Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಪ್ರಯಾಗರಾಜ್ ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ವಾಗತಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಮಧ್ಯಮ ವರ್ಗದ ಜನರ ಜನಪ್ರಿಯ ಸಾರಿಗೆ ಎಂದೇ ಹೆಸರಾಗಿದ್ದ ನಮ್ಮ ಮೆಟ್ರೋ ಇದೀಗ ಬೆಲೆ ಏರಿಕೆಯ ಪರಿಣಾಮ ದುಬಾರಿಯಾಗಿದ್ದು, ಬಿಎಂಆರ್ ಸಿಎಲ್ ಮೆಟ್ರೋ ಪ್ರಯಾಣ ದರವನ್ನು ಶೇ.50ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ದರ ಏರಿಕೆಯಿಂದ ವಿದ್ಯಾರ್ಥಿಗಳು ಪ್ರತಿ ತಿಂಗಳು 4 ಸಾವಿರ ರೂ. ಗೂ ಹೆಚ್ಚು ಪಾವತಿಸಿ ಪ್ರಯಾಣಿಸಬೇಕಿದೆ. ಇದು ತುಂಬಾ ಅನ್ಯಾಯ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ. ಮೆಟ್ರೋ ರೈಲಿನಲ್ಲಿ ದುಬಾರಿ ಹಣ ನೀಡಿ ಪ್ರಯಾಣಿಸುವುದಕ್ಕಿಂತ ಕಡಿಮೆ ಬೆಲೆಯಲ್ಲಿ ಬೈಕ್ ನಲ್ಲೇ ಕಚೇರಿಗಳಿಗೆ ತೆರಳುವುದು ಉತ್ತಮ. ಇದರಿಂದ ಸಾಕಷ್ಟು ಹಣ ಉಳಿಕೆ ಮಾಡಬಹುದು ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಪ್ರಯಾಣ ದರ ಮಾತ್ರವಲ್ಲ ಪಾರ್ಕಿಂಗ್ ಶುಲ್ಕ ಎಲ್ಲವೂ ಸೇರಿ 200 ರೂ. ಬೇಕಾಗುತ್ತದೆ. ಇದಕ್ಕಿಂತ ಎಲೆಕ್ಟ್ರಿಕ್ ಬೈಕ್ ನಲ್ಲಿ ಪ್ರಯಾಣಿಸಿದರೆ, 100 ರೂ. ಉಳಿಯ ಮಾಡಬಹುದು ಎಂದು ಕೆಲವು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಇಂದಿನಿಂದ ಫೆಬ್ರವರಿ 13ವರೆಗೆ ಜಕ್ಕೂರು ಬಳಿಯ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯುತ್ತಿದೆ. ಆರಂಭಿಕ ದಿನವಾದ ಇಂದು ಹೆಬ್ಬಾಳ, ಬಳ್ಳಾರಿ ರಸ್ತೆ, ಕೊಡಿಗೆಹಳ್ಳಿ, ಜಕ್ಕೂರು ಸೇರಿ ಹಲವೆಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಜಕ್ಕೂರು ಬಿಸಿಲಿಗೆ ಬಳಲಿ ಪ್ರಯಾಣಿಕರು ಹೈರಾಣಾಗಿದ್ದು, ವಾಹನಗಳು ನಿಂತಲ್ಲೇ ನಿಂತಿದ್ದು, ಆಮೆಗತಿಯಲ್ಲಿ ಸಂಚರಿಸುತ್ತಿವೆ. ವಿಮಾನ ನಿಲ್ದಾಣಕ್ಕೆ ತೆರಳುವವರು, ಶಾಲೆ, ಕಾಲೇಜು, ಕಚೇರಿ ಹಾಗೂ ಇನ್ನಿತರ ಕೆಲಸಗಳಿಗೆ ತೆರಳುವವರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದರು. ಏರ್ ಶೋ ಹಿನ್ನೆಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಏರ್ ಶೋ ಗೆ 4 ದಿನ ಹೋಗುವ ಪ್ಲ್ಯಾನ್ ಮಾಡಿಕೊಂಡಿರುವವರಿಗೆ ಈ ಮಾರ್ಗದಲ್ಲಿ ಸಂಚರಿಸುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ. ಬಾಣಸವಾಡಿ ಕಡೆಯಿಂದ ಬಂದು ನಾಗವಾರ ಜಂಕ್ಷನ್ ಬಳಿ ಬಲ ತಿರುವು ಪಡೆದು ಥಣೆಸಂದ್ರ ಮುಖ್ಯ ರಸ್ತೆ ಮೂಲಕ ಸಂಚರಿಸಬಹುದು ಎಂದು ಸೂಚನೆ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಬೆಂಗಳೂರು ಏರ್ ಶೋ 2025 ಭಾರತದ ಶಕ್ತಿ, ಪ್ರಗತಿ ಮತ್ತು ನಾಯಕತ್ವದ ಸಂಕೇತವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಏರ್ ಶೋ 2025ರ ಉದ್ಘಾಟನಾ ಭಾಷಣ ಮಾಡಿದ ಅವರು, ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಏರ್ ಶೋ ಮೂಲಕ ಮತ್ತೊಂದು ಕುಂಭ ಶುರುವಾದಂತಿದೆ. ಪ್ರಯಾಗ್ ರಾಜ್ ನ ಮಹಾ ಕುಂಭ ಮೇಳ ಸಂಸ್ಕೃತಿ ಬಗ್ಗೆ ತೋರಿಸಿದ್ರೆ, ಏರ್ ಶೋ ಭಾರತದ ರಕ್ಷಣಾ ಬಲಿಷ್ಠತೆಯನ್ನ ಜಗತ್ತಿಗೆ ಸಾರುತ್ತಿದೆ. ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಬೆಂಗಳೂರಿನಲ್ಲಿ ಏರ್ ಶೋಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ, ಉತ್ಪಾದನೆಯ ಬಗ್ಗೆ ಭಾರತ ಕೇಂದ್ರೀಕೃತವಾಗಿದೆ. ಏರ್ ಶೋ ರಾಷ್ಟ್ರ–ರಾಷ್ಟ್ರಗಳ ಮಧ್ಯೆ ಸಂಬಂಧ –- ಬಾಂಧವ್ಯಗಳನ್ನ ಅಭಿವೃದ್ಧಿಗೊಳಿಸುತ್ತದೆ ಎಂದು ಅವರು ತಿಳಿಸಿದರು. ದೇಶ-ವಿದೇಶಗಳ ವಾಯುಪಡೆಯ ಅಧಿಕಾರಿಗಳು ಇಲ್ಲಿದ್ದಾರೆ. ಭಾರತದ ಜೊತೆ ಈ ಅಧಿಕಾರಿಗಳ ಸಹಭಾಗಿತ್ವ ಮುಖ್ಯವಾಗಿದೆ. ಈ ಸಂಬಂಧ ವೃದ್ಧಿಯಾದ್ರೆ ಜಗತ್ತಿನಲ್ಲಿ ಬಲಿಷ್ಠರಾಗುತ್ತೇವೆ. ಡಿಜಿಟಲ್, ಸ್ಟಾರ್ಟ್ ಆಪ್, ಕೈಗಾರಿಕೋದ್ಯಮ, ನವೋದ್ಯಮದಲ್ಲಿ ಭಾರತ ಪ್ರಗತಿ ಹೊಂದುತ್ತಿದೆ ಎಂದು ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಅಮರಾವತಿ: ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಮಾಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದೆ. ಉತ್ತರಾಖಂಡ ರೂರ್ಕಿಯ ಭೋಲೆ ಬಾಬ ಡೈರಿಯ ಮಾಜಿ ನಿರ್ದೇಶಕ ಪಿವಿನ್ ಜೈನ್, ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ, ದುಂಡಿಗಲ್ ಎ ಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳಾಗಿದ್ದಾರೆ. ಟೆಂಡರ್ ಪಡೆಯುವ ಹಂತದಿಂದ, ಪೂರೈಕೆ ತನಕ ಮಾಡಿರುವ ನಿಯಮ ಉಲ್ಲಂಘನೆ ಹಿನ್ನೆಲೆ ನಾಲ್ವರನ್ನು ಸಿಬಿಐ ಅಧಿಕಾರಿಗಳ ಬಂಧಿಸಿದ್ದು, ನಕಲಿ ದಾಖಲೆ, ನಕಲಿ ಸೀಲ್ ಗಳನ್ನು ಬಳಕೆ ಮಾಡಿದ ಆರೋಪ ಇವರ ಮೇಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ತಾಲ್ಲೂಕಿನ ನಾಗಲಮಾಡಿಕೆ ಹೋಬಳಿಯ ಸೇವಾಲಾಲ್ ಪುರ ಗ್ರಾಮದ ಪರಿಸರ ತಜ್ಞ, ಚಿಂತಕ ಡಾ.ಡಿ.ಪರಮೇಶ ನಾಯ್ಕ ಬರೆದಿರುವ ಪುಸ್ತಕ: ಸೊಸಿಯೋ ಎಕನಾಮಿಕ್ಸ್, ಕಲ್ಚರಲ್ & ಪೊಲಿಟಿಕಲ್ ಡೈಮೆಂಷನ್ ಆಫ್ ಬಂಜಾರ ಕಮ್ಯುನಿಟಿ ಇನ್ ಇಂಡಿಯಾ ಕೃತಿಗೆ ಕನ್ನಡ ಸಂಸ್ಕೃತಿ ಇಲಾಖೆಯ, ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷೆ ಅಕಾಡೆಮಿಯಿಂದ ರಾಜ್ಯ ಮಟ್ಟದ ತಜ್ಞರ ಪರಿಶೀಲನಾ ಸಮಿತಿಯು 2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಿದೆ. ಪುಸ್ತಕ ಬಹುಮಾನ 25 ಸಾವಿರ ನಗದು ಮಾರ್ಚ್ ತಿಂಗಳಲ್ಲಿ ವಿತರಿಸುವುದಾಗಿ ಅಕಾಡೆಮಿ ಅಧ್ಯಕ್ಷರಾದ ಡಾ.ಎ.ಆರ್.ಗೋವಿಂದ ಸ್ವಾಮಿ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿಯಲ್ಲಿ ಮುಳುಗಿರುವುದು ಸಾಕು. ಗ್ಯಾರಂಟಿ ಒಂದು ಕಡೆ ಇರಲಿ, ಅದು ತಪ್ಪಲ್ಲ. ಆದರೆ, ಅದರಲ್ಲೇ ಮುಳುಗಿದರೆ ಆಗುವುದಿಲ್ಲ. ಚುನಾವಣೆ ವೇಳೆ ಪ್ರಕಟಿಸಿದ ಪ್ರಣಾಳಿಕೆಯ ಭರವಸೆಗಳನ್ನೂ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೇಲ್ಮನೆ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಸಲಹೆ ನೀಡಿದ್ದಾರೆ. ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ಹಿಂಪಡೆದಿದೆ. ಆದರೆ, ನಾವಿನ್ನೂ ಹಿಂಪಡೆದಿಲ್ಲ. ಈ ಕುರಿತು ಕೂಡಲೇ ಆ ಕೆಲಸ ಮಾಡಬೇಕು. ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಕಾನೂನುಬಾಹಿರವಾಗಿ ಮಾಡಿತ್ತು. ಅದನ್ನು ನಾವು ಹಿಂಪಡೆಯಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಘ–ಪರಿವಾರದವರೇ ಇದ್ದಾರೆ. ಅದನ್ನು ಬದಲಾಯಿಸಬೇಕು. ಜಾತಿ ಗಣತಿ ವರದಿ ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇವುಗಳನ್ನು ಅನುಷ್ಠಾನಕ್ಕೆ ತರದೇ ಇದ್ದರೆ ಮುಂದೆ ನಮಗೆ ಕಷ್ಟ ಆಗಲಿದೆ. ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳು ಇವು. ಕೃಷಿ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದಾಗಲು ಸಾಧ್ಯ…
ತುಮಕೂರು: ಸಾಂಪ್ರದಾಯಿಕ ಕಲೆಗಳು ಸಮಕಾಲೀನ ವಿಚಾರಗಳಿಗೆ ಸ್ಪಂದಿಸಲಿ. ಅದು ಅವುಗಳ ಸಾಮಾಜಿಕ ಹೊಣೆಗಾರಿಕೆ. ಆಗ ಅವು ಮೌಲ್ಯಗಳ ಪ್ರಸಾರದೊಂದಿಗೆ ಸಾಮಾಜಿಕ ಅಭಿವೃದ್ಧಿಗೂ ಕೊಡುಗೆ ನೀಡಿದಂತಾಗುತ್ತದೆ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣದಾಸ್ ಹೇಳಿದರು. ಯಕ್ಷದೀವಿಗೆ ಸಂಸ್ಥೆಯು ಶನಿವಾರ ನಗರದ ಕನ್ನಡ ಭವನದಲ್ಲಿ ಪ್ರಸ್ತುತಪಡಿಸಿದ ವಿನೂತನ ಯಕ್ಷಗಾನ ಪ್ರಸಂಗ ‘ಚಂದ್ರಮಂಡಲಚರಿತೆ’ಯ ಪ್ರಥಮ ಪ್ರಯೋಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭೂಮಿಯ ಸಂಪನ್ಮೂಲಗಳನ್ನು ನಾವು ಮಾತ್ರ ಬಳಸಿಕೊಂಡರೆ ಸಾಲದು. ಮುಂದಿನ ತಲೆಮಾರಿಗೆ ಸಂಪನ್ಮೂಲಗಳು ಉಳಿಯಬೇಕು. ಸುಸ್ಥಿರತೆಯನ್ನು ಸಾಧಿಸಬೇಕಾದರೆ ಪ್ರಗತಿಯ ಜೊತೆಜೊತೆಗೆ ಸಮಕಾಲೀನ ಚಿಂತನೆಗಳೂ ಮೇಳೈಸಬೇಕು ಎಂದರು. ಯಕ್ಷದೀವಿಗೆ ಸಂಸ್ಥೆಯು ಹೊಸದಾಗಿ ಸಂಯೋಜಿಸಿ ರಂಗಕ್ಕೆ ತಂದಿರುವ ‘ಚಂದ್ರಮಂಡಲಚರಿತೆ’ ಯಕ್ಷಗಾನವು ಸುಸ್ಥಿರ ಅಭಿವೃದ್ಧಿಯ ಅವಶ್ಯಕತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶವನ್ನು ಹೊಂದಿದೆ. ವಿಶಿಷ್ಟ, ವೈಚಾರಿಕ ಅಂಶಗಳು ಇದರ ಕಥಾಹಂದರದಲ್ಲಿವೆ. ‘ನಾಳೆಗೆ ಉಳಿಯಲಿ ನೆಲ, ಜಲ’ ಎಂಬ ಇದರ ಆಶಯವೇ ವಿನೂತನವಾಗಿದೆ ಎಂದರು. ಯಕ್ಷಗಾನ ಕರಾವಳಿ ಭಾಗಕ್ಕೆ ಮಾತ್ರ ಸೀಮಿತವಾಗಿತ್ತು. ಅದನ್ನು ಬಯಲುಸೀಮೆಯಲ್ಲಿ…
ತುಮಕೂರು: ನಾಡಿನ ಜನತೆಗೆ ಅತ್ಯಮೂಲ್ಯವಾದ ಪುಸ್ತಕಗಳ ವೀಕ್ಷಣೆ ಹಾಗೂ ಖರೀದಿಗಾಗಿ ಫೆಬ್ರವರಿ 27 ರಿಂದ ಮಾರ್ಚ್ 3ರವರೆಗೆ ಬೆಂಗಳೂರಿನ “ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವನ್ನು” ಏರ್ಪಡಿಸಲಾಗುವುದು. ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ಈ ಮೇಳವನ್ನು ಆಯೋಜಿಸಲಾಗುತ್ತಿದ್ದು, ಪುಸ್ತಕ ಮೇಳದಲ್ಲಿ ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದೆ. ಮೇಳದಲ್ಲಿ ಭಾಗವಹಿಸುವವರು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ. ಸಲ್ಲಿಸಬೇಕು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಅಥವಾ ವಿಧಾನ ಸಭೆ ಸಚಿವಾಲಯದ ವೆಬ್‌ಸೈಟ್ www.kla.kar.nic.in ನಿಂದ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಡಿ.ಡಿ. ಲಗತ್ತಿಸಿ ಫೆಬ್ರವರಿ 12ರ ಸಂಜೆ 5 ಗಂಟೆಯೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ,…