Author: admin

ಬೆಂಗಳೂರು: ಅರಣ್ಯ ಸಚಿವರ ಹೆಸರು ದುರ್ಬಳಕೆ ಮಾಡಿ ವ್ಯಕ್ತಿಯೊಬ್ಬರಿಗೆ 6 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 2023ರಲ್ಲಿ ವೀರೇಶ್ ಎಂಬಾತ ಅಡವಿ ಎಂಬುವವರಿಗೆ ಪರಿಚಯವಾಗಿದ್ದು, ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರ ಮತ್ತು ಅರಣ್ಯ ರಕ್ಷಕರ ಹುದ್ದೆಗಳಿಗೆ ವಿವಿಧ ಜಿಲ್ಲೆಯಗಳಲ್ಲಿ ಅರ್ಜಿ ಕರೆದಿದ್ದು, ತನಗೆ ಅರಣ್ಯ ಸಚಿವರು ತುಂಬಾ ಆತ್ಮೀಯರಾಗಿದ್ದು, ಸರ್ಕಾರ ಹುದ್ದೆ ಕೊಡಿಸುವುದಾಗಿ ಅವರನ್ನು ನಂಬಿಸಿದ್ದಾನೆ. ಈತನ ಮಾತನ್ನು ನಂಬಿದ ಪಿ.ಹೆಚ್.ಅಡವಿ(ರಾಣಿಬೆನ್ನೂರು) ಅವರು ತಮ ಮಕ್ಕಳು ಮತ್ತು ಸಹೋದರನ ಮಕ್ಕಳು ಮತ್ತು ಹೆಂಡತಿಯ ಅಕ್ಕನ ಮಗ ಸೇರಿ ಮೂವರಿಗೆ ಧಾರವಾಡ, ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಿಗೆ ಅರ್ಜಿ ಹಾಕಿಸಿದ್ದಾರೆ. ನಂತರ ವೀರೇಶ್ ಗೆ ಮುಂಗಡವಾಗಿ 2 ಲಕ್ಷದಂತೆ ಮೂವರಿಂದ ಒಟ್ಟು 6 ಲಕ್ಷ ಹಣ ಕೊಡಬೇಕು ಎಂದು ಹೇಳಿ ವಿಕಾಸ ಸೌಧದ ಬಳಿ ಪೋನ್ಪೇಯಿಂದ 50ಸಾವಿರ ಹಣವನ್ನು ಪಡೆದಿದ್ದಾನೆ. ತದನಂತರದಲ್ಲಿ ನಗದು ರೂಪದಲ್ಲಿ ಉಳಿದ 2.50ಲಕ್ಷ ಹಣವನ್ನು ಮಾಹಿತಿ ಸೌಧದ ಬಳಿ…

Read More

ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗೋದು ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಟೆಂಪಲ್ ರನ್ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾನು ದಿನ ಪೂಜೆ ಮಾಡ್ತೀನಿ. ನಾನು ಧರ್ಮದ ಮೇಲೆ ನಂಬಿಕೆ ಇಟ್ಟವನು. ಸಮಾಜ, ಜನ, ರಾಜ್ಯ, ಪಕ್ಷ, ಕುಟುಂಬಕ್ಕಾಗಿ ಪೂಜೆ ಮಾಡ್ತೀನಿ. ಟೆಂಪಲ್ ರನ್ ಏನಿಲ್ಲ, ಹಾಗಾದ್ರೆ ದೇವಸ್ಥಾನ ಏಕೆ, ಬೀಗ ಹಾಕ್ಬಿಡಿ. ದೇವನೊಬ್ಬ ನಾಮ ಹಲವು ಎನ್ನುವ ತತ್ವದ ಮೇಲೆ ನಂಬಿಕೆ ಇಟ್ಟವನು ನಾನು. ಅವರವರ ನಂಬಿಕೆ ಅವರವರ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದರು. ರಾಜಕಾರಣದಲ್ಲಿ ಯಾವ ತಿರುವು ಅವಶ್ಯಕತೆ ಇಲ್ಲ. ಪಕ್ಷ, ಹೈಕಮಾಂಡ್ ಹೇಳಿದ್ದೇ ಅಂತಿಮ. ನನಗೆ ಯಾರ ಒತ್ತಾಯ, ಬೆಂಬಲ ಏನೂ ಬೇಡ. ನನಗಾಗಿ ಕಾರ್ಯಕರ್ತರು, ಶಾಸಕರು, ಬೆಂಬಲಿಗರು, ಕೂಗೋದು ಬೇಡ. ಮಾಡೋ ಕೆಲಸ ಮಾಡೋಣ, ಫಲಾಫಲ ದೇವರಿಗೆ ಬಿಡೋಣ ಎಂದು ಹೇಳಿಕೆ ನೀಡಿದರು.…

Read More

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಕೊರಟಗೆರೆ ತಾಲೂಕಿನ ಕಸಬಾ ಮತ್ತು ಕೋಳಾಲ ಹೋಬಳಿಯಲ್ಲಿ ಪ್ರವಾಸದಲ್ಲಿದ್ದು, ಅವರನ್ನು ಕೋಳಾಲ ಜನತೆ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ವ್ಯಾಪ್ತಿಯಲ್ಲಿ ಬರುವ 7 ಗ್ರಾ.ಪಂ. ಮತ್ತು ಕಸಬಾ ಹೋಬಳಿಯ 6 ಗ್ರಾ.ಪಂ.ಗಳ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಲಾಯಿತು. ಭಾರತ ಸರಕಾರದ ಯೋಜನೆಯಡಿ ಬರುವ ಗ್ರಾಮೀಣ ಪ್ರದೇಶದ ಪಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಸೋಮಣ್ಣ, ತುಮಕೂರು ಜಿ.ಪಂ. ಮತ್ತು ಕೊರಟಗೆರೆ ತಾ.ಪಂ.ನ ಅಲಿಂಕೋ ಸಾಧನಾ ಸಲಕರಣೆ, ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತುಂತುರು ನೀರಾವರಿ ಯೋಜನೆ, ಪಶು ಇಲಾಖೆಯ ರಾಷ್ಟ್ರೀಯ ಜಾನುವಾರು ಮೀಷನ್ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು. ಜಿಲ್ಲೆಯಲ್ಲಿ ಅಭಿವೃದ್ಧಿಯ ಒಳ್ಳೆಯ ಕೆಲಸಗಳು ಆಗುತ್ತಿವೆ ಎಂದ ಸೋಮಣ್ಣ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಗುಣಗಾನ ಮಾಡಿದರು. ಬಳಿಕ ಕೊರಟಗೆರೆ ತಾಲೂಕಿನ 187ಜನ ವಿಶೇಷ ಚೇತನರಿಗೆ ಸಾಧನಾ ಸಲಕರಣೆ ಅಲಿಂಕೋ ಯೋಜನೆಯಡಿ ಎಲೆಕ್ಟ್ರೀಕ್ ಸೈಕಲ್,…

Read More

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಜವಾಹರ್ ಲಾಲ್ ನೆಹರೂ ಅವರಿಂದ ಹಿಡಿದು ರಾಜೀವ್ ಗಾಂಧಿವರೆಗೂ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಬಿ.ಆರ್. ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಹರು, ರಾಜೀನಾಮೆಯಿಂದ ಏನೂ ನಷ್ಟವಿಲ್ಲ ಎಂದಿದ್ದರು ಎಂದು ಹೇಳಿದರು. ಕಾಂಗ್ರೆಸ್ ನಾಯಕರು ಬಿ.ಆರ್. ಅಂಬೇಡ್ಕರ್ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ ಸುಡುವ ಪಕ್ಷ, ಅದರಲ್ಲಿ ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪ್ರಹ್ಲಾದ್ ಜೋಷಿ ಹೇಳಿದರು. ಕೆಲವು ದಲಿತ ಮುಖಂಡರಿಗೆ ಕಾಂಗ್ರೆಸ್ ಭ್ರಮೆ ಹುಟ್ಟಿಸಿದೆ, ದಲಿತರು ಕಾಂಗ್ರೆಸ್ನಿಂದ ದೂರ ಇದ್ದಷ್ಟು ಒಳ್ಳೆಯದು. ಕಾಂಗ್ರೆಸ್ ನವರು ಮೀಸಲಾತಿ ವಿರೋಧ ಮಾಡಿದ್ದರು. ಕಾಂಗ್ರೆಸ್ ಸದಾ ದಲಿತ ಸಮುದಾಯವನ್ನು ಕತ್ತಲಲ್ಲಿ ಇಟ್ಟಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬಹಳ ಹಿಂದೆ, ಒಮ್ಮೆ ಒಂದು ಪುಟ್ಟ ಹಣತೆ ಸೂರ್ಯದೇವನನ್ನು ಕುರಿತು ಕೇಳಿತು,  “ಹೇ… ಸೂರ್ಯದೇವ ಪ್ರತಿದಿನದ ನಿನ್ನ ಅಸ್ತಂಗತದ ನಂತರ ನಾನು ಪ್ರತಿ ಮನೆಯಲ್ಲೂ ಬೆಳಗುವೆ, ಆದರೆ ನಿನ್ನ ಹಾಗೆ ಸರ್ವ ದಿಕ್ಕುಗಳನ್ನೂ ಏಕಕಾಲದಲ್ಲಿ ಬೆಳಗಲು ಆಗುತ್ತಿಲ್ಲ ನನ್ನ ಬುಡದಲ್ಲಿ ಯಾವಾಗಲೂ ಕತ್ತಲೆಯೇ ಆವರಿಸಿರುವುದು ಇದಕ್ಕೆ ಏನು ಮಾಡಲಿ ಪರಿಹಾರ ತಿಳಿಸು” ಎಂದಾಗ, ಸೂರ್ಯದೇವ ಹೇಳಿದನು… “ಮಿತ್ರ ಕೊರಗಬೇಡ ನಾನೂ ಏನು ಸರ್ವ ಶಕ್ತನಲ್ಲ ನನ್ನ ಬೆನ್ನ ಹಿಂದೆ ನನಗಿಂತ ಆಧಿಕ ಪ್ರಕಾಶಮಾನವಾದ ನಕ್ಷತ್ರ ಒಂದು ಬಂದು ನಿಂತರೆ ನನಗೂ ಕೂಡ ನನ್ನ ಮುಂದೆ ನೆರಳ ಛಾಯೆ ಮೂಡುವುದು ಎಂದಾಗ ಹಣತೆ ಅದು ಹೇಗೆ ಎಂದಾಗ ಸೂರ್ಯದೇವ ನೋಡು ಮಿತ್ರ ನೀನು ಪ್ರಜ್ವಲಿಸುತ್ತಿರುವಾಗ ನಿನ್ನ ಬೆನ್ನ ಹಿಂದೆ ಒಂದು ಅಧಿಕ ಪ್ರಕಾಶಮಾನವಾದ ಪಂಜನ್ನು ಬೆಳಗಿಸಿದರೆ ನಿನ್ನ ಪ್ರಜ್ವಲಿಸುವ ಜ್ಯೋತಿಯ ಛಾಯೆ ಕೂಡ ಮುಂದೆ ಒಂದು ತಡೆ ಗೋಡೆಯ ಮೇಲೆ ನೆರಳಾಗಿ ಕಾಣುವುದು. ಸ್ವತಹ ಜ್ಯೋತಿಯೇ ಕೂಡ ನೆರಳಾಗಿ ಕಾಣುವಾಗ ಇನ್ನು ಸೃಷ್ಟಿಕರ್ತ…

Read More

ಚಿಕ್ಕಮಗಳೂರು: ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ 6 ನಕ್ಸಲರು ಕಾಡಿನಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಅಂತೆಯೇ ಒಂದು ಎ.ಕೆ–56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್ ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ. ಮದ್ದುಗುಂಡು–11, 303– ರೈಫಲ್ ಮದ್ದುಗುಂಡು -– 133, 12 ಬೋರ್ ಕಾರ್ಟ್ರಿಡ್ಜಸ್ -– 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು -– 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ–56 ಖಾಲಿ ಮ್ಯಾಗ್ಜಿನ್- – 01 ದೊರೆತಿದೆ. ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 251 (1) (ಬಿ), 7 ಮತ್ತು 25 (1ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು:  ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ ಛೇರ್ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟವರಾಗಿರಬೇಕು. ಈಗಾಗಲೇ ಇಲಾಖೆ ಅಥವಾ ಸರ್ಕಾರದ ಯಾವುದೇ ಇತರೆ ಮೂಲಗಳಿಂದ ಯಂತ್ರಚಾಲಿತ ವಾಹನ ಮತ್ತು ಬ್ಯಾಟರಿ ಚಾಲಿತ ವೀಲ್‌ಛೇರ್ ಪಡೆದಿರುವವರು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿಯೊಂದಿಗೆ ಕನಿಷ್ಠ 10 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಿರುವ ಬಗ್ಗೆ ಮತ್ತು ವಾರ್ಷಿಕ ಆದಾಯ 2ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಬಗ್ಗೆ ತಹಸೀಲ್ದಾರ್ ಧೃಢೀಕೃತ ಪ್ರಮಾಣ ಪತ್ರ, ಶೇ.75 ಮತ್ತು ಅದಕ್ಕಿಂತ ಹೆಚ್ಚಿಗೆ ವಿಕಲತೆ ಹೊಂದಿರುವ ಬಗ್ಗೆ ವಿಶಿಷ್ಟ ಗುರುತಿನ ಚೀಟಿ(ಯು.ಡಿ.ಐ.ಡಿ)ಯನ್ನು ಲಗತ್ತಿಸಿ ಸಲ್ಲಿಸಬೇಕು. ಆಸಕ್ತ ದೈಹಿಕ ವಿಕಲಚೇತನರು ಗ್ರಾಮ ಒನ್, ಕರ್ನಾಟಕ ಒನ್, ತುಮಕೂರು ಒನ್ ಮತ್ತು ಸಿ.ಎಸ್.ಸಿ ಕೇಂದ್ರಗಳಲ್ಲಿ ಸೇವಾ ಸಿಂಧು https://suvidha.karnataka.gov.in   ತಂತ್ರಾಂಶದಡಿ ಆನ್‌ ಲೈನ್ ಮೂಲಕ ಜನವರಿ 21ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವಿಕಲಚೇತನರ ಸಹಾಯವಾಣಿ ಕೇಂದ್ರದ…

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ಜನವರಿ 13 ಮತ್ತು 14ರಂದು ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ “ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರ”ವನ್ನು ಆಯೋಜಿಸಲಾಗಿದೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಸ್ತುಪ್ರದರ್ಶನ ಉದ್ಘಾಟಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಿರಿಧಾನ್ಯಗಳ ರಾಶಿ ಉದ್ಘಾಟಿಸುವರು. ಮರುದಿನ ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು. ಸಾರ್ವಜನಿಕರು ಸಿರಿಧಾನ್ಯ ಹಬ್ಬದಲ್ಲಿ ಪಾಲ್ಗೊಂಡು ಉತ್ಪನ್ನಗಳನ್ನು ಖರೀದಿಸಿ ಉಪಯೋಗಿಸುವುದರ ಮೂಲಕ…

Read More

ತುಮಕೂರು:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 20ರವರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಹಾಗೂ ಕಲಿಕಾ ಮತ್ತು ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಎಜುಕೇಷನ್‌ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ/ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಕೋರ್ಸಿಗೆ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿದ್ದು, ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಪೋಷಕರ ವಾರ್ಷಿಕ ಗರಿಷ್ಟ ವರಮಾನ 6ಲಕ್ಷ ರೂ.ಗಳಿಗೆ ಮೀರಿರಬಾರದು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿದ ಜಾತಿ…

Read More

ತುಮಕೂರು:  ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತುಮಕೂರು ನಗರ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನ ಮುಖ್ಯ. ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಾಲನೆ ಮಾಡಿದರೆ ಅಪರಾಧ. ಕಾನೂನು ಮೀರಿ ವಾಹನ ಚಾಲನೆ ಮಾಡಿದ ಅಪ್ರಾಪ್ತ ವಯಸ್ಸಿನ ಮಕ್ಕಳ ಪೋಷಕರು ನ್ಯಾಯಾಲಯಕ್ಕೆ ದಂಡ ಕಟ್ಟಬೇಕು. ಚಾಲನಾ ಪರವಾನಗಿ ಹೊಂದಿದ ಹಾಗೂ 18 ವರ್ಷ ತುಂಬಿದವರು ಮಾತ್ರ ವಾಹನ ಚಲಾಯಿಸಬಹುದು. ವೇಗವಾಗಿ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದು…

Read More