Subscribe to Updates
Get the latest creative news from FooBar about art, design and business.
- ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
- ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
Author: admin
ಮೈಸೂರು: ನನ್ನ ಮದುವೆಗೆ ದರ್ಶನ್ ಬಂದರೆ ನನಗೆ ತುಂಬಾ ಸಂತೋಷ, ಈಗಿನ ಪರಿಸ್ಥಿತಿಯಲ್ಲಿ ಅವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟಪಡಿಸಿದ್ದಾರೆ. ಫೆ.15 ಮತ್ತು 16ರಂದು ಡಾಲಿ ಧನಂಜಯ್ ವಿವಾಹ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಮದುವೆಗೆ ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ ಅವರನ್ನು ಕರೆಯುವ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಅವರು ಸಿಗುತ್ತಿಲ್ಲ, ಅವರು ಮದುವೆಗೆ ಬಂದರೆ ನನಗೆ ಸಂತೋಷ ಎಂದಿದ್ದಾರೆ. ಮಂತ್ರ ಮಾಂಗಲ್ಯ, ವಚನ ಮಾಂಗಲ್ಯ ಅಥವಾ ರಿಜಿಸ್ಟರ್ ಮದುವೆ ಆಗುವ ಆಸೆಯಿತ್ತು. ಆದರೆ ನಮ್ಮ ಕುಟುಂಬದ ಸದಸ್ಯರು, ಚಿತ್ರರಂಗ, ಸ್ನೇಹಿತರು ಎಲ್ಲರಿಗೂ ಊಟ ಹಾಕಿಸಬೇಕು. ಹೀಗಾಗಿ ಒಂದೇ ವೇದಿಕೆಯಲ್ಲಿ ಎಲ್ಲರಿಗೂ ಊಟ ಹಾಕಿ ಆಶೀರ್ವಾದ ಪಡೆಯೋಣ ಎನ್ನುವ ಆಸೆಯಿಂದ ಇಲ್ಲಿ ಮದುವೆ ಆಗುತ್ತಿದ್ದೇವೆ ಎಂದು ಧನಂಜಯ್ ತಿಳಿಸಿದರು. ಅಭಿಮಾನಿಗಳು ಹಾಗೂ ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಒಂದೇ ರೀತಿಯ ಊಟದ ವ್ಯವಸ್ಥೆ ಇರುತ್ತದೆ…
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಮುಖ, ತಲೆ ಸೇರಿದಂತೆ ವಿವಿಧ ಭಾಗಗಳಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ತಾಲೂಕಿನ ಕಾರನಾಗನಹಟ್ಟಿ ಗ್ರಾಮದಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಗ್ರಾಮದ ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಹುಲ್ಲಿನ ಬಣವೆ ಸಮೀಪದಲ್ಲಿ ಕಟ್ಟಿ ಹಾಕಿದ್ದ ಐದು ಹಸುಗಳ ಪೈಕಿ ಒಂದು ಹಸು ಸಜೀವ ದಹನವಾಗಿದೆ. ಮತ್ತೊಂದು ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಹಸುಗಳನ್ನು ರಕ್ಷಿಸಲು ಬೆಂಕಿಗೆ ನುಗ್ಗಿದಂತಹ ರೈತ ಬಡನಾಗಪ್ಪ ಅವರಿಗೆ ಸುಟ್ಟ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ರಾಸುಗಳ ಮೇವಿಗಾಗಿ ಸಂಗ್ರಹಿಸಿದ್ದ ಎರಡು ದೊಡ್ಡ ಹುಲ್ಲಿನ ಬಣವೆಗಳು ಸುಟ್ಟು ಹೋಗಿದ್ದು, ಇದರ ಪಕ್ಕದ ತೋಟದ ಮನೆಯಲ್ಲಿ ಶೇಖರಿಸಿದ್ದ ಶೇಂಗಾ, ಭತ್ತ ಹಾಗೂ ಇತರ ದವಸ ಧಾನ್ಯಗಳು ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿವೆ. ಸಮೀಪದ ಬೆಟ್ಟಕ್ಕೆ ಹತ್ತಿಕೊಂಡಿದ್ದ ಬೆಂಕಿ ಏಕಾಏಕಿ ಇವರ ಹುಲ್ಲಿನ ಬಣವೆಗಳಿಗೆ ಆವರಿಸಿದೆ ಇದರಿಂದಾಗಿ ಸುಮಾರು ನಾಲ್ಕೈದು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಹೊರಕೆರಪ್ಪ…
ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಯನ್ನು ಏಪ್ರಿಲ್ 5ರಂದು ನಡೆಯುವ ಡಾ.ಬಾಬು ಜಗಜೀವನರಾಂ ಹಾಗೂ ಏಪ್ರಿಲ್ 14ರಂದು ನಡೆಯುವ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯಂದು ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 27ರೊಳಗಾಗಿ ಕೊರಟಗೆರೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು (ಗ್ರೇಡ್-2) ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ಕೆರೆಯಲ್ಲಿ ಮುಖತೊಳೆಯಲು ಹೋದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ತಿಪಟೂರು ತಾಲೂಕಿನ ಕಸಬಾಹೋಬಳಿ ಮತ್ತಿಹಳ್ಳಿಯಲ್ಲಿ ನಡೆದಿದೆ. ಯುವಕ ಮುಖ ತೊಳೆಯಲು ಹೋಗಿದ್ದ ವೇಳೆ ಯುವಕ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ ಎಂದು ಹೇಳಲಾಗಿದೆ. ಮೃತಪಟ್ಟ ಯುವಕನನ್ನು ಗ್ರಾಮದ ದಯಾನಂದ್(19) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಗಾಗಿ ಗ್ರಾಮೀಣ ನಿರುದ್ಯೋಗಿ ಯುವಕ–ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯನ್ನು ಫೆಬ್ರವರಿ 21 ರಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9380162042ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
ನವದೆಹಲಿ: ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೇ ಲೈನ್ ಗೆ ಸಂಬಂಧಪಟ್ಟ ಭಾಗವಾದ ತಿಮ್ಮರಾಜನಹಳ್ಳಿ ಮತ್ತು ತಾವರೆಕೆರೆ ಮಧ್ಯದ ರೈಲ್ವೇ ಕಾಮಗಾರಿಗೆ ಸಂಬಂಧಪಟ್ಟಂತೆ, ರೈಲ್ವೇ ಬೋರ್ಡ್ ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಯನ್ನು ಅನುಮೋದಿಸಿ ಕೊಡಬೇಕೆಂದು ಕೇಂದ್ರ ಗೃಹ ಸಚಿವರಲ್ಲಿ ಕೋರಲಾಯಿತು. ಈ ಬಗ್ಗೆ, ಕೇಂದ್ರ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನನಗೆ ಅತೀವ ಸಂತಸ ತಂದಿದೆ. ಕರ್ನಾಟಕ ರಾಜ್ಯದ ಹಾಗೂ ವಿಶೇಷವಾಗಿ ತುಮಕೂರು ಜನತೆಯ ಪರವಾಗಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಅದ್ದೂರಿಯಾಗಿ ನೆರವೇರಿತು. ಈ ಪುಣ್ಯ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಯಿಂದಲೂ ಭಕ್ತರು ಆಗಮಿಸುತ್ತಾರೆ. ಮಾಗೋಡು ಶ್ರೀ ಕಂಬದ ರಂಗನಾಥ ಸ್ವಾಮಿ ಎಂದರೆ ಹೂವಿಗೆ ಪ್ರಸಿದ್ದಿಯಾಗಿದೆ. ಇಲ್ಲಿ ತಮ್ಮ ಇಷ್ಟಾರ್ಥ ಪ್ರಾಪ್ತಿಯಾದರೆ ಹೂವಿನ ತುಲಾಭಾರ ಸೇರಿದಂತೆ ಸಾವಿರಾರು ರೂ.ಗಳ ಹೂವನ್ನು ತಂದು ಶ್ರೀ ಕಂಬದ ರಂಗನಾಥಸ್ವಾಮಿ ರಥಕ್ಕೆ ಅರ್ಪಿಸುತ್ತಾರೆ. ರಥೋತ್ಸವದ ವೇಳೆ ರಥದ ತುಂಬೆಲ್ಲಾ ಹೂವಿನಿಂದ ತುಂಬಿರುತ್ತದೆ. ಇಲ್ಲಿ ಶ್ರೀ ರಂಗನಾಥ ಸ್ವಾಮಿಯು ಕಂಬದಲ್ಲಿ ಮೂಡಿರುವ ಕಾರಣಗಳಿಂದ ಕಂಬದರಂಗ ಎಂದು ಕರೆದು ಆರಾಧಿಸುತ್ತಾರೆ. ಇಲ್ಲಿಗೆ ಹೂವೆ ದೇವರಿಗೆ ಪ್ರಿಯವಾದ ವಸ್ತುವಾಗಿದೆ. ಹೂವಿನ ಹಾರವನ್ನು ತೇರಿಗೆ ಹಾಕುವುದು ವಾಡಿಕೆ ಮಾತ್ರವಲ್ಲ. ಭಕ್ತರು ತಮ್ಮ ಇಷ್ಟಾಥಗಳ ಈಡೇರಿಕೆಗೆ ಹರಕೆಯ ರೂಪದಲ್ಲಿ ಹೂವನ್ನು ಅಪಿಸುವುದು ಸಂಪ್ರದಾಯವಾಗಿದೆ. ಕಂಬದ ರೂಪದಲ್ಲಿ ಹೊರಬಂದ ಶ್ರೀಹರಿಯು ವೈಕುಂಠದಿಂದ ಧರೆಗಿಳಿದು ಬಂದು ಭಕ್ತರು ಕಷ್ಟ ಈಡೇರಿಸುತ್ತಾನೆಂದು ಭಕ್ತರು ಭಕ್ತಿಯಿಂದ ಹೂವು ಅರ್ಪಿಸುವುದು ವಾಡಿಕೆಯಾಗಿದೆ. ಪ್ರತಿ ವರ್ಷ ಮಾಘ…
ಕೊರಟಗೆರೆ: ಗುಡಿಸಲಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅತ್ತೆ ಸೊಸೆ ಗಾಯಗೊಂಡು, ಗುಡಿಸಲಿದ್ದ ನಾಲ್ಕು ಮೇಕೆ ಹಾಗೂ ದವಸ ಧಾನ್ಯ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕೊರಟಗೆರೆ ತಾಲೂಕಿನ ಬಿಡಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿ ಬಿ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಬಿಡಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿ.ಬಿ.ಪಾಳ್ಯ ಗ್ರಾಮದ ನಿವಾಸಿ ಶಿಲ್ಪಾ ಜಯರಾಮ್ ಅವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಪರಿಣಾಮವಾಗಿ ಗುಡಿಸಲಲ್ಲಿದ್ದ ನಾಲ್ಕು ಮೇಕೆಗಳು, ಧವಸ ಧಾನ್ಯ ಸೇರಿದಂತೆ ಎಲ್ಲವೂ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಮೇಕೆಗಳನ್ನು ಕಾಪಾಡಲು ಹೋದ ಅತ್ತೆ ಸೊಸೆ ಇಬ್ಬರಿಗೂ ಬೆಂಕಿ ತಗುಲಿ ಕೈ, ಕಾಲು ಕೆನ್ನೆಗೆ ಗಾಯಗಳಾಗಿವೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಿದ್ದಾರೆ. ಇನ್ನು ಬಡ ಕುಟುಂಬದ ಮಹಿಳೆಯರಿಬ್ಬರೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ . ಕುಟುಂಬದಲ್ಲಿ ಅತ್ತೆ ಸೊಸೆ ಮಗ ಹಾಗೂ ಇಬ್ಬರು ಶಾಲೆಗೆ ಹೋಗುವ ಮಕ್ಕಳಿದ್ದರು. ಇದೀಗ ಗುಡಿಸಲು ಬೆಂಕಿಗೆ ಆಹುತಿಯಾದ ಪರಿಣಾಮ…
ಮಧುಗಿರಿ : ಮಧುಗಿರಿ ತಾಲೂಕಿನ ಎಲ್ಲ ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳಿಂದ ಶಾಂತಿ ಸಹನೆಯಿಂದ ಮುಷ್ಕರ ನಡೆಯಿತು. ಗ್ರಾಮ ಆಡಳಿತ ತಾಲೂಕು ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾತನಾಡಿ, ಮೂಲಭೂತ ಸೌಲಭ್ಯಗಳು ನೀಡಬೇಕು, ತಾಂತ್ರಿಕ ವೇತನ ನೀಡಬೇಕು ಎಂದು ಮುಷ್ಕರ ಮಾಡುತ್ತಿದ್ದೇವೆ. ಐದು ನೂರು ಪ್ರಯಾಣ ಭತ್ಯೆ ನೀಡಿರುತ್ತಾರೆ, ಇದನ್ನು ಐದು ಸಾವಿರಕ್ಕೆ ಏರಿಸಬೇಕು ಎಂದು ಒತ್ತಾಯಿಸಿದರು. ಕಂದಾಯ ಇಲಾಖೆ ರೂಲ್ಸ್ ತೆಗೆದಿರುತ್ತಾರೆ, ಇದನ್ನು ಸರಿಪಡಿಸಬೇಕು. 22, 23 ವರ್ಷ ಆದರೂ ಪದನ್ನೊತಿ ನೀಡುತ್ತಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಮದುಗಿರಿ ಶೈಕ್ಷಣಿಕ ಜಿಲ್ಲಾ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರವರು ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ರವಿಕುಮಾರ್ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ನಿಂಗಪ್ಪ ರಾಮಗಿರಿ ಇನ್ನು ಮುಂತಾದ ಗ್ರಾಮದ ಆಡಳಿತ ಅಧಿಕಾರಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…