Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್.ಪಾವನ ಆತ್ಮಹತ್ಯೆಗೆ ಶರಣಾದವರಾಗಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವನ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದು. ನಾನು ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ವಿದ್ಯಾರ್ಥಿನಿ ಪಾವನ ಶವ ಶಿಫ್ಟ್ ಮಾಡಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೂಡಿಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಕೋತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಕೋತಿಗೆ ಸ್ಥಳೀಯರು ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಕೋತಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಪರಿಣಾಮ ರಸ್ತೆಯಲ್ಲೇ ಕೋತಿ ಸಾವನ್ನಪ್ಪಿತ್ತು. ರಸ್ತೆಯಲ್ಲಿ ಮೃತಪಟ್ಟ ಮಂಗನಿಗೆ ಜಾವಳಿ ಗ್ರಾಮದ ಯುವಕರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಧಾರ್ಮಿಕ ವಿಧಿ–ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 2.50ಲಕ್ಷ ರೂ. ಮೀರಿರಬಾರದು. ಅರ್ಜಿಯನ್ನು ಮಾರ್ಚ್ 10ರೊಳಗಾಗಿ ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಅಥವಾ ದೂ.ಸಂ. 0816–2273724ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ನಗರದ ಕನ್ನಡ ಭವನದಲ್ಲಿ ಸಿರಾಗೇಟ್ ಶ್ರೀ ಶಾರದಾ ಸ್ಕೂಲ್ ಆಫ್ ಫೈನ್ ಆರ್ಟ್ಸ್ ಶಾಲೆಯ ವತಿಯಿಂದ ಶ್ರೀ ಪುರಂದರದಾಸರ ಮತ್ತು ತ್ಯಾಗರಾಜರ ಆರಾಧನಾ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ ಮಾತನಾಡಿ, ಸಂಗೀತ ಜೀವನದಲ್ಲಿ ಅತಿ ಮುಖ್ಯವಾದದ್ದು. ಬಾಲ್ಯದಿಂದಲೇ ಮಕ್ಕಳಲ್ಲಿ ನೃತ್ಯ ಅಭ್ಯಾಸ ಮಾಡುತ್ತಾ ಬಂದರೆ ನಮ್ಮ ಸಮಾಜಕ್ಕೆ ಒಂದು ಕೊಡುಗೆ ನೀಡಲು ಸಾಧ್ಯ ಎಂದರು. ಮನುಷ್ಯನ ಜೀವನದಲ್ಲಿ ನೆಮ್ಮದಿ ಸುಖ ದೊರಕಬೇಕು ಎಂದರೆ ಸಂಗೀತ ಹಾಗೂ ಸಾಹಿತ್ಯ ಲೋಕದಲ್ಲಿ ತಮ್ಮನ್ನ ತಾವು ತೊಡಗಿಸಿ ಕೊಂಡಾಗ ಮಾತ್ರ ಅದು ಸಾಧ್ಯವಾಗುತ್ತದೆ. ಪೋಷಕರು ಸಹ ತಮ್ಮ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಆ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಹಾಗೂ ಸಂಸ್ಕಾರ ಮತ್ತು ವಿನಯತೆಯನ್ನ ಮೈಗೂಡಿಸಿಕೊಂಡಲ್ಲಿ ಸಮಾಜಕ್ಕೆ ಉತ್ತಮ ಪ್ರಜೆ ನೀಡಿದಂತಾಗುತ್ತದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಡಾ. ಸಣ್ಣಹೊನ್ನಯ್ಯ ಕಂಟಲಗೆರೆ ಮಾತನಾಡಿ, ಸಿರಾ ಗೇಟ್ ಭಾಗದಲ್ಲಿ ಇರುವ ಮಕ್ಕಳು ಸಂಗೀತ ಹಾಗೂ ನೃತ್ಯ ಅಭ್ಯಾಸ ಮಾಡಲು…
ತುಮಕೂರು: ನಗರದ ಜಯನಗರದಲ್ಲಿರುವ ಕ್ಯಾಲ್ಸಿ ಅಬಾಕಸ್ ಶಾಲೆಯ ಬಾಲಕ ಕುಮಾರ ಅನಿಶ್ ಎಂ. ಅವರು ಹುಬ್ಬಳಿಯಲ್ಲಿ ರೇಡಿಯಂಟ್ ಮೆಂಟಲ್ ಅರ್ಥಮೆಟಿಕ್ ಸಂಸ್ಥೆ ನಡೆಸಿದ ರಾಜ್ಯ ಮಟ್ಟದ ಅಬ್ಯಾಕಸ್ ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಬಹುಮಾನ ಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತುಮಕೂರಿನ ಕ್ಯಾಲ್ಸಿ ಅಬಾಕಸ್ ಶಾಲೆಯ ಮಕ್ಕಳಿಗೆ ರೆಡಿಮೆಂಟ್ ಅಕಾಡೆಮಿ ಸಂಸ್ಥೆಯ ಮುಖ್ಯಸ್ಥರಾದ ಗೀತಾ ಕಬಾಡಿ ಅವರು ಪ್ರಶಸ್ತಿಗಳನ್ನು ವಿತರಿಸಿದರು. ಟೇಬಲ್ ಟೆಲ್ಲಿಂಗ್ ಪ್ರಕ್ರಿಯೆಯನ್ನು ಕಲಿಯವುದರಿಂದ ಮಕ್ಕಳ ಮೆದುಳಿನ ಪ್ರಕ್ರಿಯೆ ವೇಗಗೊಳ್ಳುತ್ತದೆ. ಗಣಿತಶಾಸ್ತ್ರದಲ್ಲಿ ಹೆಚ್ಚು ಪರಿಣಿತಿ ಸಾಧಿಸುತ್ತಾರೆಂದು ಗೀತಾ ಕಬಾಡಿ ಹೇಳಿದರು. ತುಮಕೂರಿನ ಕ್ಯಾಲ್ಸಿ ಅಬಾಕಸ್ ಸಂಸ್ಥೆಯ ಮುಖ್ಯಸ್ಥರಾದ ಸಂತೋಷ, ಪ್ರಾಂಶುಪಾಲರಾದ ಸೌಮ್ಯ. ಎಸ್. ಶಿರೂರ್ ಮತ್ತು ಶಿಕ್ಷಕಿ ಚೇತನ ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹಾಜರಿದ್ದರು. 19 ಮಕ್ಕಳಿಗೆ ಪ್ರಶಸ್ತಿ: ಹುಬ್ಬಳಿಯಲ್ಲಿ ರೇಡಿಯಂಟ್ ಮೆಂಟಲ್ ಅರ್ಥಮೆಟಿಕ್ ಸಂಸ್ಥೆ ನಡೆಸಿದ ಅಬಾಕಸ್ ಮೆಂಟೆಲ್ ಅರ್ಥಮಿಟಿಕ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ 60 ವಿದ್ಯಾರ್ಥಿಗಳಲ್ಲಿ ಚಾಂಪಿಯನ್ ಪಟ್ಟ ಪಡೆದಿರುವುದು ಸೇರಿದಂತೆ 19 ಮಂದಿ…
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡಾಗ ಮಾತ್ರ ವೃತ್ತಿ ಜೀವನದಲ್ಲಿ ಬರುವ ಸಲಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ್ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದ ಎಲೆಕ್ಟ್ರಿಕಲ್ ಸೆಮಿನಾರ್ ನಲ್ಲಿ ನಡೆದ ಇಂಡಸ್ಟ್ರಿಯಲ್ ಆಟೋಮೇಷನ್ ಎಂಬ ವಿಷಯದ ಕುರಿತು ಹತ್ತು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಅಭಿವೃದ್ಧಿಯಾಗಿರುವ ಕೃತಕ ಬುದ್ದಿಮತ್ತೆಯಂತಹ ತ್ರಂತ್ರಜ್ಞಾನವು ಸಾಕಷ್ಟು ಕ್ಷೇತ್ರವನ್ನು ಆವರಿಸಿದೆ. ಇಂತಹ ತಂತ್ರಜ್ಞಾನಗಳ ಅರಿವು ನಿಮಗಿದ್ದರೆ ತಾಂತ್ರಿಕ ಯುಗದಲ್ಲಿ ನೀವು ಉಳಿಯಲು ಸಾಧ್ಯವಾಗುತ್ತದೆ. ಕಲಿಕೆ ನಿರಂತರವಾದ್ದು, ಪ್ರತಿನಿತ್ಯವೂ ಹೊಸತನ್ನು ಕಲಿಯುತ್ತಿರಬೇಕು ಎಂದು ತಿಳಿಸಿದರು. ಎಚ್ ಎಂಎಸ್ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಡಾ.ತ್ಯಾಗರಾಜು ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನೆಕೇಳುವ ಮನೋಭಾವವನ್ನು ರೂಡಿಸಿಕೊಳ್ಳಿ. ಪ್ರಶ್ನೆ ಕೇಳುವುದರಿಂದ ಗೊಂದಲಗಳಿಗೆ ಪರಿಹಾರ ಸಿಗುತ್ತದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.…
ತುಮಕೂರು: ಇಲ್ಲಿನ ಸದಾಶಿವನಗರದ 6ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಫೆ.3 ರಿಂದ 5ರವರೆಗೆ 29ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ತಿರುಕಲ್ಯಾಣೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಫೆ.3ರಂದು ಬೆಳಿಗ್ಗೆ 7 ಗಂಟೆಗೆ ಸ್ವಾಮಿಗೆ ಕುಂಭ ಕ್ಷೀರಾಭಿಷೇಕ ಹಾಗೂ ಸಂಜೆ 6:30ಕ್ಕೆ ಮಹಾಮಂಗಳಾರತಿ ನೆರವೇರಿತು. ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಂಗೋಲಿ ಸ್ಪರ್ಧೆ ಮತ್ತು ಬಹುಮಾನ ವಿತರಣೆ ಏರ್ಪಡಿಸಲಾಗಿದೆ. ಫೆ.4 ರಂದು ಬೆಳಿಗ್ಗೆ 5 ಗಂಟೆಗೆ ಸ್ವಾಮಿಗೆ ಮಹಿಳೆಯರಿಂದ ಗಂಗಾಪೂಜೆ ನೆರವೇರಲಿದ್ದು, ಶ್ರೀ ಲಕ್ಷ್ಮಿನರಸಿಂಹಸ್ವಾಮಿಯವರ ತಿರುಕಲ್ಯಾಣೋತ್ಸವ ನೆರವೇರಲಿದೆ. ಕಾರ್ಯಕ್ರಮಕ್ಕೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಮಠದ ಶ್ರೀ ಈಶ್ವರನಂದಾಪುರಿ ಸ್ವಾಮೀಜಿ, ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಭಾಗಿಯಾಗಲಿದ್ದಾರೆ. ಫೆ.5 ರಂದು ವಸಂತೋತ್ಸವ ಸೇವೆ ಏರ್ಪಡಿಸಲಾಗಿದೆ. ಇದರೊಂದಿಗೆ ಸ್ವಾಮಿಗೆ ವಿಶೇಷ ಪೂಜೆ ನೆರವೇರಲಿದ್ದು, ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು: ಸರ್ಕಾರದ ಸುತ್ತೋಲೆಯಂತೆ ಜನವರಿ 26ನೇ ದಿನಾಂಕದಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿತ್ತು.. ಆದರೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ : 26/01/2025 ರಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಅವಮಾನಿಸಿ ಕಾರ್ಯಕ್ರಮ ನಡೆಸಿರುವ ಘಟನೆಯ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿಗಾರ ಮಂಜುಸ್ವಾಮಿ ಎಂ ಎನ್ ಸಂಕ್ಷಿಪ್ತವಾದ ವರದಿಯನ್ನು ಬಿತ್ತರಿಸಿದ್ದರು. ನಮ್ಮತುಮಕೂರು ವಾಹಿನಿಯಲ್ಲಿ ವರದಿಯಿಂದ ತಕ್ಷಣವೇ ಎಚ್ಚೆತ್ತ ತಾಲೂಕು ಆಡಳಿತದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡು ಪರಿಶೀಲಿಸಿ, ಸವಿಸ್ತಾರವಾದ ವರದಿಯನ್ನು ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಜಿ. ರವರಿಗೆ ಸಲ್ಲಿಸಿದ್ದರು. ಅನಧಿಕೃತವಾಗಿ ಗೈರು…
ಬೀದರ್: ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಔರಾದ್–ಬಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾರ್ವನಿಕರಿಗೆ ರಸ್ತೆ ಸುರಕ್ಷತೆ ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನಿರ್ದೇಶನದಂತೆ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ವಸೀಮ್ ಪಟೇಲ್ (ಕಾ.ಸೂ), ಪಿಎಸ್ ಐ ರೇಣುಕಾ (ಅ.ವಿ), ರವರು ತಮ್ಮ ಸಿಬ್ಬಂದಿಯೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ಸವಾರರನ್ನು ತಡೆದು, ಅವರಿಗೆ ದಂಡ ಹಾಕದೇ ಹೆಲ್ಮೆಟ್ ವಿತರಿಸುವ ಮೂಲಕ, ಹೆಲ್ಮೆಟ್ ನ ಮಹತ್ವದ ಬಗ್ಗೆ ಹಾಗೂ ಹೆಲ್ಮೆಟ್ ಧರಿಸದೇ ಇರುವುದರಿಂದ ಆಗುತ್ತಿರುವ ಸಾವು ನೋವುಗಳ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಗಾಗಿ ನಿಗದಿಪಡಿಸಲಾಗಿರುವ ನಿಯಮಗಳನ್ನು ಸಡಿಲಗೊಳಿಸುವಂತೆ ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರಿಗೆ ಮನವಿ ಮಾಡಿತು. ಮಾಧ್ಯಮ ಪಟ್ಟಿಯಲ್ಲಿ ಸೇರಿರದ ಸ್ಥಳೀಯ ಪತ್ರಿಕೆಗಳ ಪತ್ರಕರ್ತರೆಲ್ಲರಿಗೂ ಬಸ್ ಪಾಸ್ ದೊರಕಬೇಕು. ಗ್ರಾಮೀಣ ಪತ್ರಕರ್ತರಿಗೆ ಯಾವುದೇ ವೇತನಗಳು ಇರುವುದಿಲ್ಲವಾದ್ದರಿಂದ ವೇತನಕ್ಕೆ ಸಂಬಂಧಿಸಿದ ಯಾವುದೇ ವಿವರಗಳನ್ನು ನೀಡಲು ಸಾಧ್ಯವಿಲ್ಲ. ಹಾಗಾಗಿ ವೇತನಪತ್ರ ದಾಖಲೆಗಳ ಬದಲಾಗಿ ಕೇವಲ ಅಕೌಂಟ್ ನಂಬರ್/ಪಾಸ್ ಪುಸ್ತಕ ನಕಲು ಪಡೆಯಲು ನಿಯಮ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಲಾಯಿತು. ಸೇವಾನುಭವದ ವರ್ಷಗಳನ್ನು 4 ವರ್ಷಗಳ ಬದಲಿಗೆ 2 ವರ್ಷ ನಿಗದಿಪಡಿಸುವ ಮೂಲಕ ಎಲ್ಲಾ ಗ್ರಾಮೀಣ ಪತ್ರಕರ್ತರಿಗೂ ಬಸ್ ಪಾಸ್ ದೊರಕುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಡಿ.ಕೃಷ್ಣಮೂರ್ತಿ, ಉಪಾಧ್ಯಕ್ಷರಾದ ನಾದೂರು ವಾಸದೇವ,ಕಾರ್ಯದರ್ಶಿ ಸ್ವಾಮಿ ಲಿಂಗಪ್ಪ, ಖಜಾಂಚಿ ಚಂದ್ರಶೇಖರ್, ತುಮಕೂರು ಜಿಲ್ಲಾ ಉಪಾಧ್ಯಕ್ಷ ಕುಮಾರಸ್ವಾಮಿ ಜಿ.ಕೆ., ನಿರ್ದೇಶಕರಾದ ಜಗದೀಶ್ ಬಿ.,…