Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ತುಮಕೂರು: ಪ್ರೊ.ಎಲ್.ಮಣಿಗಯ್ಯ ಅವರ “ಒಳಮೀಸಲಾತಿ ಒಲವು–ನಿಲುವು” ಪುಸ್ತಕದ ಬಿಡುಗಡೆ ಸಮಾರಂಭ ಫೆಬ್ರವರಿ 9, ಬೆಳಿಗ್ಗೆ 10:30ಕ್ಕೆ, ತುಮಕೂರಿನ ರವೀಂದ್ರ ಕಲಾ ನಿಕೇತನ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಸಂಶೋಧನೆ ಪ್ರಕಾಶನ, ದವನಭೂಮಿಕ ಸಾಂಸ್ಕೃತಿಕ ಟ್ರಸ್ಟ್, ಅರುಣೋದಯ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಮತ್ತು ಪ್ರಕೃತಿ ಜನಸೇವಾ ಟ್ರಸ್ಟ್ ಏರ್ಪಡಿಸಿದ್ದು, ಬಾಬು ಜಗಜೀವನರಾಂ ಅಧ್ಯಯನ ಕೇಂದ್ರ (ಬೆಂಗಳೂರು) ನಿರ್ದೇಶಕ ಪ್ರೊ.ಗಂಗಾಧರ ಬಿ. ಕೃತಿ ಬಿಡುಗಡೆ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಮ.ಲ.ನ. ಮೂರ್ತಿ ವಹಿಸಲಿದ್ದಾರೆ. ಡಾ. ನಾಗಭೂಷಣ್ ಬಗ್ಗನಡು (ಸಹ ಪ್ರಾಧ್ಯಾಪಕ, ವಿವಿ ವಿಜ್ಞಾನ ಕಾಲೇಜು) ಇವರು ಕೃತಿ ವಿಮರ್ಶೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜನಪರ ಚಿಂತಕ ಕೆ. ದೊರೈರಾಜ್, ಕಥೆಗಾರ ತುಂಬಾಡಿ ರಾಮಯ್ಯ, ಸಾಹಿತಿ ಡಾ. ಓ. ನಾಗರಾಜು, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಯುವ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಗ್ರಂಥಕರ್ತ ಎಲ್. ಮಣಿಗಯ್ಯ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎ.ಸಿ.ರಂಗಯ್ಯ, ಮಂಟೇಸ್ವಾಮಿ, ಡಾ.ರಘುಕುಮಾರ್, ಸಿದ್ದಲಿಂಗಸ್ವಾಮಿ ಹಿರೇಮಠ್, ಪಿ. ಮಹಿಮಾರಾಜು, ನಾಗರಾಜು ಗೂಳರಿವೆ, ಬಿ.ಜಿ.…
ತುಮಕೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000 ರೂ., 25,000 ರೂ. ಹಾಗೂ 15,000 ರೂ.ಗಳ ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಅಕಾಡೆಮಿ ವತಿಯಿಂದ ಮಾರ್ಚ್ ತಿಂಗಳಲ್ಲಿ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು. ಸ್ಪರ್ಧೆಯ ಷರತ್ತುಗಳು: ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ 1–1–2024 ರಿಂದ 31–1–2025ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು. ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ…
ತುಮಕೂರು: ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ ಪ್ರಕರಣಗಳ ಪೈಕಿ 9,942 ಪ್ರಕರಣ ಹಾಗೂ 95,006 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ 1,04,948 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ಹೇಳಿದರು. ರಾಷ್ಟ್ರೀಯ ಜನತಾ ನ್ಯಾಯಾಲಯ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡು ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಒದಗಿಸುವ ಸಲುವಾಗಿ ಮಾರ್ಚ್ 8ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ(ಲೋಕ್ ಅದಾಲತ್)ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್ತಿನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದಲ್ಲಿ ಜನರು ತಮ್ಮ ಪ್ರಕರಣಗಳನ್ನು ಕಡಿಮೆ ವೆಚ್ಚದಲ್ಲಿ ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಜನ ಸಾಮಾನ್ಯರಿಗೆ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಜನವರಿ 7ರಂದು ಬೆಳಿಗ್ಗೆ 10 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ “ಯುವಜನ ಹಾಗೂ ಸಹಕಾರ ಸಂವಾದ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಸಿ.ಎ. ಅಧ್ಯಕ್ಷತೆವಹಿಸುವರು. ಮೈಸೂರು ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕ ಡಾ.ಎ.ಆರ್. ಶ್ರೀನಾಥ್ ಅವರು ಯುವಕರು ಮತ್ತು ಸಹಕಾರ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ. ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ. ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ, ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ: ಕಳೆದ ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಕ್ರೋ ಫೈನಾನ್ಸ್…
ತುಮಕೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ನರೇಗಾ)ಯನ್ನು ತುಮಕೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗಣನೀಯವಾದ ಸಾಧನೆ ಮಾಡಿರುವುದಕ್ಕಾಗಿ ರಾಜ್ಯ ಸರ್ಕಾರವು “ಉದ್ಯೋಗ ಸೃಜನೆಯ ಅತ್ಯುತ್ತಮ ಜಿಲ್ಲಾ ಪುರಸ್ಕಾರ” ಹಾಗೂ ಕುಣಿಗಲ್ ತಾಲ್ಲೂಕು ಉಜ್ಜಿನಿ ಗ್ರಾಮ ಪಂಚಾಯತಿಗೆ “ಅತ್ಯುತ್ತಮ ಗ್ರಾಮ ಪಂಚಾಯತಿ ಪುರಸ್ಕಾರ” ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿ ಗೌರವಕ್ಕೆ ಜಿಲ್ಲೆಯು ಭಾಜನವಾಗಲು ಶ್ರಮಿಸಿದ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಪ್ರಭು ಹಾಗೂ ಅಧಿಕಾರಿ ಸಿಬ್ಬಂದಿ ವರ್ಗಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಜಿ.ಪ್ರಭು ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ಪ್ರಶಸ್ತಿ ಗೌರವದ ಮಾಹಿತಿ ಹಂಚಿಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ತುಮಕೂರು ತಾಲ್ಲೂಕು ಕಸಬಾ ಹೋಬಳಿ ಸ್ವಾಂದೇನಹಳ್ಳಿ ಗ್ರಾಮದಲ್ಲಿ ಫೆಬ್ರವರಿ 13 ಮತ್ತು 14ರಂದು “ಶ್ರೀ ಆದಿಶಕ್ತಿ ಸ್ವಾಂದೇನಹಳ್ಳಿ ಗ್ರಾಮದೇವತೆ ಮಾರಮ್ಮನವರ ನೂತನ ಸ್ಥಿರ ವಿಗ್ರಹ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರಕ್ಕೆ ಕಳಸ ಪ್ರತಿಷ್ಠಾಪನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 13ರಂದು ಸಂಜೆ 4 ಗಂಟೆಗೆ ಗೋಧೂಳಿ ಲಗ್ನದ ಸುಮುಹೂರ್ತದಲ್ಲಿ ಗಣಪತಿಪೂಜೆ, ಗಂಗಾಪೂಜೆ, ಕುಲದೇವತಾ ಪ್ರಾರ್ಥನೆ, ಯಾಗಶಾಲಾ ಪ್ರವೇಶ, ಸ್ವಸ್ತಿಪುಣ್ಯಾಃ, ರಕ್ಷಾಬಂಧನ, ಮಹಾಸಂಕಲ್ಪ, ದೇವಾನಾಂದಿ, ನವಗ್ರಹ ಪೂಜೆ, ಕಳಸಗಳ ಆರಾಧನೆ, ಅಮ್ಮನವರ ಪೀಠಸ್ಥಾಪನೆ, ಚಕ್ರಸ್ಥಾಪನೆ, ಜಲಾದಿವಾಸ, ಕ್ಷೀರಾದಿವಾಸ, ಧಾನ್ಯದಿವಾಸ, ಶಯ್ಯಾದಿವಾಸ, ಪುಷ್ಪದಿವಾಸ, ಗಣಪತಿ ಹೋಮ, ನವಗ್ರಹ ಹೋಮ, ರಾಕ್ಷೋಘ್ನ ಹೋಮ, ಅಘೋರ ಹೋಮ, ಬಲಿಹರಣ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುವುದು. ಜನವರಿ 14ರಂದು ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಆದಿಶಕ್ತಿ ಗ್ರಾಮದೇವತೆ ಮಾರಮ್ಮನವರ ಪ್ರಾಣಪ್ರತಿಷ್ಠೆ, ನೇತ್ರೋನ್ಮಿಲನ, ದೃಷ್ಠಿ, ಗರ್ಭಗುಡಿ ಗೋಪುರಕ್ಕೆ ಕಳಸಾರೋಹಣ, ಪ್ರಾಣಪ್ರತಿಷ್ಠಾಪನ ಹೋಮ, ತ್ರಿಶಕ್ತಿಯರ ಹೋಮ, ವಾಸ್ತುಹೋಮ, ಕಲಾಹೋಮ, ಅಷ್ಠದಿಕ್ಬಾಲಕರ ಹೋಮ, ಜಯಾದಿ…
ತುಮಕೂರು: ಪಶ್ಚಿಮ ಘಟ್ಟಗಳ ಪ್ರತಿಯೊಂದು ಸಸ್ಯ ರಾಶಿಯು ಕೂಡ ಹೆಚ್ಚಿನ ಸಂಶೋಧನೆ ಮತ್ತು ವೈದ್ಯಕೀಯ ಕಾರ್ಯಗಳಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತವೆ ಎಂದು ಮೈಸೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಜಿ.ಆರ್. ಶಿವಮೂರ್ತಿ ಹೇಳಿದರು. ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪರಿಸರ ವಿಜ್ಞಾನ ವಿಭಾಗ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಪಶ್ಚಿಮಘಟ್ಟಗಳ ಸಸ್ಯವೈವಿಧ್ಯ’ ಕುರಿತು ಮಾತನಾಡಿದರು. ಪಶ್ಚಿಮ ಘಟ್ಟಗಳಲ್ಲಿನ ಸಸ್ಯ ವೈವಿಧ್ಯತೆಯನ್ನು ರಕ್ಷಿಸಬೇಕು ಮತ್ತು ತಳಿಗಳ ಹೆಚ್ಚಿನ ಸಂಶೋಧನೆ ನಡೆಯಬೇಕು. ವೈದ್ಯಕೀಯ ಸಸ್ಯ ನಿಧಿಗಳನ್ನು ಸಂಗ್ರಹ ಮಾಡುವ ಯೋಜನೆಗಳನ್ನು ರೂಪಿಸಬೇಕು ಎಂದರು. ಪರಿಸರ ವಿಜ್ಞಾನದಲ್ಲಿ ಪಶ್ಚಿಮ ಘಟ್ಟಗಳ ಪಾತ್ರ ಅಮೂಲ್ಯವಾದದ್ದು. ಅದರಲ್ಲಿನ ಸಸ್ಯ ರಾಶಿ ಜೀವರಾಶಿಯನ್ನು ಉಳಿಸುವುದು ಪ್ರಮುಖ ಕರ್ತವ್ಯವಾಗಬೇಕು ಎಂದು ಹೇಳಿದರು. ಭೌಗೋಳಿಕ ಮಾಹಿತಿ ವ್ಯವಸ್ಥೆಯಿಂದ ಮತ್ತು ರಿಮೋಟ್ ಸೆನ್ಸಿಂಗ್ ವ್ಯವಸ್ಥೆಯಿಂದ ಔಷಧೀಯ ಸಸಿಗಳ ಹಾಗೂ ಉಳಿದ ವಿವರಗಳ ಭೂಸಮೀಕ್ಷೆ ಮಾಡಬಹುದು. ಪಶ್ಚಿಮ ಘಟ್ಟಗಳು ಆರೋಗ್ಯ ಸಸಿಗಳ ನಿಧಿಯಾಗಿದೆ ಎಂದರು. ಕಾರ್ಯಕ್ರಮದ ಕುರಿತು ಗುಬ್ಬಿ ಲ್ಯಾಬ್ಸ್‍ನ ಭೌಗೋಳಿಕ ಮಾಹಿತಿ ವ್ಯವಸ್ಥೆ…
ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿ ರೇಷ್ಮೆ ಶೆಡ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರೋ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ದಿನ್ನೆಪಾಳ್ಯದ ಗ್ರಾಮದಲ್ಲಿ ನಡೆದಿದೆ. ರಾತ್ರಿ ಬೇಸಿಗೆ ಕಾರಣ ಕಾರಣ ಮನೆಯ ಹೊರಗೆ ಮಲಗಿದ್ದ ಕುಟುಂಬದವರು ಅಪಾಯದಿಂದ ಪಾರಾಗಿದ್ದಾರೆ. ದಿನ್ನೆಪಾಳ್ಯದ ಗ್ರಾಮದ ರೈತ ತಿಮ್ಮಪ್ಪನ ತೋಟದ ಮನೆಯಲ್ಲಿ ಬುಧವಾರ ತಡರಾತ್ರಿ ದುರ್ಘಟನೆ ನಡೆದಿದೆ. ತೋಟದ ಮನೆಯಲ್ಲಿ ಎರಡು ವರ್ಷದಿಂದ ಕೂಡಿಟ್ಟಿದ್ದ ರಾಗಿ, ಜೋಳ ಕಡಲೆಕಾಯಿ, ತೊಗರಿಬೇಳೆ, ದಾಖಲೆ ಪತ್ರಗಳು ಬೆಂಕಿಗೆ ಆಹುತಿಯಾಗಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಕಾರು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಸಮೀಪ ನಡೆದಿದೆ. ತಾಲೂಕಿನ ಕಡಬ ಹೋಬಳಿ ಜೀಗನಹಳ್ಳಿ ಗ್ರಾಮದ ವಾಸಿಯಾದ ರಾಕೇಶ್ (31) ಮೃತಪಟ್ಟವರು. ತೋಟದ ಮನೆಯಲ್ಲಿ ವಾಸ ಮಾಡುತ್ತಿದ್ದ ಇವರು ಕೆಲಸ ನಿಮಿತ್ತ ತನ್ನ ಸಂಬಂಧಿ ಜೊತೆ ತುಮಕೂರಿಗೆ ತೆರಳಿದ್ದರು. ಕೆಲಸ ಮುಗಿದ ನಂತರ ವಾಪಸ್ ರಾಕೇಶ್ ಹಾಗೂ ಇಬ್ಬರು ಸ್ನೇಹಿತರ ಜೊತೆಯಲ್ಲಿ ಮಲ್ಲಸಂದ್ರ ಡಾಬಾ ಹತ್ತಿರ ಊಟ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ,ಡಿ,ವೈ,ಎಸ್ಪಿ,ಶೇಖರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಂತ್ರಜ್ಞಾನ ವಿಭಾಗದವರು ಪರಿಶೀಲನೆ ನಡೆಸಿ ಶವವನ್ನು ಹೆಚ್ಚಿನ ತನಿಖೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…