Subscribe to Updates
Get the latest creative news from FooBar about art, design and business.
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
- ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
- ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
Author: admin
ತುಮಕೂರು: ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಗುಬ್ಬಿ ಹೆಚ್.ಎ.ಎಲ್. ಕಾರ್ಖಾನೆಯ ಬಗ್ಗೆ ಚರ್ಚಿಸಿದರು. ತುಮಕೂರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜನಾಥ ಸಿಂಗ್ ಅವರಿಗೆ ಸಚಿವ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲೆಯಾದ್ಯಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಫೆಬ್ರವರಿ 15ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಫೆಬ್ರವರಿ 15ರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ…
ತುಮಕೂರು: ಜಿಲ್ಲೆಯ 18 ಕೇಂದ್ರಗಳಲ್ಲಿ ಫೆಬ್ರವರಿ 15ರಂದು ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಯಾವುದೇ ಲೋಪದೋ಼ಷವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು. ಪರೀಕ್ಷೆಯು ಫೆಬ್ರವರಿ 15ರಂದು ಮಧ್ಯಾಹ್ನ 2:30 ರಿಂದ 4:30ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯಕ್ಕೆ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರದಲ್ಲಿ ಹಾಜರಿರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್, ವೈರ್…
ತುಮಕೂರು: ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 7304975519ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ನಗರದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿರುವ ಇಂಟಿಗ್ರೇಟೆಡ್ ಸಿಟಿ ಮ್ಯಾನೇಜ್ ಮೆಂಟ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ನಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರು ಸಮಾಜವಾದಿ ಚಳುವಳಿಯ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಅವರು ತಮ್ಮ ಜೀವನದ ಉದ್ದಕ್ಕೂ ರೈತರು ಮತ್ತು ದುರ್ಬಲ ವರ್ಗದವರ ಪರವಾಗಿ ಹೋರಾಡಿದರು. ಅವರ ಚಿಂತನೆಗಳು ಮತ್ತು ಹೋರಾಟಗಳು ಇಂದಿಗೂ ಪ್ರೇರಣಾದಾಯಿಯಾಗಿವೆ ಎಂದು ನಿವೃತ್ತ ಮೌಲ್ಯಮಾಪನ ಕುಲ ಸಚಿವ ಡಾ.ಕೆ.ಜೆ.ಸುರೇಶ್ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಹೋರಾಟ ಮತ್ತು ಚಿಂತನೆಗಳು ರೈತರ ಹಕ್ಕುಗಳಿಗಾಗಿ ಮತ್ತು ಆರ್ಥಿಕ ಸುಧಾರಣೆಗಾಗಿ ಮೀಸಲಾಗಿದ್ದವು. ಅವರಿಗೆ ಈ ಮನೋಭಾವ ಮೂಡಲು ಅವರು ಬೆಳೆದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಿನ್ನೆಲೆ ಪ್ರೇರಣೆ ನೀಡಿತು. ಹಾಗಾಗಿ ಅವರು ಸಮಾಜವಾದಿ ಚಳುವಳಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಭಾಗವಹಿಸಿ ರೈತರ ಸಮಸ್ಯೆಗಳನ್ನು ಪರಿಹರಿಸಲು ನಿರಂತರ ಶ್ರಮಿಸಿದರು ಎಂದರು. ಭಾರತವು ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ನಮ್ಮ ದೇಶದ ಬೆನ್ನೆಲುಬು ರೈತ.…
ತುಮಕೂರು: ತಮ್ಮ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ವಿರುದ್ಧ ತುಮಕೂರಿನಲ್ಲಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿ, ತಿರುಗೇಟು ನೀಡಿದರು. ಕ್ರಿಕೆಟ್ ಸ್ಟೇಡಿಯಂ ವಿಚಾರದಲ್ಲಿ ಲಂಚ ನೀಡಿಲ್ಲ ಅಂತಾ ಹೇಳಿದ್ದಾರೆ. ಈ ವಿಚಾರವಾಗಿ ನಾನು ಮಾನನಷ್ಟ ಮೊಕದ್ದಮೆ ಹಾಕ್ತೀನಿ. ಅದು ಪ್ರೈವೆಟ್ ಕಂಪನಿ ಅದ್ರಲ್ಲಿ ಲಂಚ ಹೊಡೆಯುತ್ತಾರೆ ಅಂತಾರೆ ಅಂದ್ರೆ ಅವರಿಗೆ ಎಷ್ಟರ ಮಟ್ಟಿಗೆ ಜ್ಞಾನ ಇದೆ ಅಂತಾ ತಿಳಿದುಕೊಳ್ಳಿ. ಅವರ ತಂದೆ ಪೊಲೀಸ್ ಆಗಿದ್ದವರು ಅವರ ಕಾಲೇಜಿಗೆ ಮರಳು, ಇಟ್ಟಿಗೆ ಹೊಡೆಸಿಕೊಳ್ತಾ ಇದ್ರು ಅಂತಾ ಕೇಳಿದ್ದೇನೆ ಎಂದು ಆರೋಪಿಸಿದರು. ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರಿಗೆ ಕಲ್ಲು ಒಡೆಯೋ ಕೆಲಸ ಮಾಡಬಾರದು. ಗೌರಿಶಂಕರ್ ಮೂರು ಪಕ್ಷ ನೋಡಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಪರಮೇಶ್ವರ್ ಅವರು, ಅವರಿಗೆ ಜಗತ್ ಗುರುಗಳು. ಪರಮೇಶ್ವರ್ ಮ್ಯಾಚ್ ಫಿಕ್ಸ್ ಮಾಡಿ ಕೊರಟಗೆರೆಯಲ್ಲಿ ಅವರಿಗೆ ಇಲ್ಲಿ ಇವರಿಗೆ ಓಟ್ ಹಾಕಿಸಿಕೊಳ್ತಾರೆ ಎಂದು ಸುರೇಶ್ ಗೌಡ ಆರೋಪಿಸಿದರು. ನಾನು ಪ್ರಯಾಗ್ ರಾಜ್ ನಲ್ಲಿ ಪಾಪ ಕಳೆದುಕೊಂಡಿದ್ದೇನೋ ಪುಣ್ಯ…
ತುಮಕೂರು: ಬೈಕ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ತಿಪಟೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್, ವೇಗವಾಗಿ ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶೆಟ್ಟಿಕೆರೆ ಗ್ರಾಮದ ಅವಿನಾಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತಿಪಟೂರು: ತಾಲೂಕಿನ ಸುಕ್ಷೇತ್ರ ರಂಗನಹಳ್ಳಿ ಶ್ರೀ ಶನೈಶ್ಚರ ಸ್ವಾಮಿಯವರ 21ನೇ ಜಾತ್ರಾ ಮಹೋತ್ಸವ ಫೆ.12ರಿಂದ 15 ರವರೆಗೆ ಬಹಳ ವಿಜೃಂಭಣೆಯಿಂದ ನೆರವೇರಲಿದೆ ಎಂದು ಸಂಘದ ಸದಸ್ಯ ಚಂದ್ರಶೇಖರ್ ತಿಳಿಸಿದರು. ಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಂಗನಹಳ್ಳಿ ಶ್ರೀ ಶನೇಶ್ವರಸ್ವಾಮಿ ಜಾತ್ರ ಮಹೋತ್ಸವವು ಬಹಳ ವೈಭವದಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ ನಡೆಯುವ 21ನೇ ಜಾತ್ರಾ ಮಹೋತ್ಸವವು ಶ್ರೀ ಆಂಜನೇಯಸ್ವಾಮಿ, ಶ್ರೀ ದುರ್ಗಾ ಪರಮೇಶ್ವರಿ ಹಾಗೂ ಆದಿಪರಾಶಕ್ತಿ ಕಾಳಿಕಾದೇವಿಯವರ ಆಗಮನದೊಂದಿಗೆ ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ. ಈ ವೇಳೆ ಅಮೂಲ್ಯ ಫೌಂಡೇಶನ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಫೆ.12 ರಂದು ಸ್ವಾಮಿಗೆ ಪಂಚಾಮೃತ, ಅಷ್ಟೋತ್ತರ ಕುಂಕುಮಾರ್ಚನೆ, ಮಹಮಂಗಳಾರತಿ ಹಾಗೂ ಶ್ರೀ ಕ್ಷೇತ್ರ ಮಲ್ಲಾಘಟ್ಟ ಕೆರೆಯಲ್ಲಿ ಸ್ವಾಮಿಗೆ ಗಂಗಾಸ್ನಾನ ನೆರವೇರಲಿದೆ. ಫೆ.13 ರಂದು ಜಾನಪದ ಕಲಾ ತಂಡಗಳೊಂದಿಗೆ ಆಲ್ಲೂರು ಅಣಪನಹಳ್ಳಿ, ಬಸವನಹಳ್ಳಿ, ರಂಗನಹಳ್ಳಿ, ಮಾಕನಹಳ್ಳಿ, ನೊಣವಿನಕೆರೆ, ಕಾಡಸಿದ್ದೇಶ್ವರ ಮಠ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಉತ್ಸವಗಳು ನಡೆಯಲಿವೆ. ಕ್ಷೇತ್ರಕ್ಕೆ ಆಗಮಿಸಿದ ಗ್ರಾಮ ದೇವತೆ…
ಪಾವಗಡ: ತಾಲೂಕಿನ ಹಲವು ದೇವಾಲಯಗಳು ಮತ್ತು ಮನೆಯೊಂದರಲ್ಲಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪಾವಗಡ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳು ಆಂಧ್ರಪ್ರದೇಶದ ಬದಲಾಪುರ ಗ್ರಾಮದ ನರಸಿಂಹ ಮತ್ತು ಪಾವಗಡ ತಾಲೂಕಿನ ಕ್ಯಾತಗಾನಚರ್ಲು ಗ್ರಾಮದ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ. ಇವರಿಂದ 2 ಕೆ.ಜಿ. 630 ಗ್ರಾಂ ಬೆಳ್ಳಿ ಹಾಗೂ 20 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕಳ್ಳತನ ನಡೆದ ಸ್ಥಳಗಳು: ಉಪ್ಪಾರಹಳ್ಳಿ ಕಾಳಿಕಾ ದೇವಸ್ಥಾನ, ಸೇವಾಲಾಲ್ ಪುರ ಗ್ರಾಮದ ಕರಿಯಮ್ಮನ ದೇವಸ್ಥಾನ, ಫ್ರೆಂಡ್ಲಿಜೀವಿ ಆಂಜನೇಯ ಸ್ವಾಮಿ ದೇವಸ್ಥಾನ, ರಾಯಚರ್ಲು ಅಕ್ಕಮ್ಮ ದೇವಸ್ಥಾನ, ರಂಗಸಮುದ್ರ ಗ್ರಾಮದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಕ್ಯಾತಗಾನಚರ್ಲು ಗ್ರಾಮದ ಒಂದು ಮನೆ. ಈ ಭರ್ಜರಿ ಕಾರ್ಯಾಚರಣೆಯಲ್ಲಿ ತುಮಕೂರು ಜಿಲ್ಲಾ ಎಸ್.ಪಿ. ಕೆ.ವಿ. ಅಶೋಕ್, ಎಎಸ್ಪಿ ಮರಿಯಪ್ಪ, ಅಬ್ದುಲ್ ಖಾದರ್ ಮಾರ್ಗದರ್ಶನ ನೀಡಿದರು. ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಪಾವಗಡ ಗ್ರಾಮಾಂತರ ಸಿಪಿಐ ಗಿರೀಶ್, ಪಿಎಸ್ ಐ ಮಾಳಪ್ಪ ನಾಯ್ಕೋಡಿ, ಲಕ್ಷ್ಮಣ್, ಸಿಬ್ಬಂದಿಗಳಾದ ಗೋವಿಂದರಾಜು,…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಫೆಬ್ರವರಿ 14ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕೆ.ಜಿ.ಟೆಂಪಲ್, ಉಂಗ್ರ, ಶೆಟ್ಟಿಗೊಂಡನಹಳ್ಳಿ, ಕಲ್ಲೂರು, ಕಡಬ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4