Subscribe to Updates
Get the latest creative news from FooBar about art, design and business.
- ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
- ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
- ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
- ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
- ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ: AIDSO ಆಗ್ರಹ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
- ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
- RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
Author: admin
ಮಧುಗಿರಿ: ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳು ಮತ್ತು ಶಾಲಾ ಕಟ್ಟಡಗಳ ಮೇಲೆ ಬೆಳೆದಿರುವಂತಹ ಗಿಡಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ರಸ್ತೆ ಬದಿಗಳಲ್ಲಿ ನೆಡಲಾಗಿರುವ ಗಿಡಗಳಿಗೆ ನಿಯಮಿತವಾಗಿ ನೀರು ಹಾಕಿ ಸಮರ್ಪಕವಾಗಿ ಸಂರಕ್ಷಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದರು. ಅವರು ತಾಲೂಕಿನ ಮಿಡಿಗೇಶಿ ಹೋಬಳಿಯಲ್ಲಿ ಸುಮಾರು 7.95 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮುಂದಿನ ವಾರ ಕೆಲವು ಗ್ರಾಮಗಳಿಗೆ ಸ್ವತಃ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಲಾಗುವುದು. ಅಷ್ಟರೊಳಗೆ ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಶಾಲಾ ಕಟ್ಟಡಗಳ ಮೇಲ್ಛಾವಣಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿರಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಹೆಚ್ಚು ಬಡವರು ವಾಸವಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹಳ್ಳಿಗಾಡಿನ ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಿ ಉನ್ನತ ಹುದ್ದೆಗಳನ್ನು ಗಳಿಸುವಂತಾಗಬೇಕು. ಗುತ್ತಿಗೆದಾರರು ಕಾಮಗಾರಿಗಳನ್ನು ವಿಳಂಬ ಮಾಡದೆ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಕೆಲವು ಗಡಿ ಭಾಗದ ರಸ್ತೆಗಳು…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಮಾರ್ಚ್ 25ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಮಹಾರಥೋತ್ಸವದ ಅಂಗವಾಗಿ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿದ್ದು, ಮಾರ್ಚ್ 26ರಂದು ರಾತ್ರಿ 10 ಗಂಟೆಗೆ ಬಿಲ್ವವೃಕ್ಷ ವಾಹನೋತ್ಸವ, ಮಾರ್ಚ್ 27ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಜರುಗಲಿವೆ. ಪ್ರತಿ ವರ್ಷದಂತೆ ದನಗಳ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬರುವ ರಾಸುಗಳಿಗೆ ನೀರು ಮತ್ತು ನೆರಳಿನ ಸೌಲಭ್ಯ ಕಲ್ಪಿಸಲಾಗುವುದು. ಜಾತ್ರೆಯಲ್ಲಿ ಆಯ್ಕೆ ಮಾಡುವ ಉತ್ತಮ ರಾಸುಗಳಿಗೆ ಮಾರ್ಚ್ 25ರ ಸಂಜೆ 5 ಗಂಟೆಗೆ ಬಹುಮಾನ ವಿತರಿಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಕರ್ಯ ಲಭ್ಯವಿರುತ್ತದೆ. ಜಾತ್ರಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಮಧುಗಿರಿ: ತಾಲೂಕಿನ ಪುರವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ಯುವ ಕ್ರೀಡಾ ಸಂಘದ ವತಿಯಿಂದ ಈರಣ್ಣ ನಾಯಕ ಕಪ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಗ್ರಾಮೀಣ ಯುವಕರಲ್ಲಿ ಕ್ರೀಡಾಸ್ಪೂರ್ತಿ ಬೆಳೆಸುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಟೋರ್ನಮೆಂಟ್ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಪಂದ್ಯಾವಳಿ ಮಾ. 7 ಮತ್ತು ಮಾ.8 ರಂದು ಎರಡು ದಿನಗಳ ಕಾಲ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಅಮೆಚೂರ್ ಕಬಡ್ಡಿ ತಂಡಗಳು ಭಾಗವಹಿಸಲಿವೆ. ರೋಚಕ ಪೈಪೋಟಿಗೆ ವೇದಿಕೆ ಸಿದ್ದವಾಗಿದ್ದು, ಕ್ರೀಡಾಭಿಮಾನಿಗಳಿಗೆ ಮನರಂಜನೆಯೊಂದಿಗೆ ಉತ್ಸಾಹಭರಿತ ಪಂದ್ಯಗಳು ಕಾದಿವೆ. ಪ್ರತಿ ತಂಡಕ್ಕೆ ಪ್ರವೇಶ ಶುಲ್ಕ 1,001 ನಿಗದಿಪಡಿಸಲಾಗಿದೆ. ಕ್ರೀಡಾಪಟುಗಳು ಹಾಗೂ ಪ್ರೇಕ್ಷಕರಿಗೆ ಊಟದ ವ್ಯವಸ್ಥೆ ಇರಲಿದೆ. ಅಂಪೈರ್ ಗಳ ತೀರ್ಮಾನವೇ ಅಂತಿಮವಾಗಿರುತ್ತದೆ ಹಾಗೂ ಉತ್ತಮ ಕ್ರೀಡಾಸ್ಪೂರ್ತಿ ಮತ್ತು ಶಿಸ್ತಿನ ಆಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಎಲ್ಲಾ ತಂಡಗಳು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಟೋರ್ನಮೆಂಟ್ ಯಶಸ್ವಿಗೊಳಿಸುವಂತೆ…
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದ ಕೇವಲ ಎರಡು ಕಾರ್ಯಕ್ರಮಗಳಿಗಾಗಿ ಅಂದಿನ ಬಿಜೆಪಿ ಸರ್ಕಾರ ಅಂದಾಜು ₹33 ಕೋಟಿ ಸಾರ್ವಜನಿಕ ಹಣವನ್ನು ವೆಚ್ಚ ಮಾಡಿರುವ ಆಘಾತಕಾರಿ ಮಾಹಿತಿ ಈಗ ಹೊರಬಿದ್ದಿದೆ. RTI ಮೂಲಕ ಬಹಿರಂಗವಾದ ಮಾಹಿತಿ: ‘ಲಂಚಮುಕ್ತ ಕರ್ನಾಟಕ’ ಸಂಘಟನೆಯ ಮಂಜುನಾಥ ಹಿರೇಚೌಟಿ ಅವರು ಮಾಹಿತಿ ಹಕ್ಕು ಕಾಯ್ದೆಯಡಿ (RTI) ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ದಾಖಲೆಗಳು ಲಭ್ಯವಾಗಿವೆ. 2023ರ ಫೆಬ್ರವರಿಯಲ್ಲಿ ನಡೆದ ಶಿವಮೊಗ್ಗ ಮತ್ತು ಬೆಳಗಾವಿ ಕಾರ್ಯಕ್ರಮಗಳ ವಿವರಗಳು ಇಲ್ಲಿವೆ: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ಈ ಒಂದು ಕಾರ್ಯಕ್ರಮಕ್ಕೆ ಮಾತ್ರವೇ ₹18.81 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ಜನರನ್ನು ವಿವಿಧೆಡೆಯಿಂದ ಕರೆತರಲು 1,800 ಬಸ್‌ಗಳನ್ನು ಬಳಸಲಾಗಿದ್ದು, ಅದಕ್ಕಾಗಿ ₹4.11 ಕೋಟಿ ವೆಚ್ಚವಾಗಿದೆ. ಪೆಂಡಾಲ್ ಮತ್ತು ಅಲಂಕಾರಕ್ಕಾಗಿ ₹1.8 ಕೋಟಿ ವ್ಯಯಿಸಲಾಗಿದೆ. ಬೆಳಗಾವಿ ಕಾರ್ಯಕ್ರಮ: ಬೆಳಗಾವಿಯಲ್ಲಿ ನಡೆದ ಮತ್ತೊಂದು ಕಾರ್ಯಕ್ರಮಕ್ಕೆ ₹14.35 ಕೋಟಿ ವೆಚ್ಚವಾಗಿದ್ದು, ಜನರನ್ನು ಸಾಗಿಸಲು ₹2.5…
ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ನೀಡಿದ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಸುರೇಶ್, “ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಸದ್ಯಕ್ಕೆ ನನ್ನನ್ನು ಬಮೂಲ್ (BAMUL) ಅಧ್ಯಕ್ಷನನ್ನಾಗಿ ಮಾಡಿದ್ದಾರೆ, ಅಂದರೆ ಹಾಲು ಮಾರುವ ಕೆಲಸ ಕೊಟ್ಟಿದ್ದಾರೆ. ಸದ್ಯಕ್ಕೆ ಆ ಕೆಲಸವನ್ನೇ ಮಾಡುತ್ತಿದ್ದೇನೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮಾಗಡಿಯ ಸುಮಾರು 18 ಕೆರೆಗಳಿಗೆ ಕಾವೇರಿ ನೀರನ್ನು ತುಂಬಿಸುವ 115 ಕಿ.ಮೀ. ದೂರದ ಈ ಬೃಹತ್ ಯೋಜನೆಯನ್ನು ಜಾರಿಗೊಳಿಸುತ್ತಿರುವುದಾಗಿ ಅವರು ತಿಳಿಸಿದರು. ಈ ಹಿಂದೆ ಅಸಾಧ್ಯವೆನ್ನಲಾಗಿದ್ದ ಯೋಜನೆಯನ್ನು ನಾವು ಕಾರ್ಯಗತಗೊಳಿಸುತ್ತಿದ್ದೇವೆ ಎಂದು ಅವರು ಹೆಮ್ಮೆಯಿಂದ ಹೇಳಿದರು. “ನಾವು ಸುಳ್ಳು ಭರವಸೆ ನೀಡುವುದಿಲ್ಲ ಅಥವಾ ಜನರ ಮುಂದೆ ಕಣ್ಣೀರು ಹಾಕುವುದಿಲ್ಲ. ನಾವು ಕೆಲಸ ಮಾಡುವ ಮೂಲಕ ಉತ್ತರ ನೀಡುತ್ತೇವೆ”…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ ಬಾಂಧವ್ಯದ ಕುರಿತು ಹಬ್ಬಿರುವ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ನಮ್ಮಿಬ್ಬರ ನಡುವಿನ ಸಂಬಂಧ ಹಾಲು ಮತ್ತು ಜೇನಿನಂತೆ ಅತ್ಯಂತ ಮಧುರವಾಗಿದೆ,” ಎಂದು ಅವರು ಹೇಳಿದ್ದಾರೆ. 2023ರ ಚುನಾವಣೆಯಲ್ಲಿ ಮಾತ್ರವಲ್ಲದೆ, ಮುಂದಿನ 2028ರ ಚುನಾವಣೆಯಲ್ಲೂ ನಮ್ಮಿಬ್ಬರ ಸಂಬಂಧ ಇದೇ ರೀತಿ ಮುಂದುವರಿಯಲಿದೆ ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿಎಂ ಹೇಳಿಕೆಗೆ ಬೆಂಬಲ: “ನಮ್ಮ ಮಧ್ಯೆ ಹುಳಿ ಹಿಂಡಿ ಶಿವಕುಮಾರ್ ನನ್ನು ಒಲಿಸಿಕೊಳ್ಳುವ ಪ್ರಯತ್ನ ನಡೆಸುವವರದ್ದು ಹಗಲುಗನಸು” ಎಂಬ ಮುಖ್ಯಮಂತ್ರಿಗಳ ಹೇಳಿಕೆಯನ್ನು ಡಿ.ಕೆ.ಶಿ ಎತ್ತಿ ಹಿಡಿದಿದ್ದಾರೆ. ಸಿದ್ದರಾಮಯ್ಯ ಅವರು ಅನುಭವದಿಂದ ಈ ಮಾತನ್ನು ಹೇಳಿದ್ದಾರೆ ಎಂದು ಅವರು ತಿಳಿಸಿದರು. “ನಾನು ಸಿದ್ದರಾಮಯ್ಯ ಅವರನ್ನು ಅವರು ಬೇರೆ ಪಕ್ಷದಲ್ಲಿದ್ದಾಗಿನಿಂದಲೂ ನೋಡುತ್ತಿದ್ದೇನೆ. ಅವರು ಕಾಂಗ್ರೆಸ್ ಗೆ ಬಂದ ನಂತರವಂತೂ ಬಹಳ ಹತ್ತಿರದಿಂದ ನನ್ನನ್ನು ಗಮನಿಸಿದ್ದಾರೆ. ನಾನೇನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ,” ಎಂದು ಡಿಸಿಎಂ ಮಾರ್ಮಿಕವಾಗಿ ನುಡಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಿಮ್ಮನ್ನು…
ರಾಮನಗರ: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನದೇ ಪಕ್ಷದ ಶಾಸಕರ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿರುಗೇಟು ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮದವರು ಮೈಕ್ ಹಿಡಿಯುತ್ತಿದ್ದಂತೆ ಶಾಸಕರೇ ಎಲ್ಲವನ್ನೂ ಬಹಿರಂಗವಾಗಿ ಹೇಳುತ್ತಿರುವಾಗ, ಅವರ ಫೋನ್ ಕದ್ದಾಲಿಕೆ ಮಾಡುವ ಅಗತ್ಯವೇನಿದೆ?” ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವ ಆರೋಪವಿತ್ತು. ಅಷ್ಟೇ ಅಲ್ಲದೆ, ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕೇಂದ್ರ ಸರ್ಕಾರದ ವಿರುದ್ಧವೂ ಇಂತಹ ಆರೋಪಗಳಿವೆ ಎಂದು ರಾಮಲಿಂಗಾ ರೆಡ್ಡಿ ನೆನಪಿಸಿದರು. ಸಾಮಾನ್ಯವಾಗಿ ಕ್ರಿಮಿನಲ್ ಗಳು, ಭಯೋತ್ಪಾದಕರು ಮತ್ತು ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ನಿಗಾ ಇಡಲು ಕಾನೂನುಬದ್ಧವಾಗಿ ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ನಮ್ಮ ಸರ್ಕಾರವು ಯಾರೊಬ್ಬರ ಫೋನ್ ಕರೆಯನ್ನೂ ಕದ್ದಾಲಿಕೆ ಮಾಡುತ್ತಿಲ್ಲ. ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ರಾಜ್ಯ ರಾಜಕಾರಣದಲ್ಲಿ…
ಬೆಂಗಳೂರು: ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದ ಸುಮಾರು 20 ಕಾಂಗ್ರೆಸ್ ಶಾಸಕರ ತಂಡ ಬುಧವಾರ (ಮಾರ್ಚ್ 4) ಮುಂಜಾನೆ ಬೆಂಗಳೂರಿಗೆ ವಾಪಸ್ಸಾಗಿದೆ. ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಮತ್ತು ಬಜೆಟ್ ಮಂಡನೆಯ ಸಿದ್ಧತೆಗಳ ನಡುವೆ ಶಾಸಕರ ಈ ಪ್ರವಾಸ ತೀವ್ರ ಕುತೂಹಲ ಮೂಡಿಸಿತ್ತು. ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಾಸಕರ ತಂಡದಲ್ಲಿ ಎಚ್.ಡಿ. ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಪ್ರಮುಖರಿದ್ದರು. ಮಾಧ್ಯಮಗಳನ್ನು ಕಂಡ ತಕ್ಷಣ ಬಹುತೇಕ ಶಾಸಕರು ತರಾತುರಿಯಲ್ಲಿ ಕಾರು ಹತ್ತಿ ನಿರ್ಗಮಿಸಿದರು. ಈ ಪ್ರವಾಸದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಇದು ಕೇವಲ ವೈಯಕ್ತಿಕ ಮತ್ತು ಕುಟುಂಬದೊಂದಿಗಿನ ಪ್ರವಾಸವೇ ಹೊರತು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶಾಸಕ ಬಿ.ಎಂ. ನಾಗರಾಜ್: “ನಾವು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಬಂದಿದ್ದೇವೆ. ಇದು ಫ್ಯಾಮಿಲಿ ಟ್ರಿಪ್ ಆಗಿದ್ದರಿಂದ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ಇದು ಸರ್ಕಾರಿ ಪ್ರವಾಸವಲ್ಲದ ಕಾರಣ ಕೆಲವು ಸ್ಥಳಗಳಿಗೆ…
ಬೆಂಗಳೂರು: ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ರಾಜ್ಯದ ವಿವಿಧೆಡೆ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ನಿಯಮಗಳನ್ನು ಉಲ್ಲಂಘಿಸಿ ಬೀದಿಗಿಳಿಯುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಎಚ್ಚರಿಕೆ ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ನಗರದಲ್ಲಿ ಯಾವುದೇ ರೀತಿಯ ಸಭೆ ಅಥವಾ ಪ್ರತಿಭಟನೆ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಅನುಮತಿಯಿಲ್ಲದೆ ನಿಯಮ ಬಾಹಿರವಾಗಿ ಪ್ರತಿಭಟನೆ ನಡೆಸುವವರ ವಿರುದ್ಧ ಈಗಾಗಲೇ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದರು. ಹೈಕೋರ್ಟ್ ಆದೇಶದಂತೆ ಪ್ರತಿಭಟನೆಗಳು ಕೇವಲ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ನಡೆಯಬೇಕು. ಅದನ್ನು ಬಿಟ್ಟು ಏಕಾಏಕಿ ಬೀದಿಗೆ ಬಂದು ಸಾರ್ವಜನಿಕರಿಗೆ ತೊಂದರೆ ಕೊಡುವುದು ನಿಯಮಬಾಹಿರ. ಅಂತಹವರನ್ನು ಬೀದಿಗೆ ಬರಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಖಮೇನಿ ಹತ್ಯೆ ವಿರೋಧಿಸಿ ಬೆಂಗಳೂರು ಮತ್ತು ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಯಾ ಸಮುದಾಯದವರು ಪ್ರತಿಭಟನೆ ನಡೆಸಿದ್ದರು.…
ಚಿಕ್ಕನಾಯಕನಹಳ್ಳಿ: ತಾಲೂಕಿನ ಯಾವುದೇ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ನೀರು ವ್ಯರ್ಥವಾಗಿ ಹರಿಯದಂತೆ ನೋಡಿಕೊಳ್ಳುವುದು ವಾಟರ್‌ಮನ್‌ಗಳ ಜವಾಬ್ದಾರಿ. ಈ ಬಗ್ಗೆ ಅಧಿಕಾರಿಗಳು ನಿರಂತರ ನಿಗಾ ಇಡಬೇಕು ಮತ್ತು ನೀರಿನ ಲಭ್ಯತೆಯ ಬಗ್ಗೆ ವಾರಕ್ಕೊಮ್ಮೆ ವರದಿ ನೀಡಬೇಕು. ನೀರಿನ ಅಭಾವ ತೀವ್ರವಾಗಿರುವ ಕಡೆಗಳಲ್ಲಿ ಅಗತ್ಯವಿದ್ದರೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಅಂತಾ ಸೂಚನೆ ನೀಡಿದರು. ಪ್ರಸ್ತುತ ಜಾತ್ರೆಗಳ ಸೀಸನ್ ಆಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಹಾಗೂ ಪಂಚಾಯಿತಿ ಅಧಿಕಾರಿಗಳು ಜಾತ್ರಾ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು. ಜಾನುವಾರುಗಳಿಗೆ ಮೇವು: ಬೇಸಿಗೆಯ ಹಿನ್ನೆಲೆಯಲ್ಲಿ…