Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಜನ ಅಪ್ಪನನ್ನು ಇಷ್ಟಪಡುತ್ತಾರೆ ಎಂಬ ಕಾರಣಕ್ಕೆ ಮಗನನ್ನೂ ಇಷ್ಟಪಡುತ್ತಾರೆ ಅಂತ ಹೇಳಲಾಗದು ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀಳಗಿ ಜನ ತನ್ನನ್ನು ಒಪ್ಪಿಕೊಂಡಿದ್ದಾರೆ ಮತ್ತು ತಿರಸ್ಕರಿಸಿದ್ದಾರೆ. ನನ್ನಂತೆ ನನ್ನ ಮಗನನ್ನು ಅವರು ಇಷ್ಟಪಟ್ಟಾರು ಅಂತ ಹೇಳಲಾಗಲ್ಲ. ಪಕ್ಷದ ನಾಯಕರ ಆಂತರಿಕ ವೈಮನಸ್ಸುಗಳು ಬೀದಿಗೆ ಬರಬಾರದು ಎಂದರು. ವಿಜಯೇಂದ್ರ ಅವರು ಪ್ರತಿಯೊಬ್ಬ ನಾಯಕರೊಂದಿಗೆ ಮುಖಾಮುಖಿಯಾಗಿ ಮಾತಾಡಬೇಕು ಎಂದು ಸಲಹೆ ನೀಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರ ಬಳಿ ಸಹಾಯ ಪಡೆದುಕೊಂಡವರು, ವಿರೋಧಿ ಬಣದ ಆರೋಪಗಳ ಬಗ್ಗೆ ಹಿರಿಯ ನಾಯಕರು ಏನೂ ಮಾತಾಡ್ತಿಲ್ಲ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ, ತಂದೆಯವರ ಕಡೆ ಸಹಾಯ ತಗೊಂಡಾರ ಅಂದ್ರೆ, ಅವರು ಬೇರೆ ಮಾತನಾಡುತ್ತಾರೆ. ಆ ಮಾತು ವಾದ–ವಿವಾದಕ್ಕೆ ಕಾರಣವಾಗುತ್ತೆ. ನಾಲ್ಕು ಗೋಡೆಯ ಮಧ್ಯೆ ಅಸಮಾಧಾನವನ್ನು ಸರಿಪಡಿಸಿಕೊಳ್ಳಬೇಕು. ವಿಜಯೇಂದ್ರ ಎಲ್ಲರನ್ನೂ ಕರೆದು ಮಾತನಾಡಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: POCSO ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನ್ನ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಹಾಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ 2 ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಕ್ಷಮ ನ್ಯಾಯಾಲಯ ಆದೇಶವನ್ನು ವಜಾ ಮಾಡಿ, ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪೋಕ್ಸೋ ಕೇಸ್ ನಲ್ಲಿ ಬಂಧನದ ಭೀತಿಯಲ್ಲಿದ್ದ ಯಡಿಯೂರಪ್ಪ ಸದ್ಯ ನಿರಾಳರಾಗಿದ್ದಾರೆ. ಆದರೆ ತನಿಖಾಧಿಕಾರಿಗಳು ನೀಡುವ ಅಂತಿಮ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರೆಸುವಂತೆ ಆದೇಶ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಯಡಿಯೂರಪ್ಪ ವಿರುದ್ಧ ರೆಬೆಲ್ ನಾಯಕರು ನಿಂದನೆ, ವಾಗ್ದಾಳಿ ನಡೆಸುತ್ತಿದ್ದರೂ, ತಟಸ್ಥ ನಾಯಕರ ಬಣದಲ್ಲಿರುವವರು ಅದಕ್ಕೆ ಕಡಿವಾಣ ಹಾಕಲು ಮುಂದಾಗದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ಒಂದೆಡೆಯಾದರೆ, ಇನ್ನೊಂದೆಡೆ ಯಡಿಯೂರಪ್ಪ ಪರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಣ ಪರಸ್ಪರ ಹೇಳಿಕೆ, ಪ್ರತಿ ಹೇಳಿಕೆಗಳನ್ನು ನೀಡುತ್ತಿದೆ. ಹಿರಿಯರಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ ಇತರರು ತಟಸ್ಥರಾಗಿದ್ದಾರೆ. ಗುರುವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಟಸ್ಥ ಬಣದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ತಟಸ್ಥರು ಏನು ಎಂಬುದು ಗೊತ್ತಿದೆ, ಯಡಿಯೂರಪ್ಪನವರ ತೇಜೋವಧೆ ಮಾಡುತ್ತಿರುವವರ ಬಾಯಿ ಮುಚ್ಚಿಸಲಿ. ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಕಡಿವಾಣ ಹಾಕದೆ ಸುಮ್ಮನಿರುವುದೂ ಅಪರಾಧ ಎಂದು ವಿಜಯೇಂದ್ರ ಗುಡುಗಿದ್ದಾರೆ. ‘ಯಡಿಯೂರಪ್ಪನವರ ಮೇಲಿನ ವಾಗ್ದಾಳಿ ತಡೆಯಲು ರಾಷ್ಟ್ರೀಯ ನಾಯಕರೇ ಬರಬೇಕೆ? ಹಾಗಾದರೆ ಈ ನಾಯಕರಿಗೆ ಜವಾಬ್ದಾರಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ನನ್ನ ವಿರುದ್ಧ ವರಿಷ್ಠರಿಗೆ ಏನಾದರೂ ದೂರು ಕೊಡಲಿ ಅಥವಾ…
ಬಾಗಲಕೋಟೆ: ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಜಮಖಂಡಿಯಿಂದ ಅದೇ ಮಾರ್ಗವಾಗಿ ಬರುತ್ತಿದ್ದ ಸಚಿವ ಸಂತೋಷ ಲಾಡ್ ಅವರು, ಬೈಕ್ ಸವಾರನನ್ನು ಲೋಕಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಗಾಯಾಳು ಬೈಕ್ ಸವಾರ ಸತೀಶ್ ವೆಂಕಪ್ಪ ಮಾದರ ಅವರಿಗೆ ಮೊಣಕಾಲಿಗೆ ತೀವ್ರ ಗಾಯವಾಗಿತ್ತು. ಲೋಕಾಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕಳುಹಿಸಲು ಕ್ರಮ ಕೈಗೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಭಾರತೀಯರನ್ನು ಅಮೆರಿಕ ಸರ್ಕಾರ ಕೈ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಭಾರತಕ್ಕೆ ವಾಪಸ್ ಕಳಿಸಿರುವ ಘಟನೆಯನ್ನು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಈ ಹಿಂದೆ ಕೂಲಿ ಕಾರ್ಮಿಕರಿಗೆ ಸರಪಳಿ ಹಾಕಿ ಕಟ್ಟುತ್ತಿದ್ದದ್ದನ್ನು ನಾವು ನೋಡಿದ್ದೇವೆ. ಅದನ್ನು ತಪ್ಪಿಸಲು ಸರ್ಕಾರ ಕಾನೂನು ತಂದು ಶಿಕ್ಷೆ ನೀಡಿದೆ. ಆದರೆ ಮುಂದುವರಿದ, ಜಾಗೃತಿ ಇರುವ ದೇಶಗಳಲ್ಲಿ ಈ ರೀತಿ ನಡೆದಿರುವುದು ಖಂಡನೀಯ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಪಾವಗಡ: ದಶಕಗಳ ಹೋರಾಟಕ್ಕೆ ಜಯ ಸಿಕ್ಕ ಹಿನ್ನೆಲೆಯಲ್ಲಿ ಹೋರಾಟದಲ್ಲಿ ಉಪವಾಸ ಸತ್ಯಾಗ್ರಹ ಅಹರ್ನಿಶಿ ಧರಣಿ ಪಾದಯಾತ್ರೆ ಸೇರಿದಂತೆ ನಿತ್ಯ ನಿರಂತರವಾಗಿ ಅನೇಕ ಹೋರಾಟಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹೋರಾಟ ಪೂರೈಕೆ ಮಾಡಿದ್ದರ ಹಿನ್ನೆಲೆ, ಇಂದು ಪಾವಗಡ ತಾಲ್ಲೂಕಿಗೆ ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹೋರಾಟಗಾರರಿಗೆ ಸನ್ಮಾನ ಮತ್ತು ಕೃತಜ್ಞತಾ ಪೂರ್ವಕವಾಗಿ ಅಭಿನಂದನ ಕಾರ್ಯಕ್ರಮವನ್ನು ನೆರವೇರಿಸಲು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಶಿವಪ್ರಸಾದ್ ತಿಳಿಸಿದರು. ಪಾವಗಡದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಹತ್ತಾರು ದಶಕಗಳ ಹೋರಾಟದ ಫಲವಾಗಿ ಇಂದು ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಕುಡಿಯುವ ನೀರು ಹರಿಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಇದು ತಾಲೂಕಿನ ನಾಗರಿಕರ ಹೆಮ್ಮೆಯ ವಿಷಯವೂ ಕೂಡ ಆಗಿದೆ. ಅದರಿಂದ ಎಲ್ಲಾ ಹೋರಾಟಗಾರರನ್ನು…
ಪಾವಗಡ: ಪಟ್ಟಣದ ಶ್ರೀನಿವಾಸನಗರದಲ್ಲಿರುವ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಯೋಜನೆ ಮಾಡಲಾಯಿತು. ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಸಹ ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಡಾ.ಶಶಿಕಿರಣ್ ಅವರು ನೆರವೇರಿಸಿದ ಬಳಿಕ ಮಾತನಾಡಿದ ಅವರು, ಈ ವರ್ಷದ ನಮ್ಮ ಕಾಲೇಜಿನ ಫಲಿತಾಂಶ ಶೇಕಡ ನೂರಕ್ಕೆ ನೂರು ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ, ಉಪ ಪ್ರಾಂಶುಪಾಲರಾದ ನಾಗರಾಜು, ಸ್ವಾಮಿ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ, ಉಳಿದ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು. ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು…
ಚಿತ್ರದುರ್ಗ: ಸಿದ್ದರಾಮಯ್ಯ ಅವರಿಗೆ ತೊಂದರೆ ಕೊಡುವ ಕಾರಣಕ್ಕೆ ಮೂಡಾ ಹಗರಣವನ್ನು ಬಿಜೆಪಿ ಹಿಡಿದುಕೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪಿಸಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಪ ಮುಕ್ತರಾಗಿಲ್ಲ ಎಂಬ ಬಿಜೆಪಿ ಹೇಳಿಕೆ ಪ್ರತಿಕ್ರಿಯಿಸಿ, ನನಗೆ ಕೇಳುವ ಪ್ರಶ್ನೆ, ನನಗೆ ಕೇಳಿ ಅದಕ್ಕೆ ನಾನು ಉತ್ತರ ಕೊಡುತ್ತೇನೆಂದರು. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಇದೆ. ಅವರು ಸುಪ್ರೀಂ ಕೋರ್ಟ್ ಗೆ ಹೋದರೆ, ನಾವು ಹೋಗುತ್ತೇವೆ. ಎಲ್ಲರಿಗೂ ಈ ಅವಕಾಶವಿದೆ. ಇವತ್ತಿನ ವಿಚಾರಕ್ಕೆ ಗೆಲುವು ಅಂತ ಪ್ರಶ್ನೆಯಲ್ಲ. ನಮಗೆ ನಂಬಿಕೆ ಇದೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೊಂದರೆ ಕೊಡಬೇಕಂತಲೇ ಬಿಜೆಪಿಯವರು ಹಳೆಯ ಪ್ರಕರಣವನ್ನು ವೈಯಕ್ತಿಕವಾಗಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆ ಜೋಳಿಗೆ ಹಿಡಿದ ಸಿದ್ದಗಂಗಾ ಶ್ರೀಗಳು ವಾಡಿಕೆಯಂತೆ ಭಕ್ತರ ಬಳಿ ಭಿಕ್ಷಾಟನೆ ನಡೆಸಿದರು. ಪ್ರತಿವರ್ಷವೂ ವಾಡಿಕೆಯಂತೆ ಜಾತ್ರಾ ಮಹೋತ್ಸವದ ವೇಳೆ ಶ್ರೀಗಳು. ಭಿಕ್ಷಾಟನೆ ನಡೆಸುತ್ತಾರೆ. ಅದೇ ರೀತಿ ಈ ಬಾರಿಯು ಸಿದ್ದಗಂಗಾ ಮಠದ ಶ್ರೀಗಳು ಭಿಕ್ಷಾಟನೆ ನಡೆಸಿದರು. ಜೋಳಿಗೆ ಹಿಡಿದ ಶ್ರೀಗಳಿಗೆ ಭಕ್ತರು, ವರ್ತಕರಿಂದ ದವಸ ಧಾನ್ಯಗಳು ಕಾಣಿಕೆ ರೂಪದಲ್ಲಿ ಸಲ್ಲಿಕೆ ಮಾಡಲಾಯಿತು. ಅಕ್ಕಿ, ರಾಗಿ, ತೊಗರಿ ಬೆಳೆ, ಬೆಲ್ಲ ಕಾಣಿಕೆ ಕೊಟ್ಟು ಭಕ್ತರು ಕೃತಾರ್ಥರಾದರು. ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗಸ್ವಾಮಿಜಿ ಹಾಗೂ ಕಿರಿಯ ಸ್ವಾಮಿಜಿ ಶಿವಸಿದ್ದೇಶ್ ರಿಂದ ಭಿಕ್ಷಾಟನೆ ನಡೆಯಿತು. ತುಮಕೂರು ನಗರದ ಮಂಡಿಪೇಟೆ, ಅಶೋಕ್ ರಸ್ತೆ, ಎಪಿಎಂಸಿ ಯಾರ್ಡ್ ಗಳಲ್ಲಿ ಭಿಕ್ಷಾಟನೆ ನಡೆಸಲಾಯಿತು. ಇದೇ ಫೆ.20ರಿಂದ ಮಾರ್ಚ್ 1 ರವರೆಗೆ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…