Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ವಿವೇಕಾನಂದ. ಎಚ್.ಕೆ. ಭಾರತದ ವಿಶ್ವವಿದ್ಯಾಲಯಗಳಿಗೆ ಐತಿಹಾಸಿಕ ಮಹತ್ವವಿದೆ. ಭಾರತದಲ್ಲಿ ಅಜ್ಞಾನ, ಅನಕ್ಷರತೆ ಬಹಳ ಹಿಂದಿನಿಂದಲೂ ತಾಂಡವವಾಡುತ್ತಿದ್ದರೂ, ಶೋಷಿತ ವರ್ಗಗಳನ್ನು ಶಿಕ್ಷಣದಿಂದ ದೂರ ಇಟ್ಟಿದ್ದರೂ, ಕೆಲವು ವರ್ಗಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿಯೇ ಇತ್ತು. ಗುರುಕುಲ ಶಿಕ್ಷಣದ ಜೊತೆಗೆ ಭಾರತದಲ್ಲಿ ಬಹಳ ಹಿಂದೆಯೇ ನಳಂದ, ತಕ್ಷಶಿಲಾ ಮುಂತಾದ ವಿಶ್ವವಿದ್ಯಾಲಯಗಳಿದ್ದವು. ಸ್ವಾತಂತ್ರ ಪೂರ್ವದಲ್ಲಿಯೇ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಸ್ಥಾಪಿತವಾಯಿತು. ಸ್ವಾತಂತ್ರ್ಯ ನಂತರದಲ್ಲಿ ಶಿಕ್ಷಣ ಎಲ್ಲಾ ಸಾಮಾನ್ಯರ ಮೂಲಭೂತ ಹಕ್ಕಾದ ಮೇಲೆ ಕಲ್ಕತ್ತಾ, ಮುಂಬೈ, ಮದ್ರಾಸ್, ದೆಹಲಿ, ಬೆಂಗಳೂರು ಮುಂತಾದ ನಗರಗಳಲ್ಲಿ ವಿಶ್ವವಿದ್ಯಾಲಯಗಳು ಬಹಳ ದೊಡ್ಡ ಕ್ರಾಂತಿಯನ್ನೇ ಉಂಟುಮಾಡಿದವು….. ಆಗೆಲ್ಲಾ ತಾಲ್ಲೂಕಿಗೆ ಒಬ್ಬರು ಅಥವಾ ಇಬ್ಬರು ಮಾತ್ರ ಉನ್ನತ ಶಿಕ್ಷಣದ ಹಂತ ತಲುಪುತ್ತಿದ್ದರು. ಮುಂದೆ ಉನ್ನತ ಶಿಕ್ಷಣ ಮತ್ತು ಸಂಶೋಧನೆಯ ಅನೇಕ ವಿಶ್ವವಿದ್ಯಾಲಯಗಳು ಪ್ರಾರಂಭವಾದವು. ಆಗ ನಿಜಕ್ಕೂ ಡಾಕ್ಟರೇಟ್ ಪ್ರಬಂಧಗಳು ಅಥವಾ ಸ್ನಾತಕೋತ್ತರ ವಿದ್ಯಾರ್ಥಿಗಳ ಅಧ್ಯಯನದ ಗುಣಮಟ್ಟ ತುಂಬಾ ಮೇಲ್ದರ್ಜೆಯದಾಗಿತ್ತು. ಎಷ್ಟೋ ಜನ ಅವರವರ ವಿಷಯಗಳಲ್ಲಿ ಸಾಕಷ್ಟು ಪ್ರಾವೀಣ್ಯತೆ ಪಡೆಯುತ್ತಿದ್ದರು. ಸಮಾಜವು ಅಂತಹವರನ್ನು ಬುದ್ಧಿವಂತರೆಂದು ಗುರುತಿಸುತ್ತಿತ್ತು…… ಆದರೆ…
ಕೊಯಮತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ರೈಲಿನಿಂದ ಕೆಳಗೆ ತಳ್ಳಿರುವ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನಿಂದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದ ಇಂಟರ್ ಸಿಟಿ ರೈಲಿನಲ್ಲಿ ಮಹಿಳಾ ಬೋಗಿಯಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಲ್ಲದ್ದೆ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುಪ್ಪೂರು ಜಿಲ್ಲೆಯ ಅವಿನಾಶಿಯ ಮಹಿಳೆ ಕೊಯಮತ್ತೂರಿನಿಂದ ತಿರುಪತಿಗೆ ತೆರಳುತ್ತಿದ್ದಾಗ ವೆಲ್ಲೂರು ಜಿಲ್ಲೆಯ ಕೆವಿ ಕುಪ್ಪಂ ಬಳಿ ರೈಲಿನಲ್ಲಿ ಈ ಘಟನೆ ಸಂಭವಿಸಿದೆ. ಮಹಿಳೆ ಶೌಚಾಲಯಕ್ಕೆ ತೆರಳಿದ ವೇಳೆ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ದುಷ್ಕರ್ಮಿ, ಆಕೆ ಸಹಾಯಕ್ಕಾಗಿ ಕಿರುಚಾಡಿದ ವೇಳೆ ಯಾವುದೇ ಕರುಣೆ ತೋರಿಸದೆ ಆಕೆಯನ್ನು ರೈಲಿನಿಂದ ಕ್ರೂರವಾಗಿ ಕೆಳಗೆ ತಳ್ಳಿದ್ದಾರೆ. ಸಹಾಯಕ್ಕಾಗಿ ಮಹಿಳೆಯ ಕೂಗು ಕೇಳಿ ದಾರಿಹೋಕರು ಧಾವಿಸಿ ಬಂದು ಆಕೆಯನ್ನು ರಕ್ಷಿಸಿ ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ಆಕೆ ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಮಹಿಳೆಯ ಕೈ ಮತ್ತು ಕಾಲುಗಳಲ್ಲಿ ಮೂಳೆ ಮುರಿತಗಳಾಗಿದ್ದು, ತೀವ್ರ ಚಿಕಿತ್ಸೆ…
ಪ್ರಯಾಗ್ ರಾಜ್: ಮಹಾಕುಂಭ ಮೇಳ ಹಿನ್ನೆಲೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ 68 ಹಿಂದೂ ಭಕ್ತರ ತಂಡವು ಪ್ರಯಾಗರಾಜ್ ಗೆ ಆಗಮಿಸಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಸೆಕ್ಟರ್ 9 ರಲ್ಲಿ ಶ್ರೀ ಗುರು ಕಷ್ಣಿರ್ ಶಿಬಿರದಲ್ಲಿ ಮಾತನಾಡಿದ ಸಿಂಧ್ ನಿವಾಸಿ ಗೋಬಿಂದ್ ರಾಮ್ ಮಖೇಜಾ, ಕಳೆದ ಎರಡು ಅಥವಾ ಮೂರು ತಿಂಗಳುಗಳಲ್ಲಿ ನಾವು ಮಹಾಕುಂಭದ ಬಗ್ಗೆ ಕೇಳಿದಾಗಿನಿಂದ, ನಾವು ಭೇಟಿ ನೀಡುವ ಆಳವಾದ ಹಂಬಲವನ್ನು ಹೊಂದಿದ್ದೇವೆ. ನಾವು ಬರುವುದನ್ನು ತಡೆಯಲು ಯಾರಿಗೂ ಸಾಧ್ಯವಾಗಲಿಲ್ಲ ಎಂದು ಹೇಳಿದರು. ಕಳೆದ ಏಪ್ರಿಲ್ ನಲ್ಲಿ, ಪಾಕಿಸ್ತಾನದಿಂದ 250 ಜನರು ಪ್ರಯಾಗ್ರಾಜ್ ಗೆ ಭೇಟಿ ನೀಡಿದರು ಮತ್ತು ಗಂಗಾದಲ್ಲಿ ಸ್ನಾನ ಮಾಡಿದರು. ಈ ಬಾರಿ, ಸಿಂಧ್ ನ ಆರು ಜಿಲ್ಲೆಗಳಿಂದ 68 ಜನರು –ಘೋಟ್ಕಿ, ಸುಕ್ಕೂರ್, ಖೈರ್ಪುರ್, ಶಿಕರ್ಪುರ್, ಕಾರ್ಕೋಟ್ ಮತ್ತು ಜಟಾಬಲ್ ನೆಲೆಸಿರುವ ಇಲ್ಲಿಗೆ ಬಂದಿದ್ದಾರೆ. ಇದೊಂದು ಸಂತೋಷದಾಯಕ, ಅಗಾಧವಾದ ಭಾವನೆ. ಅದನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ನಾಳೆ, ನಾವು ಮತ್ತೊಂದು ಪವಿತ್ರ ಸ್ನಾನ ಮಾಡುತ್ತೇವೆ.…
ಮುಜಫರ್ ನಗರ: ನಾದಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಲು ಭಾವನೇ ಸುಪಾರಿ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ.21ರಂದು ನಡೆದಿದೆ. ಇಬ್ಬರು ಸುಪಾರಿ ಹಂತಕರ ಜತೆ ಸೇರಿಕೊಂಡು ಭಾವನೇ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ಕೊಲೆ ಮಾಡಿದ್ದಾನೆ. ಸಾಕ್ಷ್ಯ ನಾಶಗೊಳಿಸಲು ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಆಶಿಶ್ ನನ್ನು ಬಂಧಿಸಲಾಗಿದೆ. ಪತ್ನಿಯ ಸಹೋದರಿಯೊಂದಿಗೆ ಆಶಿಶ್ ಸಂಬಂಧ ಹೊಂದಿದ್ದ. ಆಕೆ ಇದನ್ನೆ ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು. ಗುಟ್ಟು ರಟ್ಟಾಗುವ ಭೀತಿಯಿಂದ ಕೃತ್ಯ ಎಸಗಿರುವುದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ನಾದಿನಿಯ ಹತ್ಯೆ ಮಾಡಲು ಬ್ಯಾಂಕ್ ನಿಂದ 40 ಸಾವಿರ ರೂ. ಸಾಲ ಪಡೆದಿದ್ದ ಆಶಿಶ್ ಸುಪಾರಿ ಹಂತಕರಿಗೆ 10 ಸಾವಿರ ರೂ. ಮುಂಗಡ ಹಣ ನೀಡಿದ್ದ. ಹತ್ಯೆ ಬಳಿಕ 20 ಸಾವಿರ ರೂ.…
ವಿಜಯಪುರ: ಜಿಲ್ಲೆಯ ನಾಗರಿಕರಿಗೆ ಆತ್ಮ ರಕ್ಷಣೆ ಹಾಗೂ ಆರೋಗ್ಯಕರವಾದ ಸಮಾಜ ನಿರ್ಮಾಣದ ಸಲುವಾಗಿ ದಿನಾಂಕ: 24—02–2025 ರಿಂದ ದಿನಾಂಕ: 02—03–2025 ರವರೆಗೆ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಡೆಸಲು ಉದ್ದೇಶಿಸಲಾಗಿರುತ್ತದೆ. ತರಬೇತಿಯು 7 (ಏಳು) ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 7 ಗಂಟೆಯಿಂದ 9:30 ಗಂಟೆಯವರೆಗೆ ನಡೆಯುತ್ತದೆ. ತರಬೇತಿಯು ಮುಕ್ತಾಯವಾದ ನಂತರ ಅರ್ಹ ಅರ್ಜಿದಾರರಿಗೆ ಪೊಲೀಸ್ ಅಧೀಕ್ಷಕರು, ವಿಜಯಪುರ ಜಿಲ್ಲೆ ರವರು ತರಬೇತಿ ಪತ್ರವನ್ನು ನೀಡುವರು. ಆಸಕ್ತರು ಪೊಲೀಸ್ ಹೆಡ್ ಕ್ವಾಟ್ರರ್ಸ್ ಆವರಣದಲ್ಲಿರುವ ವಿಜಯಪುರ ಜಿಲ್ಲಾ ಶಸ್ತ್ರಾಗಾರದಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ, ತಮ್ಮ ವಿಳಾಸದ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ಪರಿಶೀಲನೆ (ಪೊಲೀಸ್ ವೆರಿಫಿಕೇಶನ್) ಮಾಡಿಸಿ, ವಿಳಾಸದ ಗುರುತಿನ ಚೀಟಿ ಮತ್ತು ಇತ್ತೀಚಿನ 3 ಭಾವಚಿತ್ರಗಳೊಂದಿಗೆ ದಿನಾಂಕ: 20–02–2025 ರ ಒಳಗಾಗಿ ಜಿಲ್ಲಾ ಶಸ್ತ್ರಾಗಾರ ವಿಭಾಗಕ್ಕೆ ಸಲ್ಲಿಸಬೇಕು. ನಿಬಂಧನೆಗಳು ಅಭ್ಯರ್ಥಿಯು ಭಾರತದ ಪ್ರಜೆ ಮತ್ತು ವಿಜಯಪೂರ ಜಿಲ್ಲೆಯ ಸ್ಥಳೀಯರಾಗಿರಬೇಕು. ಅಭ್ಯರ್ಥಿಯ ವಯಸ್ಸು…
ನವದೆಹಲಿ/ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಚುನಾವಣೆಗೆ ಬಳಸಿಕೊಂಡಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಮಾತನಾಡಿದ ಅವರು, ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗೆದ್ದಿದೆ. ಅದರಿಂದ ಉಪಯೋಗವೇನು? ಕಾಂಗ್ರೆಸ್ ಯಾವ ರೀತಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರ್ಕಾರ. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನೂ ಚುನಾವಣೆಗೆ ಬಳಸಿಕೊಂಡಿದ್ದಾರೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರ್ಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಸತ್ಯವನ್ನು ಹೇಳಿದರೆ, ನಿಮಗೆ ಅರಗಿಸಿಕೊಳ್ಳುವುದು ತುಂಬಾ ಕಷ್ಟ ಎಂದು ಗುಡುಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 1 ಲಕ್ಷ ಜನರು ಗ್ರಾಮ ತೊರೆದಿದ್ದು, 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮಂಡ್ಯದ ಕೊನ್ನಾಪುರ ಗ್ರಾಮಕ್ಕೆ ಭೇಟಿ ನೀಡಿದ ಅವರು ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ 6 ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಗ್ರಾಮ ತೊರೆದಿದ್ದಾರೆ. 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ ಎಂದರೆ, ಈ ಸಾವುಗಳು ನಿಲ್ಲುವುದಿಲ್ಲ ಎಂದು ಹೇಳಿದರು. ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್ ಮೈಕ್ರೋ ಫೈನಾನ್ಸ್ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ ಎಂದು…
ಬೆಂಗಳೂರು: ಮುಡಾ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ದೊರಕಿದ್ದು, ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎನ್ನುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಸದ್ಯ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ದೊರಕಿದೆ. ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಸದ್ಯ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದು ತೀರ್ಪು ಪ್ರಕಟಿಸಿದ್ದಾರೆ. ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮೈಸೂರಿನ ಹೃದಯ ಭಾಗದಲ್ಲಿನ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ ಪೊಲೀಸರಲ್ಲದೆ, ಜಾರಿ ನಿರ್ದೇಶನಾಲಯವೂ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಔರಾದ್: ತಾಲೂಕಿನಲ್ಲಿ ಸಂತಪೂರದಲ್ಲಿ ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸಿದರು. ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣೆಯ ಪಿ.ಎಸ್.ಐ ನಂದಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಯು, ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರನ್ನು ತಡೆದು, ದಂಡ ವಿಧಿಸುವ ಬದಲು ಹೆಲ್ಮೆಟ್ ವಿತರಿಸುವ ಮೂಲಕ ಹೆಲ್ಮೆಟ್ ನ ಮಹತ್ವವನ್ನು ತಿಳಿಸಿಕೊಡಲಾಯಿತು. ಜಿಲ್ಲೆಯಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ, ಜನಸಾಮಾನ್ಯರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪೊಲೀಸರು ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಹೆಚ್.ಡಿ.ಕೋಟೆ: ಭೀಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯೋಗಣ್ಣಚಾರ್ಯ ಅವಿರೋಧ ಆಯ್ಕೆಯಾಗಿದ್ದಾರೆ. ತಾಲೂಕಿನ ಭೀಮನಹಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಚುನಾವಣೆಯಲ್ಲಿ ಯಾರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಯೋಗಣ್ಣಾಚಾರ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾರಕ ನೀರಾವರಿ ನಿಗಮ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎಂ.ಸಿ.ರಾಮೇಗೌಡ ತಿಳಿಸಿದರು. ಈ ಸಂದರ್ಭದಲ್ಲಿ ಚಂದ್ರುಶೆಟ್ಟಿಯವರು, ಜೆ.ಟಿ.ಅಯ್ಯಪ್ಪ, ಸಣ್ಣತಾಯಮ್ಮ, ಗೀತಾ, ಭವ್ಯ, ಗಾಯತ್ರಿ ಮತ್ತು ಪಿ ಡಿ ಓ ಸಿದ್ದಯ್ಯರವರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4