Author: admin

ಕೊರಟಗೆರೆ: ಗ್ರಾಮೀಣ ಭಾಗದ ಜನರ ಜೀವನವನ್ನ ಕಟ್ಟಕೊಟ್ಟಿದೆ ಹೈನುಗಾರಿಕೆ. ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾದ ಹಾಲು ಉತ್ಪಾದಕರು ತಮ್ಮ ಸಂಸಾರಕ್ಕೆ ಆಸರೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದ ಸಾದರ ಸಮುದಾಯ ಭವನದಲ್ಲಿ ತುಮಲು ನಿರ್ದೇಶಕ ಸಿದ್ದಗಂಗಯ್ಯ ಅವರ ೬೨ ನೇ ಜನ್ಮ ದಿನ ಅಂಗವಾಗಿ ಏರ್ಪಡಿಸಲಾಗಿದ್ದ ತುಮಕೂರು ಹಾಲು ಒಕ್ಕೂಟ ಹಾಗೂ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಾಸ್ತ್ರ ಚಿಕಿತ್ಸಾ ಶಿಬಿರವನ್ನ ಉದ್ಘಾಟಿಸಿ ಮಾತನಾಡಿದರು. ಹೈನುಗಾರಿಕೆಯಿಂದ ಎಷ್ಟೋ ಕುಟುಂಬಗಳ ಮಕ್ಕಳ ಪಾಲನೇ ಮಾಡುತ್ತಿರುವುದು ನಮ್ಮ ಕಣ್ಣ ಮುಂದೆ ಇದೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳು ದೊಡ್ಡ ದೊಡ್ಡ ವ್ಯಾಸಂಗ ಮಾಡುತ್ತಿದ್ದು, ಸಿದ್ದರಬೆಟ್ಟದ ರೋಟರಿ ಸಂಸ್ಥೆಯಿಂದ ಕಾಮಧೇನು ಎನ್ನವ ಹೆಸರಿನಲ್ಲಿ ಸುಮಾರು ೨೪೦ ಕ್ಕೂ ಹೆಚ್ಚು ಹಸುಗಳನ್ನ ರೈತರಿಗೆ ನೀಡಲಾಗಿದೆ. ಹಸುವಿನ ಹಣವನ್ನ ಅಂತ ಅಂತವಾಗಿ ರೈತರು ಹಾಲು ಹಾಕುವುದರ ಮೂಲಕ ತಿರಿಸಲಾಗುತ್ತಿದೆ ಎಂದು ತಿಳಿಸಿದರು. ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ…

Read More

ತುಮಕೂರು: ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿರುವ ನಿಯೋಜಿತ ಸಿ ಎಂ ಡಿ.ಕೆ.ಶಿವಕುಮಾರ್, ಮುಂದಿನ ದಿನ ಗಳಲ್ಲಿ ಸರ್ಕಾರಿ ಹಾಗೂ ಗ್ರಾಮೀಣ ಭಾಗದ ಶಾಲೆಗಳಿಗೆ ಹೊಸ ರೂಪ ನೀಡುವುದಾಗಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯಾವುದೇ ಕೀಳರಿಮೆ ಬೇಡ. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳನ್ನು ರೂಪಾಂತರ ಗೊಳಿಸಲು ಈಗಾಗಲೇ ಯೋಜಿಸಲಾಗಿದೆ ಎಂದು ಹೇಳಿದರು. ಜೂನ್ 1 ರಿಂದ ಶೈಕ್ಷಣಿಕ ವರ್ಷ ಆರಂಭವಾಗಿದೆ. ವಿಶ್ವದ ಎಲ್ಲಾ ರಾಷ್ಟ್ರಗಳು, ಕರ್ನಾಟಕ ಮೂಲಕ ಭಾರತವನ್ನು ನೋಡುತ್ತಿವೆ, ಇಲ್ಲಿ ಉತ್ತಮ ಮಾನವ ಸಂಪನ್ಮೂಲ ಹಾಗೂ ಜ್ಞಾನ ಬಂಡಾರವಿದೆ ಎಂದಿದ್ದಾರೆ. ರಾಜ್ಯದಲ್ಲಿ ಮೂಲ ಶಿಕ್ಷಣ ಪಡೆದು ದೇಶ ವಿದೇಶಗಳಲ್ಲಿ ಲಕ್ಷಾಂತರ ಮಂದಿ ಉನ್ನತ ವ್ಯಾಸಂಗ ಮಾಡಿದ್ದಾರೆ. ದೊಡ್ಡ ದೊಡ್ಡ ಸಾಧನೆ ಮಾಡಿದ್ದಾರೆ. ಉತ್ತಮವಾದ ವೈದ್ಯರು ವಕೀಲರು ಐಟಿ ತಂತ್ರಜ್ಞರು ಸೇರಿದಂತೆ ನಾನಾ ರೀತಿಯ ವೃತ್ತಿಪರರಿಗೆ ಕರ್ನಾಟಕ ಉತ್ತಮ ಸ್ಥಳವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ, ಇಸ್ರೋ ಸೇರಿದಂತೆ ಹಲವಾರು…

Read More

ತುಮಕೂರು : ವಿಶ್ವ ವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವವು ಇಂದು ಬೆಳಗ್ಗೆ 11-30 ಗಂಟೆಗೆ ಕುಲಪತಿಗಳ ಕಚೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, 59 ಅಭ್ಯರ್ಥಿಗಳು ಪಿಎಚ್.ಡಿ. ಪದವಿ, 2,058 ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ 8,781 ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು 10,839 ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕುಗಳನ್ನು (ಎಂಎಸ್ಸಿ ವಿದ್ಯುನ್ಮಾನ ಮಾಧ್ಯಮ- 2 ರ‍್ಯಾಂಕ್), ಬಿಎ, ಬಿಎಸ್‌ಡಬ್ಲೂ, ಬಿಎಸ್‌ಸಿ, ಬಿಕಾಂ, ಬಿಬಿಎಂ, ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ‍್ಯಾಂಕುಗಳನ್ನು (ಬಿಎಸ್ಸಿ ಫ್ಯಾಶನ್ ಅಂಡ್ ಅಪಾರೆಲ್ ಡಿಸೈನಿಂಗ್- 1 ರ‍್ಯಾಂಕ್, ಬಿ.ವೋಕ್ – 3 ರ‍್ಯಾಂಕ್) ಘೋಷಿಸಿದೆ. ಒಟ್ಟು 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕಗಳನ್ನು, ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿಶ್ವ ವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ. ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್…

Read More

ತುಮಕೂರು: 2026–27ನೇ ಶೈಕ್ಷಣಿಕ ವರ್ಷದ ಅಂಗವಾಗಿ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ತುಮಕೂರು ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆ, ಎಂಆರ್‌ಸಿ ಶಾಲೆಯಲ್ಲಿ ಕಲಿಕಾ ಚೇತರಿಕೆ ವರ್ಷ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು. ಶಾಲೆಯಲ್ಲಿನ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಿ, ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭಾಶಯ ಕೋರಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ನಿಯಮಿತ ಹಾಜರಾತಿ, ಗುಣಮಟ್ಟದ ಶಿಕ್ಷಣ ಹಾಗೂ ಸರ್ವತೋಮುಖ ವ್ಯಕ್ತಿತ್ವ ವಿಕಸನದ ಮಹತ್ವವನ್ನು ತಿಳಿಸಿದರು. ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಶಿಕ್ಷಕರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಶಾಲಾ ದಾಖಲಾತಿ ಹೆಚ್ಚಳಕ್ಕೆ ವಿಶೇಷ ಒತ್ತು ನೀಡುವಂತೆ ಹಾಗೂ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಮತ್ತಷ್ಟು ಸುಧಾರಿಸಲು ಅಗತ್ಯ ಕ್ರಮಗಳನ್ನು…

Read More

ಪಾವಗಡ:  ರಾಜ್ಯದಲ್ಲಿ ನೂತನವಾಗಿ ಪ್ರಮಾಣ ಸ್ವೀಕಾರ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ  ಸಚಿವ ಸಂಪುಟದ ಕಸರತ್ತು ಬಿರುಸುಗೊಳ್ಳುತ್ತಿರುವ ಬೆನ್ನಲ್ಲೇ, ಹಿಂದುಳಿದ ಗಡಿ ತಾಲ್ಲೂಕಾದ ಪಾವಗಡದ ಶಾಸಕ ಎಚ್.ವಿ. ವೆಂಕಟೇಶ್ ಸಚಿವ ಸ್ಥಾನದ ಆಕಾಂಕ್ಷಿ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ. “ಯುವ ಸಚಿವರ ಕೋಟಾದಡಿಯಲ್ಲಿ ನನಗೆ ಸಚಿವ ಸ್ಥಾನದ ಜವಾಬ್ದಾರಿ ಒದಗಿಸಬೇಕು” ಎಂದು ಪಕ್ಷದ ಹೈಕಮಾಂಡ್ ಅವರನ್ನು ಬಲವಾಗಿ ಒತ್ತಾಯಿಸಿದ್ದಾರೆ. ಪಟ್ಟಣದ ಎಪಿಎಂಸಿ ಮೈದಾನದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಶೇಂಗಾ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿತ್ತನೆ ಬೀಜಗಳಾದ ಶೇಂಗಾ,ತೊಗರಿ, ಅಲಸಂದೆ ಮತ್ತು ಬತ್ತದ ಬೀಜಗಳನ್ನು ವಿತರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸತತ 14 ವರ್ಷಗಳ ಕಾಲ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಎರಡು ಬಾರಿ ಜಿಲ್ಲಾ ಪಂಚಾಯತಿ ಸದಸ್ಯನಾಗಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ, ಆ ಅನುಭವ  ನನಗಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅತ್ಯಂತ ಕಡಿಮೆ ಮತಗಳ…

Read More

ಚಿಕ್ಕನಾಯಕನಹಳ್ಳಿ: ಹೇಮಾವತಿಯ ತುಮಕೂರು ನಾಲೆಯಲ್ಲಿ ನೀರು ಹರಿಸುವ ವೇಳೆಗೆ ನವಿಲೇ ಭಾಗದ ನಾಲಾ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರನ್ನು ಹರಿಸಲಾಗುವುದು ಈ ಬಗ್ಗೆ ರೈತರು ಹಾಗೂ ಹೇಮಾವತಿ ಹೋರಾಟಗಾರರು ಆತಂಕಪಡುವ ಅಗತ್ಯವಿಲ್ಲವೆಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು. ತಾಲ್ಲೂಕಿನ ಹೇಮಾವತಿ ನಾಲಾ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಕಾಮಗಾರಿಯನ್ನು ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಈಗಾಗಲೇ ಬಹುತೇಕ ನಾಲಾ ಕಾಮಗಾರಿಯು ನಡೆಯುತ್ತಿದ್ದು, ಇನ್ನು 70 ಮೀಟರ್ ಉದ್ದ ಎರಡು ಸೇತುವೆಗಳ ನಿರ್ಮಾಣವಾಗಬೇಕಿದೆ, ಈ ತಿಂಗಳ ಅಂತ್ಯಕ್ಕೆ ಅವುಗಳು ಪೂರ್ಣಗೊಳ್ಳಲಿದ್ದು, ನಂತರ ಚಿಕ್ಕಪುಟ್ಟ ಕೆಲಸಗಳನ್ನು ಮಾಡಲಾಗುವುದು ಇನ್ನು ಈ ನೀರು ಹರಿಯುವ ವೇಳೆಗೆ ಕಂದಿಕೆರೆ ಭಾಗಕ್ಕೂ ಅಗತ್ಯವಿರುವಂತಹ ಕೆಲಸವನ್ನು ಮಾಡುವ ಮೂಲಕ ಚಿಕ್ಕನಾಯಕನಹಳ್ಳಿ, ನಾಗತಿಕೆರೆ, ಕಂದಿಕೆರೆ ಮೂಲಕ ಬೋರನಕಣಿವೆಗೆ ಹರಿಸಲು ಕ್ರಮಕೈಗೊಳ್ಳಲಾಗುವುದು ಈ ಕಾಮಗಾರಿಯನ್ನು ಪ್ರತಿ ವಾರ ಅಧಿಕಾರಿಗಳೊಂದಿಗೆ ಸಭೆನಡೆಸುವುದು ಸೇರಿದಂತೆ ಸ್ಥಳಕ್ಕೆ ಬೇಟಿ ನೀಡಿ ಯಾವುದಾದರು ಸಮಸ್ಯೆ ಇದ್ದರೆ ಅದನ್ನು ಬಗೆಹರಿಸುವ ಮೂಲಕ ಈ ಕಾಮಗಾರಿಯನ್ನು ಪರೀಶಿಲಿಸಲಾಗುತ್ತಿದೆ ಆದ್ದರಿಂದ ರೈತರು ಸಹಕಾರ ನೀಡಬೇಕು…

Read More

ಬೆಂಗಳೂರು: ನಗರದ ಹಳೆಯ ವಿಮಾನ ನಿಲ್ದಾಣ (ಓಲ್ಡ್ ಏರ್‌ಪೋರ್ಟ್) ರಸ್ತೆಯಲ್ಲಿ ವಿಐಪಿ ಮೂವ್‌ಮೆಂಟ್ ವೇಳೆ ನಡೆದಿದ್ದ ಹೈಡ್ರಾಮಾ ಮತ್ತು ವ್ಯಕ್ತಿಯೊಬ್ಬರ ಪ್ರತಿಭಟನೆಯ ವೈರಲ್ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ದೊಡ್ಡ ಟ್ವಿಸ್ಟ್ ನೀಡಿದ್ದಾರೆ. ಕಾರಿನಲ್ಲಿ ಗರ್ಭಿಣಿ ಪತ್ನಿ ಇದ್ದಾರೆ ಎಂದು ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದ್ದ ವ್ಯಕ್ತಿ, ಘಟನೆ ನಡೆದ ಸಮಯದಲ್ಲಿ ಕಾರಿನಲ್ಲಿ ಒಬ್ಬರೇ ಇದ್ದರು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಜೂನ್ 1 ರಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಸಂಚಾರದ ಹಿನ್ನೆಲೆಯಲ್ಲಿ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು (ಝೀರೋ ಟ್ರಾಫಿಕ್). ಅಂಡರ್‌ಪಾಸ್ ಕಾಮಗಾರಿಯಿಂದಾಗಿ ಈಗಾಗಲೇ ಕಿರಿದಾಗಿದ್ದ ರಸ್ತೆಯಲ್ಲಿ ಏಕಾಏಕಿ ಸಂಚಾರ ನಿರ್ಬಂಧಿಸಿದ್ದರಿಂದ ಕಿಲೋಮೀಟರ್‌ಗಟ್ಟಲೆ ವ್ಯಾಪಕ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. ಈ ವೇಳೆ ಕಾರಿನಿಂದ ಇಳಿದ ವ್ಯಕ್ತಿಯೊಬ್ಬರು ರಸ್ತೆ ಮಧ್ಯದಲ್ಲೇ ನಿಂತು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. “ನನ್ನ ಗರ್ಭಿಣಿ ಪತ್ನಿ ಕಾರಿನಲ್ಲಿದ್ದಾರೆ, ತುರ್ತಾಗಿ…

Read More

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂನ್ 3ರ ಬುಧವಾರದಂದು ವಿಧಾನಸೌಧದ ಸುತ್ತಮುತ್ತಲಿನ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ರಾಜ್ಯಪಾಲರ ಹೆಸರಿನಲ್ಲಿ ಈ ಅಧಿಕೃತ ಸೂಚನೆಯನ್ನು ಹೊರಡಿಸಿದೆ. ಇದರನ್ವಯ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ (ಎಂ.ಎಸ್. ಬಿಲ್ಡಿಂಗ್) ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬುಧವಾರ ಮಧ್ಯಾಹ್ನದಿಂದ ರಜೆ ಅನ್ವಯವಾಗಲಿದೆ. ಜೂನ್ 3 ರಂದು ಸಂಜೆ 4:05 ಕ್ಕೆ ವಿಧಾನಸೌಧದ ಮುಂಭಾಗದ ಆವರಣದಲ್ಲಿ ಭವ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜನೆಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ದೇಶದ ವಿವಿಧ ರಾಜ್ಯಗಳ ಗಣ್ಯರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ. ವಿಧಾನಸೌಧದ ಆವರಣದಲ್ಲಿ ಭಾರಿ ಜನಸ್ತೋಮ ಸೇರುವ ಸಾಧ್ಯತೆ ಇರುವುದರಿಂದ ಭದ್ರತಾ ವ್ಯವಸ್ಥೆ, ಸೂಕ್ತ ಕಾನೂನು ಸುವ್ಯವಸ್ಥೆ…

Read More

ಬೀದರ್: ಜಿಲ್ಲೆಯ ಹಿರಿಯ ನಾಯಕ, ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಅಥವಾ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಔರಾದ್ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಹರಿದೇವ್ ಸಂಗನಾಳ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಶ್ವರ ಖಂಡ್ರೆ ಅವರು ಭಾಲ್ಕಿ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಈ ಹಿಂದೆ ಎರಡು ಬಾರಿ ಸಚಿವರಾಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ ಎಂದು ನೆನಪಿಸಿದ್ದಾರೆ. ಖಂಡ್ರೆ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಬೀದರ್ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಭರಪೂರ ಯೋಜನೆಗಳನ್ನು ರೂಪಿಸಿ, ಅವುಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲು ಶ್ರಮಿಸಿದ್ದಾರೆ. ಅವರ ಈ ಸುದೀರ್ಘ ರಾಜಕೀಯ ಅನುಭವ ಮತ್ತು ಜನಸೇವೆಯನ್ನು ಪರಿಗಣಿಸಿ ಹೈಕಮಾಂಡ್ ಅವರಿಗೆ ಡಿಸಿಎಂ (DCM) ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನದಂತಹ ಉನ್ನತ ಜವಾಬ್ದಾರಿಯನ್ನು…

Read More

ಮಿಡಿಗೇಶಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಸಮೀಪದ ಕೋಡಿಹಳ್ಳದಲ್ಲಿ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಿಡಿಗೇಶಿಯ ಪೂಮಾಚಿ ಗ್ರಾಮದ ನಿವಾಸಿ ನಾಗೇಂದ್ರ ಬಾಬು (26) ಅಪಘಾತದಲ್ಲಿ ಗಾಯಗೊಂಡ ಯುವಕ. ಸೋಮವಾರ ಬೆಳಗಿನ ಜಾವ ಸುಮಾರು 2:30ರ ಸಮಯದಲ್ಲಿ ಈ ಘಟನೆ ನಡೆದಿದೆ. ನಾಗೇಂದ್ರ ಬಾಬು ಅವರು ಮಿಡಿಗೇಶಿಯಿಂದ ಐ.ಡಿ.ಹಳ್ಳಿಗೆ ಹೋಗುವ ದಾರಿಯಲ್ಲಿ ಕಾರು ಚಲಾಯಿಸುತ್ತಿದ್ದಾಗ, ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹಾದು ಹೋಗುವ ಕೋಡಿಹಳ್ಳದ (ರಾಮಕೃಷ್ಣಪ್ಪ ಅವರ ಜಮೀನಿನ ಬಳಿ) ಹತ್ತಿರ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಕಾರು ರಸ್ತೆಯಿಂದ ಪಕ್ಕದಲ್ಲಿದ್ದ ಸುಮಾರು ಹತ್ತು ಅಡಿ ಆಳದ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಲ್ಲಿ ಚಾಲಕ ನಾಗೇಂದ್ರ ಬಾಬು ಅವರಿಗೆ ಗಂಭೀರ ಪೆಟ್ಟಾಗಿದ್ದು, ತಕ್ಷಣವೇ ಸ್ಥಳೀಯ ಸಾರ್ವಜನಿಕರು ಧಾವಿಸಿ ಬಂದು ಗಾಯಾಳುವನ್ನು ರಕ್ಷಿಸಿದ್ದಾರೆ. ಬಳಿಕ ಅವರನ್ನು ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಗೆ…

Read More