Author: admin

ಹೆಚ್.ಡಿ.ಕೋಟೆ: ಗ್ರಾಮ ಆಡಳಿತ ಅಧಿಕಾರಿಗಳ ನೌಕರರು ಕೈಗೊಂಡಿರುವ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹೆಚ್.ಡಿ.ಕೋಟೆ ತಾಲೂಕಿನ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎಂ. ಹಾಗೂ ರಾಜ್ಯ ಪರಿಷತ್ ಸದಸ್ಯರಾದ ಮಂಜುನಾಥ, ನಿರ್ದೇಶಕರಾದ ಮನೋಜ್ ಭಾಗವಹಿಸಿ ಬೆಂಬಲ ಸೂಚಿಸಿದರು. ನೌಕರರ ಬೇಡಿಕೆಗಳನ್ನು ಆಲಿಸಿ ಶೀಘ್ರದಲ್ಲಿ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ಇದೇ ತಿಂಗಳು 20ರಂದು ನಡೆಯುವ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು ಹಾಗೂ ಬೇಡಿಕೆ ಈಡೇರುವವರೆಗೂ ನಿಮ್ಮ ಜೊತೆ ನಾವಿರುತ್ತೇವೆ ಎನ್ನುವ ಮಾತುಗಳನ್ನು ಆಡಿದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷರಾದ ಯೋಗೇಶ್ ಹಾಗೂ ಹಲವು ಪದಾಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕೊರಟಗೆರೆ:  ಗೌರಿಕಲ್ಲು ಗ್ರಾಮಸ್ಥರು ಮತ್ತು ಕಾರ್ಮಿಕರ ವಿರೋಧದಿಂದ 15 ವರ್ಷದಿಂದ ಸ್ಥಗಿತವಾಗಿದ್ದ ಕಲ್ಲುಗಣಿಗಾರಿಕೆಗೆ ಈಗ ತುಮಕೂರಿನ ಕಲ್ಲು ಮತ್ತು ಭೂವಿಜ್ಞಾನ ಇಲಾಖೆ ಜೀವನೀಡಿದೆ ಎಂದು ಆರೋಪಿಸಿ, ಬೆಂಡೋಣಿ ಜಯರಾಂ ವಿರುದ್ದ ಧಿಕ್ಕಾರ ಕೂಗಿ ಬಂಡೇ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಗೌರಿಕಲ್ಲು ಗ್ರಾಮದ ಸರ್ವೆ ನಂ.36ರಲ್ಲಿ ಕಲ್ಲು ಗಣಿಗಾರಿಕೆಯ ಸದ್ದು ಮತ್ತೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಗೌರಿಕಲ್ಲು ಗ್ರಾಮದ ಸರ್ವೆ ನಂ.36ರಲ್ಲಿ ಬೆಂಡೋಣಿಯ ಜಯರಾಮ್ ಎಂಬಾತನಿಗೆ ಕಳೆದ 15ವರ್ಷದ ಹಿಂದೆ ಗಣಿಗಾರಿಕೆಯಿಂದ ಇದೇ ಸರ್ವೆ ನಂ.36ರಲ್ಲಿ 4 ಎಕರೆ ಸರಕಾರಿ ಭೂಮಿ,  ಗಣಿ ಇಲಾಖೆಯಿಂದ 4 ಎಕರೆ ಕಲ್ಲುಕ್ವಾರೇ ಮಂಜೂರು ಆಗಿದೆ. ಅಂದಿನಿಂದಲೇ ಕಾರ್ಮಿಕರ ಹೋರಾಟವು ಪ್ರಾರಂಭವಾಗಿದೆ. ಕಾರ್ಮಿಕರು ಮತ್ತು ಜಯರಾಂ ನಡುವೆ ಸಂಘರ್ಷ: ಗೌರಿಕಲ್ಲು ಸರ್ವೆ ನಂ.36ರ ಕಲ್ಲುಕ್ವಾರೆಯ ಬಂಡೆಯಲ್ಲಿ ಕಳೆದ ಬಂಡೇ ಕಾರ್ಮಿಕರು ಕಳೆದ 40 ವರ್ಷದಿಂದ ಬಂಡೇ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಬೆಂಡೋಣಿ ಜಯರಾಮ್ ಈ…

Read More

ಹೆಚ್.ಡಿ.ಕೋಟೆ :  ತಾಲೂಕಿನ ಗದ್ದೆಹಳ್ಳ ಗ್ರಾಮದ 22 ವರ್ಷದ ಅವಿನಾಶ್ ಎಂಬ ಯುವಕ ಆನೆ ದಾಳಿಗೆ ಬಲಿಯಾದ ಘಟನೆ ನಡೆದಿದೆ. ಸರಗೂರು ತಾಲೂಕು ಸಾಗರೆ  ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗದ್ದೆಹಳ್ಳ ಗ್ರಾಮದ ಕಾಂತ ನಾಯಕನ ಪುತ್ರ ಅವಿನಾಶ್ 22 ವರ್ಷದ ಯುವಕ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಜಮೀನಿಗೆ ನೀರು ಹಾಯಿಸಲು ತೆರಳಿದ್ದು,   ಮೋಟಾರ್ ಸ್ವಿಚ್ ಆನ್ ಮಾಡಿ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಐದು ಆನೆಗಳ ಹಿಂಡು ಮುಖಮುಖಿ ಆಗಿದೆ. ಸಂದರ್ಭದಲ್ಲಿ ಆನೆಗಳ ಗುಂಪು ಯುವಕನ ಮೇಲೆ ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.  11 ಗಂಟೆ ಆದರೂ ಸ್ಥಳಕ್ಕೆ ಅಧಿಕಾರಿಗಳು ಬರೆದಿದ್ದ ಕಾರಣ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಮಧುಗಿರಿ: ಸರ್ಕಾರಿ ಕಚೇರಿಗಳ ಆವರಣಕ್ಕೆ,  ಕಚೇರಿ ಅವಧಿ ಮುಗಿದ ನಂತರ ಯಾವುದೇ ವಾಹನಗಳನ್ನು ಒಳಗೆ ಬಿಡುವಂತಿಲ್ಲ ಎನ್ನುವ ನಿಯಮಗಳಿದ್ದರೂ, ರಾತ್ರಿ 10 ಮುಕ್ಕಾಲು ಗಂಟೆಯ ಸುಮಾರಿಗೆ  ಕ್ರೈನ್ ವೊಂದು ಮಧುಗಿರಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ಪ್ರವೇಶಿಸಿದ ಘಟನೆ ನಡೆದಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತಮ್ಮ ಕಡತಗಳ ಭದ್ರತೆಯ ಬಗ್ಗೆ ಆತಂಕ ಸೃಷ್ಟಿ ಮಾಡಿದೆ. ಫೆಬ್ರವರಿ 10ರಂದು ಈ ಘಟನೆ ನಡೆದಿದೆ. ಈ ಘಟನೆ ಸಂಬಂಧ ನಮ್ಮತುಮಕೂರು ವಾಹಿನಿಗೆ ಕಾಳಜಿ ಫೌಂಡೇಶನ್‌ನ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್ ಮಾಹಿತಿ ನೀಡಿದ್ದಾರೆ. ರಾತ್ರಿ ಸುಮಾರು 9:30ಕ್ಕೆ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ಕ್ರೇನ್ ವಾಹನದ ಮೂಲಕ ಪೆಟ್ಟಿಗೆ ಅಂಗಡಿಯನ್ನು ತಂದು ಅಕ್ರಮವಾಗಿ ಇಡುತ್ತಿದ್ದಾರೆ  ಎನ್ನುವ ವಿಚಾರ ತಿಳಿದು ಬಂದಿದೆ. ಹೀಗಾಗಿ ಮಹೇಶ್ ಅವರು  ಕೂಡಲೇ ದಂಡಾಧಿಕಾರಿಗಳ ಕಚೇರಿಯ ಸೆಕ್ಯೂರಿಟಿ ಬಳಿ ಕೇಳಿದಾಗ ತಹಶೀಲ್ದಾರ್ ರವರೇ ಯಾವುದಾದರೂ ಒಂದು ಮೂಲೆಯಲ್ಲಿ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಸಮಯ 10.45ಕ್ಕೆ ಕ್ರೇನ್ (ಕೆಎ 27…

Read More

ತುಮಕೂರು: ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ರೀತಿ, ಕರ್ನಾಟಕದಲ್ಲಿಯೂ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವ ಭರವಸೆಯನ್ನು ಸರಕಾರ 2025—26 ನೇ ಸಾಲಿನ ಬಜೆಟ್‌ ನಲ್ಲಿ ಘೋಷಿಸಬೇಕು ಎಂದು ಕರ್ನಾಟಕ ಭೀಮ ಸೇನೆ(ರಿ),ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಸಿ. ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಸಂಬಂಧವಾಗಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಸಚಿವರು, ಗೃಹ ಸಚಿವರು ಹಾಗೂ ಲೋಕೋಪಯೋಗಿ ಸಚಿವರುಗಳಲ್ಲಿ ಕಳೆದ 1ವರ್ಷದಿಂದ ಮನವಿ ಮಾಡುತ್ತಾ ಬಂದಿದ್ದು, ಬೇರೆ ಸಮುದಾಯದ ನಾಯಕರುಗಳ ಪ್ರತಿಮೆಗಳನ್ನು ನಗರದ ಪ್ರಮುಖ ಜಾಗಗಳಲ್ಲಿ ಸ್ಥಾಪಿಸಿರುವ ರೀತಿಯಲ್ಲಿಯೇ ಲಾಲ್‌ಭಾಗ್ ನಲ್ಲಿ ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವುದರ ಜೊತೆಗೆ, ಬಾಬಾ ಸಾಹೇಬರ ಕುರಿತು ಮ್ಯೂಸಿಯಂ ಸ್ಥಾಪಿಸಬೇಕೆಂಬುದು ಕರ್ನಾಟಕ ಭೀಮ ಸೇನೆಯ ಆಗ್ರಹವಾಗಿದೆ ಎಂದರು. ತೆಲಂಗಾಣ ಸರಕಾರ 2023ರ ಏಪ್ರಿಲ್ 14 ರಂದು ಸುಮಾರು 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಅಂದಿನ ಮುಖ್ಯಮಂತ್ರಿ…

Read More

ಬೆಂಗಳೂರು: ಮೆಟ್ರೋ ದರ ಇಳಿಸಬೇಕು ಎಂದು ಸರ್ಕಾರ ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿ ತೆಗೆದುಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಮಗೂ ಅದಕ್ಕೂ(ಮೆಟ್ರೋ ಬೆಲೆ ಏರಿಕೆಗೂ) ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು ಎಂದು ಡಿಕೆಶಿ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಮಂಡ್ಯ: ಕೆಎಸ್ ಆರ್‌ ಟಿಸಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲ್ಲ ಗಾಯಾಳುಗಳನ್ನು ಕೆ.ಆರ್. ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಆಲೇನಹಳ್ಳಿಯಿಂದ ಕೆ.ಆರ್.ಪೇಟೆ ಕಡೆಗೆ ಕೆಎಸ್‌ ಆರ್‌ ಟಿಸಿ ಬಸ್ ಬರುತ್ತಿದ್ದ ವೇಳೆ ಕೆಆರ್ ಪೇಟೆ ತಾಲೂಕಿನ ಕುಂದಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರಕ್ಕೆ ಡಿಕ್ಕಿಯಾಗಿದೆ. ಪ್ರಯಾಣಿಕರ ಪೈಕಿ ಹೆಚ್ಚು ಶಾಲಾ–ಕಾಲೇಜಿನ ವಿದ್ಯಾರ್ಥಿಗಳೇ ಇದ್ದು, ಹಲವರ ಕೈ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನವದೆಹಲಿ: ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆಯುವುದು ಮತ್ತು ಮುಗಿಸುವುದು ಬಿಜೆಪಿಯ ಕನಸಾಗಿರುವುದರಿಂದ ದೇಶದ ಭವಿಷ್ಯವು ಅನಿಶ್ಚಿತವಾಗಿದೆ ಎಂದು ಶಿವಸೇನಾ(ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ. ರಾಹುಲ್ ಗಾಂಧಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಮತದಾರರು ಮತ್ತು ಇವಿಎಂ ವಂಚನೆಯನ್ನು ಉಲ್ಲೇಖಿಸಿ ಮಾತನಾಡಿದರು. ದೇಶದಲ್ಲಿ ಮತದಾರರ ಮತ್ತು ಇವಿಎಂ ವಂಚನೆಯ ನಡುವೆ ನಮ್ಮ ಮತ ಎಲ್ಲಿಗೆ ಹೋಗುತ್ತಿದೆ ಎಂದು ನಮಗೆ ತಿಳಿಯುತ್ತಿಲ್ಲ. ಇಂದು ನಮ್ಮ ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆಯುತ್ತಿವೆಯೇ? ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ ಎಂದು ಭಾವಿಸುತ್ತೇವೆ. ಆದರೆ ಅದು ಇನ್ನು ಮುಂದೆ ಪ್ರಜಾಪ್ರಭುತ್ವವಲ್ಲ. ನಮಗೆ ಮತ್ತು ಕೇಜ್ರಿವಾಲ್ ಜಿ ಹಾಗೂ ಕಾಂಗ್ರೆಸ್‌ಗೆ ಏನಾಯಿತು ಎಂಬುದು ಭವಿಷ್ಯದಲ್ಲಿ ನಿತೀಶ್ ಜಿ, ಆರ್‌ಜೆಡಿ ಮತ್ತು ಚಂದ್ರಬಾಬು ನಾಯ್ಡು ಅವರಿಗೆ ಆಗಬಹುದು ಎಂದು ಅವರು ಹೇಳಿದರು. ದೇಶದ ಪ್ರಜಾಪ್ರಭುತ್ವ ಹಾಳು ಮಾಡಿದಂತೆಯೇ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು…

Read More

ತುಮಕೂರು: ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಪೈಪೋಟಿಯನ್ನು ಗಮನದಲ್ಲಿಟ್ಟುಕೊಂಡು ಯುವಜನತೆ ತಮ್ಮ ಕ್ರಿಯಾಶೀಲತೆ, ನೈಪುಣ್ಯತೆಯನ್ನು ಮತ್ತು ಸಂವಹನ ಕಲೆಯನ್ನು ದೂರದೃಷ್ಟಿಯನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬಾಸ್ ಸಂಸ್ಥೆಯ ಅಖಿಲ ಭಾರತ ಮಟ್ಟದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‌ಆರ್ ವಿಭಾಗ) ವಿಭಾಗದ ಮುಖ್ಯಸ್ಥೆ ಸಾಕಿನ ಬಕ್ಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾಹೇ ಮತ್ತು ಬಾಸ್ ಸಂಸ್ಥೆಯ ಸಹಯೋಗಲದಲ್ಲಿ ಏರ್ಪಡಿಸಲಾಗಿದ್ದ ‘ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಉದ್ಯೋಗ ಮೇಳದಂತಹ ಸಮಾಜಮುಖಿ ಕಾರ್ಯಕ್ರಮಗಳು ಅತ್ಯಂತ ಪ್ರಶಂಸನೀಯವಾಗಿವೆ. ಇವತ್ತಿನ ಯುವಜನತೆ ತಮ್ಮ ಕ್ರಿಯಾಶೀಲತೆ ಮತ್ತು ಸಂವಹನ ಕಲೆಯನ್ನು ಅತ್ಯಂತ ದೂರದೃಷ್ಟಿಯನ್ನು ಇಟ್ಟುಕೊಂಡು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಮಾತನಾಡಿ, ಇಂದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಕಾಶಗಳು ಸಾಕಷ್ಟಿದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳನ್ನು ಅವಶ್ಯಕತೆಗೆ ತಕ್ಕಂತೆ ಬಳಸಿಕೊಂಡು ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಿ ಎಂದು ಹೇಳಿದರು. ಸಾಹೇ ಕುಲಸಚಿವರಾದ…

Read More

ತುಮಕೂರು:  ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಕಳೆದರೂ ಜೀತ ಪದ್ಧತಿ ಇನ್ನೂ ಜೀವಂತವಾಗಿರುವುದು ಶೋಚನೀಯ ಸಂಗತಿ. ಆರ್ಥಿಕವಾಗಿ ಹಿಂದುಳಿದವರು ಜೀತ ಪದ್ಧತಿಗೆ ಒಳಗಾಗುತ್ತಾರೆ. ಜೀತ ಪದ್ಧತಿಯಿಂದ ಮಾನವ ಹಕ್ಕುಗಳಿಗೆ ಚ್ಯುತಿಯುಂಟಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಜೀತ ಪದ್ಧತಿ, ಸತಿ ಸಹಗಮನ, ಅಸ್ಪೃಶ್ಯತೆ, ಮಾನವ ಕಳ್ಳಸಾಗಾಣಿಕೆ, ಮ್ಯಾನ್ಯುಯಲ್ ಸ್ಕ್ಯಾಯವೆಂಜಿಂಗ್‌ ಗಳಂತಹ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವಲ್ಲಿ ಯಶಸ್ವಿ ಹೆಜ್ಜೆಗಳನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು. ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯು 1976ರಲ್ಲಿ ಜಾರಿಗೆ ತರಲಾಗಿದ್ದು, ಕಾಯ್ದೆಯ ಅನುಷ್ಟಾನದ ಜವಾಬ್ದಾರಿಯನ್ನು ಎಲ್ಲ ಅಧಿಕಾರಿಗಳಿಗೆ ನೀಡಲಾಗಿದೆ. ಜೀತ ಪದ್ಧತಿಗೆ ಬಡತನವೇ ಮುಖ್ಯ…

Read More