Author: admin

ಸರಗೂರು: ಹೆಗ್ಗಡದೇವನಕೋಟೆ (ಎಚ್.ಡಿ. ಕೋಟೆ) ಮೀಸಲು ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಅಭೂತಪೂರ್ವ ಜಯಗಳಿಸಿ ಇತಿಹಾಸ ನಿರ್ಮಿಸಿರುವ, ಸರಗೂರು ತಾಲೂಕಿನ ಅಭಿವೃದ್ಧಿ ಹರಿಕಾರ ಎಂದೇ ಕರೆಸಿಕೊಳ್ಳುವ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಮುಳ್ಳೂರು ಲೋಕೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದಾರೆ. ಮುಂದಿನ ದಿನಗಳಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮಂತ್ರಿಮಂಡಲದಲ್ಲಿ ನಮ್ಮ ತಾಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ, ಸರಗೂರು ಹಾಗೂ ಹೆಗ್ಗಡದೇವನಕೋಟೆ ತಾಲೂಕುಗಳು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮುಳ್ಳೂರು ಲೋಕೇಶ್ ಅವರು ಅಭಿಪ್ರಾಯಪಟ್ಟಿದ್ದಾರೆ. ವರದಿ:…

Read More

ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು ಮಹದೇವಸ್ವಾಮಿ (ಗುಣ) ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪಟ್ಟಣದ ಎವಿಎಸ್ಎಸ್ ಕಚೇರಿಯಲ್ಲಿ ಶನಿವಾರ ನಡೆದ ಸಂಘಟನೆಯ ಮಹತ್ವದ ಸಭೆಯಲ್ಲಿ ಈ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಸಂಘದ ಅಧಿಕೃತ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ರಾಜ್ಯ ಯುವ ಘಟಕದ ಅಧ್ಯಕ್ಷ ನಂದಾ ಅವರು, “ಎಸ್‌ಸಿ, ಎಸ್‌ಟಿ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಾಗಿ ಸಂಘಟನೆ ನಿರಂತರವಾಗಿ ಶ್ರಮಿಸಬೇಕಿದೆ. ಯುವಪೀಳಿಗೆಯಲ್ಲಿ ಸಂಘಟನಾತ್ಮಕ ಶಕ್ತಿಯನ್ನು ವೃದ್ಧಿಸಲು ನೂತನ ಪದಾಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು” ಎಂದು ಕರೆ ನೀಡಿದರು. ಬಳಿಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ್ ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ರಾಜಕಾರಣಿಗಳು, ದಲಿತರ ಮೇಲೆ ದೌರ್ಜನ್ಯವಾದಾಗ ಅಥವಾ…

Read More

ಪಾವಗಡ: ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ (SC/ST/BC) ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ತಮ್ಮ ಹತ್ತಿರದ ವಸತಿ ಶಾಲೆಗೆ ನೇರವಾಗಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.06.2026, ಬುಧವಾರ ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: 21.06.2026, ಭಾನುವಾರ ಹೆಚ್ಚಿನ ಮಾಹಿತಿ ಹಾಗೂ ಪ್ರವೇಶಾತಿಗೆ ಸಂಬಂಧಿಸಿದ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಸಮೀಪದ ಸಮಾಜ ಕಲ್ಯಾಣ ಇಲಾಖೆಯ…

Read More

ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಯ ರ್ಯಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪಾಜಿಹಳ್ಳಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಸುರಿದ ಧಾರಾಕಾರ ಮಳೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಕೇವಲ ಮೂರು ಗಂಟೆಗಳ ಕಾಲ (ಬೆಳಗಿನ ಜಾವ 4 ರಿಂದ 6 ಗಂಟೆಯವರೆಗೆ) ಸುರಿದ ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ತುಳುಕುತ್ತಿದ್ದು, ಗ್ರಾಮದಲ್ಲಿ ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ. ಅಪ್ಪಾಜಿಹಳ್ಳಿಯಿಂದ ಹೊರವಲಯದಲ್ಲಿರುವ ಮಿದ್ದಿ ಭಾಗಕ್ಕೆ ತೆರಳಲು ಸೂಕ್ತ ಸೇತುವೆ ವ್ಯವಸ್ಥೆ ಇಲ್ಲದಿರುವುದೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ಸ್ಥಳೀಯರು ಜೀವದ ಹಂಗು ತೊರೆದು ಹಳ್ಳ ದಾಟಬೇಕಾದ ಅನಿವಾರ್ಯತೆ ಎದುರಾಗಿದೆ. ವ್ಯವಸ್ಥೆಯ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯ ಆರ್ಭಟದಿಂದಾಗಿ ಶಾಲಾ–ಕಾಲೇಜುಗಳಿಗೆ ತೆರಳಬೇಕಾದ ವಿದ್ಯಾರ್ಥಿಗಳು ಹಾಗೂ ದಿನನಿತ್ಯದ ಕೆಲಸಗಳಿಗೆ ಹೊರಡುವ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ವೃದ್ಧರನ್ನು ಯುವಕರು ಕೈಹಿಡಿದು, ಹೊತ್ತು ದಾಟಿಸುತ್ತಿರುವ ಶೋಚನೀಯ ದೃಶ್ಯಗಳು ಗ್ರಾಮದಲ್ಲಿ ಕಂಡುಬಂದವು. ಇಷ್ಟೇ ಅಲ್ಲದೆ, ಮಿದ್ದಿ ಭಾಗದಲ್ಲಿರುವ…

Read More

ಬೇಸಿಗೆ ಬಂತೆಂದರೆ ಸಾಕು ಪ್ರತಿಯೊಬ್ಬರಿಗೂ ನೆನಪಾಗುವುದು ಹಣ್ಣುಗಳ ರಾಜ ಮಾವಿನಹಣ್ಣು. ಕೇವಲ ಅದ್ಭುತ ರುಚಿಗಷ್ಟೇ ಅಲ್ಲದೆ, ಮಾವಿನಹಣ್ಣು ತನ್ನಲ್ಲಿರುವ ಪೋಷಕಾಂಶಗಳ ಭಂಡಾರದಿಂದಾಗಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿ ಹಾಗೂ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಪಡೆದಿದೆ. ಮಾವಿನಹಣ್ಣಿನಲ್ಲಿ ವಿಟಮಿನ್ ಎ, ಸಿ, ಇ, ಬಿ6, ಡಯೆಟರಿ ಫೈಬರ್ ಮತ್ತು ಆ್ಯಂಟಿ–ಆಕ್ಸಿಡೆಂಟ್‌ಗಳು (ಉತ್ಕರ್ಷಣ ನಿರೋಧಕಗಳು) ಸಮೃದ್ಧವಾಗಿವೆ. ಪ್ರತಿದಿನ ಮಾವು ಸೇವಿಸುವುದರಿಂದ ನಮ್ಮ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ವಿವರ ಇಲ್ಲಿದೆ. ರೋಗನಿರೋಧಕ ಶಕ್ತಿ ಹೆಚ್ಚಳ: ಮಾವಿನಹಣ್ಣು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು (Immunity) ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ವಿವಿಧ ಸೋಂಕುಗಳಿಂದ ದೇಹವನ್ನು ರಕ್ಷಿಸುತ್ತದೆ. ಜೀರ್ಣಕ್ರಿಯೆ ಸುಧಾರಣೆ: ಮಾವಿನಲ್ಲಿ ‘ಅಮೈಲೇಸ್’ ನಂತಹ ಜೀರ್ಣಕಾರಿ ಕಿಣ್ವಗಳು (Digestive Enzymes) ಇವೆ. ಇವು ನಾವು ತಿನ್ನುವ ಆಹಾರದಲ್ಲಿನ ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳನ್ನು ಸುಲಭವಾಗಿ ಸಕ್ಕರೆಯಾಗಿ ವಿಭಜಿಸಿ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತವೆ. ಕಣ್ಣಿನ ಆರೋಗ್ಯಕ್ಕೆ ಬೆಂಬಲ: ಉತ್ತಮ ದೃಷ್ಟಿ ಕಾಪಾಡಿಕೊಳ್ಳಲು ಅಗತ್ಯವಿರುವ ವಿಟಮಿನ್…

Read More

ಕಲಬುರಗಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಸಜ್ಜಾಗುತ್ತಿರುವ ಬೆನ್ನಲ್ಲೇ, ಹೊಸ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ರಾಜ್ಯದಲ್ಲಿ ಇನ್ನೂ 24 ತಿಂಗಳುಗಳಲ್ಲಿ (ಎರಡು ವರ್ಷ) ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಹೊಸ ಸಂಪುಟಕ್ಕೆ ಸಚಿವರನ್ನು ಆಯ್ಕೆ ಮಾಡುವಾಗ ನಾವು ಅತ್ಯಂತ ಜಾಗರೂಕರಾಗಿರಬೇಕು,” ಎಂದು ಖರ್ಗೆ ರವಿವಾರ ಕಲಬುರಗಿಯಲ್ಲಿ ತಿಳಿಸಿದ್ದಾರೆ. ಸಂಪುಟ ರಚನೆಯಾದ ನಂತರ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಮೂಡಲು ಅವಕಾಶ ಇರಬಾರದು ಎಂದು ಅವರು ಒತ್ತಿಹೇಳಿದ್ದಾರೆ. ಬುಧವಾರ (ಜೂನ್ 3) ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮೊದಲ ಹಂತದಲ್ಲಿ ಕೇವಲ 8 ರಿಂದ 10 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಉಳಿದ ಸಚಿವ ಸ್ಥಾನಗಳನ್ನು ಮುಂದಿನ ಹದಿನೈದು ದಿನ ಅಥವಾ ಒಂದು ತಿಂಗಳ ಒಳಗಾಗಿ ಭರ್ತಿ ಮಾಡಲಾಗುವುದು ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೊಸ ಸರ್ಕಾರದಲ್ಲಿ…

Read More

ಬೆಳಗಾವಿ: ರಾಜ್ಯ ರಾಜಕೀಯದ ಪ್ರಭಾವಿ ನಾಯಕರಾದ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ಹರಡುತ್ತಿದ್ದ ಇಬ್ಬರು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವವರು ಸೈಬರ್ ಕ್ರೈಂ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನ ʻಕರುನಾಡ ಕುರುಬಗೌಡ್ರುʼ ಹಾಗೂ ʻಬಂಡಾಯ ಧ್ವನಿʼ ಎಂಬ ಖಾತೆಗಳಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಗಂಭೀರವಾದ ಸುಳ್ಳು ಆರೋಪವನ್ನು ಮಾಡಲಾಗಿತ್ತು. “ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ಧ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಿದ್ದಾರೆ” ಎಂಬ ಸುಳ್ಳು ಮಾಹಿತಿಯನ್ನು ಈ ಫೇಸ್‌ಬುಕ್ ಪೇಜ್‌ಗಳಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಸುಳ್ಳು ಆರೋಪವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಸಚಿವರ ವಿರುದ್ಧ ಇಲ್ಲಸಲ್ಲದ…

Read More

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ವಿಸ್ತರಣೆಯ ಕಸರತ್ತು ತೀವ್ರಗೊಂಡಿದ್ದು, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಹೈಕಮಾಂಡ್ ನೀಡಿದ್ದ ಪ್ರಮುಖ ಆಫರ್ ಒಂದನ್ನು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಪತ್ನಿಗೆ ನೀಡಲು ಮುಂದಾಗಿದ್ದ ರಾಜ್ಯಸಭಾ ಸ್ಥಾನದ ಆಫರ್ ಅನ್ನು ಸಿದ್ದರಾಮಯ್ಯ ನಯವಾಗಿಯೇ ತಿರಸ್ಕರಿಸಿದ್ದಾರೆ. ತಮಗೆ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಆಸಕ್ತಿಯಿಲ್ಲ ಮತ್ತು ತಮ್ಮ ಕುಟುಂಬದವರನ್ನು ಸದ್ಯಕ್ಕೆ ಸಂಸತ್ತಿಗೆ ಕಳುಹಿಸುವ ಯೋಚನೆ ಇಲ್ಲ ಎಂದು ಹೈಕಮಾಂಡ್ ಎದುರು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೂ ಕೇಂದ್ರ ರಾಜಕಾರಣಕ್ಕೆ ಶಿಫ್ಟ್ ಆಗಲು ಒಪ್ಪದ ಸಿದ್ದರಾಮಯ್ಯ, ಕರ್ನಾಟಕದಲ್ಲೇ ಶಾಸಕರಾಗಿ ಉಳಿದು ರಾಜ್ಯ ರಾಜಕಾರಣದಲ್ಲೇ ಸಕ್ರಿಯರಾಗಿರಲು ಬಯಸಿದ್ದಾರೆ. ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಅಧಿಕಾರ ಸಮತೋಲನ ಕಾಯ್ದುಕೊಳ್ಳಲು…

Read More

ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರಟಗೆರೆ ಯುವ ಮೋರ್ಚಾ  ಅಧ್ಯಕ್ಷರಾಗಿ ದಾಸರಹಳ್ಳಿ ಚೇತನ್, ಪ್ರಧಾನ ಕಾರ್ಯದರ್ಶಿ ಮನೋಹರ್, ನಯನ ಕುಮಾರ್, ಎಸ್‌ ಸಿ ಮೋರ್ಚಾ ಅಧ್ಯಕ್ಷ ಗಿರೀಶ್, ಪ್ರಧಾನ ಕಾರ್ಯದರ್ಶಿ ರಾಮನಾಯ್ಕ, ಆನಂದ, ಎಸ್‌ಟಿ ಮೋರ್ಚಾ ಅಧ್ಯಕ್ಷ ನಾಗರಾಜು, ಪ್ರ.ಕಾ–ಸಿದ್ದರಾಜು, ಅಶ್ವತ್ಥಪ್ಪ, ಓಬಿಸಿ ಮೋರ್ಚಾ ಅಧ್ಯಕ್ಷ ಲೊಕೇಶ್, ಪ್ರ.ಕಾ–ಪುನೀತ್, ಮಹೇಶ್ ನೇಗಲಾಲ ಅವರನ್ನು ಆಯ್ಕೆ ಮಾಡಲಾಗಿದೆ. ಕೊರಟಗೆರೆ ಬಿಜೆಪಿ ಮಂಡಲ ಉಪಾಧ್ಯಕ್ಷ ಪ್ರದೀಪ್‌ ಕುಮಾರ್, ಕಾರ್ಯದರ್ಶಿ ಚೇತನಾರಾಧ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಕಾತ್ಯಾಯಿನಿ, ಪ್ರ.ಕಾ–ರೂಪಶ್ರೀ, ಗೀತಾ, ರೈತ ಮೋರ್ಚಾ ಅಧ್ಯಕ್ಷ ಮೋಹನ್.ಎ. ಪ್ರ.ಕಾ– ಸೂರ್ಯ ಪ್ರಕಾಶ್, ರವಿಕುಮಾರ್, ಅಲ್ಪ ಸಂಖ್ಯಾತರ ಮೋರ್ಚಾ ಅಧ್ಯಕ್ಷ ಇಂದ್ರ ಕುಮಾರ್, ಪ್ರ.ಕಾ- ಭವನ್‌ ಲಾಲ್, ಗೋವಿಂದ ಸಿಂಗ್ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ…

Read More

ತುಮಕೂರು: ಪಾವಗಡದ ಹಿರಿಯ ಮುಖಂಡ, ಮಾಜಿ ಸಚಿವ ವೆಂಕಟರಮಣಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಹೃದಯಾಘಾತದಿಂದ ನಿಧನರಾದ ವೆಂಕಟರಮಣಪ್ಪ ಅವರ ಅಂತಿಮ ದರ್ಶನಕ್ಕಾಗಿ ಸಿದ್ದರಾಮಯ್ಯ ಅವರು ಪಾವಗಡಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎನ್. ರಾಜಣ್ಣ, ಜಮೀರ್ ಅಹ್ಮದ್, ಕೆ.ಜೆ. ಜಾರ್ಜ್ ಹಾಗೂ ಸಂಸದ ಗೋವಿಂದ ಕಾರಜೋಳ ಸಾಥ್ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, “ಹತ್ತು ದಿನಗಳ ಹಿಂದೆಯಷ್ಟೇ ವೆಂಕಟರಮಣಪ್ಪ ಅವರು ಚೆನ್ನಾಗಿದ್ದರು. ವೈ.ಎನ್. ಹೊಸಕೋಟೆಯ ಬೀರಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ಹಣ ಕೇಳಲು ರಾಜಣ್ಣ, ವೆಂಕಟೇಶ್ ಅವರ ಜೊತೆ ನನ್ನ ಬಳಿ ಬಂದಿದ್ದರು. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ” ಎಂದು ಭಾವುಕರಾದರು. “ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ವೆಂಕಟರಮಣಪ್ಪ ಅವರಿಗೆ ಸಮಾಜದ ತಳಸಮುದಾಯಗಳ…

Read More