Author: admin

ತುಮಕೂರು: ತುಮಕೂರು ಜಿಲ್ಲೆ ಗೊಲ್ಲಹಳ್ಳಿ ಜವಾಹರ ನವೋದಯ ವಿದ್ಯಾಲಯದಲ್ಲಿ 2027–28ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜಾಲತಾಣ https://cbseitms.rcil.gov.in/nvs ನಲ್ಲಿ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು 2026ರ ನವೆಂಬರ್ 28ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ ದೂ.ವಾ.ಸಂ. 9481707188ನ್ನು ಸಂಪರ್ಕಿಸಬೇಕೆಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಗಾಂಜಾ ಸಾಗಣೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಲ್ಲಯ್ಯ ಎಂಬುವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಕಠಿಣ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆರ್.ಟಿ.ಅರುಣ ವಾದ ಮಂಡಿಸಿದ್ದರು. ಏನಿದು ಪ್ರಕರಣ: 2019ರ ನವೆಂಬರ್ 29 ರಂದು ಅಬಕಾರಿ ಪೊಲೀಸರು ಗಾಂಜಾ ಸಾಗಣೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ತಿಪಟೂರಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ದುಪ್ಪಟ್ಟೆ ಮಲ್ಲಯ್ಯ ಅವರನ್ನು ಬಂಧಿಸಿದ್ದರು. ಈ ವೇಳೆ 15.430 ಕೆ.ಜಿ. ಗಾಂಜಾ ಪತ್ತೆಯಾಗಿತ್ತು. ಅಬಕಾರಿ ಡಿವೈಎಸ್ಪಿ ವಿಜಯಕುಮಾರ್ ಜಿ.ವಿ. ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದು ನ್ಯಾಯಾಧೀಶರಾದ ಜಯಂತ್ ಕುಮಾರ್ ಅವರು ಮೇಲ್ಕಂಡಂತೆ…

Read More

ತುಮಕೂರು: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ 2026-27ನೇ ಸಾಲಿಗೆ ಅಧಿಸೂಚನೆ ಹೊರಡಿಸಿರುವ ಅಡಕೆ ಮತ್ತು ಮಾವು ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೊರಟಗೆರೆ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಾಮಾಂಜನಪ್ಪ ರೈತರಲ್ಲಿ ಮನವಿ ಮಾಡಿದ್ದಾರೆ. ಕೊರಟಗೆರೆ ತಾಲೂಕಿನಲ್ಲಿ ಮಾವು ಬೆಳೆಯನ್ನು ವಿಮಾ ಸೌಲಭ್ಯಕ್ಕೆ ಒಳಪಡಿಸಲಾಗಿದ್ದು, ಮಾವು ಬೆಳೆಯನ್ನು ನೋಂದಾಯಿಸಲು ಜುಲೈ 31 ಕಡೆಯ ದಿನವಾಗಿದೆ. ಮಾವು ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 80,000 ರೂ. ಹಾಗೂ ಶೇ.5ರಂತೆ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ 4000 ರೂ.ಗಳಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರೈತರು ಹೋಬಳಿವಾರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಕಸಬಾ–8453650483, ಸಿ.ಎಸ್.ದುರ್ಗ–9449245960, ಹೊಳವನಹಳ್ಳಿ–9986456750, ಕೋಳಾಲ–9663457195, ಕೊರಟಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು–9448001644ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ಮಾಡಲು ಮುಂದಾಗಿರುವ ಕೇಂದ್ರ, ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ರಾಜಧಾನಿ ಬೆಂಗಳೂರಿಗೆ ಪರ್ಯಾಯ ನಗರವಾಗಿ ಬೆಳೆಯುತ್ತಿರುವ ತುಮಕೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸದೆ ರಾಜಧಾನಿ ಸುತ್ತಮುತ್ತಲೇ ಮಾಡಲು ಪ್ರಸ್ತಾಪಿಸಿರುವುದು ಸರಿಯಲ್ಲ. ತುಮಕೂರು ಜಿಲ್ಲೆಯಲ್ಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಿದರೆ ರಾಜಧಾನಿ ಬೆಂಗಳೂರು ಸಂಚಾರ ದಟ್ಟಣೆಯಿಂದ ಮುಕ್ತಿ ಸೇರಿದಂತೆ ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಭಾಗದವರಿಗೂ ಅನುಕೂಲವಾಗಲಿದೆ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಕನಕಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ವಿಶೇಷ ಆಸಕ್ತಿ ವಹಿಸಿದ್ದಾರೆ. ತಾಂತ್ರಿಕ ಸಮಿತಿ ಪರಿಶೀಲಿಸಿರುವ ಸ್ಥಳಗಳಲ್ಲಿ ತುಮಕೂರನ್ನು ಸೇರಿಸಲಾಗಿಲ್ಲ. ವಿಪಕ್ಷ ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಉತ್ತರ ಕರ್ನಾಟಕದ 19 ಜಿಲ್ಲೆಗಳ 37 ಚುನಾಯಿತ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಕೇಂದ್ರ ಸರ್ಕಾರಕ್ಕೆ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ಮಾಡಲು ಮನವಿ ಮಾಡಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣ…

Read More

ತುಮಕೂರು: ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಇಂದು ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಬಳಿಯಿರುವ ಸಿಡಾಕ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಯೋಜನೆಗಳ ಆಯ್ಕೆ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮತ್ತು ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಬಗ್ಗೆ ಮಾಹಿತಿ ನೀಡಲಾಗುವುದು. ಸ್ವಂತ ಉದ್ಯಮ ಸ್ಥಾಪಿಸಲು ಆಸಕ್ತಿ ಇರುವ ತುಮಕೂರು ಜಿಲ್ಲೆಯ ವಿದ್ಯಾವಂತ ಯುವಕ/ಯುವತಿಯರು ಹಾಗೂ ನಿರುದ್ಯೋಗಿಗಳು ಈ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ, 1ನೇ ಮಹಡಿ, ಕೈಗಾರಿಕಾ ಎಸ್ಟೇಟ್, ರಿಸರ್ವ್ ಪೊಲೀಸ್ ಮೈದಾನದ ಎದುರು,…

Read More

ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ ಸಾಮಾನ್ಯ ತರಕಾರಿಯಾಗಿದೆ. ಆದರೆ ಶಾಂಘೈನ ರೆಸ್ಟೋರೆಂಟ್ ಒಂದರಲ್ಲಿ ಈ ಸಾಮಾನ್ಯ ಖಾದ್ಯಕ್ಕೆ ಒಂದು ಪ್ಲೇಟ್ಗೆ 520 ಯುವಾನ್ (ಸುಮಾರು ₹7,300) ವಿಧಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಣ್ಣ ಖಾದ್ಯಕ್ಕೆ ಇಷ್ಟೊಂದು ದುಬಾರಿ ಬೆಲೆ ಏಕೆ? ಶಾಂಘೈನ ಹಾಂಗ್ಕೌ ಜಿಲ್ಲೆಯಲ್ಲಿರುವ ‘ಜಿನ್ಲಾಂಗ್ ದಾಬಿಯಾನ್ಲು’ (Jinlong Dabianlu) ಎಂಬ ರೆಸ್ಟೋರೆಂಟ್ನಲ್ಲಿ ಈ ದುಬಾರಿ ಖಾದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಜರ್ಮನಿಯಿಂದ ಆಮದು ಮಾಡಿಕೊಂಡ ಈಮು ಮೊಟ್ಟೆ: ಇಲ್ಲಿ ಸಾಮಾನ್ಯ ಕೋಳಿ ಅಥವಾ ಬಾತುಕೋಳಿ ಮೊಟ್ಟೆಯ ಬದಲಿಗೆ ಜರ್ಮನಿಯಿಂದ ಆಮದು ಮಾಡಿಕೊಂಡ ಬೃಹತ್ ಗಾತ್ರದ ಈಮು (Emu) ಹಕ್ಕಿಯ ಮೊಟ್ಟೆಯನ್ನು ಬಳಸಲಾಗುತ್ತದೆ. ಈ ಒಂದೇ ಒಂದು ಮೊಟ್ಟೆಯ ಬೆಲೆ ಸುಮಾರು 150 ಯುವಾನ್ (₹2,100) ಆಗಿದೆ. ಇದರ ದಪ್ಪನೆಯ ಹೊರಕವಚವನ್ನು ಒಡೆಯಲು ಶೆಫ್ ಸಣ್ಣ ಸುತ್ತಿಗೆಯನ್ನು ಬಳಸಬೇಕಾಗುತ್ತದೆ! ನೆದರ್ಲ್ಯಾಂಡ್ಸ್ನ ಪ್ರೊವೆನ್ಸ್ ಟೊಮೆಟೊ:…

Read More

ಚಿಕ್ಕನಾಯಕನಹಳ್ಳಿ:  ತಾಲೂಕಿನ ರೈತಬಾಂಧವರು ತಮ್ಮ ಕೃಷಿ ಬೆಳೆಗಳಿಗೆ ಕೀಟನಾಶಕ ಸಿಂಪಡಿಸಿದ ನಂತರ, ಆ ಜಮೀನುಗಳಲ್ಲಿ ಕುರಿ, ಮೇಕೆ, ದನ ಹಾಗೂ ಇತರೆ ಜಾನುವಾರುಗಳನ್ನು ಮೇಯಲು ಬಿಡಬಾರದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಶಿವರಾಜ್ ಕುಮಾರ್ ಅವರು ಮನವಿ ಮಾಡಿದ್ದಾರೆ. ಕೀಟನಾಶಕ ಸಿಂಪಡಿಸಿದ ಹುಲ್ಲು ಮತ್ತು ಎಲೆಗಳನ್ನು ತಿನ್ನುವುದರಿಂದ ಜಾನುವಾರುಗಳಿಗೆ ವಿಷಪ್ರಾಶನವಾಗಿ ಪ್ರಾಣಾಪಾಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ರೈತರು ಮತ್ತು ಜಾನುವಾರು ಮಾಲೀಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೇಟಿಂಗ್ ಪೀರಿಯಡ್ ಪಾಲಿಸಿ: ಕೀಟನಾಶಕ ಸಿಂಪಡಿಸಿದ ತಕ್ಷಣ ಜಾನುವಾರುಗಳನ್ನು ಜಮೀನಿನಲ್ಲಿ ಮೇಯಲು ಬಿಡಬಾರದು. ಔಷಧದ ಪ್ರಭಾವ ತಗ್ಗುವ ನಿರ್ದಿಷ್ಟ ಸಮಯ (ವೇಟಿಂಗ್ ಪೀರಿಯಡ್) ಮುಗಿದ ನಂತರವಷ್ಟೇ ಮೇಯಿಸಲು ಅವಕಾಶ ನೀಡಬೇಕು. ಎಚ್ಚರಿಕೆ ಫಲಕ ಕಡ್ಡಾಯ: ಕೀಟನಾಶಕ ಸಿಂಪಡಿಸಿದ ಜಮೀನಿನ ಮಾಲೀಕರು, ಪ್ರವೇಶದ್ವಾರದಲ್ಲಿ ಅಥವಾ ಎಲ್ಲರಿಗೂ ಸ್ಪಷ್ಟವಾಗಿ ಕಾಣಿಸುವ ಸ್ಥಳದಲ್ಲಿ “ಈ ಜಮೀನಿಗೆ ಕೀಟನಾಶಕ ಸಿಂಪಡಿಸಲಾಗಿದೆ. ದಯವಿಟ್ಟು ಕುರಿ, ಮೇಕೆ, ದನ ಹಾಗೂ ಇತರೆ ಜಾನುವಾರುಗಳನ್ನು ಮೇಯಲು ಬಿಡಬೇಡಿ”…

Read More

ಸಿರಾ: ಪತ್ರಿಕಾರಂಗವು ಪ್ರಜಾಪ್ರಭುತ್ವದ ಬಲಿಷ್ಠತೆ ಹಾಗೂ ಸದೃಢ ಭಾರತ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರ ವಹಿಸಿದೆ. ನೈತಿಕತೆ ಇರುವವರೆಗೂ ಪತ್ರಿಕಾರಂಗದ ಬಲ ಕುಗ್ಗುವುದಿಲ್ಲ. ಸಮಾಜವನ್ನು ಜಾಗೃತಗೊಳಿಸಿ ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು. ನಗರದ ಕದಂಬ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶನಿವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ, ಪತ್ರಕರ್ತರ ಪ್ರತಿಭಾವಂತ ಮಕ್ಕಳು ಹಾಗೂ ಪತ್ರಿಕಾ ವಿತರಣೆ ಮಾಡುವ ಪ್ರತಿಭಾವಂತ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೇರೆ ಮಹೇಶ್ ಮಾತನಾಡಿ ಪತ್ರಿಕೆಗಳು ನಿಷ್ಪಕ್ಷಪಾತ ವರದಿಗಳಿಗೆ ಮಾತ್ರ ಸೀಮಿತವಾದಾಗ ಒಂದು ಸುಂದರ ಸಮಾಜ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ. ನಮ್ಮಲ್ಲಿ ದೃಶ್ಯ ಮಾಧ್ಯಮಗಳು ಹೆಚ್ಚಾಗುತ್ತಿದ್ದಂತೆ ಮುದ್ರಣ ಎಂದೂ ಲಯ ಕಳೆದುಕೊಂಡಿಲ್ಲ, ಓದುಗರ ಸಂಖ್ಯೆ ಕಡಿಮೆಯಾಗಿಲ್ಲ, ಮಕ್ಕಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು. ರಾಜ್ಯ ಸಮಿತಿ ಸದಸ್ಯ ಜಿ.ಎನ್.ಪುರುಷೋತ್ತಮ್ ಮಾತನಾಡಿ, ಉತ್ತಮ ಸಮಾಜ…

Read More

ಸರಗೂರು / ಎಚ್.ಡಿ.ಕೋಟೆ: “ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರವಾಗಿದ್ದು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ಎಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸಿ. ಎನ್. ರಾಜು ತಿಳಿಸಿದರು. ತಾಲೂಕಿನ ಮಂಟಿ ಹಾಡಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಎಚ್.ಡಿ.ಕೋಟೆ ಹಾಗೂ ಸರಗೂರು ಸಂಘಟನೆಯ ವತಿಯಿಂದ, ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಮಾವಳ್ಳಿ ಶಂಕರ್ ಅವರು ತಮ್ಮ ಜೀವನವನ್ನೇ ಶೋಷಿತರು, ದಲಿತರು ಹಾಗೂ ಬಡವರ ಹಕ್ಕುಗಳಿಗಾಗಿ ಸಮರ್ಪಿಸಿಕೊಂಡಿದ್ದಾರೆ. ಅವರ ಜನ್ಮದಿನವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಇಂತಹ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ. ವಿದ್ಯಾರ್ಥಿಗಳು ಬುದ್ಧರ ಶಾಂತಿ, ಬಸವಣ್ಣನವರ ಸಮಾನತೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು” ಎಂದು ಬಿಇಒ ರಾಜು ಶುಭ ಹಾರೈಸಿದರು.…

Read More

ಸರಗೂರು: ಇಲ್ಲಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಮಾನವ ಹಕ್ಕುಗಳ ಮಿಷನ್ ಸರಗೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಪಿ. ಚಿನ್ನಣ್ಣ (ಹಳೆಯೂರು) ಅವರನ್ನು ಸರ್ವಾನುಮತದಿಂದ ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾದ ಶ್ರೀನಿವಾಸ್ (ಯಶವಂತಪುರ) ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಆದಿಕರ್ನಾಟಕ ಮಹಾಸಭಾ ಎಚ್.ಡಿ. ಕೋಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಸೋಮೇಶ್ (ಭೀಮನಹಳ್ಳಿ) ಹಾಗೂ ರವೀಂದ್ರ ಅವರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆರವೇರಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಪಿ. ಚಿನ್ನಣ್ಣ ಅವರು, ಮಾನವ ಹಕ್ಕುಗಳು ಪ್ರತಿಯೊಬ್ಬ ವ್ಯಕ್ತಿಯ ಜನ್ಮಸಿದ್ಧ ಹಕ್ಕಾಗಿದ್ದು, ಮೂಲಭೂತ ಹಕ್ಕುಗಳ ರಕ್ಷಣೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು. ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದ್ದು, ಅನ್ಯಾಯಕ್ಕೊಳಗಾದ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತಮ್ಮ ಸಂಘಟನೆ ನಿರಂತರವಾಗಿ ಶ್ರಮಿಸಲಿದೆ ಎಂದು…

Read More