Subscribe to Updates
Get the latest creative news from FooBar about art, design and business.
- ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
- ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
Author: admin
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಸಿಂಡಿಕೇಟ್ ಸದಸ್ಯ ಪ್ರೊ.ಕೆ.ಜಿ.ಪರಶುರಾಮ ಅವರು ಸಂತಶ್ರೇಷ್ಠ ಕನಕದಾಸ ಜಯಂತಿಯ ಗೌರವ ಸನ್ಮಾನಕ್ಕೆ ಭಾಜನರಾಗಿದ್ದಾರೆ. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸಾಹಿತ್ಯ ಪರಿಷತ್ ಪ್ರೊ. ಪರಶುರಾಮ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಮಕೂರು ವಿಶ್ವವಿದ್ಯಾನಿಲಯವು ವಿಶೇಷ ಘಟಕ ಯೋಜನೆಯಡಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ’ದಲ್ಲಿ ಈ ಗೌರವ ಪ್ರದಾನ ಮಾಡಲಾಯಿತು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ನಿವೃತ್ತ ನ್ಯಾಯಾಧೀಶ ಬಾಬಾ ಸಾಹೇಬ್ ಜಿನರಾಳ್ಕರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರೊ. ಪರಶುರಾಮ ಅವರು 24 ವರ್ಷಗಳ ಬೋಧನೆ ಹಾಗೂ ಸಂಶೋಧನೆ ಅನುಭವವನ್ನು ಹೊಂದಿದ್ದು ಪ್ರಸ್ತುತ ಭಾರತೀಯ ಸಮಾಜಕಾರ್ಯ ವೃತ್ತಿಪರರ ಸಂಘದ…
ತುಮಕೂರು: ಜಿಲ್ಲಾಸ್ಪತ್ರೆಯಲ್ಲಿರುವ ಹಳೆಯ ಕಟ್ಟಡಗಳನ್ನು ಕೆಡವಿ ಸುಸಜ್ಜಿತ ಹೊಸ ಕಟ್ಟಡ ಹಾಗೂ ವೈದ್ಯಕೀಯ ಕಾಲೇಜು ನಿರ್ಮಿಸಲು ಉದ್ದೇಶಿಸಿರುವ ಜಿಲ್ಲಾಸ್ಪತ್ರೆ ಆವರಣಕ್ಕೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ(ಕೆಎಂಇಆರ್ ಸಿ)ದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್. ಬಿಜ್ಜೂರು ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟಡ ನಿರ್ಮಾಣದ ನೀಲ ನಕ್ಷೆಯ ಬಗ್ಗೆ ವಿವರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಜಿಲ್ಲೆಯ ಕಮಲನಗರ ತಾಲ್ಲೂಕಿನ ಠಾಣಕುಶನೂರು ಗ್ರಾಮದ ಮುಖಂಡ ಹಾಗೂ ಪತ್ರಕರ್ತ ರವಿ ವಲ್ಲಾಪುರೆ ಅವರ ಮಾವನವರಾದ ಕಂಟೆಪ್ಪಾ ಜಿರ್ಗೆ (65) ಅವರು ಪ್ರಯಾಗರಾಜ್ ಕುಂಭಮೇಳಕ್ಕೆ ಹೋಗಿ, ವಾಪಸ್ ಆಗುತ್ತಿದ್ದ ವೇಳೆ ಉತ್ತರ ಪ್ರದೇಶದ ಕಾಶಿಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ಮೃತರಾಗಿದ್ದಾರೆ. ಮೃತರು ಧರ್ಮಪತ್ನಿ, ಮೂರು ಜನ ಅಣ್ಣಂದಿರು, ಓರ್ವ ತಮ್ಮ, ಮೂವರು ಅಕ್ಕಂದಿರು, ನಾಲ್ಕು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗ ಸಮೇತ ಅಪಾರ ಬಳಗವನ್ನು ಅಗಲಿದ್ದಾರೆ. ಇಂದು ನಾಲ್ಕು ಗಂಟೆಗೆ ಸ್ವಗ್ರಾಮ ಕುಕನೂರಿನ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಗುರುತಿಸಿ ಮಾರ್ಚ್ 31ರೊಳಗಾಗಿ ಒತ್ತುವರಿಯನ್ನು ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸುವ ಕುರಿತ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಕೆರೆಗಳನ್ನು ಸಂರಕ್ಷಿಸುವ ಯೋಜನೆಗಳನ್ನು ಕೈಗೊಳ್ಳುಬೇಕು. ಕೆರೆಗಳ ಅತಿಕ್ರಮಣ ಅಥವಾ ಒತ್ತುವರಿ ಮಾಡಿದವರಿಗೆ ನೋಟಿಸ್ ನೀಡಿ ಒತ್ತುವರಿಯನ್ನು ತೆರವುಗೊಳಿಸುವ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳಿಂದ ಹರಿಯುವ ತ್ಯಾಜ್ಯ ಮತ್ತು ಮಲಿನಗೊಂಡ ನೀರು ಕೆರೆಗಳಿಗೆ ಸೇರಿ ಮಲಿನವಾಗದಂತೆ ಅಗತ್ಯ ಮುನ್ಸೂಚನೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ ಮುಂತಾದ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2061 ಕೆರೆಗಳಿದ್ದು, ಅದರಲ್ಲಿ 874 ಕೆರೆಗಳು ಒತ್ತುವರಿಯಿಂದ ಮುಕ್ತಗೊಂಡಿವೆ. ಒತ್ತುವರಿ ಗುರುತಿಸಿರುವ ಕೆರೆಗಳನ್ನು ತೆರವುಗೊಳಿಸಲು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಕೆರೆಗಳನ್ನು…
ತುಮಕೂರು: ಗಣಿಬಾಧಿತ ಕುಟುಂಬಗಳಿಗೆ ಆದ್ಯತೆ ಮೇರೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ(ಕೆಎಂಇಆರ್ ಸಿ)ದ ವ್ಯವಸ್ಥಾಪಕ ನಿರ್ದೇಶಕ ಡಾ. ಸಂಜಯ್ ಎಸ್. ಬಿಜ್ಜೂರ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ನಡೆದ ಕೆಎಂಇಆರ್ ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಹಲವಾರು ಕುಟುಂಬಗಳಿಗೆ ತೊಂದರೆಯುಂಟಾಗುತ್ತಿದ್ದು, ಗಣಿಬಾಧಿತ ಕುಟುಂಬಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸರ್ಕಾರವು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಮೂಲಕ ರಾಜ್ಯದ ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರ ಪುನಶ್ಚೇತನ ಮತ್ತು ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಸಮಗ್ರ ಪರಿಸರ ಯೋಜನೆ ಮತ್ತು ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ (CEPMIZ) ಯೋಜನೆಯು ಪ್ರಮುಖವಾಗಿದ್ದು, ಈ ಯೋಜನೆಯಡಿ ಗಣಿಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ಜನರ ಜೀವನ ಮಟ್ಟದ ಸುಧಾರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಗಣಿಬಾಧಿತ ಯೋಜನೆಗಳನ್ನು ಕಲ್ಪಿಸಬೇಕು.…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಫೆಬ್ರವರಿ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕೆ.ಜಿ.ಟೆಂಪಲ್, ಉಂಗ್ರ, ಶೆಟ್ಟಿಗೊಂಡನಹಳ್ಳಿ, ಕಲ್ಲೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕಂಟೈನರ್ ಲಾರಿಗೆ ಹಿಂಬದಿಯಿಂದ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕನಿಗೆ ಕಾಲು ಮುರಿತ, ಬಸ್ ಚಾಲಕ ಹಾಗೂ ಗರ್ಭಿಣಿ ಸೇರಿದಂತೆ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ ತುಮಕೂರು ತಾಲೂಕಿನ ನಂದಿಹಳ್ಳಿ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ಹೊಸದುರ್ಗ ಕಡೆಗೆ ತೆರಳುತ್ತಿದ್ದ KSRTC ಬಸ್ ಆಗಿದೆ. ನಂದಿಹಳ್ಳಿ ಬಳಿ ಕಂಟೈನರ್ ಲಾರಿ ಸಡನ್ ಬ್ರೇಕ್ ಹೊಡೆದ ಪರಿಣಾಮ ಕಂಟೈನರ್ ಲಾರಿಗೆ ಹಿಂಬದಿಯಿಂದ KSRTC ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ KSRTC ಬಸ್ ಮುಂಭಾಗ ಜಖಂಗೊಂಡಿದೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಹೆಚ್.ಡಿ.ಕೋಟೆ: ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ಹುಟ್ಟುಹಬ್ಬವನ್ನು ಸಮಾಜ ಸೇವಾ ಕಾರ್ಯಗಳ ಮೂಲಕ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಆಚರಿಸಿದ್ದರು. ಪಟ್ಟಣದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ, ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಮಾಡಿ, ಚಿತ್ತಧಾಮದಲ್ಲಿ ವಿಶೇಷ ಚೇತನರಿಗೆ ಊಟದ ವ್ಯವಸ್ಥೆ ಸೇರಿದಂತೆ ಅನೇಕಕಾರ್ಯಕ್ರಮಗಳನ್ನು ಕಾರ್ಯಕರ್ತರು, ಮುಖಂಡರು ಒಟ್ಟಾಗಿ ಆಚರಿಸಿದ್ದರು. ಹುಟ್ಟುಹಬ್ಬ ಆಚರಿಸಿ ಮಾತನಾಡಿದ ಜಯಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ್ ಗೌಡ, ಪ್ರತಿ ವರ್ಷ ಅನಿಲ್ ಚಿಕ್ಕಮಾದು ಸಾಹೇಬರ ಹುಟ್ಟುಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು, ಈ ವರ್ಷ ಯಾವುದೇ ವಿಜೃಂಭಣೆ ಆಚರಣೆ ಬೇಡ ಎಂದು ಶಾಸಕರ ಸೂಚನೆಯಂತೆ ಜನರಿಗೆ ಅನುಕೂಲ ಆಗುವಂತೆ ಆಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಚಿಕ್ಕಮಾದು ಅಭಿಮಾನಿ ಬಳಗದ ಅಧ್ಯಕ್ಷ ಜಿನಹಳ್ಳಿ ರಾಜನಾಯಕ, ಮಾತನಾಡಿ, ಎರಡು ತಾಲೂಕಿನ ಅಭಿಮಾನಿಗಳು ಕಾರ್ಯಕರ್ತರು, ಮುಖಂಡರು ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದು, ಮೊದಲಿನಿಂದಲೂ ಸಹ ಅವರ ಹುಟ್ಟು…
ಬೀದರ್: ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು. ಬೀದರ್ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ರೋಗಿಗಳ ಕೋಣೆ ವೀಕ್ಷಿಸಿ, ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ, ಕುಡಿಯುವ ನೀರು ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ರೋಗಿಗಳ ಜೊತೆ ಮಾತನಾಡಿದ ಅವರು, ರೋಗಿಗಳಿಗೆ ಇರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ, ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮತ್ತು ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದರು. ಬ್ರಿಮ್ಸ್ ನ ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರ ಜೊತೆ ಚರ್ಚೆ ನಡೆಸಿ ಕುಂದುಕೊರತೆ ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಅದಕ್ಕೆ ಅಗತ್ಯ ವಿರುವ ಪರಿಹಾರದ ಬಗ್ಗೆ ಸರ್ಕಾರಕ್ಕೆ ತಿಳಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕ ಡಾ.ಶಿವುಕುಮಾರ ಶೆಟ್ಕರ್, ಬ್ರಿಮ್ಸ್ ಡೀನ್ ಶಾಂತಲಾಕೌಜಲ್ಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಘಮಸುಬಾಯಿ ತಾಂಡಾ ಬೋಂತಿಯಲ್ಲಿರುವ ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಿಯ ಜಾತ್ರಾ ಮಹೋತ್ಸವ ಸೋಮವಾರದಿಂದ ಆರಂಭವಾಗಿದೆ. ಔರಾದ್ (ಬಿ) ಕ್ಷೇತ್ರದ ಶಾಸಕರಾದ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಪೂಜೆ, ಅರ್ಚನೆ, ಅಭಿಷೇಕ ಹೋಮ ಹವನಗಳು ನಡೆದವು. ಜಾತ್ರೆ ಪ್ರಯುಕ್ತ ಆಗಮಿಸಿದ್ದ ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತು, ಬೊಂತಿ ತಾಂಡಾದಲ್ಲಿ ಶಾಸಕರ ಜೊತೆ ಹಾಡಿ ಕುಣಿದು ಕುಪ್ಪಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4