Subscribe to Updates
Get the latest creative news from FooBar about art, design and business.
- ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
- ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
Author: admin
ಬೀದರ್: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಿಂದ ದಾವಿದ ಕೆಂಪೆ ಆಯ್ಕೆಯಾಗಿದ್ದಾರೆ. ದಾವಿದ ಕೆಂಪೆ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ದಾಖಲಿಸಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ದಾಖಲಿಸಿದ ಬಳಿಕ ಮಾತನಾಡಿದ ಅವರು, ಈ ಗೆಲುವಿನ ಮೂಲಕ ನನ್ನ ರಾಜಕೀಯ ಜೀವನದಲ್ಲಿ ಮುಂದೆ ಸಾಗಲು ಅವಕಾಶ ಮಾಡಿಕೊಟ್ಟ ಯುವ ಸಮೂಹಕ್ಕೆ ಧನ್ಯವಾದಗಳನ್ನು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಬೀದರ್ ಸಂಸದರಾದ ಸಾಗರ ಖಂಡ್ರೆ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಗಟ್ಟಿಗೊಳ್ಳಿಸಲು ನಾನು ಶ್ರಮ ವಹಿಸುತ್ತೇನೆ ಎಂದು. ದಾವಿದ ಕೆಂಪೆ ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಬಾಲಕರ ಸರ್ಕಾರಿ ವಸತಿ ಶಾಲೆಯಲ್ಲಿ ವಿಷಹಾರ ಸೇವಿಸಿ 14 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ , ಚಿಕಿತ್ಸೆ ನೀಡಲಾಗುತ್ತಿದೆ. ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಚಿಕನ್ ಅನ್ನು ಮಕ್ಕಳಿಗೆ ನೀಡಲಾಗಿತ್ತು. ನಂತರ ಇಂದು ಬೆಳಗ್ಗೆ ತಿಂಡಿ ತಿಂದ ತಕ್ಷಣ ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಬಳಲತೊಡಗಿದರು. ತಕ್ಷಣ ಅವರೆಲ್ಲರನ್ನು ಶಿರಾ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಲಾಗುತ್ತಿದೆ. ವೈದ್ಯಕೀಯ ಮೂಲಗಳ ಪ್ರಕಾರ ರಾತ್ರಿ ಸೇವಿಸಿದ ಮಾಂಸಹಾರ ಒಂದು ರೀತಿ ವಿಷಾಹಾರವಾಗಿರ ಬಹುದು ಎಂದು ಅಂದಾಜಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ: ಇತ್ತೀಚಿನ ದಿನಗಳಲ್ಲಿ ಬ್ಯಾಂಕ್, ಸೈಬರ್ ಕಳ್ಳತನ ಹೆಚ್ಚು ಆಗುತ್ತಿದೆ. ಈ ಸೈಬರ್ ಆನ್ಲೈನ್ ಕಳ್ಳರ ಕಾಟದಿಂದ ಪಾರಾಗಲು ಬ್ಯಾಂಕ್ ಗ್ರಾಹಕರಿಗೆ ಅರಿವು ಮೂಡಿಸುವ ಸಲುವಾಗಿ ಬ್ಯಾಂಕುಗಳಿಗೆ ಜನಸ್ನೇಹಿ ಪೊಲೀಸ್ ಚೇತನ್ ಕುಮಾರ್ ಭೇಟಿ ನೀಡಿದರು. ಬ್ಯಾಂಕ್ ಗಳಿಗೆ ಧಿಡೀರ್ ಭೇಟಿ ಸಬ್ ಇನ್ಸ್ಪೆಕ್ಟರ್ ಚೇತನ್ ಅರಿವು ಮೂಡಿಸಿದರು. ಅಪರಿಚಿತ ವ್ಯಕ್ತಿಗಳಿಗೆ ಓಟಿಪಿ ನಂಬರ್ ನೀಡಬಾರದು, ಎಟಿಎಂ ಕಾರ್ಡ್ ನೀಡಬಾರದು ಅನುಮಾನಾಸ್ಪದ ವ್ಯಕ್ತಿಗಳು ಕಂಡರೇ ಕೂಡಲೇ 112 ನಂಬರ್ ಗೇ ಕರೆ ಮಾಡಲು ಗ್ರಾಹಕರಿಗೆ ಅವರು ಮಾಹಿತಿ ನೀಡಿದರು. ಎಟಿಎಂನಲ್ಲಿ ಹಣ ತೆಗೆದುಕೊಳ್ಳುವಾಗ ಏನಾದರೂ ಅಡಚಣೆ ಆದರೆ ಕೂಡಲೆ ಬ್ಯಾಂಕ್ ಮ್ಯಾನೇಜರ್ ಗೆ ತಿಳಿಸಿ. ಅಪರಿಚಿತರಿಗೆ ನಿಮ್ಮ ಎಟಿಎಂ ಕಾರ್ಡ್ ನೀಡಬಾರದು ಎಂದು ಗ್ರಾಹಕರಿಗೆ ಅರಿವು ಮೂಡಿಸಿದರು. ಇನ್ನು ಎಟಿಎಂ ಗಳಲ್ಲಿ ಭದ್ರತಾ ಸಿಬ್ಬಂದಿ ಇಲ್ಲದೆ ಇದ್ದರೆ ಅಂತಹ ಎಟಿಎಂಗಳು ರಾತ್ರಿ ಸಮಯದಲ್ಲಿ ಸರಿಯಾದ ಸಮಯಕ್ಕೆ ಮುಚ್ಚಲು ಬ್ಯಾಂಕ್ ಮ್ಯಾನೇಜರ್ ಗಳಿಗೆ ತಿಳಿಸಿದರು. ಇನ್ನು ಯಾರಾದರೂ ಬ್ಯಾಂಕ್ ಒಳಗೆ ಹೊರಗೆ ಅನುಮಾನಾಸ್ಪದ…
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಾಘ ಪೂರ್ಣಿಮೆ ನಿಮಿತ್ತ ಇಂದು (ಬುಧವಾರ) ಪುಣ್ಯ ಸ್ನಾನ ನಡೆಯುತ್ತಿದೆ. ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಿಂದಲ ಅವಲೋಕನ ನಡೆಯುತ್ತಿದ್ದಾರೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಲಖನೌದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿರುವ ವಾರ್ ರೂಮ್ ನಲ್ಲಿ ಬೆಳಿಗ್ಗೆ 4 ಗಂಟೆಯಿಂದ ಮಾಘಿ ಪೂರ್ಣಿಮಾ ಸ್ನಾನವನ್ನು ವೀಕ್ಷಣೆ ಮಾಡುತ್ತಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ (ಗೃಹ) ಸಂಜಯ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು ಕೂಡ ವಾರ್ ರೂಮ್‌ನಲ್ಲಿ ಮುಖ್ಯಮಂತ್ರಿಗಳಿಗ ಸಾಥ್ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ದೆಹಲಿಯ ಗೆಲುವು ನಮಗೆ ಮಾದರಿಯಾಗಬೇಕು, ಕರ್ನಾಟಕ ಬಿಜೆಪಿಯ ಒಳಜಗಳ ಮುಗಿದು, ಕಾರ್ಯಪದ್ಧತಿಯಲ್ಲಿ ಸ್ಪಷ್ಟತೆ ಮತ್ತು ಶಿಸ್ತು ಇರಬೇಕು ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಸಲಹೆ ನೀಡಿದ ಅವರು, ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಪರಿಶ್ರಮದಿಂದ ಎಂದ ಅವರು,, ಸಂಘಟನೆ ಮತ್ತು ಜನಪರ ರಾಜಕೀಯದ ಫಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯ ಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು ಎಂದರು. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ, ಸುಸಂಘಟಿತ ಪ್ರಚಾರ ತಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು. ಈ ಗೆಲುವು ಜನತೆಯ ಆಶೀರ್ವಾದ ಹಾಗೂ ನಾವೇ ಅನುಸರಿಸಬೇಕಾದ ಮಾರ್ಗದರ್ಶನವನ್ನು ಒದಗಿಸುತ್ತಿದೆ ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ಆಂತರಿಕ ಕಲಹ ಮತ್ತು…
ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಕುಶನೂರ ಪೊಲೀಸ್ ಠಾಣೆಯ ಪಿ.ಎಸ್.ಐ. ಸುಖಾನಂದ ತಮ್ಮ ಅಧಿಕಾರಿ ಸಿಬ್ಬಂದಿಯೊಂದಿಗೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಜಾಗೃತಿ ಮೂಡಿಸಿದರು. ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿರುವ ಸವಾರರನ್ನು ತಡೆದು, ದಂಡ ಪಾವತಿಸುವ ಬದಲು ಹೆಲ್ಮೆಟ್ ಹಾಗೂ ಗುಲಾಬಿ ಹೂವು ನೀಡಿ ರಸ್ತೆ ಸುರಕ್ಷತೆಯ ಬಗ್ಗೆ, ಹೆಲ್ಮೆಟ್ ಧರಿಸುವಿಕೆಯ ಮಹತ್ವದ ಬಗ್ಗೆ ತಿಳಿ ಹೇಳಲಾಯಿತು. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಮಾಣ ಇಳಿಸಲು, ಪ್ರಾಣ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಕುಶನೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ಈ ಕಾರ್ಯಕ್ರಮ ಸಾರ್ವಜನಿಕರು ಮೆಚ್ಚುಗೆಗೆ ಪಾತ್ರವಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ಕಲ್ಪತರು ಕ್ರೀಡಾಂಗಣದಲ್ಲಿ ಜನಸ್ಪಂದನ ಹಾಗೂ ಕ್ರೀಡಾ ಸಂಘದ ನೇತೃತ್ವದಲ್ಲಿ ಫೆಬ್ರುವರಿ 13 ರಿಂದ 4 ದಿನಗಳ ಕಾಲ ನಡೆಯುವ ಪುರುಷರು ಹಾಗೂ ಮಹಿಳೆಯರ ಒನಲುಬೆಳಕಿನ ಅಂತರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಸಂಪೂರ್ಣವಾಗಿ ಅಲಂಕಾರಗೊಂಡಿದೆ ಎಂದು ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ನವೀನ್ ತಿಳಿಸಿದರು. ಈ ಕ್ರೀಡಾಕೂಟಕ್ಕೆ ಅಂತರರಾಷ್ಟ್ರೀಯ ವಾಲಿಬಾಲ್ ತಂಡಗಳಾದ ಕೇರಳ ಪೊಲೀಸ್, ವಾಯು ಸೇನೆ, ಹಾಗೂ ಭಾರತೀಯ ಭೂಸೇನೆ, ಹಾಗೂ ಅನೇಕ ಕ್ರೀಡಾ ತಂಡಗಳು ಭಾಗವಹಿಸಲಿದ್ದು, 13ರಂದು ಸಂಜೆ 6 ಗಂಟೆಗೆ ಶಾಸಕ ಕೆ., ಷಡಕ್ಷರಿ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಸಚಿವ ಮಾಧುಸ್ವಾಮಿ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ವಾಲಿಬಾಲ್ ಆಟಗಾರರಿಗೆ ಸನ್ಮಾನ, ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಇದೇ ಎರಡನೇ ದಿನ ಇಂಡಿಯನ್ ಕೋಕೋ ಫೆಡರೇಶನ್ ಉಪಾಧ್ಯಕ್ಷರು ಹಾಗೂ ರಾಜ್ಯ ಕೋಕೋ ಫೆಡರೇಶನ್ ಅಧ್ಯಕ್ಷ ಲೋಕೇಶ್ವರ್ ಉದ್ಘಾಟಿಸಲಿದ್ದಾರೆ, ಜನಸ್ಪಂದನ ಸಂಸ್ಥೆಯ ಅಧ್ಯಕ್ಷ ಸಿ.ಬಿ.ಶಶಿಧರ್ ರವರು ಆಟಗಾರರನ್ನು ಸನ್ಮಾನಿಸಲಿದ್ದು, 16ನೇ ತಾರೀಕು ಕಡೆಯ ದಿನ ರಾಜ್ಯ ರೈಲ್ವೆ…
ಹಾವೇರಿ: ಬೈಕ್ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಕಳೆದ ರಾತ್ರಿ ನಡೆದಿದೆ. ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕಳೆದ ರಾತ್ರಿ ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕತ್ತಲಲ್ಲಿ ಎತ್ತಿನಗಾಡಿ ಕಾಣದ ಹಿನ್ನೆಲೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ರಸ್ತೆಗೆ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ಉದಯಗಿರಿ ಗಲಭೆಯಲ್ಲಿ ಪೊಲೀಸರ ತಪ್ಪಿಲ್ಲ, ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಅವರು ಹೇಳಿದರು. ರಾಜಣ್ಣ ಅವರ ಹೇಳಿಕೆಗೆ ಸಿಎಂ 8—10 ದಿನಗಳಲ್ಲಿ ಪ್ರತಿಕ್ರಿಯೆ ಕೊಡುತ್ತಾರೆ. ಕಲ್ಲು ಎಸೆದಿರುವವರೆಲ್ಲರೂ 14, 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ಕಂಟ್ರೋಲ್ ಮಾಡಿದ್ದಾರೆ. ಪೊಲೀಸರಿಗಾದರೆ ಪ್ರೊಟೆಕ್ಷನ್ ಇತ್ತು, ಅಲ್ಲಿದ್ದ ಜನರಿಗೆ ಇರಲಿಲ್ಲ. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು, 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ ಎಂದರು. ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು BMRCL ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…