Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ತುಮಕೂರು: ರಾಜ್ಯದಲ್ಲಿನ ಪ್ರಸ್ತುತ ವಿದ್ಯಮಾನಗಳು ಹಾಗೂ ಜನರು ಅನುಭವಿಸುತ್ತಿರುವ ಕಷ್ಟಗಳ ಕುರಿತಾಗಿ ಲೋಕ್ ಶಕ್ತಿ ಪಾರ್ಟಿ ವತಿಯಿಂದ ಇಂದು ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಲೋಕ್ ಶಕ್ತಿ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಂಗನಾಥ್ ಆರ್.ಎಸ್. ಮಾತನಾಡುತ್ತಾ, ಪ್ರಸ್ತುತ ರಾಜಕಾರಣ ಎಂಬುದು ತುಘಲಕ್ ದರ್ಬಾರ್ ರೀತಿ ಆಗಿದೆ. ರಾಜ್ಯ ಸರ್ಕಾರ ಉಚಿತ ಭಾಗ್ಯಗಳನ್ನು (5 ಗ್ಯಾರಂಟಿಗಳನ್ನು) ನೀಡಿ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಬಿಟ್ಟಿದೆ. ಬೇಸಿಗೆ ಕಾಲ ಬರುವ ಮುಂಚಿತವಾಗಿಯೇ ಕುಡಿಯುವ ನೀರಿಗೆ ಹಾಹಾಕಾರ ಪ್ರಾರಂಭವಾಗಿದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ, ಜೊತೆಗೆ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಗಳಿಂದ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ, ಇದ್ಯಾವುದರ ಬಗ್ಗೆ ಚಕಾರ ಎತ್ತದೇ ರಾಜ್ಯಸರ್ಕಾರ ಮಾತ್ರ ಮೌನ ವಹಿಸಿದೆ ಎಂದು ಆರೋಪಿಸಿದರು. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ, ರಾಜ್ಯ ಹೆದ್ದಾರಿ ಜಿಲ್ಲಾ ಹೆದ್ದಾರಿಗಳು ಸಂಪೂರ್ಣ ಹಾಳಾಗಿವೆ ಯಾವುದೇ ಅಭಿವೃದ್ಧಿ ಕೆಲಸ ಕಾಮಗಾರಿಗಳಿಗೆ ಹಣ ನೀಡುವ ಸ್ಥಿತಿಯಲ್ಲಿ ಇಲ್ಲ. ಈ ಪರಿಸ್ಥಿತಿಯನ್ನು…
ನವದೆಹಲಿ: ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಭಾಷಣಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಆಕ್ಷೇಪಿಸಿದ ಹಿನ್ನೆಲೆ, ಮೂವರ ವಿರುದ್ಧವೂ ಬಿಹಾರದ ಮುಜಪ್ಫರ್ ಪುರ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಸೋನಿಯಾ ಗಾಂಧಿಯವರು, ರಾಷ್ಟ್ರಪತಿಯವರು ತಮ್ಮ ಭಾಷಣವನ್ನು ಮುಗಿಸುವ ಹೊತ್ತಿಗೆ ತುಂಬಾ ಆಯಾಸವಾದಂತೆ ಕಂಡುಬಂದರು. ಅವರ ಮಾತುಗಳು ತೊಡರುತ್ತಿದ್ದವು, ರಾಷ್ಟ್ರಪತಿಗಳ ಭಾಷಣಕ್ಕೆ ಅಯ್ಯೋ… ಪಾಪ ಎಂದೆನಿಸಿತು ಎಂದಿದ್ದರು. ರಾಹುಲ್ ಗಾಂಧಿ ಕೂಡ ರಾಷ್ಟ್ರಪತಿಗಳ ಭಾಷಣ ಭಾರೀ ಬೇಸರ ತರಿಸುತ್ತಿತ್ತು ಎಂದಿದ್ದರು. ಪ್ರಿಯಾಂಕ ಗಾಂಧಿ ಕೂಡ ಇದೇ ರೀತಿಯ ಪ್ರತಿಕ್ರಿಯೆ ನೀಡಿದ್ದರು. ಈ ಹೇಳಿಕೆಗಳ ವಿರುದ್ಧ ಇದೀಗ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ವಿಚಾರಣೆ ಫೆ. 10ರಂದು ನಡೆಯಲಿದೆ. ಮುಜಫ್ಫರ್ ನಗರದ ನಿವಾಸಿಯಾಗಿರುವ ಸುಧೀರ್ ಓಝಾ ಎಂಬ ವಕೀಲರು ಈ ದೂರು ದಾಖಲಿಸಿದ್ದಾರೆ. ರಾಷ್ಟ್ರಪತಿಯವರ ಭಾಷಣವನ್ನು ಟೀಕಿಸುವ ಭರದಲ್ಲಿ ಈ ಮೂವರೂ ನಾಯಕರು, ಈ ದೇಶದ ಅತ್ಯುನ್ನತ ನಾಗರಿಕರಿಗೆ ಅಪಮಾನ ಆಗುವಂಥ ಮಾತನಾಡಿದ್ದಾರೆ…
ಮಂಡ್ಯ: 8 ವರ್ಷದ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ಕೇಕ್ ಕೊಡಿಸಿ, ಚಾಕು ತೋರಿಸಿ ಬೆದರಿಸಿ, ಸರ್ಕಾರಿ ಶಾಲೆಯ ಆವರಣದಲ್ಲೇ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಸದ್ಯ ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಜ.31ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೀವ್ರ ಹೊಟ್ಟೆ ನೋವು ಹಾಗೂ ರಕ್ತಸ್ರಾವದಿಂದ ಬಾಲಕಿ ಬಳಲುತ್ತಿರುವುದನ್ನು ಕಂಡು ಆಕೆಯ ಚಿಕ್ಕಮ್ಮ ವಿಚಾರಿಸಿದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಳು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಔರಾದ: ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಬಡ ಹಾಗೂ ಮಧ್ಯಮ ವರ್ಗಕ್ಕೆ ಭಾರೀ ತೆರಿಗೆ ವಿನಾಯ್ತಿ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಯುವ ಮುಖಂಡ ಬಾಲಾಜಿ ಕಾಸಲೆ ತಿಳಿಸಿದ್ದಾರೆ. ತೆರಿಗೆ ಪಾವತಿ ಸರಳೀಕರಣದೊಂದಿಗೆ, ಸುಮಾರು 12 ಲಕ್ಷದವರೆಗಿನ ಆದಾಯವನ್ನು ತೆರಿಗೆ ಮುಕ್ತಗೂಳಿಸಲಾಗಿದ್ದು, ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ಮಧ್ಯಮ ವರ್ಗಕ್ಕೆ ದೊರೆತ ಅತಿದೂಡ್ಡ ತೆರೆಗೆ ವಿನಾಯ್ತಿ ಎಂದರೆ ತಪ್ಪಾಗಲಾರದು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಧ್ಯಮ ವರ್ಗದ ಜನರೇ ಹೆಚ್ಚಿರುವ ನಮ್ಮ ದೇಶದಲ್ಲಿ, ಈ ಬಜೆಟ್ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶರವೇಗ ನೀಡಲಿದೆ ಎಂಬುದು ಸಂತಸದ ವಿಚಾರ. ಈ ಮಹತದ ನಿರ್ಧಾರದ ಹಿಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಹಾಗೂ ನರೇಂದ್ರ ಮೋದಿ ಅವರಿಗೆ ಜನತೆ ಪರವಾಗಿ ಧನ್ಯವಾದಗಳು ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಮಂಡ್ಯ: ತಾಯಿಯ ಆತ್ಮಹತ್ಯೆಯಿಂದ ಮನನೊಂದಿದ್ದ ಪುತ್ರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ರಂಜಿತ್ (31) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ ನಲ್ಲಿ ಮೃತನ ತಾಯಿ ಪ್ರೇಮಾ 6 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಪತಿ ಹಾಗೂ ಪುತ್ರನ ಅನಾರೋಗ್ಯದಿಂದಾಗಿ 3 ತಿಂಗಳ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೋರ್ಟ್ ಅನುಮತಿ ಪಡೆದು ಫೈನಾನ್ಸ್ ಸಿಬ್ಬಂದಿ ಮನೆಯನ್ನು ಸೀಝ್ ಮಾಡಿದ್ದರು. ಮನೆ ಸೀಝ್ ಆಗಿದ್ದರಿಂದ ಮನನೊಂದ ಪ್ರೇಮಾ ಜನವರಿ 28ರಂದು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ.29ರಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ತಾಯಿಯ ಸಾವಿನ ಸುದ್ದಿ ತಿಳಿದ ಪುತ್ರ ರಂಜಿತ್ ತಕ್ಷಣವೇ ಸ್ಥಳದಿಂದ ನಾಪತ್ತೆಯಾಗಿದ್ದ, ಬಳಿಕ ನಿನ್ನೆ ಹಗಲೂರು ಕೆರೆಯಲ್ಲಿ ರಂಜಿತ್ ನ ಮೃತದೇಹ ಪತ್ತೆಯಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಮಧುಗಿರಿ: ಮುದ್ದೇನೇರಳೆಕೆರೆ ಸರ್ಕಾರಿ ಶಾಲೆಯಲ್ಲಿ ‘ಇಂಗ್ಲಿಷ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳಿಗೆ ಇಂಗ್ಲಿಷ್ ಭಾಷಾ ಜ್ಞಾನಾಭಿವೃದ್ಧಿಗೆ ಹಾಗೂ ಸಂವಹನಕ್ಕಾಗಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಿದ್ದ ಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕರಾದ ಮಂಜುನಾಥ್, ಇಂಗ್ಲೀಷ್ ಭಾಷಾಜ್ಞಾನ ಮಹಾಸಾಗರವಿದ್ದಂತೆ ಅದರ ಆಳ ತಿಳಿಯಲು, ಭಾಷಾ ಕೌಶಲ್ಯ ಹೆಚ್ಚಿಸಿಕೊಳ್ಳಲು ಸತತವಾಗಿ ಪರಿಶ್ರಮ ಪಡಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಂಗ್ಲೀಷ್ ಭಾಷಾ ಉಪನ್ಯಾಸಕರಾದ ಮಾರುತಿ ಬಿ.ಎಲ್. ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಗು ಹುಟ್ಟಿದ ತಕ್ಷಣ ನಡೆಯುವುದಿಲ್ಲ, ಅದು ಸತತ ಪ್ರಯತ್ನ ಪಟ್ಟು ನಡೆಯಲು ಪ್ರಾರಂಭಿಸುತ್ತದೆ. ಹಾಗೆಯೇ ಶಾಲೆಯಲ್ಲಿ ಮಕ್ಕಳು ಸಹ ಇಂಗ್ಲಿಷ್ ಭಾಷೆ ಸಂವಹನ ನಿರಂತರ ಪ್ರಯತ್ನದಿಂದ ಸಾಧ್ಯವಾಗುತ್ತದೆ. ಪ್ರತಿದಿನ ಶಾಲೆಗಳಲ್ಲಿ ಅಭ್ಯಾಸ ಮಾಡಬೇಕು ಹಾಗೂ ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಎಷ್ಟು ಪ್ರಾಮುಖ್ಯವಾಗಿ ಬೇಕು, ಹೊರ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಜೀವನ ನಡೆಸಲು ಇಂಗ್ಲೀಷ್ ಭಾಷೆ ಅತ್ಯಗತ್ಯ ಎಂದು ನುಡಿದರು. ಮತ್ತೋರ್ವ ಅತಿಥಿಗಳಾಗಿ ಆಗಮಿಸಿದ್ದ…
ಔರಾದ್: ತಾಲೂಕಿನಲ್ಲಿ ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸಿದರು. ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣೆಯ ಪಿ.ಎಸ್.ಐ ನಂದಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಯು, ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರನ್ನು ತಡೆದು, ದಂಡ ವಿಧಿಸುವ ಬದಲು ಹೆಲ್ಮೆಟ್ ವಿತರಿಸುವ ಮೂಲಕ ಹೆಲ್ಮೆಟ್ ನ ಮಹತ್ವವನ್ನು ತಿಳಿಸಿಕೊಡಲಾಯಿತು. ಜಿಲ್ಲೆಯಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ, ಜನಸಾಮಾನ್ಯರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪೊಲೀಸರು ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕಲಬುರಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ನಿನ್ನೆ ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ, ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು. ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ ಎಂದು ಬಿ.ಆರ್.ಪಾಟೀಲ್ ತಿಳಿಸಿದರು. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ನವದೆಹಲಿ: ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ತೆರಿಗೆ ಹಣ ಕಡಿತ ಶ್ಲಾಘಿಸಿದ ಅವರು, 12 ಲಕ್ಷ ವಾರ್ಷಿಕ ಆದಾಯ ಹೊಂದಿರುವವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಎಂದರು. ಮಧ್ಯಮ ವರ್ಗದ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುನ್ನಡೆದಿದೆ, ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು ಎಂದು ಅಮಿತ್ ಶಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇತಗಾನಹಳ್ಳಿ ಬಳಿಯ ಸರ್ಕಾರದ ಜಮೀನು ಒತ್ತುವರಿ ಮಾಡಿರುವ ಆರೋಪದ ಹಿನ್ನೆಲೆ ಹೈಕೋರ್ಟ್ ಸೂಚನೆಯಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೇರೈಗೌಡ ಈ ಬಗ್ಗೆ ಮಾತನಾಡಿ, ಹೈಕೋರ್ಟ್ ಸೂಚನೆಯಂತೆ ತನಿಖೆಗೆ ನಡೆಸಲು ಉನ್ನತ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಹೈಕೋರ್ಟ್ ಸೂಚನೆಗಳ ಪಾಲಿಸುವಂತೆ ಸೂಚಿಸಲಾಗಿದೆ. ಹೈಕೋರ್ಟ್ ಸೂಚನೆ ನೀಡಿದಾಗ ಸರ್ಕಾರ ಅದನ್ನು ಗೌರವಿಸಬೇಕಾಗುತ್ತದೆ. ಹೈಕೋರ್ಟ್ ನೀಡಿದ ಸಮಯದೊಳಗೆ ಎಸ್ ಐಟಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದರು. ಕೇತಗಾನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 8, 9, 10, 16 ಮತ್ತು 79 ರಲ್ಲಿ 14.04 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂಬ ಕುಮಾರಸ್ವಾಮಿ ಅವರ ವಿರುದ್ಧ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4