Author: admin

ಬೆಂಗಳೂರು: 2025–26ನೇ ಸಾಲಿನ ಬಜೆಟ್ ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025–26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಹೆಗ್ಗನೂರು: ಫೆ.17ರ ಸೋಮವಾರದಿಂದ ಫೆ.19ರ ಬುಧವಾರದವರೆಗೆ ಮೂರು ದಿನಗಳ ಕಾಲ ಕಂದೇಗಾಲ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಮತ್ತು ದನಗಳ ಪ್ರದರ್ಶನವನ್ನು ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸೋಮವಾರದಿಂದ  ಜಾತ್ರೆ ಆರಂಭಗೊಳ್ಳಲಿದೆ. ಸರಗೂರು ತಾಲ್ಲೂಕಿನ ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಬಿಡುಗಲು– ಪಡುವಲು ಮಠದ ಮಹಾದೇವಸ್ವಾಮಿಗಳು, ದಡದಹಳ್ಳಿ ಪಟ್ಟದ ಮಠದ ಷಡಕ್ಷಸ್ವಾಮಿಗಳು, ಹಂಚೀಪುರ ಪಟ್ಟದ ಮಠದ ಚನ್ನಬಸವಸ್ವಾಮಿಗಳು, ಬೀಚನಹಳ್ಳಿ ಪುರದ ಮಠದ ನಾಗೇಂದ್ರಸ್ವಾಮಿಗಳು ಮತ್ತು ಜಕ್ಕಹಳ್ಳಿ ಬಿಕ್ಷದ ದಾಸೋಹ ಮಠದ ಶಿವಕುಮಾರಸ್ವಾಮಿಗಳು ನೇತೃತ್ವದಲ್ಲಿ ಹೋಮ ಮತ್ತು ರುದ್ರಾಭಿಷೇಕದ ಮೂಲಕ ಜಾತ್ರೆಯೂ ಪ್ರಾರಂಭಗೊಳ್ಳಲಿದೆ. ಅದೇ ದಿನ ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಇನ್ನು ಎರಡನೇ ದಿನವಾದ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ದೇವರಿಗೆ ಅಭಿಷೇಕ ಪೂಜೆ, 9 ಗಂಟೆಗೆ ಹಾಲುಹರವಿ ಸೇವೆ ಮತ್ತು ಕೊಂಡೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಅದೇ ದಿನ ರಾತ್ರಿ ಸಾಗರೆ ಸುರೇಶ್ ಮತ್ತು ತಂಡದವರಿಂದ ’ಸುಗಮ ಸಂಗೀತಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಾಗೆಯೇ…

Read More

ಮಡಿಕೇರಿ: ಎರಡು ಜೀವಗಳನ್ನು ಬಲಿ ಪಡೆದಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕಳೆದ ಕೆಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇವರಪುರ ವ್ಯಾಪ್ತಿಯಲ್ಲಿ ಸುಮಾರು 40 ವರ್ಷದ ಒಂಟಿ ಸಲಗ ಜನರ ಮೇಲೆ ದಾಳಿ ಮಾಡುತ್ತಾ ಜನರಿಗೆ ತೊಂದರೆಯನ್ನುಂಟು ಮಾಡುತ್ತಿತ್ತು. ಕೆಲವೇ ತಿಂಗಳುಗಳ ಹಿಂದೆ ಭದ್ರಗೊಳ ಗ್ರಾಮದಲ್ಲಿ ಗೌರಿ ಎಂಬ ಮಹಿಳೆಯ ಮೇಲೆ ದಾಳಿ ಮಾಡಿ ಬಲಿಪಡೆದಿತ್ತು. ಎರಡು ದಿನಗಳ ಹಿಂದೆ ಚೆನ್ನಂಗೊಲ್ಲಿ ಗ್ರಾಮದ ಪಾರ್ವತಿ ಎಂಬವರನ್ನೂ ಬಲಿ ಪಡೆದಿತ್ತು. ಈ ಘಟನೆಯಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದರು. ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಶಾಸಕ ಎ.ಎಸ್.ಪೊನ್ನಣ್ಣ ಮೂಲಕ ಸಚಿವರಿಗೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾಡಾನೆ ಸೆರೆಗೆ ಅನುಮತಿ ನೀಡಿದ್ದರು. ದುಬಾರೆ, ಮತ್ತಿಗೋಡು ಮತ್ತು ಹಾರಂಗಿ ಸಾಕಾನೆ ಶಿಬಿರದ 7 ಸಾಕಾನೆಗಳು, 90ಕ್ಕೂ ಅಧಿಕ…

Read More

ತುಮಕೂರು: ಕೆ.ಎನ್.ರಾಜಣ್ಣ ನಮ್ಮ ಪಕ್ಷದವರಲ್ಲ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದರು. ಬೆಳ್ಳಾವಿ ಕಾರದ ಮಠದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯತ್ನಾಳ್ ಗೆ ನೋಟಿಸ್ ಕೊಡೋಕೆ ವಿಜಯೇಂದ್ರಗೆ ತಾಕತ್ ಇಲ್ಲ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಸಂಬಂಧ ಈ ಪ್ರತಿಕ್ರಿಯೆ ನೀಡಿದರು. ಈಗಾಗಲೇ ಕೇಂದ್ರದ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ನಮ್ಮ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದ ವಿಜಯೇಂದ್ರ ನಕ್ಕು ಸುಮ್ಮನಾದರು. 20ನೇ ತಾರಿಕಿನೊಳಗೆ ಉತ್ತರ ಸಿಗುತ್ತೆ ಅಂತ ಅಂದೇ ಹೇಳಿದ್ದೇನೆ. ಜಿಲ್ಲಾಧ್ಯಕ್ಷರ ನೇಮಕ ಬಳಿಕ ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಯಾವಾಗ ಬೇಕಾದ್ರೂ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲಾ ಶಾಸಕರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡುತ್ತಾರೆ ಎಂದರು. ಇನ್ನೂ ಒಂಬತ್ತು ವಿವಿಗಳ ಮುಚ್ಚುವ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದೊಂದು ಬಹಳ ದುರದೃಷ್ಟಕರ ವಿಚಾರ. ಬಿಜೆಪಿ ಸರ್ಕಾರದಲ್ಲಿ ಹೊಸ…

Read More

ಕಲಬುರಗಿ: ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನಲಾಗುತ್ತದೆ. ಬಿಜೆಪಿ ಹಾಗೂ ಆರ್ಎಸ್ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಿದರು. ಇನ್ನೂ ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಬದಲಾವಣೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದರು. ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ರಾಜಕೀಯದಲ್ಲಿ ಇವೆಲ್ಲಾ ಮಾಮೂಲು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಳಗಾವಿ: ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ, ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ ಪ್ರಧಾನಿ ಸ್ಥಾನ ಬದಲಾವಣೆ ಸಾಧ್ಯತೆ ಇರುವುದಾಗಿ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದರು. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಂಕಟ ಇದೆ. ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬಳ್ಳಾರಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದ್ದು, 15 ದಿನಗಳ ಅಂತರದಲ್ಲಿ 3 ಬಾಣಂತಿಯರು ಬಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ ಗ್ರಾಮದ 25 ವರ್ಷದ ಗಂಗಮ್ಮ ಫೆಬ್ರವರಿ 14 ರಂದು ನಿಧನರಾಗಿದ್ದು, ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಗಂಗಮ್ಮ ಸಾವಾಗಿದೆ ಎಂಬ ಆರೋಪ ಕೇಳಿಬಂದಿದೆ. ಗಂಗಮ್ಮ ಜನವರಿ 6 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಬಳಿಕ ಅವರನ್ನು ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಗೆ ದಾಖಲಿಸಲಾಗಿದೆ. ಸ್ವಲ್ಪ ಚೇತರಿಸಿಕೊಂಡ ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಳಿಕ ಫೆಬ್ರವರಿ 14 ರಂದು ನಿಧನರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಸಿಎಂ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಕೆಎಎಸ್ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ಈತ ಈ ಹಿಂದೆ ಶಾಸಕರ ಖಾಸಗಿ ಸಹಾಯಕರ ಬಳಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ನಕಲಿ ಸಿಎಂ ಕಚೇರಿ ಪತ್ರ ಮತ್ತು ಸಹಿಯನ್ನು ಬಳಸಿದ್ದರ ವಿರುದ್ಧ ವಿಧಾನಸೌಧದ ಕಾರ್ಯದರ್ಶಿ ದೂರು ದಾಖಲಿಸಿದ ನಂತರ ಆತನನ್ನು ಇತ್ತೀಚೆಗೆ ಬಂಧಿಸಲಾಗಿದೆ. ಪೋಸ್ಟಿಂಗ್ ಕೊಡಿಸುವುದಾಗಿ ಆರೋಪಿ ರಾಘವೇಂದ್ರ ಅಧಿಕಾರಿಯ ಬಳಿ ಹಣ ಪಡೆದು ವಂಚಿಸಿದ್ದ. ಅಲ್ಲದೆ ರಾಜಕಾರಣಿಗಳ ಬಳಿ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದವರಿಗೂ ವಂಚಿಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿ ರಾಘವೇಂದ್ರನನ್ನು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ, ಎಲ್.ಎಸ್. ಚೇತನ್ ಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ. 15 ದಿನ ಅಥವಾ ತಿಂಗಳಿಗೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆಂದು ಹೇಳಿದರು. ಬಿಜೆಪಿ-ಜೆಡಿಎಸ್ ಪಕ್ಷದ ಹಾಲಿ ಶಾಸಕರೂ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಶಾಸಕರ ಸೇರ್ಪಡೆ ಬಗ್ಗೆ ಬಹಿರಂಗ ಹೇಳಿಕೆ ನೀಡಲಾಗದು. ನಿಮ್ಮನ್ನು ಬಿಟ್ಟು ಏನೂ ಮಾಡುವುದಿಲ್ಲ ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಗಳು, ತಾಲ್ಲೂಕು ಪಂಚಾಯತ್ಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಮುಂಬರುವ ಚುನಾವಣೆಗಳಿಗೆ ಪಕ್ಷವು ಸಂಪೂರ್ಣವಾಗಿ ಸಿದ್ಧವಾಗಬೇಕು…

Read More

ತುಮಕೂರು :    ತುಮಕೂರಿನಿಂದ ತ್ರಿವಿಧ ದಾಸೋಹದ ಮಹಿಮೆಯನ್ನು ಜಗತ್ತಿಗೆ ತಿಳಿಸಿದವರು ಶಿವಕುಮಾರ ಸ್ವಾಮೀಜಿಗಳು,  ಯುವಕರಲ್ಲಿ ಮನವಿ ಮಾಡ್ತೀನಿ ಮಠ ಮಾನ್ಯಗಳ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಬೆಳ್ಳಾವಿ ಕಾರದ ಮಠದಲ್ಲಿ ಮಾತನಾಡಿದ ಅವರು,  ಕಂಪ್ಯೂಟರ್ ಮೊಬೈಲ್ ಭರಾಟೆಯಲ್ಲಿ ನಮ್ಮ ಪರಂಪರೆ ಸಂಸ್ಕೃತಿಯನ್ನು ಮರೆತಿದ್ದೇವೆ.   ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಗುರುಪರಂಪರೆ, ಆಚಾರ ವಿಚಾರ ಸಂಸ್ಕಾರ ಸಂಸ್ಕೃತಿಯನ್ನ ಮರೆತಿದ್ದೇವೆ.  ಹೆತ್ತ ತಂದೆತಾಯಿಗಳನ್ನ ನಿರ್ಲಕ್ಷ್ಯ ಮಾಡುತ್ತಿದ್ದೇವೆ.  ಇಂದಿನ ಯುವ ಪೀಳಿಗೆ ಅಂತಹ ಸಂಸ್ಕೃತಿಗೆ ಮಾರು ಹೋಗಿರುವುದು ದುರಂತ ಎಂದರು. ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟಿದ್ದೇವೆ, ಆದರೆ ಸಂಸ್ಕಾರ ಕೊಡುವುದರಲ್ಲಿ ಎಡವಿದ್ದೇವೆ. ಈಗಲೂ ಕಾಲ‌ಮಿಂಚಿಲ್ಲ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಲು,  ತಂದೆ ತಾಯಿಯಂದಿರು ಗಮನ ಹರಿಸಬೇಕು ಬೇಕು ಎಂದು ಅವರು ಕರೆ ನೀಡಿದರು. ನರೇಂದ್ರ ಮೋದಿಜಿಯವರು ದೇಶದ ಅಭಿವೃದ್ಧಿ ಕನಸು ಕಾಣುತ್ತ, ನಮ್ಮ ದೇಶದ ಯುವಜನತೆ ಮೇಲೆ ವಿಶ್ವಾಸ ವಿಟ್ಟಿದ್ದಾರೆ. ಅದಕ್ಕಾಗಿ ಅವ್ರುಗಳು ರಾತ್ರಿ ಹಗಲು ಶ್ರಮಿಸುತ್ತಿದ್ದಾರೆ.  ನಮ್ಮದೇಶಕ್ಕೆ ಹಿಂದೆ…

Read More