Author: admin

ವಾಷಿಂಗ್ಟನ್: ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ ಎಸಗಿದ ತನ್ನ ಸಂಘಟನೆಯಲ್ಲಿದ್ದ ಸಲಿಂಗಿ ಸದಸ್ಯರನ್ನು ಹಮಾಸ್‌ ಚಿತ್ರಹಿಂಸೆ ನೀಡಿ ಗಲ್ಲುಶಿಕ್ಷೆ ನೀಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಹಮಾಸ್‌ ಸಲಿಂಗ ಸಂಬಂಧಗಳಿಗೆ ಮಾನ್ಯತೆ ನೀಡುವುದಿಲ್ಲ, ಇಂತಹ ಅನೈಸರ್ಗಿಕ ಸಂಬಂಧ ಹೊಂದಿರುವ ಸಂಘಟನೆಯ ಸದಸ್ಯರ ಶೋಧದಲ್ಲಿ ನಿರತವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್ ಪೋಸ್ಟ್ ಈ ವರದಿಯನ್ನು ಮಾಡಿದ್ದು, ಅಕ್ಟೋಬರ್ 7, 2023ರಂದು ಹಮಾಸ್‌ ನಡೆಸಿದ್ದ ದಾಳಿಯಲ್ಲಿ ಕನಿಷ್ಠ 1,200 ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ನೂರಾರು ಇಸ್ರೇಲಿ ನಾಗರಿಕರನ್ನು ಹಮಾಸ್‌ ಒತ್ತೆಯಾಳುಗಳನ್ನಾಗಿರಿಸಿಕೊಂಡಿತ್ತು. ಈ ಪೈಕಿ ಪುರುಷ ಒತ್ತೆಯಾಳುಗಳ ಮೇಲೆ ಹಮಾಸ್‌ ನ ಸಲಿಂಗಿ ಸದಸ್ಯರು ಅತ್ಯಾಚಾರ ನಡೆಸಿದ್ದರು ಎನ್ನುವುದು ಹಮಾಸ್ ಸಂಘಟನೆಗಳ ಒಳಗಿನ ರಹಸ್ಯ ದಾಖಲೆಗಳಿಂದ ಬಯಲಾಗಿವೆ ಎಂದು ವರದಿ ಹೇಳಿದೆ. ಸುಮಾರು 94 ಸಲಿಂಗಿ ಸದಸ್ಯರು ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ ಮಾಡಿದ್ದು, ಅವರೆಲ್ಲರನ್ನೂ ಹಮಾಸ್‌ ಚಿತ್ರಹಿಂಸೆ ನೀಡಿ ಗಲ್ಲಿಗೇರಿಸಿದೆ ಎಂದು ‘ನ್ಯೂಯಾರ್ಕ್ ಪೋಸ್ಟ್’ ವರದಿ…

Read More

ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದ ಫೆಬ್ರವರಿ 2 ರಂದು ಸಿದ್ದಾಪುರ ನರೇಂದ್ರ ಫೌಂಡೇಶನ್ ಕ್ಯಾಂಪಸ್‌ ನಲ್ಲಿ ಯೂತ್ ಫಾರ್ ಸೇವಾ, ಬೆಂಗಳೂರು, ನರೇಂದ್ರ ಫೌಂಡೇಶನ್ ಸಿದ್ದಾಪುರ, ಗ್ರಾಮ ವಿಕಾಸ ಪಾವಗಡ ಮತ್ತು ಯುಎಸ್‌ ಟಿ ಗ್ಲೋಬಲ್ ಇವರ ಸಂಯುಕ್ತ ಆಶ್ರಯದಲ್ಲಿ ಯುವ ಸಮ್ಮೇಳನವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಯುಎಸ್‌ ಟಿ ಗ್ಲೋಬಲ್‌ ನಿಂದ ಸ್ಮಿತವರ್ಮ, ನರೇಂದ್ರ ಫೌಂಡೇಶನ್‌ ನ ಕೆ.ವಿ. ರಾಜಣ್ಣ ಮತ್ತು ನರೇಂದ್ರ ರೆಡ್ಡಿ, ಗ್ರಾಮ ವಿಕಾಸದಿಂದ ಗಿರೀಶ್, ಯೂಥ್ ಫಾರ್ ಸೇವಾದ ಪ್ರಕಾಶ್ ಭಟ್ ಮತ್ತು ವೆಂಕಟೇಶ್ ಮೂರ್ತಿ, ಹಾಗೂ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗೋತ್ರಿ ರಮೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆ.ವಿ. ರಾಜಣ್ಣ, “ಹಳ್ಳಿಗಳಲ್ಲಿ ಯುವಕರು ಉದ್ಯೋಗಾನ್ವೇಶನಕ್ಕಾಗಿ ಬೇರೆ ಊರುಗಳಿಗೆ ತೆರಳುವ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೂರು ವರ್ಷದ ಸಮಗ್ರ ಗ್ರಾಮ ವಿಕಾಸ ಯೋಜನೆ ರೂಪಿಸಲಾಗಿದೆ. ಇದನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದರೆ, ಸಿದ್ದಾಪುರ ಮಾದರಿ ಗ್ರಾಮ…

Read More

ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ  ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಮೂಡಿಸಲು ಚಿಂತಾಕಿ ಪೊಲೀಸ್ ಠಾಣೆಯ ಪಿ.ಎಸ್.ಐ  ಸಿದ್ಧಲಿಂಗ ಅವರು ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸಿದರು. ತಮ್ಮ ವ್ಯಾಪ್ತಿಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಹೆಲ್ಮೆಟ್ ಧರಿಸದೇ ಬರುವ ದ್ವಿಚಕ್ರ ವಾಹನ ಸವಾರರಿಗೆ ದಂಡ ಹಾಕುವ ಬದಲು ಹೆಲ್ಮೆಟ್ ನೀಡುವ ಮೂಲಕ ಹೆಲ್ಮೆಟ್ ನ ಮಹತ್ವವನ್ನು ಬೈಕ್ ಸವಾರರಿಗೆ ತಿಳಿಸಿಕೊಡಲಾಯ್ತು. ಜನ ಸಾಮಾನ್ಯರ ಪ್ರಾಣ ರಕ್ಷಣೆಯೇ ನಮ್ಮ ಮುಖ್ಯ ಗುರಿ ಎಂದಿರುವ ಪೊಲೀಸರು, ಸಾರ್ವಜನಿಕರ ಸುರಕ್ಷತೆಗಾಗಿ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮ ಸಾರ್ವಜನಿಕರ ಶ್ಲಾಘನೆಗೆ ವ್ಯಕ್ತವಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಪತ್ನಿ ತವರು ಮನೆಗೆ ಹೋದ ಖುಷಿಯಲ್ಲಿ ಆಟೋ ಚಾಲಕನೊಬ್ಬ ತನ್ನ ಆಟೋದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಬಿಸ್ಕತ್ ವಿತರಿಸಿದ್ದಾನೆ. ನನ್ನ ಹೆಂಡತಿ ತವರು ಮನೆಗೆ ಹೋಗಿದ್ದಾಳೆ ಹಾಗಾಗಿ ನಾನು ತುಂಬಾ ಸಂತೋಷವಾಗಿದ್ದೇನೆ ಎಂದು ಬರೆದು ಪ್ರಯಾಣಿಕರಿಗೆ ಉಚಿತ ಬಿಸ್ಕತ್ ವಿತರಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನನ್ನ ಹೆಂಡತಿ ತವರು ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ ಎಂದು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಚಾಲಕ ಬರೆದುಕೊಂಡಿದ್ದಾನೆ. ಈ ವಿಡಿಯೋಗೆ ಸಾಕಷ್ಟು ಜನರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಆಟೋ ಚಾಲಕನಿಗೆ ಶುಭಾಶಯಗಳನ್ನು ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಉಚ್ಚಾಟನೆ ಮಾಡಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹಣ್ಯನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಮತ್ತಿತರರು ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಕಾರ್ಯಕರ್ತರಲ್ಲಿ ಗೊಂದಲ ಉಂಟುಮಾಡುತ್ತಿರುವ ಭಿನ್ನಮತೀಯರನ್ನು ತಕ್ಷಣವೇ ಉಚ್ಚಾಟನೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಡಿ.ಕೆ.ಹರೀಶ್ ಅವರನ್ನು ಮುಲಾಜಿಲ್ಲದೆ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಿಸ್ಟರ್ ಯತ್ನಾಳ್, ಯಡಿಯೂರಪ್ಪ ಕುಟುಂಬದವರ ಬಗ್ಗೆ ಮಾತನಾಡುವ ನೀನು ಜೆಸಿಬಿ, ಬಸ್ಸು ಓಡಿಸಿಕೊಂಡಿದ್ದೆ. ಈಗ ಬಿಜಾಪುರದಲ್ಲಿ ಶಿಕ್ಷಣ ಸಂಸ್ಥೆಗಳು, ಕಲಬುರಗಿಯಲ್ಲಿ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದೀರ. ಇದಕ್ಕೆಲ್ಲಿಂದ ದುಡ್ಡು ಬಂತು?, ನಮಗೆ ನಿಮ್ಮ ಬಂಡವಾಳ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಹಿಂದೆ ಸಸ್ಪೆಂಡ್ ಆಗಿ ಯಡಿಯೂರಪ್ಪ…

Read More

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹೊಸಪಟ್ಟಣ ಗ್ರಾಮದ ನಿವಾಸಿ ನಿರ್ಗತಿಕರಾದ ನಂಜಮ್ಮರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಮನೆ ಕಟ್ಟಿಕೊಡುವ ಸಲುವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಗುದ್ದಲಿಪೂಜೆಯಲ್ಲಿ ಹೊನ್ನವಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷರಾದ ದೊಡ್ಡಯ್ಯ, ಗಾರೆ ಮೇಸ್ತ್ರಿ ಶಂಕರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲ್ಲೂಕಿನ ಯೋಜನಾಧಿಕಾರಿ ಉದಯ್ ಕೆ, ವಲಯ ಮೇಲ್ವಿಚಾರಕ ಪರಶಿವಮೂರ್ತಿ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತಿಪಟೂರು: ಗರದ ಎಆರ್ ಟಿಓ ಕಚೇರಿ ಬಳಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶ್ರೀಧರ್, ಸಂಚಾರ ಸುರಕ್ಷತೆ ಕಾನೂನುಗಳ ಬಗ್ಗೆ ಈಗಿನ ಯುವ ಪೀಳಿಗೆಗೆ ಅರಿವು ಮೂಡಿಸಲು ಸಂಚಾರ ನಿಯಮಗಳು ಪಾಲಿಸಬೇಕಾದ ಕಾನೂನುಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಿ ಶಿಕ್ಷಣರೂಪದಲ್ಲಿ ನೀಡಬೇಕು ಎಂದು ಸಲಹೆ ನೀಡಿದರು. ನಮ್ಮ ಜೀವ ರಕ್ಷಣೆಗೋಸ್ಕರ ಕಾನೂನನ್ನು ಪಾಲಿಸಬೇಕು. ಹೆಲ್ಮೆಟ್ ಧರಿಸಬೇಕು, ಎಚ್ಚರಿಕೆಯಿಂದ ವಾಹನ ನಡೆಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಾಥಾಗೆ ಹಸಿರು ನಿಶಾನೆ ತೋರಿಸಿದ ತಹಶೀಲ್ದಾರ್ ಪವನ್ ಕುಮಾರ್ ಮಾತನಾಡಿ, ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಸರ್ಕಾರ ಜನರಲ್ಲಿ ಅರಿವು ಮೂಡಿಸಬೇಕು ರಾಜ್ಯದಲ್ಲಿ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಲು ಸಪ್ತಾಹ ಸಹಕಾರಿಯಾಗಲಿದೆ. ಜನರು ಸಂಚಾರಿ ನಿಯಮ ಪಾಲಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಎ ಆರ್ ಟಿ ಓ ರಾಮದಾಸ್, ಪೊಲೀಸರ ಕೆಪಿಎಸ್ಸಿ ವೆಂಕಟೇಶ್, ತಾಲೂಕು ವೈದ್ಯಾಧಿಕಾರಿ ರಾಧಿಕಾ, ಕಚೇರಿ ಸಿಬ್ಬಂದಿಯವರು, ಸಾರ್ವಜನಿಕರು ಇದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ…

Read More

ಢಾಕಾ: ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಮಾಡಿದ ಭಾಷಣದಿಂದ ಆಕ್ರೋಶಗೊಂಡ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ. ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನ ಧ್ವಂಸಗೊಳಿಸಲಾಗಿದೆ. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್ ಮೂಲಕ ಮನೆ ಧ್ವಂಸಗೊಳಿಸಿದ್ದಾರೆ. ನಾವು ಗಳಿಸಿದ ಸ್ವಾತಂತ್ರ‍್ಯವನ್ನು, ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬುಲ್ಡೋಜರ್ ಮೂಲಕ ನಾಶಗಳಿಸಲು ಸಾಧ್ಯವಿಲ್ಲವೆಂದು ಶೇಖ್ ಹಸೀನಾ ಭಾರತದಿಂದ ಆನ್ ಲೈನ್ ಮೂಲಕ ಮಾಡಿದ ಭಾಷಣಕ್ಕೆ ಕೆರಳಿದ ಪ್ರತಿಭಟನಾಕಾರರು ಅವಾಮಿ ಲೀಗ್ ಪಕ್ಷ ನಿಷೇಧಕ್ಕೆ ಆಗ್ರಹಿಸಿ ದಂಗೆ ಎಬ್ಬಿಸಿದ್ದಾರೆ. ಇದು ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹರಡುವ ಸಾಧ್ಯತೆ ಇದೆ. ಶೇಖ್ ಹಸೀನಾ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಆನ್ಲೈನ್ ಮೂಲಕ ಭಾಷಣ ಮಾಡಿದರು. ನನ್ನ ತಂದೆ ನಾವು ನಿರ್ಮಾಣ ಕಟ್ಟಡಗಳನ್ನು ಕೆಡವಬಹುದು, ಆದ್ರೆ ಇತಿಹಾಸವನ್ನು ಕೆಡವಲು ಸಾಧ್ಯವಿಲ್ಲ. ಇಂದಲ್ಲ ನಾಳೆ ಅದು ತನ್ನ ಸೇಡು ತೀರಿಸಿಕೊಳ್ಳುತ್ತೆ…

Read More

ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಿಸಿ ಎಂದು ಒತ್ತಾಯ ಮಾಡಲ್ಲ, ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷ ಹೇಳಿಕೆ ನೀಡಿದರು. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಇದ್ದರೆ, ಆಕಸ್ಮಿಕವಾಗಿ ಬದಲಾವಣೆಯಾದರೆ ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧ. ಬಸನಗೌಡ ಯತ್ನಾಳ್ ನಮ್ಮ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನಮ್ಮ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದಕ್ಕೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದಿದ್ದಾರೆ. ಯಡಿಯೂರಪ್ಪ ಅವರಿಂದ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ ನನಗೆ ಅವಕಾಶಕೊಟ್ಟರೆ ರಾಜ್ಯದ 224 ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭಿನ್ನಾಭಿಪ್ರಾಯ ಶಮನ ಮಾಡುವೆ. ಮುಂಬರುವ 2028ರಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ಕೆಲಸ ಮಾಡುತ್ತೇನೆ ಎಂದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು, ಇರುವ ಗೊಂದಲ ನಿವಾರಣೆಯಾಗಬೇಕು. ದೆಹಲಿಗೆ ಹೋಗಿರುವವರನ್ನು ಸಮಾಧಾನ ಮಾಡಬೇಕಾಗಿದೆ. ದಕ್ಷಿಣ ಭಾರತದ ಭೀಷ್ಮರಾಗಿರುವ ಯಡಿಯೂರಪ್ಪ ಮುಂದಾಳತ್ವ ತೆಗೆದುಕೊಳ್ಳಬೇಕಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ…

Read More

ನವದೆಹಲಿ: ವಿದ್ಯಾರ್ಥಿಗಳಿಗೆ ಪರೀಕ್ಷೆಯ ಒತ್ತಡ ನಿವಾರಣೆ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಡೆಸುವ ವಾರ್ಷಿಕ ಸಂವಾದ “ಪರೀಕ್ಷಾ ಪೆ ಚರ್ಚಾ”ದಲ್ಲಿ ಈ ಬಾರಿ ಸೆಲೆಬ್ರೆಟಿಗಳು ಕೂಡ ಭಾಗಿಯಾಗಲಿದ್ದಾರೆ. ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ವಿದ್ಯಾರ್ಥಿಗಳಿಗೆ ಸಲಹೆ ನೀಡಲಿದ್ದಾರೆ. ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ. ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50–60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.…

Read More