Author: admin

ಬೀದರ್: ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ, ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ  ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬ್ರಿಗೇಡ್ ತಾಂಡಾದಲ್ಲಿ ಶುಕ್ರವಾರ (ಫೆ.7) ರಂದು ಘಟನೆ ನಡೆದಿದ್ದು ಮೋನಿಕಾ ಮೋತಿರಾಮ ಜಾಧವ (18) ಕೊಲೆಗೀಡಾದ ಯುವತಿ. ಮಗಳ ಕೊಂದ ತಂದೆ ಮೋತಿರಾಮ ಜಾಧವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಪತ್ತೆಗೆ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಕುಟುಂಬಸ್ಥರು ತೋರಿಸಿದ ಯುವಕನೊಂದಿಗೆ ಮದುವೆ ಮಾಡಿಕೊಳ್ಳಲು ಯುವತಿಗೆ ಇಷ್ಟ ಇರಲಿಲ್ಲ, ತಾನು ಬೇರೊಬ್ಬ ಯುವಕನೊಂದಿಗೆ ಪ್ರೀತಿ ಮಾಡುತ್ತಿರುವುದಾಗಿ ಹೇಳಿದ್ದಳು. ಈ ಸಂಬಂಧ ತಂದೆ, ಮಗಳೊಂದಿಗೆ ಜಗಳವಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಪದಲ್ಲಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹಗ್ಗದಿಂದ ಕತ್ತು ಬಿಗಿದು ಮಗಳನ್ನು ಕೊಂದು ಪಾರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ವಿಷಯ ತಿಳಿದು ಜಿಲ್ಲಾ ಪೊಲೀಸ್…

Read More

ಎಳೆಯ ವಯಸಿನವರು  ಹಠಾತ್ ಸಾವನ್ನಪ್ಪುತ್ತಿರುವ ಬಗ್ಗೆ  ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಈ ಬಗ್ಗೆ ತಮಗೆ ಪತ್ರ ಬರೆದಿದ್ದು,  ಆ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯ್ತು ಎಂದಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು…

Read More

ಬೀದರ್: ಜಿಲ್ಲೆಯ ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದಲ್ಲಿ ಬಸ್ ನಿಲ್ದಾಣವಿಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಗ್ರಾಮದಿಂದ ಮುಂಬೈ, ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 6.5 ಹಾದು ಹೋಗಿದೆ. ಸುತ್ತಮುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮ ಇದಾಗಿದೆ. ಗ್ರಾಮದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಬ್ಯಾಂಕ್‌ ಗಳ ವಿವಿಧ ಕೆಲಸ ಕಾರ್ಯಗಳಿಗಾಗಿ ನಿತ್ಯವೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಸರ್ಕಾರಿ, ಖಾಸಗಿ ಬಸ್‌ ಗಳು ಗ್ರಾಮದ ಮೂಲಕ ಸಂಚರಿಸುತ್ತವೆ. ಲಾರಿ, ಬೃಹತ್ ವಾಹನಗಳು ಸಹ ಇದೇ ಮಾರ್ಗದಲ್ಲಿ ಸಾಗುತ್ತವೆ. ಬೆಳಗಿನ ಜಾವದಿಂದ ರಾತ್ರಿವರೆಗೆ ಬಸ್‌ ಗಳಿಗಾಗಿ ನೂರಾರು ಪ್ರಯಾಣಿಕರು ಕಾದು ಕುಳಿತಿರುತ್ತಾರೆ. ಬಸ್ ತಂಗುದಾಣವಿಲ್ಲ. ಹೀಗಾಗಿ ಬಿಸಿಲು, ಮಳೆಯಲ್ಲಿಯೇ ಗಂಟೆಗಟ್ಟಲೇ ಕಾದು ಹೈರಾಣಾಗುತ್ತಿದ್ದಾರೆ. ಪ್ರಯಾಣಿಕರು ಬಸ್‌ ಗಾಗಿ ಬಿಸಿಲಿನಲ್ಲಿ ಅಥವಾ ಮರದ ಬುಡದಲ್ಲಿ ಕಾಯಬೇಕಾಗಿದೆ. ಮಳೆಗಾಲದಲ್ಲಿ ಸರಕಿನೊಂದಿಗೆ ಪ್ರಯಾಣಿಸುವವರು, ಮಕ್ಕಳನ್ನು ಕರೆದುಕೊಂಡು ಹೋಗುವವರು, ವೃದ್ಧರು ಹೆಚ್ಚು ಸಂಕಷ್ಟ ಅನುಭವಿಸುವಂತಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಹುಬ್ಬಳ್ಳಿ: ಎಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ರಾಹುಲ್‌ ಗಾಂಧಿ ಅವರ ನಾಯಕತ್ವವನ್ನು ನೆಚ್ಚಿಕೊಂಡಿರುತ್ತದಯೋ, ಅಲ್ಲಿಯವರೆಗೆ ಆ ಪಕ್ಷ ಉದ್ಧಾರವಾಗುವುದಿಲ್ಲ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ವ್ಯಂಗ್ಯವಾಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಹಿನ್ನೆಲೆ ಮಾತನಾಡಿದ ಅವರು, ಜಗದೀಶ್‌ ಶೆಟ್ಟರ್‌, ದೆಹಲಿ ಜನ ಬಿಜೆಪಿಗೆ ಆಶೀರ್ವಾದ ಮಾಡಿರುವುದು ಸ್ಪಷ್ಟವಾಗಿದೆ ಎಂದರು. ದೆಹಲಿಯ ಜನತೆ ಅರವಿಂದ್‌ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷದಿಂದ ರೋಸಿ ಹೋಗಿದ್ದರು. ಕೇವಲ ಬಾಯಿ ಮಾತಿನಲ್ಲಿ ತಮ್ಮದು ವಿನೂತನ ರಾಜಕಾರಣ ಎಂದು ಹೇಳುತ್ತಿದ್ದ ಆಪ್‌ ನಾಯಕರು, ಲಿಕ್ಕರ್‌ ಹಗರಣ, ಅರಮನೆಯಂತಹ ಮನೆ ನಿರ್ಮಿಸಿಕೊಳ್ಳುವುದಲ್ಲಿ ನಿರತರಾಗಿದ್ದರು. ಇದನ್ನೆಲ್ಲಾ ಗಮನಿಸಿದ ದೆಹಲಿ ಮತದಾರ, ಈ ಬಾರಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಾನೆ  ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: 2025 ಮಾರ್ಚ್‌ 1 ರಿಂದ 8 ರವರೆಗೆ  ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ   ಅಧಿಕೃತ ಲಾಂಛನವನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್‌, ವಿಧಾನಪರಿಷತ್  ಸದಸ್ಯ ನಸೀರ್‌ ಅಹ್ಮದ್‌, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ‌ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತರಾದ ಹೇಮಂತ್‌ ಎಂ. ನಿಂಬಾಳ್ಕರ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ಸಾಧು ಕೋಕಿಲ, ರಿಜಿಸ್ಟ್ರಾರ್‌ ಹಿಮಂತರಾಜು ಜಿ, ಕಲಾತ್ಮಕ ನಿರ್ದೇಶಕ ಎನ್.‌ ವಿದ್ಯಾಶಂಕರ್‌ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು ಮಹಾನಗರಪಾಲಿಕೆಯ 2025–26ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಕುರಿತು ಫೆಬ್ರವರಿ 15ರಂದು ಮಧ್ಯಾಹ್ನ 3:30 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಸಂಘ, ನರ್ಸಿಂಗ್ ಹೋಮ್ಸ್ ಸಂಘಗಳ ಪದಾಧಿಕಾರಿ, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ/ಸೂಚನೆಗಳನ್ನು ನೀಡಿ, ಆಯವ್ಯಯವನ್ನು ಪ್ರಗತಿಶೀಲವಾಗಿ ರೂಪಿಸಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಬೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 8ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರ ಉಪವಿಭಾಗ-2 :- ಸಪ್ತಗಿರಿ ಪೂರ್ವ/ ದಕ್ಷಿಣ/ ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕ ನಗರ, ಜಯನಗರ ಪೂರ್ವ/ ಪಶ್ಚಿಮ/ ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊಂಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರ, ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್, ಶಾಂತಿನಗರ, ಅಮರಜ್ಯೋತಿನಗರ, ಗೂಡ್‌ಶೆಡ್ ಕಾಲೋನಿ, ಉಪ್ಪಾರಹಳ್ಳಿ, ರಿಂಗ್ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯರಸ್ತೆ, ಟೂಡಾ ಲೇಔಟ್, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್ ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಜಯನಗರ ಶಾಖಾಧಿಕಾರಿ, ಮೊ.ಸಂ.9449844312/ 9449843511 ಹಾಗೂ ಸರಸ್ವತಿಪುರಂ ಶಾಖಾಧಿಕಾರಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ. ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ…

Read More

ತುಮಕೂರು: ತುಮಕೂರು ತಾಲ್ಲೂಕು ಕೋರಾ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಪಾಠಶಾಲೆಗೆ ಹಾಗೂ ಕೋರಾ ಗ್ರಾಮ ಪಂಚಾಯ್ತಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಭೇಟಿ ನೀಡಿದರು. ಕೋರಾ ಗ್ರಾಮ ಪಂಚಾಯ್ತಿಗೆ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ಗ್ರಾಮ ಪಂಚಾಯ್ತಿಯು ಈವರೆಗೂ ಮಕ್ಕಳ ಹಕ್ಕುಗಳ ಗ್ರಾಮಸಭೆ ನಡೆಸದಿರುವುದು, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ ರಚಿಸದಿರುವುದು, ಮಕ್ಕಳ ಅಂಕಿಅಂಶಗಳ ದಾಖಲೆ ನಿರ್ವಹಿಸದಿರುವುದನ್ನು ಗಮನಿಸಲಾಯಿತು. ಒಟ್ಟಾರೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ನಿರ್ಲಕ್ಷವಹಿಸಿರುವ ಕೋರಾ ಗ್ರಾಮ ಪಂಚಾಯ್ತಿಯ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿಯಮಾನುಸಾರ ಸೂಕ್ತಕ್ರಮ ಕೈಗೊಂಡು ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಮಕೂರು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆಯಿಂದ ಇರುವಂತೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಕಿವಿಮಾತು ಹೇಳಿದರು. ತುಮಕೂರಿನ ಬಾಲಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ “ಶಾಲಾ ಮಟ್ಟದಲ್ಲಿ ಮಕ್ಕಳ ರಕ್ಷಣೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಮಕ್ಕಳ ಮುಗ್ಧತೆಯನ್ನು ದುರುಪಯೋಗಪಡಿಸಿಕೊಳ್ಳುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದ್ದು, ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ, ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು. ನಿಮಗೆ ಗೊತ್ತಿಲ್ಲದೆಯೋ, ಗೊತ್ತಿದ್ದೋ, ಸಮಾಜಘಾತಕರೊಂದಿಗೆ ಸಂಪರ್ಕ ಪಡೆದರೆ, ಜೀವನವಿಡೀ, ಜೈಲು, ಕೋರ್ಟು, ವಿಚಾರಣೆ ಎಂದು ಓಡಾಡುವುದರಿಂದ ನಿಮಗೆ ವಿದ್ಯಾಭ್ಯಾಸವೂ ಕುಂಠಿತವಾಗಲಿದೆ. ನಿಮ್ಮ ಬಾಲ್ಯವೂ ಇಲ್ಲದಂತಾಗುತ್ತದೆ ಎಂದರು. ಜಿಲ್ಲೆಯಲ್ಲಿ ಪ್ರತಿವರ್ಷದಿಂದ ವರ್ಷಕ್ಕೆ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.…

Read More

ಬೆಂಗಳೂರು: ಬಿಜೆಪಿಯೊಳಗಿನ ಆಂತರಿಕ ಕಚ್ಚಾಟದ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿನ ಬಣಗಳು ತಾಳ್ಮೆಯಿಂದ ವರ್ತಿಸಿ, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಚರ್ಚೆಯ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು. ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇತರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎರಡೂ ಕಡೆಯ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು ಮತ್ತು ಚರ್ಚೆಯ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು. ಇದು ಸಾಧ್ಯವಾಗದಿದ್ದರೆ, ಅವರೆಲ್ಲರೂ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More