Subscribe to Updates
Get the latest creative news from FooBar about art, design and business.
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
- ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
- ತುಮಕೂರಿನಲ್ಲಿ ಡ್ರೀಮ್ ಡೀಲ್ ಲಕ್ಕಿ ಡ್ರಾ: 53 ಜನರಿಗೆ ಭರ್ಜರಿ ಬಹುಮಾನ
- ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
Author: admin
ಸರಗೂರು: ತಾಲೂಕಿನ ಮುಳ್ಳೂರು ಸಮೀಪದ ಬೆಣ್ಣೆಗೆರೆಯ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆಯೇ ಮುಳ್ಳೂರಿನಿಂದ ಸುಮಾರು 10 ಕಿ.ಮೀ. ದೂರದ ಹೀರೇಗೌಡನಹುಂಡಿ ಸಮೀಪ ಜಮೀನಿನಲ್ಲಿ ಹುಲಿಯೊಂದು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ರಾಜಶೇಖರ್ ಅವರನ್ನು ಬಲಿ ಪಡೆದಿದ್ದ ಹುಲಿಯ ಸೆರೆಗೆ ಮಂಗಳವಾರವೂ ರೋಹಿತಾ, ಭೀಮಾ, ಮಹೇಂದ್ರ ಸಾಕಾನೆಗಳ ಮೂಲಕ ಬಂಡೀಪುರ ಅರಣ್ಯ ವ್ಯಾಪ್ತಿಯ ನುಗು, ಕಲ್ಕರೆ, ಯಡಿಯಾಲ ಉಪ ವಿಭಾಗದ ಸುಮಾರು 130ಕ್ಕೂ ಅಧಿಕ ಸಿಬ್ಬಂದಿ ಕೂಂಬಿಂಗ್ ಆರಂಭಿಸಿ ಹಂತಕ ಹುಲಿಗಾಗಿ ತೀವ್ರಶೋಧ ನಡೆಸುತ್ತಿರುವಾಗಲೇ, ಬೆಳಗ್ಗೆ ಸುಮಾರು 11 ಗಂಟೆಗೆ ವೇಳೆಗೆ ಸಮೀಪದ ಹೀರೇಗೌಡನ ಹುಂಡಿ ಬಳಿ ಸತೀಶ್ ಎಂಬವರ ಜಮೀನಿನಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಈ ಬಗ್ಗೆ ಸ್ಥಳೀಯ ರೈತರು ನೀಡಿದ ಖಚಿತ ಮಾಹಿತಿ ಮೇರೆಗೆ ಕೂಡಲೇ ಸಾಕಾನೆಗಳನ್ನು ಸ್ಥಳಕ್ಕೆ ಕರೆತಂದ ಅರಣ್ಯ ಇಲಾಖೆ ಹುಲಿಗಾಗಿ ಶೋಧ ಆರಂಭಿಸಿದೆ. ಬಳಿಕ ಹುಲಿ ಚಲನವಲನಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಲಿಯು ಸಂಜೆ ಸುಮಾರು…
ಕೊರಟಗೆರೆ: ಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರೆತು, ಸೋಲು–ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಶಿಸ್ತು, ಸಮಯವನ್ನು ಪಾಲಿಸಬೇಕು. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ನಾಗಣ್ಣ ತಿಳಿಸಿದರು. ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಉಪನಿರ್ದೇಶಕರ ಕಾರ್ಯಾಲಯ ಮಧುಗಿರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಯು/14 ಮತ್ತು ಯು/17 ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಜ್ಯೋತಿ ಹಿಡಿದು ಕ್ರೀಡೆಗೆ ಚಾಲನೆ ನೀಡಿ ಮಾತನಾಡಿದರು. ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಎಂದಿಗೂ ವಿಶೇಷ ಗೌರವವಿದೆ. ಅವರು ಸದಾ ಸ್ಪೂರ್ತಿದಾಯಕರಾಗಿರುತ್ತಾರೆ. ಮಕ್ಕಳು ಜಿಲ್ಲಾಮಟ್ಟದಲ್ಲಿ ಗೆಲುವು ಸಾಧಿಸಿ ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಬೇಕು ಎಂದು ಹೇಳಿದರು. ಮಧುಗಿರಿ ಡಿಡಿಪಿಐ ಮಾಧವರೆಡ್ಡಿ ವಿ. ಕ್ರೀಡಾಕೂಟದ ಪ್ರಾಸ್ತಾವಿಕ ನುಡಿಗಳನ್ನಾಡಿ, ಕ್ರೀಡೆಯಲ್ಲಿ ಸೋಲು–ಗೆಲುವು ಎಲ್ಲರಿಗೂ ಇರುತ್ತದೆ. ಆದರೆ ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಶಿಸ್ತು, ಒಳ್ಳೆಯ ಪ್ರಯತ್ನ, ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು…
ಔರಾದ್: ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ತಹಶೀಲ್ದಾರ್ ಮಹೇಶ ಪಾಟೀಲ್ ಮಂಗಳವಾರ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಸೂಚಿಸಿದರಲ್ಲದೇ, ಅನ್ಯ ಭಾಷೆಯಲ್ಲಿರುವುದನ್ನು ತೆರವುಗೊಳಿಸುವಂತೆ ಸೂಚಿಸಿದರು. ಸರ್ಕಾರ ಕನ್ನಡ ನಾಮಫಲಕ 60% ಕಡ್ಡಾಯವಾಗಿ ಇರಬೇಕೆಂದು ಆದೇಶಿಸಿದರು ಸಹ ಕ್ಯಾರೆ ಎನ್ನದ ಅಂಗಡಿ ಮಾಲೀಕರಿಗೆ ತಹಶೀಲ್ದಾರ್ ಸೇರಿದಂತೆ ಕರವೇ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಅಂಗಡಿಗಳಿಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ತಹಶೀಲ್ದಾರ್ ಮಹೇಶ್ ಪಾಟೀಲ್, ಸರ್ಕಾರದ ಆದೇಶ ಪ್ರತಿಯೊಬ್ಬರು ಪಾಲಿಸಬೇಕು. 60% ಕನ್ನಡದಲ್ಲಿರುವುದು ಕಡ್ಡಾಯ. ಕಡೆಗಣಿಸಿದರೇ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪಪಂ ಮುಖ್ಯಾಧಿಕಾರಿಗಳು ಇದರ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಕರವೇ ತಾಲೂಕ ಅಧ್ಯಕ್ಷರು ಅನಿಲ ದೇವಕತ್ತೆ, ಕರವೇ ನಗರ ಘಟಕ ಅಧ್ಯಕ್ಷರು ಭೀಮ ಹೇಳವಿ, ಕರವೇ ಉಪಾಧ್ಯಕ್ಷರು ಕೇಶವ ಹಕ್ಕೇ, ಬಸವಕುಮಾರ ಚೌಕಂಪಲ್ಲೆ, ಕಪಿಲ್ ಹತ್ತಾಗಲೆ, ಧರಾಮ್ ಕಾಂಬಳೆ, ಏವನ್ ಕಾಂಬಳೆ, ರಾಹುಲ್ ಹೇಳವಿ, ಅಭಿಷೇಕ್ ಜಾಧವ ಹಾಗೂ ಕರವೇ ಕಾರ್ಯಕರ್ತರು…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾ ನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತಿಯಿಂದ ನವೆಂಬರ್ 11ರಂದು ಆಚರಿಸಲಾಗುವ “ಒನಕೆ ಓಬವ್ವ’ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಛಲವಾದಿ ಸಮುದಾಯದ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವ–ಬರಹದ ಅರ್ಜಿಯನ್ನು ನವೆಂಬರ್ 5ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಠ್ಯ ಬಾಳನಕಟ್ಟೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2275204ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಸ್ಟರ್ ಕು. ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 4ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ) ತುಮಕೂರು ಇವರು ಅಕ್ಟೋಬರ್ 29 ರ ಬುಧವಾರ ಸಂಜೆ 6.30 ಗಂಟೆಗೆ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಸಾಹಿತಿ ಡಾ.ಚಂದ್ರಶೇಖರ ಪಾಟೀಲರ ಗೋಕರ್ಣದ ಗೌಡಶಾನಿ ರಂಗ ಪ್ರಯೋಗ ಹಮ್ಮಿಕೊಳ್ಳಲಾಗಿದೆ. ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಹೊಸ ನಾಟಕಗಳ ಪ್ರಯೋಗ ಹೊಸ ಕಲಾವಿದರಿಗೆ ತರಬೇತಿ ಮತ್ತು ನಾಟಕಗಳ ಪ್ರಯೋಗ, ನಾಟಕಗಳ ಕುರಿತ ಕಾರ್ಯಾಗಾರ, ವಿಚಾರ ಸಂಕಿರಣ ಹೀಗೆ ಹಲವು ಕಾರ್ಯಕ್ರಮಗಳ ಮೂಲಕ ರಂಗಭೂಮಿ ಉಳಿವಿಗೆ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ ನಿರಂತರವಾಗಿ ತೊಡಗಿಕೊಂಡಿದೆ. ಇದರ ಮುಂದುವರಿದ ಭಾಗವಾಗಿ ಅಕ್ಟೋಬರ್ 29ರ ಬುಧವಾರ ಗೋಕರ್ಣದ ಗೌಡಶಾನಿ ನಾಟಕದ ಪ್ರಯೋಗವನ್ನು ಕೌಡುಮಾರನಹಳ್ಳಿ ಕಾಂತರಾಜು ಅವರ ಬೆಳಕು ಮತ್ತು ರಂಗವಿನ್ಯಾಸ ಹಾಗು ಶಿವಕುಮಾರ್ ತಿಮ್ಮಲಾಪುರ ಅವರ ನಿರ್ದೇಶನದಲ್ಲಿ ಆಯೋಜಿಸಲಾಗಿದೆ. ಗೋಕರ್ಣದ ಗೌಡಶಾನಿ ರಂಗಪ್ರಯೋಗದ ಪ್ರೇರಕ ಗಣ್ಯರಾಗಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ, ಹೆಣ್ಣೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಅಕ್ಕಮ್ಮ, ಕವಿಗಳು ಮತ್ತು ಕನ್ನಡ ಅಧ್ಯಾಪಕರಾದ ಡಾ.ಶಿವಣ್ಣ…
ಬೆಂಗಳೂರು: ರಾಜ್ಯಾದ್ಯಂತ ಹೆಚ್ಚಾಗುತ್ತಿರುವ ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು, ಪರಿಸರ ತಜ್ಞರು ಹಾಗೂ ಎನ್ ಜಿಒಗಳ ಸಹಭಾಗಿತ್ವದೊಂದಿಗೆ ರಾಜ್ಯಮಟ್ಟದ ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚಿಸುವಂತೆ ಸೂಚನೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಹುಲಿ, ಕಾಡಾನೆ, ಚಿರತೆ ಮುಂತಾದ ವನ್ಯಜೀವಿಗಳು ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಸಂದರ್ಭಗಳಲ್ಲಿ ಜನರ ಭದ್ರತೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರಮಾಣಿತ ಕಾರ್ಯಪದ್ಧತಿ (SOP) ಅನುಸರಿಸಿ ಕಾರ್ಯಾಚರಣೆ ನಡೆಸುವ ವೇಳೆ 155 ಸೆಕ್ಷನ್ ಅಡಿಯಲ್ಲಿ ನಿರ್ಬಂಧಕಾಜ್ಞೆ ವಿಧಿಸಲು ಸೂಚಿಸಿದರು. ಈ ಕಾರ್ಯಪಡೆ ಕಾಡಿನಂಚಿನ ಗ್ರಾಮಗಳಲ್ಲಿ ಜನರಿಗೆ ಜಾಗೃತಿ ಮೂಡಿಸಲು, ವಿದ್ಯಾರ್ಥಿಗಳಿಗೆ ವನ್ಯಜೀವಿ ಸಂರಕ್ಷಣೆಯ ಮಹತ್ವ ತಿಳಿಸಲು ಮತ್ತು ಅಧಿಕಾರಿಗಳು–ಗ್ರಾಮಸ್ಥರ ನಡುವೆ ಸ್ನೇಹಸೇತುವೆ ಆಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಥರ್ಮಲ್ ಕ್ಯಾಮರಾ, ಡ್ರೋನ್, ವಾಟ್ಸ್ ಅಪ್ ಎಚ್ಚರಿಕೆ ವ್ಯವಸ್ಥೆ ಮತ್ತು ಕಮಾಂಡ್ ಸೆಂಟರ್ ಮೂಲಕ ತ್ವರಿತ ಮಾಹಿತಿ ನೀಡಲು ಕ್ರಮ…
ತುಮಕೂರು: ಗುಬ್ಬಿ ತಾಲ್ಲೂಕಿನಲ್ಲಿ ಹಾದು ಹೋಗಿರುವ ರಾಜ್ಯಹೆದ್ದಾರಿ 84ರಲ್ಲಿ ಕಸಬಾ ಹೋಬಳಿ ಜಿ.ಹೊಸಹಳ್ಳಿ ಸಮೀಪ ನಿರ್ಮಿಸಿರುವ ಟೋಲ್ ಸಂಗ್ರಹ ಕೇಂದ್ರವು ಅವೈಜ್ಞಾನಿಕವಾಗಿದೆ. ಇದನ್ನು ತೆರವುಗೊಳಿಸಬೇಕು ಎಂದು ಸೋಮವಾರ ರೈತ ಸಂಘ, ಸ್ಥಳೀಯ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಸಾರ್ವಜನಿಕರ ತೆರಿಗೆ ಹಣದಿಂದಲೇ ರಸ್ತೆ ನಿರ್ಮಿಸಲಾಗಿದ್ದರೂ ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಕಾರಣಕ್ಕಾಗಿ ಟೋಲ್ ಸಂಗ್ರಹ ಕೇಂದ್ರ ಸ್ಥಾಪಿಸಿರುವುದು ದುರದೃಷ್ಟಕರ ಎಂದು ಪ್ರತಿಭಟನಾ ನಿರತರು ಆರೋಪಿಸಿದರು. ಟೋಲ್ ಸಂಗ್ರಹ ಕೇಂದ್ರ ನಿರ್ಮಿಸಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮಕೈಗೊಳ್ಳದೆ ಇರುವುದು ಖಂಡನೀಯ. ಅಧಿಕಾರಿಗಳು ರೈತರ ಮನವಿಗೆ ಬೆಲೆ ನೀಡದೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಶಾಸಕ ಸರ್ಕಾರದ ಮೇಲೆ ಒತ್ತಡ ಹಾಕಿ ಟೋಲ್ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಬೇಕು. ಅಧಿಕಾರಿಗಳು ಹಾಗೂ ಶಾಸಕರು ಸ್ಥಳೀಯರ ಸಮಸ್ಯೆಗಳಿಗೆ ಕಿವಿಗೊಡದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುತ್ತೇವೆ. ಪ್ರತಿಭಟನೆ ನಡೆಸುವುದು ಜನಸಾಮಾನ್ಯರ ಹಕ್ಕು.ಇದನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು. ಸ್ಥಳಕ್ಕೆ ಆಗಮಿಸಿದ ಶಾಸಕ…
ಬೀದರ್: ಹೆಚ್ಚುವರಿ ಬಸ್ ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಸರ್ಕಾರಿ ಬಸ್ ನ ಫುಟ್ ಬೋರ್ಡ್ ನಲ್ಲಿ ನೇತಾಡುತ್ತಾ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ದೃಶ್ಯ ಕಂಡು ಬಂದಿದೆ. ಬೀದರ್ ಜಿಲ್ಲೆಯ ಔರಾದ್ ನಿಂದ ಭಾಲ್ಕಿಕಡೆಗೆ ತೆರಳುವ ಸರ್ಕಾರಿ ಬಸ್ ನಲ್ಲಿ ಈ ದೃಶ್ಯ ಕಂಡು ಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ವಿದ್ಯಾರ್ಥಿಗಳು ಬಸ್ ನಿಂದ ಬಿದ್ದು ಅನಾಹುತ ಸಂಭವಿಸಿದರೆ ಹೊಣೆ ಯಾರೂ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಕಲ್ಯಾಣ ಕರ್ನಾಟಕ ಸಾರಿಗೆ KA 38, F1239 ಸಂಖ್ಯೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಫುಟ್ ಬೋರ್ಡ್ ನಲ್ಲೇ ನೇತಾಡುತ್ತಾ ಪ್ರಯಾಣಿಸುತ್ತಿದ್ದಾರೆ. ಶಾಲಾ ಸಮಯದಲ್ಲಿ ಬಸ್ ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಸಿಕ್ಕಿದ ಬಸ್ ನಲ್ಲೇ ನೇತಾಡಿಕೊಂಡು ಪ್ರಯಾಣಿಸುವ ದುಸ್ಥಿತಿ ಕಂಡು ಬಂದಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ. ಆದರೆ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸುರಕ್ಷಿತ ವ್ಯವಸ್ಥೆಯೇ ಇಲ್ಲದಿರುವುದು ದುರಂತವೇ ಸರಿ, ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತುಕೊಂಡು ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತಾರಾ ಎನ್ನುವುದನ್ನು…
ತಿಪಟೂರು: ನಗರದಲ್ಲಿ ಯುಜಿಡಿ ಅವ್ಯವಸ್ಥೆ ಹಾಗೂ ತಿಪಟೂರು ಮತ್ತು ಈಚನೂರು ಕೆರೆಗೆ ನೀರು ತುಂಬಿಸಲು ಒತ್ತಾಯಿಸಿ ನಗರದ ಕೆಂಪಮ್ಮದೇವಿ ದೇವಸ್ಥಾನದಿಂದ ಸಿಂಗೀ ನಂಜಪ್ಪ ವೃತ್ತದವರೆಗೆ ಸೋಮವಾರ ಪಾದಯಾತ್ರೆ ನಡೆಸಿ ಪ್ರತಿಭಟಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ತಾಲ್ಲೂಕಿನ ಜನರಿಗೆ ಕಂಟಕವಾಗಿರುವ ಯುಜಿಡಿ ಕೊಳಚೆ ನೀರಿನಿಂದ ಈಚನೂರು ಕೆರೆ ಕಲುಷಿತವಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ತಿಪಟೂರು ಅಮಾನಿಕೆರೆಗೆ ನೀರು ತುಂಬದ ಕಾರಣ ಕುಡಿಯುವ ನೀರಿಗೆ ಹೆಚ್ಚಿನ ಸಮಸ್ಯೆ ಉಂಟಾಗಿದೆ. ತಾಲ್ಲೂಕು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿಡಿ ಕೊಳಚೆ ನೀರಿನಿಂದ ನಗರ ರಾಜ್ಯದಾದ್ಯಂತ ಅಪಖ್ಯಾತಿ ಪಡೆಯುತ್ತಿದೆ. ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈಡೇನಹಳ್ಳಿ ವೆಟ್ ವೆಲ್ ಹಾಗೂ ಗೊರಗೊಂಡನಹಳ್ಳಿ ವೆಟ್‌ವೆಲ್ ಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಕಾರಣ ಕೋಡಿಸರ್ಕಲ್ ಬಳಿ ಯುಜಿಡಿ ನೀರು ಉಕ್ಕಿಹರಿಯುತ್ತಿದೆ. ಜನಸಾಮಾನ್ಯರು ಸಂಚಾರ ಕಷ್ಟಕರವಾಗಿದೆ. ಕೊಳಚೆ ನೀರು ಹಳ್ಳಗಳ ಮೂಲಕ ಹಿಂಡಿಸ್ಕೆರೆ ನಂತರ ಈಚನೂರು ಕೆರೆ ಸೇರುತ್ತದೆ. ನಗರದ…