ನಿರ್ಮಿತ ಜೌಗು ಪ್ರದೇಶಗಳನ್ನು ಉಳಿಸುವ ಬಗ್ಗೆ ಪಠ್ಯದಲ್ಲಿ ಇದ್ದರೂ ಕೂಡ ವಿದ್ಯಾರ್ಥಿಗಳಿಗೆ ಸ್ಥಳೀಯ ಪರಿಸರದ ಮಾಹಿತಿಯೇ ಸರಿಯಾಗಿ ಇರುವುದಿಲ್ಲ ಎಂಬುದು ಬೇಸರದ ಸಂಗತಿ. ನಮ್ಮ ಸುತ್ತಮುತ್ತಲಿನ ಅಮಾನಿಕೆರೆ,…
ತುಮಕೂರು: ಜಿಲ್ಲೆ ಕೊರಟಗೆರೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಶೇ.100 ರಷ್ಟು ತಲುಪಿಸುವಂತೆ ಅಧಿಕಾರಿಗಳು ಸತತ ಶ್ರಮವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದೇ ರೀತಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿನ ಅರ್ಹ ರೈತರಿಗೆ ವಸತಿ ಯೋಜನೆಯಡಿ ನಿವೇಶನಗಳನ್ನು ವಿಂಗಡಿಸಿ ವಿತರಿಸುವ ಕೆಲಸ ಹೆಚ್ಚು ಹೆಚ್ಚು ಆಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡುವ ಮೂಲಕ ಬಡವರಿಗೆ ಮನೆ ನೀಡಲು ಶ್ರಮಿಸಬೇಕಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊರಟಗೆರೆ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ ಉತ್ತಮ ಕೆಲಸಗಳು ಆಗುತ್ತಿವೆ. ಇದು ಸಂತೋಷದ ವಿಷಯ ಎಂದು ಸಚಿವರು, ಅರ್ಹ ಬಡ ಜನತೆಗೆ ಸರ್ಕಾರದ ಸವಲತ್ತುಗಳನ್ನು ನೀಡುವಲ್ಲಿ ಅನಗತ್ಯ…
ತುಮಕೂರು: ನಗರದ ಡಾ.ಗುಬ್ಬಿ ವೀರಣ್ಣಕಲಾ ಕ್ಷೇತ್ರದಲ್ಲಿ ನಾಟಕ ಮನೆ ತುಮಕೂರು ಹಮ್ಮಿಕೊಂಡ ಎರಡು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭ ಯಶಸ್ವಿಯಾಗಿ ಮೂಡಿಬಂದಿತು. ನಟ, ನಿರ್ದೇಶಕರಾದ ಮಂಡ್ಯ ರಮೇಶ್ ರವರು ತುಮಕೂರಿನ ರಂಗಕರ್ಮಿಗಳು, ರಂಗಾಸಕ್ತ ಪ್ರೇಕ್ಷಕರ ಜೊತೆ ರಂಗಸಂವಾದವನ್ನು ನಡೆಸಿಕೊಟ್ಟರು. ರಂಗಸಂವಾದದಲ್ಲಿ ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ಎಸ್.ನಾಗಣ್ಣ, ಕಲಾಶ್ರೀ ಡಾ.ಲಕ್ಷ್ಮಣದಾಸ್, ರಂಗ ನಿರ್ದೇಶಕರಾದ ಎಸ್.ಎ.ಖಾನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಪ್ಪ, ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಬಾ.ಹ.ರಮಾಕುಮಾರಿ, ಡಮರುಗ ರಂಗಸಂಸ್ಥೆಯ ಮೆಳೇಹಳ್ಳಿ ದೇವರಾಜು, ನಾಟಕ ಮನೆ ಮಹಾಲಿಂಗು ಮತ್ತುಇನ್ನೂ ಹಲವಾರು ರಂಗಕರ್ಮಿ ಗೆಳೆಯರು ಭಾಗವಹಿಸಿ ಪ್ರಸ್ತುತ ರಂಗಭೂಮಿಯ ಸ್ಥಿತಿ–ಗತಿಗಳ ಬಗ್ಗೆ ಚರ್ಚೆ ನಡೆಸಿದರು. ವರ್ತಮಾನಕ್ಕೆರಂಗಭೂಮಿ ಹೇಗೆ ತೆರೆದುಕೊಳ್ಳಬೇಕು, ವರ್ತಮಾನದ ಸವಾಲುಗಳನ್ನು ಎದುರಿಸುವುದು ಹೇಗೆ ಮತ್ತು ರಂಗಭೂಮಿಯ ನಿರಂತರತೆಯನ್ನುಕಾಪಾಡಿಕೊಂಡು ಹೋಗುವುದು ಹೇಗೆ, ತುಮಕೂರಿನ ರಂಗಭೂಮಿಯ ಸವಾಲುಗಳು ಏನು, ಬಯಲುಸೀಮೆ ರಂಗಾಯಣದ ಅಗತ್ಯ, ಪ್ರಾಮುಖ್ಯತೆ ಎಂಬ ಹಲವಾರು ರಂಗವಿಷಯಗಳ ಬಗ್ಗೆ ವಿಸ್ತಾರವಾಗಿ ಚರ್ಚೆ ನಡೆಸಿದರು. ನಂತರ ನಾಟಕಮನೆ ಮಹಾಲಿಂಗುರವರು…
ತುಮಕೂರು: ಮಹಾನಗರಪಾಲಿಕೆ ವಾರ್ಡ್ ಸಂಖ್ಯೆ 1 ರಿಂದ 35ರ ವ್ಯಾಪ್ತಿಯಲ್ಲಿರುವ ಅಧಿಕೃತ(ಎಂಎಆರ್–19 ವಹಿಯಲ್ಲಿನ ಆಸ್ತಿ ಮತ್ತು ಸಕ್ಷಮ ಪ್ರಾಧಿಕಾರದಿಂದ ಲೇಔಟ್ ಮಂಜೂರಾತಿ ಪಡೆದಿರುವ) ಖಾಲಿ ನಿವೇಶನಗಳನ್ನು ಸರ್ಕಾರದ ಆದೇಶದನ್ವಯ ಇ–ಆಸ್ತಿ ವ್ಯಾಪ್ತಿಗೆ ಒಳಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. URL PIDs List Link: https://tinyurl.com/TCCPIDlist ನಲ್ಲಿ ಪ್ರಚುರಪಡಿಸಿರುವ ಆಸ್ತಿ ಸಂಖ್ಯೆ(PID–Property Identification Number)ಗಳ ಖಾಲಿ ನಿವೇಶನಗಳಿಗೆ ಇ-ಆಸ್ತಿ ನಮೂನೆ-2ನ್ನು ಪಡೆಯದೇ ಇರುವ ಮಾಲೀಕರು ಜಿಯೋಟ್ಯಾಗ್(Latitude and Longitude with date and Timings) ಒಳಗೊಂಡ ಸ್ವತ್ತಿನ ಛಾಯಾಚಿತ್ರ, ಮಾಲೀಕರ ಭಾವಚಿತ್ರ, ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್/ಪಾಸ್‌ಪೋರ್ಟ್/ಡ್ರೈವಿಂಗ್ ಲೈಸೆನ್ಸ್/ವೋಟರ್ ಐಡಿ/ಪಡಿತರ ಚೀಟಿಯ ನಕಲು ಸೇರಿದಂತೆ ಇನ್ನಿತರೆ ಅಗತ್ಯ ದಾಖಲೆಗಳ ಪ್ರತಿಯನ್ನು ಸಲ್ಲಿಸಿ ತಮ್ಮ ಸ್ವತ್ತನ್ನು ಇ–ಆಸ್ತಿಗೆ ಒಳಪಡಿಸಬಹುದಾಗಿದೆ. ಆಸ್ತಿ ಮಾಲೀಕರು ತಮ್ಮ ಸ್ವತ್ತಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಮಹಾನಗರಪಾಲಿಕೆಯ ಇ–ಆಸ್ತಿ ಕೌಂಟರ್ ಗೆ ಸಲ್ಲಿಸಿ ಇ–ಆಸ್ತಿ ನಮೂನೆ–2ನ್ನು ಪಡೆಯಬಹುದಾಗಿದೆ. ಸ್ವತ್ತನ್ನು ಇ–ಆಸ್ತಿಗೆ ವರ್ಗಾಯಿಸುವ…
ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವತಿಯರಿಗೆ ಉಚಿತ ಊಟ, ವಸತಿಯೊಂದಿಗೆ 30 ದಿನಗಳ ಮಹಿಳಾ ಹೊಲಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಜಿಲ್ಲಾ ವ್ಯಾಪ್ತಿಯ 18 ರಿಂದ 45 ವರ್ಷದೊಳಗಿನ ಕನ್ನಡ ಓದಲು ಹಾಗೂ ಬರೆಯಲು ಬರುವಂತಹದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 20 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2243386, ಮೊ.ಸಂ.9738351048/9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಶ್ರವಣಬೆಳಗೊಳ: ಶ್ರೀ ಕ್ಷೇತ್ರದ ಬಂಡಾರಿ ಬಸದಿಯಲ್ಲಿ 12 ಅಡಿ ಎತ್ತರದ ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯನ್ನು ಭಾನುವಾರ ಪ್ರತಿಷ್ಠಾಪಿಸಿ, ವೈಭವದ ಮಸ್ತಕಾಭಿಷೇಕ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿರುವ ವಿಶ್ವವಿಖ್ಯಾತ 58 ಅಡಿ ಎತ್ತರದ ಬಾಹುಬಲಿ ಮೂರ್ತಿಯನ್ನು ನೋಡಲು ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಅವರಲ್ಲಿ ವಯೋವೃದ್ದರೂ, ವಿಕಲಚೇತನರು ಸೇರಿದಂತೆ ಅಶಕ್ತರು ವಿಂಧ್ಯಗಿರಿ ಬೆಟ್ಟ ಹತ್ತಿ ಬಾಹುಬಲಿಯ ದರ್ಶನ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಹಿಂದಿನ ಪೀಠಾಧ್ಯಕ್ಷರಾಗಿದ್ದ ಸ್ವಸ್ತಿಶ್ರೀ ಚಾರುಕಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 8 ವರ್ಷಗಳ ಹಿಂದೆ 12 ಅಡಿ ಮೂರ್ತಿ ಯನ್ನು ಕೆತ್ತಿಸಿದರು. ಆದರೆ ಪ್ರತಿಷ್ಠಾಪನೆ ಮಾಡಲು ಸಾಧ್ಯವಾಗಿರಲಿಲ್ಲ. ಪ್ರಸ್ತುತ ಶ್ರೀಮಠದ ಪೀಠಾಧ್ಯಕ್ಷರಾಗಿರುವ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ಆಚಾರ್ಯ ಶ್ರೀ ಕುಂತುಸಾಗರ ಮಹಾರಾಜರು ಮತ್ತು ಸಂಘಸ್ಥ ಯಾಗಿಗಳು ಹಾಗೂ ಸಮಸ್ತ ಭಟ್ಟಾರಕ ಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ಮೂರು ದಿನಗಳಿಂದ ಪಂಚಕಲ್ಯಾಣ ಹಾಗೂ ಪೂಜಾ ವಿಧಿ ವಿಧಾನಗಳು ನೆರವೇರಿಸಲಾಯಿತು. ಭಾನುವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಸ್ತಕಾಭಿಷೇಕ…
ತುಮಕೂರು: ಜಿಲ್ಲೆಯಲ್ಲಿರುವ ಜನವಸತಿ ಸೇರಿದಂತೆ ಎಲ್ಲಾ ಕುಟುಂಬಗಳಿಗೂ ಕಾರ್ಯಾತ್ಮಕ ಗೃಹ ನಳ ಸಂಪರ್ಕ ಕಲ್ಪಿಸಲು ಸೂಕ್ತ ಕ್ರಮವಹಿಸುವಂತೆ ಕೇಂದ್ರ ಜಲ ಶಕ್ತಿ ಮಂತ್ರಾಲಯದ ಜಂಟಿ ನಿರ್ದೇಶಕ ಅರುಣ್ ಕೆಂಭಾವಿ ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಲ್ ಜೀವನ್ ಮಿಷನ್ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗೃಹ ನಳ ಸಂಪರ್ಕ ಕಲ್ಪಿಸಲು ಗುಣಮಟ್ಟದ ಕಾಮಗಾರಿ ಅನುಷ್ಟಾನ ಮಾಡಿ, ನಿಗಧಿತ ದಿನಾಂಕದೊಳಗಾಗಿ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಬೇಕು. ಸಮುದಾಯಕ್ಕೆ ಅಗತ್ಯವಾದ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರು ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುತ್ತಿರುವ ಬಗ್ಗೆ ಛಾಯಾಚಿತ್ರಗಳ ಸಹಿತ ಪ್ರಾತ್ಯಕ್ಷಿಕೆಯನ್ನು ಪ್ರಸ್ತುತಪಡಿಸಿದರು. ಇದೇ ವೇಳೆ ಕೇಂದ್ರ WASH ಸಮಾಲೋಚಕ ಅಜಯ್ ಕುಮಾರ್ ಸಕ್ಸೇನಾ ಜಿಲ್ಲೆಯಲ್ಲಿ ಫೆಬ್ರವರಿ 11 ರಿಂದ 13ರವರೆಗೆ ಪ್ರವಾಸ…
ಕೊರಟಗೆರೆ : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2023–24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊರಟಗೆರೆ ತಾಲ್ಲೂಕಿನಿಂದ 7,632 ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದು, ಬೆಳೆ ಸಮೀಕ್ಷೆಯೊಂದಿಗೆ ತಾಳೆಯಾಗದೆ ಅಂತಿಮವಾಗಿ ವಿಮಾ ಕಂಪನಿಯಿಂದ 59 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡಿರುವ ರೈತರ 4 ಪಟ್ಟಿಯನ್ನು ತಾಲ್ಲೂಕಿನ ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳು ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಸೂಚನ ಫಲಕಗಳಲ್ಲಿ ಪ್ರದರ್ಶಿಸಿದ್ದು, ರೈತರು ಆಕ್ಷೇಪಣೆಗಳೇನಾದರು ಇದ್ದಲ್ಲಿ, ಸೂಕ್ತ ದಾಖಲಾತಿಗಳೊಂದಿಗೆ, ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಕೊರಟಗೆರೆ ರವರಿಗೆ 15 ದಿನಗೊಳಗಾಗಿ ಅರ್ಜಿ ಸಲ್ಲಿಸಲು ಸಹಾಯಕ ಕೃಷಿ ನಿರ್ದೇಶಕರಾದ ಎಂ.ಆರ್. ರುದ್ರಪ್ಪ ರವರು ತಿಳಿಸಿದ್ದಾರೆ. ರೈತರು ಆಕ್ಷೇಪಣೆ ಸಲ್ಲಿಸಲು ಬೆಳೆ ವಿಮೆಗೆ ನೋಂದಣಿ ಮಾಡಿರುವ ಬೆಳೆಯನ್ನು ಬೆಳೆದಿರುವ ಕುರಿತು ಈ ಕೆಳಕಂಡಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ತಿಳಿಸಿದೆ. 2023-24 ರ ಪಹಣಿ ಪತ್ರಿಕೆಯಲ್ಲಿ (RTC) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ…
ಕೊರಟಗೆರೆ: ಕೆ ಆರ್ ಐ ಡಿ ಎಲ್ ಇಲಾಖೆಯಿಂದ ಬಿಡುಗಡೆ ಆಗಿದ್ದ 10 ಲಕ್ಷ ರೂ. ಅನುದಾನದಿಂದ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾ.ಪಂ.ನ ಐ.ಕೆ.ಕಾಲೋನಿಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಐ.ಕೆ.ಕಾಲೋನಿಯ ಬಹುದಿನದ ಬೇಡಿಕೆಯಾಗಿದ್ದ ಶುದ್ದ ಕುಡಿಯುವ ನೀರಿನ ಘಟಕವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿ ಇಲ್ಲಿನ ನಿವಾಸಿಗಳ ಜೊತೆಗೆ ಗ್ರಾಮದ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಇದೇ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಓ ಪ್ರಭು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಹಣ ಹಾಕುವುದು ಸ್ವಲ್ಪ ತಡವಾಗಿದೆ. ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ವರ್ಗಾಹಿಸಿಲ್ಲ. ಆದರೆ ಸರ್ಕಾರ ಮಾತು ಕೊಟ್ಟಂತೆ ಎರಡು ಯೋಜನೆಗಳ ಹಣವನ್ನು ಖಾತೆಗಳಿಗೆ ಹಾಕುತ್ತೇವೆ ಎಂದರು. ಇನ್ನುಂದೆ ತಿಂಗಳಿಗೆ ಸರಿಯಾಗಿ ಗ್ಯಾರೆಂಟಿ ಯೋಜನೆಗಳ ಹಣ ವರ್ಗಾವಣೆಯಾಗಲಿದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4