Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 27ರೊಳಗಾಗಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸರ್ಕಾರಿ ಅಧಿಕಾರಿ/ನೌಕರರು ನಿಗದಿತ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಕಚೇರಿಯ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸಕಾಲಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ ವಹಿಸಿದ ಕೆಲಸ–ಕಾರ್ಯಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಅಧಿಕಾರಿ/ನೌಕರರು ಪ್ರತಿ ದಿನ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಕಚೇರಿ ವೇಳೆಯಲ್ಲಿ ಕರ್ತವ್ಯದ ಸ್ಥಳದಲ್ಲಿ ಹಾಜರಿರಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಸ್ವೀಕೃತ ಕಡತಗಳನ್ನು ಇ–ಆಫೀಸ್ ಮೂಲಕವೇ ಮುಂದಿನ ಹಂತಕ್ಕೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಇತರೆ ಇಲಾಖೆ ಕಚೇರಿಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿಗಳ ಸಮಯ ಪಾಲನೆ, ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೀದರ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಬೀದರ್ ನಗರ ಸಂಚಾರಿ ಪೊಲೀಸ್ ಠಾಣೆಯ ಪಿ.ಐ. ಬಾಪು ಗೌಡರವರು ತಮ್ಮ ಸಿಬ್ಬಂದಿಯೊಂದಿಗೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರನ್ನು ತಡೆದು, ದಂಡ ಹಾಕುವ ಬದಲು ಅವರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಲ್ಮೆಟ್ ವಿತರಿಸುವ ಮೂಲಕ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ದ್ವಿಚಕ್ರ ವಾಹನದಲ್ಲಿ ಸಹಸವಾರನಾಗಿ ಪ್ರಯಾಣಿಸುತ್ತಿದ್ದ ಪುಟಾಣಿ ಮಗುವಿಗೂ ಹೆಲ್ಮೆಟ್ ನೀಡುವ ಮೂಲಕ ಪುಟ್ಟ ಮಕ್ಕಳಿಗೆ ಕೂಡ ಹೆಲ್ಮೆಟ್ ಹಾಕಿ ದ್ವಿಚಕ್ರದಲ್ಲಿ ಪ್ರಯಾಣಿಸುವಂತೆ ಜಾಗೃತಿ ಮೂಡಿಸಲಾಯಿತು. ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಬೀದರ್ ನಗರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಈ ವಿನೂತನ ಕಾರ್ಯಕ್ರಮವನ್ನು ನಡೆಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಮೈಸೂರು: ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ನಡೆಯುತ್ತಿದ್ದರೆ, ಕರ್ನಾಟಕದ ಟಿ.ನರಸೀಪುರದ ತ್ರಿವೇ ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ 9.30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಭರದ ಸಿದ್ಧತೆ ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತಾ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ ಅನುದಾನ ಬಿಡುಗಡೆ…
ಪಾವಗಡ: ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯ ಎಸ್ ಬಿ ಕಾನ್ ಸ್ಟೇಬಲ್ ಮಟ್ಕಾ ಮತ್ತು ಇಸ್ಪೀಟ್ ದಂಧೆಕೋರರ ಜೊತೆ ಶಾಮೀಲಾಗಿ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ ಭಾನುವಾರದಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎಸ್ಸಿ ಎಸ್ಟಿ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿ, ಅರಸೀಕೆರೆ ತಾಣ ವ್ಯಾಪ್ತಿಯಲ್ಲಿ ಸರಿಯಾಗಿ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಸುವುದಿಲ್ಲ, ಬರೀ ನಾಲ್ಕು ಜನ ದಂಧೆಕೋರರನ್ನ ಸೇರಿಸಿ ಸಭೆ ನಡೆಸುತ್ತಾರೆ. ಅಲ್ಲಿನ ಜನರಿಗೆ ಇದರ ಬಗ್ಗೆ ಜಾಗೃತಿ ಇಲ್ಲ ದಲಿತರು ಠಾಣೆಗೆ ಹೋಗಿ ದೂರು ನೀಡಲು ಹೋದರೆ ದೂರು ಸ್ವೀಕರಿಸದೆ ಅಲೆದಾಡಿಸುತ್ತಾರೆ ಮತ್ತು ಡೀಲ್ ಮಾಡಿಕೊಳ್ಳುತ್ತಾರೆ ಎಂದು ನೇರವಾಗಿ ಎಸ್ ಬಿ ಕಾನ್ ಸ್ಟೇಬಲ್ ಚೌಕ ತಾಲಿ ವಿರುದ್ಧ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಅವರಿಗೆ ದೂರು ಹೇಳಿದರು. ಅದೇ ರೀತಿ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಪೇದೆ ಸದ್ದಂ ಅವರು ಕೂಡ ಮರಳು ದಂಧೆ…
ಹೆಚ್.ಡಿ.ಕೋಟೆ: ತಾಲೂಕು ಪಡುಕೋಣೆ ಗ್ರಾಮ ಪಂಚಾಯತಿಯ ಕೇಂದ್ರ ಸ್ಥಾನದಲ್ಲಿ ಇಂದು ಡ್ರೀಮ್ ಇಂಡಿಯಾ ಟ್ರಸ್ಟ್ ಅನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಮಾತಾನಾಡಿ, ಈ ಟ್ರಸ್ಟ್ ಹೆಸರಿನಲ್ಲಿಯೇ ಭವ್ಯಭಾರತದ ಕನಸಿದೆ, ಈ ಕನಸನ್ನು ನನಸು ಮಾಡಲಿಕ್ಕೆ ನಾವೆಲ್ಲ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಎಂತಹ ಸಂದರ್ಭದಲ್ಲೂ ಎದೆಗುಂದಬಾರದು ಬಡವರನ್ನ ಮತ್ತು ಶೋಷಿತ ಸಮುದಾಯಗಳನ್ನ ಜಾಗೃತಿಗೊಳಿಸುವಂತ ಅವರನ್ನ ಅಭಿವೃದ್ಧಿ ಪಡಿಸುವಂತ ಕೆಲಸ ಮಾಡಿ ಎಂದು ಸಲಹೆ ನೀಡಿದರು ಮುಖ್ಯ ಅತಿಥಿಯಾಗಿ ಜೀವಿಕ ರಾಜ್ಯ ಸಂಘಟನಾ ಸಂಚಾಲಕ ಉಮೇಶ್ ಬಿ. ನೂರಲಕುಪ್ಪೆ ಮಾತಾನಾಡಿ, ಟ್ರಸ್ಟ್ ಗಳು ಹುಟ್ಟುತ್ತವೆ ಸಾಯುತ್ತವೆ ಆದರೆ ಜನಸಾಮಾನ್ಯರ ಪರವಾಗಿ ಸೇವೆ ಮಾಡಿದ ಸಂಘ ಸಂಸ್ಥೆಗಳು ಶಾಶ್ವತವಾಗಿ ಉಳಿಯುತ್ತವೆ, ನಮ್ಮಲ್ಲೆ ಕೆಲವು ವ್ಯಕ್ತಿಗಳು ಸೇರಿ ವ್ಯಾಟ್ಸ್ ಆಪ್ ಗ್ರೂಪ್ ಮಾಡಿಕೊಂಡು ಜನರಿಂದ ವಂತಿಕೆಯನ್ನ ಸಂಗ್ರಹಿಸಿ ಅದೇ ಹಣವನ್ನು ಜನರಿಗೆ ವಿನಿಯೋಗಿಸುವಂತಹ ಮಹತ್ತರವಾದ ಕೆಲಸ ಮಾಡುತ್ತಿವೆ ಇಂತಹ ಸಂಘ ಸಂಸ್ಥೆಗಳು ನಮಗೆ ಆದರ್ಶವಾಗಿವೆ,…
ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಕಂಡ ಬೆನ್ನಲ್ಲೇ ದೆಹಲಿ ಸಿಎಂ ಅತಿಶಿ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕಲ್ಕಾಜಿ ಸ್ಥಾನದಲ್ಲಿ ಗೆಲುವು ಸಾಧಿಸಿರುವ ಅತಿಶಿ ಅವರು, ರಾಜ್ ನಿವಾಸದಲ್ಲಿ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರೋಬ್ಬರಿ 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಫೆಬ್ರವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ತೃಪ್ತಿಪಟ್ಟುಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಬೀದರ್ ನ ಕೇತಕಿ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ ಮತ್ತು ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಹೊರ ತರಲಾದ 2025–2026ನೇ ಸಾಲಿನ ಕ್ಯಾಲೆಂಡರ್ ಅನ್ನು ಇನ್ ಸೈಟ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಬೆಂಗಳೂರಿನಲ್ಲಿ ಶನಿವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಅನಿಲ್ ಜ್ಯಾಂತಿ, ಕುಮಾರ್ ವಿಜಾಪುರ, ಅಭಿಷೇಕ ಪಾಟೀಲ, ಅಯ್ಯಣ್ಣ ಹುಲ್ಕಲ್ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ದೆಹಲಿ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸುಮಾರು 27 ವರ್ಷಗಳ ಬಳಿಕ ದೆಹಲಿಯಲ್ಲಿ ನಮ್ಮ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಸಂತೋಷವಾಗಿದೆ. ದೆಹಲಿಯ ಜನತೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನಮ್ಮ ಪಕ್ಷದ ನಾಯಕರಿಗೆ ಮತಗಳನ್ನು ನೀಡಿದ್ದಾರೆ ಎಂದಿದ್ದಾರೆ. ದೆಹಲಿಯಲ್ಲಿ ಇಂದು ಕಮಲ ಅರಳಿರುವುದಕ್ಕೆ ಕಾರಣವಾಗಿರುವ ಪ್ರಧಾನಿ ಮೋದಿ, ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ ಎಂದರು. ಇನ್ನೂ ದೇಶದ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಕಾಶ್ಮೀರದ ಚುನಾವಣೆಗಳಲ್ಲಿಯೂ ಸಹ ಒಂದು ರೀತಿ ಸಕಾರಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ದೇಶದ ಜನತೆ ಪ್ರಧಾನಿ ಮೋದಿ ಅವರ ಜನಾಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಫಲಿತಾಂಶವನ್ನು ತರಲು ಆಂಗ್ಲ ಮಾಧ್ಯಮದ ಶಾಲೆಗಳ ಕೊಡುಗೆ ಅಪಾರವಾಗಿರುತ್ತದೆ ಎಂದು ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕಾರ್ಯದರ್ಶಿ ಸಹನಾ ಶ್ರೀನಿವಾಸ್ ತಿಳಿಸಿದ್ದಾರೆ. ಅವರು ಪಾವಗಡ ತಾಲೂಕಿನ ಕೋಟಗುಡ್ಡ ಗ್ರಾಮದಲ್ಲಿರುವ ಸಹನಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಪಾವಗಡ ತಾಲೂಕು ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿಶೇಷ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ, ಪಾವಗಡ ತಾಲೂಕಿನ ಬಹುತೇಕ ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸುವ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ತರಲು ಶ್ರಮಿಸಲಾಗುತ್ತಿದೆ ಎಂದರು ಇಸಿಓ ಶಿವಕುಮಾರ್ ಮಾತನಾಡಿ, ಪಾವಗಡ ತಾಲೂಕಿಗೆ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸ್ಥಾನವನ್ನು ತರುವಂತಹ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಶಿಕ್ಷಕರು…