Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ನವದೆಹಲಿ: ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ವಾತಾವರಣ ಸೃಷ್ಟಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾದ ಬೆನ್ನಲ್ಲೇ, ಜನಾದೇಶವನ್ನು ಒಪ್ಪಿಕೊಂಡ ಖರ್ಗೆ, ರಾಷ್ಟ್ರ ರಾಜಧಾನಿಯನ್ನು ಆಳುವ ಜನಾದೇಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾಲಿನ್ಯ, ಯಮುನಾ ಸ್ವಚ್ಛತೆ, ವಿದ್ಯುತ್, ರಸ್ತೆಗಳು, ನೀರು ಮತ್ತು ಅಭಿವೃದ್ಧಿಯ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಹೇಳಿದರು. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ. ನಾವು ಸಾರ್ವಜನಿಕ ಅಭಿಪ್ರಾಯವನ್ನು ಸ್ವೀಕರಿಸುತ್ತೇವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: ಭ್ರಷ್ಟಾಚಾರ ಮತ್ತು ಸುಳ್ಳುಗಳಿಂದ ಬೇಸತ್ತಿದ್ದರು, ಅವರು ಉತ್ತಮ ಆಡಳಿತ ಬಯಸಿದರು, ನಾಟಕಗಳನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದರು. ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ “ಡಬಲ್ ಸ್ಪೀಡ್”ನಲ್ಲಿ ಅಭಿವೃದ್ಧಿಯನ್ನು ಜನರು ನಿರೀಕ್ಷಿಸಬಹುದು ಎಂದು ಭರವಸೆ ನೀಡಿದರು. ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಮೋದಿ, ಭಾರತದ ಅತ್ಯಂತ ಹಳೆಯ ಪಕ್ಷವು ದೆಹಲಿಯಲ್ಲಿ ಆರು ಚುನಾವಣೆಗಳಲ್ಲಿ ತನ್ನ ಖಾತೆಯನ್ನು ತೆರೆಯಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಒಂದು ಪರಾವಲಂಬಿ ಪಕ್ಷ ಎಂದು ನಾನು ನಿಮಗೆ ಹೇಳಿದ್ದೆ. ಅವರು ಮುಳುಗಿದಾಗಲೆಲ್ಲಾ ಇತರ ಪಕ್ಷವನ್ನು ತಮ್ಮೊಂದಿಗೆ ತೆಗೆದುಕೊಂಡು ಮುಳುಗುತ್ತಾರೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ದೆಹಲಿ: ಆಮ್ ಆದ್ಮಿ ಪಕ್ಷದ ವರಿಷ್ಠ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಹೀನಾಯ ಸೋಲಾಗಿದ್ದು, ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಎಎಪಿಗೆ ಭಾರೀ ಮುಖಭಂಗವಾಗಿದೆ. ಸತತ ಎರಡು ಬಾರಿ ದೆಹಲಿಯಲ್ಲಿ ಗೆಲುವು ದಾಖಲಿಸಿದ್ದ ಆಮ್ ಆದ್ಮಿ ಪಾರ್ಟಿಗೆ ಈ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾಗಿದ್ದು, ಬಿಜೆಪಿ ಗೆಲುವಿನ ನಗೆಬೀರಿದೆ. ಸೋಲಿನ ಬೆನ್ನಲ್ಲೇ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಅರವಿಂದ್ ಕೇಜ್ರಿವಾಲ್, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ, ಜನರ ಸೇವೆಯಲ್ಲಿ ನಮ್ಮ ಪಕ್ಷ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬಡ ರೈತರಿಗೆ ಮಂಜೂರಾಗಬೇಕಾದ ಜಮೀನು ಬೆಂಗಳೂರಿನ ಮಂದಿಗೆ ಮಂಜೂರು ಮಾಡಿ ಅವ್ಯವಹಾರ ಮಾಡಲಾಗುತ್ತಿದೆ ಎಂದು ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರುವೇಕೆರೆ ಕ್ಷೇತ್ರದ ವ್ಯಾಪ್ತಿಯಲ್ಲೇ ಸಾವಿರಾರು ಎಕರೆ ಜಮೀನು ಮಂಜೂರಾತಿಯಲ್ಲಿ ಅವ್ಯವಹಾರ ಆಗಿದೆ. ಒಂದು ಎಕರೆಗೆ 5 ಲಕ್ಷ ರೂ.ನಂತೆ ಲಂಚ ಪಡೆದು ಜಮೀನು ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಎಕರೆ ಮಂಜೂರಾತಿ ಜಮೀನು ಅವ್ಯವಹಾರ ನಡೆದಿದ್ದು, ಮೇಲ್ನೋಟಕ್ಕೆ 50 ಕೋಟಿ ಅಂತಾ ಗೊತ್ತಾಗಿದೆ. ಸುಮಾರು 350–400 ಎಕರೆ ಜಮೀನನ್ನ ಕಂದಾಯ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ಶಾಸಕರು ಆರೋಪಿಸಿದರು. ತಹಶೀಲ್ದಾರ್ ರಿಂದ ಗ್ರಾಮ ಸಹಾಯಕರವರೆಗೂ ಈ ಅವ್ಯವಹಾರದಲ್ಲಿ ಭಾಗ ಆಗಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇನೆ. ಇನ್ನೂ, ಕ್ರಮ ಆಗಿಲ್ಲ. ಈ ಬಗ್ಗೆ ಲೋಕಾಯುಕ್ತಗೆ ದೂರು ನೀಡ್ತೇನೆ. ಸಮಗ್ರ ತನಿಖೆ ಆಗಬೇಕು ಅಂತಾ ಒತ್ತಾಯಿಸುತ್ತೇನೆ ಎಂದು ಎಂ.ಟಿ ಕೃಷ್ಣಪ್ಪ…
ತುಮಕೂರು: ಹಾಲಿ ಶಾಸಕ ಸುರೇಶ್ ಗೌಡ ವಿರುದ್ಧ ಮಾಜಿ ಶಾಸಕ ಗೌರಿಶಂಕರ್ ವಾಗ್ದಾಳಿ ನಡೆಸಿದ್ದು, ಚುನಾವಣೆಗೂ ಮುನ್ನ ನೀಡಿದ ಒಂದು ಭರವಸೆ ಈಡೇರಿಸಿಲ್ಲ. ಒಂದು ಭರವಸೆ ಈಡೇರಿಸಲಾಗದ ‘ನರಸತ್ತ ಶಾಸಕ’ ಸುರೇಶ್ ಗೌಡ ಎಂದು ಗೌರಿಶಂಕರ್ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಗೌರಿಶಂಕರ್, ಟೀಕಿಸುವ ಭರದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದರು. ಮೊನ್ನೆ ಪ್ರಯಾಗ್ ರಾಜ್ ಗೆ ಹೋಗಿ ಸ್ನಾನ ಮಾಡಿಕೊಂಡು ಬಂದಿದ್ದಾರೆ. ಪಾಪಗಳನ್ನೆಲ್ಲ, ಮಾಡಿರುವ ತಪ್ಪುಗಳನ್ನೆಲ್ಲ ತಿದ್ದಿಕೊಂಡು ಬರ್ತರೆ ಮನುಷ್ಯ ಅನ್ಕೊಂಡೆ. ಇನ್ನು ಮುಂದೆ ಒಳ್ಳೆಯವನಾಗುತ್ತಾನೆ, ಒಳ್ಳೆ ಬುದ್ದಿ ಕಲಿತಾನೆ, ಜನಗಳಿಗೆ ಗೌರವ ಕೊಡುತಾನೆ, ಒಳ್ಳೆ ಕೆಲಸ ಮಾಡ್ತಾನೆ ಅನ್ಕೊಂಡೆ. ಎಲ್ಲ ಉಲ್ಟಾ ಆಗಿದೆ ಪ್ರಯಾಗ್ ರಾಜ್ ಹೋಗಿ ಗಂಗಾ ನದಿಯಲ್ಲಿ ಸ್ನಾನ ಮಾಡಿ, ಬಂದ ಮೇಲೆ ಪಾಪ ಜಾಸ್ತಿ ಮಾಡ್ತಿದಾನೆ, ಎಲ್ಲೋ ಒಂದು ಕಡೆ ಆತನಿಗೆ ಶಾಪ ವಿಮೋಚನೆ ಆಗಿಲ್ಲ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಮತ್ತೊಂದು ಕಡೆ ಆ ಕುಂಭಮೇಳ…
ತುಮಕೂರು: ಕೃಷಿ ಇಲಾಖೆಯ ಅನುಮತಿ ಪಡೆಯದೆ ಕಳಪೆ ದರ್ಜೆಯ ಹರಳು ರೂಪದ ಎನ್‌ಪಿಕೆ ಮಿಶ್ರಣ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ 1.15 ಲಕ್ಷ ರೂ. ಬೆಲೆ. 11.25 ಟನ್ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ. ತುರುವೇಕೆರೆ ಪಟ್ಟಣದ ಬಿ.ಎಸ್. ರಸ್ತೆಯಲ್ಲಿರುವ ಶ್ರೀ ಸ್ವಾಮಿ ಅಯ್ಯಪ್ಪ ಫರ್ಟಿಲೈಸರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಇಲಾಖೆ ಅನುಮತಿ ಪಡೆಯದೆ ಕಳಪೆ ದರ್ಜೆಯ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಬಂದ ದೂರಿನ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕರಾದ ಪುಟ್ಟರಂಗಪ್ಪ, ಅಶ್ವತ್ಥ್‌ನಾರಾಯಣ ಹಾಗೂ ಸಿಬ್ಬಂದಿ ದಾಳಿ ನಡೆಸಿದಾಗ ವಿಜಾಪುರ ಜಿಲ್ಲೆಯ ಮೆ. ಶಾಂತಿ ಜೀವನ್ ಆಗ್ರೋ ಫುಡ್ಸ್ ರವರಿಂದ ಅನಧಿಕೃತವಾಗಿ ಸರಬರಾಜು ಆದ 225 ಬ್ಯಾಗ್ ಕಳಪೆ ದರ್ಜೆಯ ಹರಳು ರೂಪದ ರಸಗೊಬ್ಬರ ಮಾರಾಟ ಮಾಡುತ್ತಿದ್ದದ್ದು ಪತ್ತೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು 1,15,425 ರೂ. ಬೆಲೆಯ 11.25 ಟನ್ ರಸಗೊಬ್ಬರವನ್ನು ವಶಕ್ಕೆ ಪಡೆದು ಮುಂದಿನ ಕ್ರಮ…
ಹೆಚ್.ಡಿ.ಕೋಟೆ: ತಾಲೂಕಿನ ಹಂಪಾಪುರ ಗ್ರಾಮದಲ್ಲಿರುವ ಕ್ಲಾಸಿಕ್ ಲಿಟಲ್ ಬಡ್ಸ್ ಶಾಲೆಯಲ್ಲಿ ಶನಿವಾರ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸುಮಾರು 500ಕ್ಕೂ ಹೆಚ್ಚು ಶಿಬಿರಾರ್ಥಿಗಳು ಪಾಲ್ಗೊಂಡು ಆರೋಗ್ಯ ತಪಾಸಣೆಗೆ ಒಳಗಾದರು. ಕ್ಲಾಸಿಕ್ ಲಿಟಲ್ ಬಡ್ಸ್ ಎಜುಕೇಷನ್ ಟ್ರಸ್ಟ್, ಮೈಸೂರಿನ ಬಸವ ಅಕ್ಯು ಅಕಾಡೆಮಿ, ರೋಟರಿ ಸಂಸ್ಥೆಯಿಂದ ನಡೆದ ಆರೋಗ್ಯ ತಪಾಸಣೆಯಲ್ಲಿ ಹೈ ಬಿಪಿ, ಅಜೀರ್ಣ, ನಿದ್ರಾಹೀನತೆ, ಅಲರ್ಜಿ, ಅಸ್ತಮಾ, ಕೂದಲು ಉದುರುವಿಕೆ, ಮೊಡವೆ ಸಮಸ್ಯೆ, ಮಂಡಿನೋವು, ಥೈರಾಯ್ಡ್, ಫೈಲ್ಸ್, ಬೆನ್ನುನೋವು ಸೇರಿದಂತೆ ಚರ್ಮದ ಕಾಯಿಗಳಿಗೆ ನುರಿತ ತಜ್ಞರು ಕಲರ್ ಥೆರಪಿ, ಅಕ್ಯುಫ್ರೆಸರ್, ಸೀಡ್ ಥೆರಪಿ ನಡೆಸಿ, ಔಷಧಿ ರಹಿತ ಚಿಕಿತ್ಸೆ ನೀಡಿದರು. ಆರೋಗ್ಯವೇ ಭಾಗ್ಯ: ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಕಲಾ ಮಾತನಾಡಿ, ಆಹಾರ ಕ್ರಮ ಬದಲಾವಣೆಯಿಂದ ಆನೇಕ ರೋಗಗಳು ಮನುಷ್ಯನ ದೇಹವನ್ನು ಸೇರಿಕೊಳ್ಳುತ್ತಿವೆ. ಒಮ್ಮೆ ಅನಾರೋಗ್ಯಕ್ಕೆ ತುತ್ತಾದರೆ ಚೇತರಿಸಿಕೊಳ್ಳುವುದು ತುಂಬಾ ಕಷ್ಟ. ಹೀಗಾಗಿ ಆರೋಗ್ಯವಂತರಾಗಿರಲು ಎಲ್ಲರೂ ಪಣ ತೊಡಬೇಕು. ಆರೋಗ್ಯವೇ ಭಾಗ್ಯ…
ಹೆಚ್.ಡಿ.ಕೋಟೆ: ‘ಪೋಷಕರು ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವುದು ಬಿಟ್ಟರೇ ಬೇರೆ ಯಾವ ಸಾಧನೆಯತ್ತಲೂ ಗಮನಹರಿಸುವುದಿಲ್ಲ, ಆದ್ದರಿಂದ ಪೋಷಕರ ಶ್ರಮಕ್ಕೆ ಕುಂದುಬಾರದಂತೆ ವಿದ್ಯಾರ್ಥಿಗಳು ಶ್ರಮ ವಹಿಸಬೇಕು ಎಂದು ಹುಣಸೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮೇಗೌಡ ತಿಳಿಸಿದರು. ತಾಲ್ಲೂಕಿನ ತುಂಬಸೋಗೆ ಗ್ರಾಮದಲ್ಲಿನ ಎಂ.ಎಂ.ಕೆ. ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಂಜುಂಡಪ್ಪ ವರದಿ ಅನ್ವಯ ಎಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಇತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ಫಲಿತಾಂಶವನ್ನು ಗಮನಿಸಿದಾಗ ಆ ಹಣೆಪಟ್ಟಿ ದೂರವಾಗುತ್ತಾ ಸಾಗಿದೆ’ ಎಂದರು. ‘ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ಆರಂಭಿಸುವವರು ಕೇವಲ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ತೆರೆಯಲಾಗುತ್ತಿದೆ, ಆದರೆ ಎಂ.ಎಂ.ಕೆ. ಪದವಿ ಕಾಲೇಜಿನಲ್ಲಿ ಕಲಾ ವಿಭಾಗವನ್ನು ತೆರೆದಿರುವುದು ಸ್ವಾಗತಾರ್ಹ’ ಎಂದರು. ಎಂ.ಎಂ.ಕೆ. ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಮಾದರಿಯಾಗುವ ದೃಷ್ಟಿಯಿಂದ ಸಾಧನೆ…
ತುಮಕೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಯುವಜನ ಹಾಗೂ ಸಹಕಾರ’ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಿದರಕಟ್ಟೆಯ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಅನೇಕ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದರು. ಎಲ್ಲಾ ಕಾರ್ಯಗಳನ್ನು ಸರ್ಕಾರ ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ಸರ್ಕಾರೇತರ ಸಂಸ್ಥೆಗಳು ಜನೋಪಯೋಗಿ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನದ ಹಂತದಲ್ಲೇ ಸಹಕಾರಿ ಚಳುವಳಿ ಬಗ್ಗೆ ತಿಳಿದುಕೊಂಡು ಅದನ್ನು ಬಲಪಡಿಸಲು ಶ್ರಮಿಸಬೇಕು…
ತುಮಕೂರು: ಮಾಹಿತಿಹಕ್ಕು ಕಾಯಿದೆ–2005 ಎ೦ಬುದು ನಾಗರಿಕರ ಅನುಕೂಲಕ್ಕಾಗಿ, ಭ್ರಷ್ಟಾಚಾರ ನಿರ್ಮೂಲನೆಗಾಗಿ, ಪಾರದರ್ಶಕ ಆಡಳಿತ ವ್ಯವಸ್ಥೆಗಾಗಿ ಕೇ೦ದ್ರ ಸರ್ಕಾರದ ಆಗಿನ ಮಾಜಿ ಪ್ರಧಾನಿ ದಿವ೦ಗತ ಡಾ.ಮನಮೋಹನ್ ಸಿ೦ಗ್ ರವರ ಸರ್ಕಾರದ ಅವಧಿಯಲ್ಲಿ ದಿ.12.10.2005 ರ೦ದು ಜಾರಿಗೆ ತ೦ದ ಸ೦ಸತ್ತಿನ ಒ೦ದು ಕಾಯಿದೆ. ಇದು ಭಾರತದ ಯಾವುದೇ ನಾಗರಿಕನು “ಸಾರ್ವಜನಿಕ ಪ್ರಾಧಿಕಾರ “ ಹೊ೦ದಿದ ದೇಶದ ಯಾವುದೇ ಸರ್ಕಾರದ ಸ೦ಸ್ಥೆ, ಘಟಕ, ಕಚೇರಿಗೆ ಅರ್ಜಿ ಸಲ್ಲಿಸಿ ಕಾನೂನಾತ್ಮಕ ರೀತಿಯಲ್ಲಿ ಕಾಯಿದೆಯ ಅಡಿಯಲ್ಲಿ ಸಾರ್ವಜನಿಕರಿಗೆ ಒದಗಿಸಬಹುದಾದ೦ತಹ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ. ಪ್ರಸ್ತುತ ಇದನ್ನು ಅನೇಕ ಮಾಹಿತಿಹಕ್ಕು ಬಳಕೆದಾರರು, ಸಾಮಾಜಿಕ ಹೋರಾಟಗಾರರು, ಸಾರ್ವಜನಿಕರು ಉಪಯೋಗಿಸಿಕೊ೦ಡು ಅನುಕೂಲ ಪಡೆದಿರುವುದ೦ತೂ ಅಕ್ಷರಶಃ ಸತ್ಯ. ಆದರೆ ಕೆಲವೊ೦ದು ಸರ್ಕಾರಿ ಇಲಾಖೆಗಳಿಗೆ ಸಾರ್ವಜನಿಕರು ನೇರವಾಗಿ ಭೇಟಿ ನೀಡಿ ತಮ್ಮ ಅವಶ್ಯಕತೆಯ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಹರಸಾಹಸಪಡುವ೦ತಾಗಿದೆ ಇ೦ದಿನ ವಾಸ್ತವ. ಇ೦ತಹ ಸ೦ದರ್ಭಗಳಲ್ಲಿ ಮಧ್ಯವರ್ತಿಗಳಿಗೆ ಕೇಳಿದಷ್ಟು ಹಣ ನೀಡಿ ದಲ್ಲಾಳಿಗಳ ಹೊಟ್ಟೆಯನ್ನೂ ತು೦ಬಿಸಿ, ಅಧಿಕಾರಿಗಳ ಖಜಾನೆಯನ್ನು ತು೦ಬಿಸಿ ವಿಧಿಯಿಲ್ಲದೇ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಪರಿಸ್ಥಿತಿ…