Author: admin

ತುಮಕೂರು:  ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2 ಮತ್ತು 3ನೇ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹಗಳು ನಡೆಯುವಾಗ ಅಧಿಕಾರಿಗಳ ಗಮನಕ್ಕೆ ಯಾಕೆ ಬಂದಿಲ್ಲ? ಇಂತಹ ಪ್ರಕರಣಗಳು ಮರುಕಳಿಸಬಾರದು. ಕರ್ತವ್ಯ ನಿರ್ಲಕ್ಷತೆ ತೋರುವ ಯಾವುದೇ ಸಿಬ್ಬಂದಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಬಾಲ್ಯ ವಿವಾಹಗಳನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಕೂಡಲೇ ತಾಲ್ಲೂಕುವಾರು ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು. ಬಾಲ್ಯ ವಿವಾಹಗಳು ನಡೆಯದಂತೆ ತಡೆಯಲು ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು…

Read More

ತುಮಕೂರು:  ಅನುದಾನ ದುರ್ಬಳಕೆ ಆರೋಪದ ಮೇಲೆ ಜಿಲ್ಲೆಯ ಮಧುಗಿರಿ ಟೌನ್ ಕೆ.ಆರ್.ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುಪಮಾ ಹೆಚ್.ಎಸ್. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ. ಪಿಎಂಶ್ರೀ ಅನುದಾನ ದುರ್ಬಳಕೆಯಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ 2024ರ ಡಿಸೆಂಬರ್ 18 ಮತ್ತು 19ರಂದು ನಡೆಸಲಾದ ತಪಾಸಣೆ ವೇಳೆ ಅನುಪಮಾ ಅವರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957ರ ನಿಯಮ 10(1)(ಎ)ರನ್ವಯ ಇಲಾಖಾ ವಿಚಾರಣೆ ಹಾಗೂ ಸೂಕ್ತ ಶಿಸ್ತುಕ್ರಮ ಕಾಯ್ದಿರಿಸಿ ಅಮಾನತ್ತುಗೊಳಿಸಲಾಗಿದೆ. ಅಮಾನತ್ತಿನ ಅವಧಿಯಲ್ಲಿ ಕೆಸಿಎಸ್‌ ಆರ್ ನಿಯಮ 98(ಎ) ಮತ್ತು ಸರ್ಕಾರದ ಆದೇಶ ದಿನಾಂಕ: 10—8–1987ರ ಮೇರೆಗೆ ಅನುಪಮಾ ಅವರಿಗೆ ಜೀವನಾಧಾರ ಭತ್ಯೆ ಪಾವತಿಸಲು ಮಂಜೂರಾತಿ ನೀಡಲಾಗಿದೆ. ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದೆಂದು…

Read More

ತುಮಕೂರು:  ನಗರ ಉಪ ವಿಭಾಗ–2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಯಲ್ಲಿ 100ಕೆವಿ ಟಿಸಿಯನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜನವರಿ 11ರಂದು ಬೆಳಿಗ್ಗೆ 11 ರಿಂದ ಸಂಜೆ 4:30 ಗಂಟೆಯವರೆಗೆ ಯಾದವನಗರ, ರಿಂಗ್‌ ರಸ್ತೆ, ಮರಳೂರು ಜನತಾ ಕಾಲೋನಿ, ಸರಸ್ವತಿಪುರಂನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊಹಬೂಬ್ ಷರೀಫ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮೈಸೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಧಾನ ಸಭೆ ಯಶಸ್ವಿಯಾಗಿದ್ದು ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ವಹಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ತಿಂಗಳಿಗೆ 15 ಸಾವಿರ ಗೌರವ ಧನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಕೂಡಲೇ 12 ಸಾವಿರ ಗೌರವ ಧನ ನಿಗದಿ ಪಡಿಸಿ ಬಳಿಕ ಹಂತ ಹಂತವಾಗಿ ಮೂರು ಸಾವಿರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ್:  ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಒಟ್ಟು 8 ಜನರ ಹೆಸರನ್ನು ಉಲ್ಲೇಖಿಸಿದ್ದರು. ಸಿಐಡಿ ಪೊಲೀಸರು ಪ್ರಕರಣ ಸಂಬಂಧ ಇಂದು ಬೀದರ್​ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜು ಕಪನೂರು, ಘೊರಕ್ ನಾಥ್, ನಂದಕುಮಾರ್ ನಾಗಬುಜಂಗಿ, ರಾಮನಗೌಡಾ ಪಾಟೀಲ್, ಸತೀಶ್ ಎನ್ನುವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಗೆ ವಿಚಾರಣೆಗೆ ಬರುವಂತೆ ಸಿಐಡಿ ನೋಟಿಸ್ ನೀಡಿತ್ತು. ಅದರಂತೆ ಐವರು ಇಂದು ಬೀದರ್​ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಸೂಕ್ತವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಸಿಐಡಿ, ಆರೋಪಿಗಳನ್ನು ಬಂಧಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ರಾಜ್ಯ ಸರ್ಕಾರ  ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಒಂದು ವರ್ಷದಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಜೆಟ್​ ಗೂ ಮುನ್ನವೇ ಬಿಯರ್​ ದರ ಏರಿಕೆ ಮಾಡಲು ನಿರ್ಧರಿಸಿದೆ. ಜನವರಿ 20ರಿಂದ ಬಿಯರ್ ಬೆಲೆ ಕನಿಷ್ಠ 15 ರೂಪಾಯಿಯಿಂದ 50 ರೂಪಾಯಿವರೆಗೂ ಹೆಚ್ಚಳವಾಗುವ ಸಾಧ್ಯತೆ ಇದ್ದು, ಒಂದು ವೇಳೆ ಹೆಚ್ಚಳವಾದರೆ ಒಂದು ವರ್ಷದಲ್ಲಿ ಮೂರನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳವಾದಂತೆ ಆಗುತ್ತದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು, ಬಿಯರ್ ಬೆಲೆ ಏರಿಕೆ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಬಿಯರ್ ಬೆಲೆ ಹೊರತುಪಡಿಸಿ ಬೇರೆ ಯಾವುದೇ ಮದ್ಯದ ಬೆಲೆಯ ಹೆಚ್ಚಳದ ಬಗ್ಗೆ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: 7ನೇ ತರಗತಿ ವಿದ್ಯಾರ್ಥಿ, ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ನಡೆದಿದೆ. ಸರ್ವೊದಯ ಸ್ಕೂಲ್ ನಲ್ಲಿ 7ನೇ ತರಗತಿ ಓದುತ್ತಿದ್ದ ತ್ರಿಶಾಲ್, ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ಡೇತ್ ನೋಟ್ ಬರೆದಿಟ್ಟಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಜಿಲ್ಲೆಯ ತಿಪಟೂರು ನಗರಕ್ಕೆ ಕುಡಿಯುವ ನೀರು ನಿಲ್ಲಿಸಿದ್ದು, ನಗರದ ಜನ ಕುಡಿಯುವ ನೀರಿಗೂ ತತ್ಪರ ಪಡುವಂತಾಗಿದೆ, ಸರ್ಕಾರ ಹಾಗೂ ನಗರಸಭೆಗೆ ಅನೇಕ ಬಾರಿ ಮನವಿ ಮಾಡಲಾಗಿದೆ. ಮಾಧ್ಯಮಗಳಲ್ಲೂ ವರದಿಗಳು ಬಂದಿವೆ, ನಗರ ಆಡಳಿತ ಹಾಗೂ ಪೌರಾಯುಕ್ತರು, ನಗರದ ಜನರಿಗೆ ಕುಡಿಯುವ ನೀರು ನೀಡದೆ, ನಗರದ ಜನಕ್ಕೆ ತೊಂದರೆ ಮಾಡಲಾಗುತ್ತಿದೆ ಕೂಡಲೇ ನಗರಸಭೆ ಆಡಳಿತ ಉತ್ತರ ನೀಡಬೇಕು ಎಂದು ಒತ್ತಾಯಿಸಿ, ನಗರಸಭೆ ವಿರೋಧ ಪಕ್ಷದ ನಾಯಕ ರಾಮ್ ಮೋಹನ್ ನೇತೃತ್ವದಲ್ಲಿ ನಗರಸಭೆ ವಿಶೇಷ ಸಾಮಾನ್ಯ ಸಭೆ ಬಹಿಷ್ಕರಿಸಿ ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು. ತಿಪಟೂರು ನಗರಸಭೆ ಅಧ್ಯಕ್ಷರಾದ ಯಮುನಾ ಧರಣೇಶ್, ಅಧ್ಯಕ್ಷತೆಯಲ್ಲಿ ಶಾಸಕರಾದ ಕೆ.ಷಡಕ್ಷರಿಯವರ ಉಪಸ್ಥಿತಿಯಲ್ಲಿ ವಿಶೇಷ ಸಾಮಾನ್ಯ ಸಭೆ ನಡೆಸಲಾಯಿತು. ಸಭೆ ಆರಂಭವಾಗುತ್ತಿದ್ದಂತೆ, ಬಿಜೆಪಿ ಸದಸ್ಯರು ತಿಪಟೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರವಿದೆ, ತಿಪಟೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಈಚನೂರು ನಗರಕ್ಕೆ ನೀರು ಪೂರೈಸುವ ನೀರು ನಿಲ್ಲಿಸಲಾಗಿದೆ. ಈಚನೂರು ಕೆರೆ ನೀರಿಗೆ ಯುಜಿಡಿ ಕೊಳಚೆ ನೀರು ಸೇರಿ, ಕಲುಷಿತವಾಗಿದ್ದು,…

Read More

ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದ ಶಿರಾ ರಸ್ತೆಯ ದೇವಗಿರಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜಾ ಕಾರ್ಯಕ್ರಮಗಳು ಶುಕ್ರವಾರ ಅದ್ದೂರಿಯಾಗಿ ಜರುಗಿದವು. ಭಕ್ತರಿಗೆ ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಅನುಕೂಲ ಕಲ್ಪಿಸಲಾಗಿದ್ದು, ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆಯನ್ನೂ ತೃಪ್ತಿಕರವಾಗಿ ನಡೆಸಲಾಯಿತು. ವಿಶೇಷ ಅಲಂಕಾರದೊಂದಿಗೆ ಶ್ರೀ ವೆಂಕಟೇಶ್ವರನಿಗೆ ಪೂಜೆಯನ್ನು ನೆರವೇರಿಸಿದ್ದು, ದೇವರ ಮೂರ್ತಿಯ ಶೋಭೆ ಭಕ್ತರನ್ನು ಆಕರ್ಷಿಸಿತು. ವೈಕುಂಠ ಏಕಾದಶಿಯ ಪ್ರಯುಕ್ತ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನವನ್ನು ಪಡೆದರು. ದೇವಾಲಯದ ಆಡಳಿತ ಮಂಡಳಿಯ ಸಮರ್ಪಕ ವ್ಯವಸ್ಥೆ ಮತ್ತು ಆಧ್ಯಾತ್ಮಿಕ ವಾತಾವರಣ ಭಕ್ತರಿಗೆ ಆನಂದ ನೀಡಿತು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಚಾಣಕ್ಯ ತನ್ನ ಜೀವಿತಾವಧಿಯಲ್ಲಿ ಅನೇಕ ನೀತಿಗಳನ್ನು ರಚಿಸಿದ್ದಾರೆ. ಇದು ಚಾಣಕ್ಯನ ನೀತಿಗಳು ಎಂದೇ ಪ್ರಸಿದ್ಧಿ ಪಡೆದಿವೆ. ಚಾಣಕ್ಯನ ನೀತಿಯ ಪ್ರಕಾರ ಈ 5 ಗುಣಗಳೇ ಮನುಷ್ಯನ ವಿನಾಶಕ್ಕೆ ಕಾರಣವಂತೆ, ಆ ಗುಣಗಳು ಯಾವುದು ತಿಳಿದುಕೊಳ್ಳೋಣ ಬನ್ನಿ… ಸೋಮಾರಿತನ: ಯಾವುದೇ ವ್ಯಕ್ತಿ ಯಶಸ್ವಿ ಮತ್ತು ಸಮೃದ್ಧ ಜೀವನ ನಡೆಸಲು ಮೊದಲು ಸೋಮಾರಿತನದಿಂದ ಬಿಡುಗಡೆ ಹೊಂದಬೇಕಂತೆ. ಸೋಮಾರಿ ತನ ನಿಮ್ಮನ್ನು ಜೀವನದಲ್ಲಿ ಮುಂದೆ ಹೋಗಲು ಬಿಡುವುದಿಲ್ಲ. ಅದು ವಿನಾಶದತ್ತ ನಿಮ್ಮನ್ನು ಕೊಂಡೊಯ್ಯುತ್ತದೆ. ಅಹಂಕಾರ: ಅಹಂಕಾರಿ ವ್ಯಕ್ತಿ ಎಂದಿಗೂ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ. ಯಾಕೆಂದರೆ, ಜೀವನದಲ್ಲಿ ಯಶಸ್ಸು ಪಡೆಯಲು ಅಹಂಕಾರವೇ ಅಡ್ಡಿಯಾಗಬಹುದು. ನಾನು ಎನ್ನುವ ಅಹಂಕಾರ, ನನ್ನಿಂದಲೇ ಎಲ್ಲ ಎನ್ನುವ ಅಹಂಕಾರ ಇರುವ ಮನುಷ್ಯರಿಂದ ಪ್ರತಿಯೊಬ್ಬರೂ ದೂರವಿರುತ್ತಾರೆ. ಹಾಗಾಗಿ ಆತ ಯಶಸ್ಸು ಪಡೆಯುವುದು ತುಂಬಾನೇ ಕಷ್ಟವಂತೆ. ದುರಾಸೆ: ಚಾಣಕ್ಯನ ಪ್ರಕಾರ ದುರಾಸೆ ಹೊಂದಿದ ವ್ಯಕ್ತಿ ಬೇಗನೇ ನಾಶವಾಗುತ್ತಾನಂತೆ. ಜೀವನದಲ್ಲಿ ಯಶಸ್ಸು, ಸಂತೋಷ ಬೇಕಾದರೆ, ದುರಾಸೆಯಿಂದ ದೂರವಿರಬೇಕು. ಎಲ್ಲರನ್ನೂ ಸಮಾನವಾಗಿ ನೋಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸುಳ್ಳು ಹೇಳುವ…

Read More