Author: admin

ಬೀದರ್: ಹಳ್ಳಿಖೇಡ್–ಬಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿ 560 ರೂಪಾಯಿಗಳನ್ನು ವಶಕ್ಕೆ ಪಡೆದುಕೊಂಡು ಕಾನೂನು ಕ್ರಮಕೈಗೊಂಡಿದ್ದಾರೆ. ಮಟಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಹಳ್ಳಿಖೇಡ್–ಬಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಮಂಠಾಳ ಪೊಲೀಸ್ ಠಾಣೆಯ ಪಿ.ಎಸ್.ಐ.ವಿಜಯಕುಮಾರ ನಾಯಕ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ್: ರಸ್ತೆ ಅಪಘಾತದಿಂದ ಸಂಭವಿಸುವ ಅಮಾಯಕರ ಪ್ರಾಣ ರಕ್ಷಣೆ ಮಾಡುವುದು ಮತ್ತು ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂತಪೂರ ಪೊಲೀಸರು ರಾಷ್ಟ್ರೀಯ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮ ಆಯೋಜಿಸಿದರು. ಪೊಲೀಸ್ ವರಿಷ್ಠಾಧಿಕಾರಿಗಳಾದ ಐ.ಪಿ.ಎಸ್. ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಸಂತಪೂರ ಪೊಲೀಸ್ ಠಾಣೆಯ ಪಿಎಸ್ ಐ ನಂದಕುಮಾರ ಅವರ ನೇತೃತ್ವದಲ್ಲಿ ಪೊಲೀಸರು ಸಾರ್ವಜನಿಕರಿಗೆ Save yourself to save your family always wear helmet & seat belt ಎಂಬ ವಾಕ್ಯದೊಂದಿಗೆ ಜಾಗೃತಿ ಮೂಡಿಸಿದರು. ಜನ ಸಾಮಾನ್ಯರ ಪ್ರಾಣ ರಕ್ಷಣೆ ಮತ್ತು ಅಪರಾಧ ತಡೆಯುವುದು, ನಡೆಯದಂತೆ ನಿಗಾ ವಹಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ , ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಶಾಪಿಂಗ್ ಕರೆದೊಯ್ಯಲಿಲ್ಲ ಎಂದು ನೊಂದು ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಬಾಲಕಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪೋಷಕರು ಆತ್ಮಹತ್ಯೆ ವಿಚಾರ ಪೊಲೀಸರಿಗೆ ಮಾಹಿತಿ ನೀಡದೆಯೇ ಅಂತ್ಯ ಸಂಸ್ಕಾರ ನಡೆಸಿದ ಘಟನೆ ನಡೆದಿದೆ. ಮಾಗಡಿ ತಾಲೂಕಿನ ಸೋಲೂರಿನ ಬಸವನಹಳ್ಳಿ ನಿವಾಸಿ ಧೃತಿ ಜಿ. ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದಾಳೆ. ಶನಿವಾರ ಸಂಜೆ 4 ರಿಂದ 5 ಗಂಟೆಯ ನಡುವೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೃಷಿಕರಾದ ಆಕೆಯ ತಂದೆ ಗಂಗಾಧರಯ್ಯ ಮತ್ತು ತಾಯಿ ಸಂಬಂಧಿಕರ ಮದುವೆಗೆಂದು ಶಾಪಿಂಗ್’ಗೆ ಹೋಗಿದ್ದರು. ದಂಪತಿಗೆ ದೃತಿ ಒಬ್ಬಳೇ ಮಗಳಿದ್ದು, ಈಕೆ ಪಿಯುಸಿ ಓದುತ್ತಿದ್ದಳು. ತನ್ನನ್ನು ಶಾಂಪಿಂಗ್’ಗೆ ಕರೆದುಕೊಂಡು ಹೋಗದ್ದಕ್ಕೆ ಬೇಸರಗೊಂಡಿದ್ದಳು. ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಕಾಲೇಜಿನಿಂದ ಮನೆಗೆ ಬಂದಿರುವ ಆಕೆ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಶಾಪಿಂಗ್ ಮುಗಿಸಿ ಮನೆಗೆ ಬಂದ ವೇಳೆ ಬಾಲಕಿ ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಿಸಿದರೆ, ದೇಹವನ್ನು ತುಂಡಾಗಿಸುತ್ತಾರೆಂಬ ಭಯದಿಂದ ಪೊಲೀಸರಿಗೆ…

Read More

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆರೋಪಿಯ ಮೊಣಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ದರೋಡೆ ನಡೆಸಿದ ಇಬ್ಬರು ಆರೋಪಿಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಣೇಶ್ (23) ಮತ್ತು ಶರವಣ (35) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಆರೋಪಿಗಳ ವಿರುದ್ಧ ಈಗಾಗಲೇ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಜ.19ರಂದು ರಾತ್ರಿ ಸುಮಾರು 11.30ಕ್ಕೆ ಕೆ.ಆರ್.ಮಾರುಕಟ್ಟೆ ಗೋಡೌನ್ ಸ್ಟ್ರೀಟ್ ನಲ್ಲಿ ತಮಿಳುನಾಡು ಮೂಲದ 37 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, 650 ರೂ. ನಗದು, ಚಿನ್ನದ ತಾಳಿ, ಓಲೆ, ಬೆಳ್ಳು ಕಾಲು ಚೈನ್ ಹಾಗೂ ಮೊಬೈಲ್ ದೋಚಿಕೊಂಡು ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತಾಲ್ಲೂಕು ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಗುಬ್ಬಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನಿಗದಿತ ಅರ್ಜಿ ನಮೂನೆಯನ್ನು ಡಿ.ದೇವರಾಜ ಅರಸು ಭವನ, ಮಾರುತಿ ನಗರ, 6ನೇ ಅಡ್ಡರಸ್ತೆ, ರೈಲ್ವೇ ಸ್ಟೇಷನ್ ರಸ್ತೆ, ಗುಬ್ಬಿ ಪಟ್ಟಣ–572216 ಈ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜನವರಿ 31ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ : bceogubbi@gmail.com ಅಥವಾ ದೂ.ವಾ.ಸಂ. 08131–222456ನ್ನು ಸಂಪರ್ಕಿಸಬಹುದಾಗಿದೆ ಎಂದು ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ “ಗಣರಾಜ್ಯೋತ್ಸವ ದಿನಾಚರಣೆ–2025” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸುವರು. ನಗರ ವಿಧಾನಸಭಾ ಕ್ಷೇತ್ರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು. ಅಂದು ಸಂಜೆ 4:30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜನವರಿ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ‘ಜಿಲ್ಲಾ ಮಟ್ಟದ ಮಾವು, ಬಾಳೆ ಬೆಳೆಗಳ ವಿಚಾರ ಸಂಕಿರಣ ಹಾಗೂ ತರಬೇತಿ’ ಕಾರ್ಯಕ್ರಮವನ್ನು ಏರ್ಪಡಿಸಿದೆ. ವಿಚಾರ ಸಂಕಿರಣದಲ್ಲಿ ಮಾವು ಬೆಳೆಯ ಸಮಗ್ರ ಬೇಸಾಯ ತಾಂತ್ರಿಕ ಪದ್ಧತಿ, ಮಾವು ಬೆಳೆಯ ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ, ಬಾಳೆ ಬೆಳೆಯ ಸಮಗ್ರ ಬೇಸಾಯ ತಾಂತ್ರಿಕ ಪದ್ಧತಿ, ಬಾಳೆ ಬೆಳೆಯ ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ, ಹಣ್ಣುಗಳ ತಾಂತ್ರಿಕ ಬೇಸಾಯ ಪದ್ಧತಿ, ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ಮಾರುಕಟ್ಟೆ ಕುರಿತು ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 8970870918, 9538287992, 7022679182, 8197516149ನ್ನು ಸಂಪರ್ಕಿಸಬಹುದಾಗಿದೆ. ರೈತ ಬಾಂಧವರು ಈ ವಿಚಾರ ಸಂಕಿರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜು ಆಸ್ಪತ್ರೆ ಗ್ರಾಮೀಣ ತರಬೇತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸಿಂಗೀಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ “ಉಚಿತ ಆರೋಗ್ಯ ತಪಾಸಣೆ ಮತ್ತು ಕ್ಷಯರೋಗ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕಾಗಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮೋಹನ್ ದಾಸ್ ಮಾತನಾಡಿ, ಕ್ಷಯರೋಗ ಸಂಪೂರ್ಣವಾಗಿ ಗುಣಪಡಿಸಬಹುದಾದ ಒಂದು ರೋಗವಾಗಿದೆ. ಭಾರತವನ್ನು ಕ್ಷಯ ಮುಕ್ತವನ್ನಾಗಿಸಲು ಕರ್ನಾಟಕ ಸರ್ಕಾರ ನೂರು ದಿನಗಳ ಕ್ಷಯ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿದ್ದು, 2 ವಾರಕ್ಕಿಂತ ಹೆಚ್ಚು ಕೆಮ್ಮು ಅಥವಾ ಜ್ವರ, ತೂಕದಲ್ಲಿ…

Read More

ತುಮಕೂರು:  ಶ್ರೀ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಲಿಂಗೈಕ್ಯ ಡಾ.ಶಿವಕುಮಾರ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ, ಸಮರ್ಪಣಾ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು. ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಮಂಗಳವಾರ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 6ನೇ ಪುಣ್ಯ ಸಂಸ್ಮರಣೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಳ ಜೀವನ ಮತ್ತು ಉನ್ನತ ಚಿಂತನೆಯ ತತ್ವವನ್ನು ಅನುಸರಿಸಿ, ಇತರರನ್ನು ಅದೇ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸಿದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಸೇವೆಯನ್ನು ಮೆಚ್ಚಿ ಹಲವಾರು ರಾಷ್ಟ್ರ ಹಾಗೂ ಅಂತರರಾಷ್ಟ್ರಮಟ್ಟದ ಪ್ರಶಸ್ತಿಗಳು ದೊರೆತಿದೆಯಲ್ಲದೆ, ಭಾರತ ಸರ್ಕಾರವು ಅವರಿಗೆ 2015ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂದು ಹೇಳಿದರು. ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಹಾಗೂ ಸಾಮರಸ್ಯವನ್ನು ಪ್ರೇರೇಪಿಸುವ ಭಾರತೀಯ ಸಂಸ್ಕೃತಿಯು ಅನಂತವಾದುದು. ನಮ್ಮ ಸಂತರು ಅನಾದಿ ಕಾಲದಿಂದಲೂ ನಿರಂತರವಾಗಿ ಭಾರತೀಯ ಸಂಸ್ಕೃತಿಯನ್ನು ರಕ್ಷಿಸುತ್ತಿದ್ದಾರೆ. ನಮ್ಮ ಧರ್ಮದ ಏಕತೆ, ಸಮಗ್ರತೆ ಮತ್ತು ಸನಾತನ ಧರ್ಮದ ಪರಂಪರೆಯನ್ನು…

Read More