Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವು ಸಂಭವಿಸಿದೆ. ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತಪಟ್ಟವರಾಗಿದ್ದಾರೆ. ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ಗಂಗವ್ವ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ ಗೊಡಕುಂದ್ರಿ ಅವರಿಗೆ ಬಿಪಿ ಲೋ ಆಗಿ ಸೀರಿಯಸ್ ಇದೆ ಎಂದು ವೈದ್ಯರು ಜ.31ರಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ. ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸಿರಿಯಸ್ ಇದ್ದಾಗ ವೈದ್ಯರು ಸರಿಯಾಗಿ ಚಿಕಿತ್ಸೆ ಕೊಟ್ಟಿದ್ದರೇ ಅಕ್ಕ ಉಳಿಯುತ್ತಿದ್ದಳು. ನನ್ನ ಅಕ್ಕನ ಸಾವಿಗೆ ವೈದ್ಯರು ಕಾರಣ ಎಂದು ಗಂಗವ್ವ ಸಹೋದರ ಶಂಕರಪ್ಪ ಆರೋಪಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ಕಾನೂನು ಜಾರಿಗೆ ಮುಂದಾಗಿದ್ದು, ಈ ಬಗ್ಗೆ ಶನಿವಾರ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ಸಾಲ ವಿತರಣೆಗಳ ವಿವರಗಳನ್ನು ಪತ್ತೆಹಚ್ಚಲು ಮತ್ತು ನವೀಕರಿಸಲು ಆನ್ ಲೈನ್ ಪೋರ್ಟಲ್, ಪಾರದರ್ಶಕತೆಯನ್ನು ಖಚಿತಪಡಿಸುವುದು ಮತ್ತು ಬಡವರನ್ನು ಸಾಲ ಚಕ್ರಗಳಲ್ಲಿ ಸಿಲುಕಿಸುವ ಚಕ್ರ ಬಡ್ಡಿ ಸಾಲವನ್ನು ತಡೆಗಟ್ಟುವುದು ಸೇರಿದಂತೆ ಹಲವಾರು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದವು. ಈ ವೇಳೆ ಸಚಿವರು ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ…
ತುಮಕೂರು: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಫೆಬ್ರವರಿ 4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಿಪಟೂರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪೊಲೀಸ್ ಅಧಿಕ್ಷಕ ಲಕ್ಷ್ಮೀನಾರಾಯಣ ಎ.ವಿ. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ನವದೆಹಲಿಯ ಕೌನ್ಸಿಲ್ ಫಾರ್ ಮೀಡಿಯಾ ಅಂಡ್ ಸ್ಯಾಟಿಲೈಟ್ ಬ್ರಾಡ್ಕಾಸ್ಟಿಂಗ್ (ಸಿಎಂಎಸ್ಬಿ) ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರಿಗೆ ಅತ್ಯುತ್ತಮ ಕ್ಷೇತ್ರ ಪ್ರಚಾರಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಕುರಿತು ಮೈಸೂರು ದಸರಾ, ಕೃಷಿ ಮೇಳ, ಉತ್ಸವಗಳಲ್ಲಿ ವಸ್ತು ಪ್ರದರ್ಶನ, ಬೀದಿನಾಟಕ, ಜನಪದ ಸಂಗೀತದ ಮೂಲಕ ಜನಜಾಗೃತಿ, ಸಾಂಸ್ಕೃತಿಕ ನಾಯಕ ಬಸವಣ್ಣ, ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ‘ಗಾಂಧಿ ಭಾರತ’ ಕಾರ್ಯಕ್ರಮ ಆಯೋಜನೆ ಸೇರಿದಂತೆ ಕ್ಷೇತ್ರ ಪ್ರಚಾರ ಚಟುವಟಿಕೆಗಳ ಯಶಸ್ವಿ ಆಯೋಜನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಸಿದ್ದೇಶ್ವರಪ್ಪ ಅವರು ಮೂಲತಃ ಸಿರಾ ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದವರು. ಬೆಂಗಳೂರಿನ ಎಫ್ಕೆಸಿಸಿಐ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ, ಸಂಸ್ಥೆಯ ಅಧ್ಯಕ್ಷ ಡಾ: ಬಿ.ಕೆ.ಬಂಗಾರಿ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15,000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ–ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್ ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ…
ತುಮಕೂರು: ನವದೆಹಲಿಯಲ್ಲಿ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಭಾರತೀಯ ಮಧ್ಯಮ ವರ್ಗದವರ ಅಶೋತ್ತರಗಳಿಗೆ ಸ್ಪಂದಿಸುವ ಬಜೆಟ್. ಭಾರತೀಯ ಆರ್ಥಿಕತೆಗೆ ಆದ್ಯತೆ ನೀಡಿದ ಈ ಬಜೆಟ್ ಪ್ರಧಾನ ಮಂತ್ರಿಗಳ ವಿಕಸಿತ್ ಭಾರತದ ಕನಸನ್ನು ಸಾಕಾರ ಮಾಡಲಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಬಣ್ಣಸಿದ್ದಾರೆ. ಭಾರತ ಕೃಷಿಕರ ದೇಶ. ಬಜೆಟ್‌ನಲ್ಲಿ ಕೃಷಿಕರ ಎಳಿಗೆಗೆ ಪ್ರಧಾನ ಮಂತ್ರಿ ಧನಧ್ಯಾನ್ಯ ಕೃಷಿ ಯೋಜನೆಯನ್ನು 2025-26ರ ಬಜೆಟ್‌ನಲ್ಲಿ ಘೋಷಿಸಿದ್ದು, ಕಡಿಮೆ ಇಳುವರಿ ತಡೆಗಟ್ಟಲು ಪ್ರಥಮವಾಗಿ ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗಿದೆ. ಕೃಷಿಕರಿಗೆ ಉತ್ತಮ ಗುಣ ಮಟ್ಟದ ಬೀಜ, ರಸಗೊಬ್ಬರ ಖರೀದಿ ಮತ್ತು ತಂತ್ರಜ್ಷಾನ ಅಳವಡಿಕೆಗೆ ಈ ಯೋಜನೆ ಸಹಕಾರಿಯಾಗಲಿದೆ. ರಸಗೊಬ್ಬರದ ಉತ್ಪಾದನೆಯಲ್ಲಿ ಸ್ವಾವಲಂಬಿತ್ವ ಸಾಧಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಅಸ್ಸಾಂನಲ್ಲಿ 12.7 ಎಲ್.ಎಮ್.ಟಿ ಸಾಮರ್ಥ್ಯದ ಯೂರಿಯಾ ಪ್ಲಾಂಟ್ ಸ್ಥಾಪನೆಗೆ ಈ…
ನವದೆಹಲಿ: ಕೇಂದ್ರ ಬಜೆಟ್ “ಗುಂಡೇಟಿನಿಂದ ಆದ ಗಾಯಕ್ಕೆ ಬ್ಯಾಂಡೇಜ್ ನೆರವು” ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದು, ಕೇಂದ್ರ ಸರ್ಕಾರಕ್ಕೆ ಐಡಿಯಾಗಳೇ ಇಲ್ಲ ಎಂದು ಟೀಕಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಮಾದರಿ ಬದಲಾವಣೆಯ ಅಗತ್ಯವಿತ್ತು. ಆದರೆ ಈ ಸರ್ಕಾರ ದಿವಾಳಿಯಾಗಿದೆ. ಐಡಿಯಾಗಳ ದಿವಾಳಿತನದಿಂದ ಕೇಂದ್ರ ಸರಕಾರ ಬಳಲುತ್ತಿದೆ ಎಂದು ಆರೋಪಿಸಿದರು. ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯನ್ನು ಹಿನ್ನಲೆಯಲ್ಲಿ, ಕೇಂದ್ರ ಸರಕಾರವು ಬಿಹಾರಕ್ಕೆ ಮಖಾನಾ ಮಂಡಳಿ ಸ್ಥಾಪನೆ, ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ಮತ್ತು ಐಐಟಿ ಕೇಂದ್ರಗಳನ್ನು ಹೆಚ್ಚಿಸಲು ವಿವಿಧ ಯೋಜನೆಗಳನ್ನು ಮೀಸಲಿಡಿದೆ ಎಂದು ಕಾಂಗ್ರೆಸ್ ಹೇಳಿದೆ. ಅದರೊಂದಿಗೆ, ಅವರು ಆಂಧ್ರಪ್ರದೇಶಕ್ಕೆ ಇಂತಹ ಯಾವುದೇ ಪ್ರಾಧಾನ್ಯತೆ ನೀಡದೇ, ಅದನ್ನು ನಿರ್ಲಕ್ಷಿಸಿದ್ದು ಸರಕಾರದ ಅನುತೇಜಿತ ನೀತಿ ಎಂದು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆರು ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ ಆಡುಗೋಡಿಯ ಸಿಎಆರ್ ಮೈದಾನದಲ್ಲಿ ನಡೆದ ಬೆಂಗಳೂರು ನಗರ ಪೊಲೀಸ್ “ವಾರ್ಷಿಕ ಕ್ರೀಡಾಕೂಟ 2024” ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಈಗಾಗಲೇ ಮೂರು ಕೋಟಿ ರೂ. ಅನುದಾನ ನೀಡಲಾಗಿದೆ. ಬಜೆಟ್‌ನಲ್ಲಿ ಇನ್ನುಳಿದ ಅನುದಾನವನ್ನು ನೀಡಲಾಗುವುದು. ಸರ್ಕಾರವು ಮುಂದಿನ ದಿನಗಳಲ್ಲಿ ಪೊಲೀಸರಿಗೆ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸುತ್ತದೆ ಎಂದು ಹೇಳಿದರು. ದೇಶದ ಬೇರೆ ಮಹಾನಗರ ಪೊಲೀಸರಿಗಿಂತ ಬೆಂಗಳೂರು ನಗರ ಪೊಲೀಸ್ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಕರ್ನಾಟಕ ಪೊಲೀಸರು ಇನ್ನು ಹೆಚ್ಚಿನ ರೀತಿಯಲ್ಲಿ ಸಮರ್ಥವಾಗಿ ಕೆಲಸ ಮಾಡಬೇಕಿದೆ ಎಂದು ನನಗೆ ಅನ್ನಿಸುತ್ತದೆ. ದಕ್ಷತೆ ಮತ್ತು ಪ್ರಾಮಾಣಿಕತೆಯಲ್ಲಿ ಕರ್ನಾಟಕ ಪೊಲೀಸ್ ಎರಡನೇ ಸ್ಥಾನದಲ್ಲಿದೆ ಎಂಬುದನ್ನು…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಚನ ನಿಧಿ ರಕ್ಷಕ ವೀರ ಗಣಾಚಾರಿ ಮಡಿವಾಳ ಮಾಚಿದೇವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಇದೇ ವೇಳೆ ಡಾ.ರಾಹುಲ್ ಮಾತನಾಡಿ, ಬಸವಾದಿ ಶರಣರ ವಚನಗಳ ಸಂರಕ್ಷಕರಾದ ಶಿವಶರಣ ಮಡಿವಾಳ ಮಾಚಿದೇವರ ಜಯಂತಿಯಂದು ಭಕ್ತಿ ಪೂರ್ವಕ ನಮನಗಳು, 12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಚಳುವಳಿಯ ಅಗ್ರನಾಯಕರಾಗಿದ್ದರು. ಶೋಷಿತರ ಹಕ್ಕಿಗಾಗಿ ಶ್ರಮಿಸಿ, ಸಮಾನತೆಯ ಸಂದೇಶ ಸಾರಿದ ಶರಣ ಶ್ರೇಷ್ಠರು. ಅವರ ಕಾಯಕನಿಷ್ಠೆ, ನ್ಯಾಯ ಪ್ರಾಮಾಣಿಕತೆ, ನಿರಹಂಕಾರದಂತಹ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದರು. ಈ ಸಂದರ್ಭದಲ್ಲಿ ಡಾ. ಅಬ್ದುಲ್ ವಾಜಿದ್, ಡಾ. ರಾಹುಲ್, ಜೈಪ್ರಕಾಶ್, ರಾಜಪ್ಪ, ಪಾಂಡು, ರಾಥೋಡ್, ಸುರೇಶ್ ಸೋನೇ, ಕಿರಣ್ ಕುಮಾರ್ ಇದ್ದರು ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೀದರ್: ಚುನಾವಣಾ ಹೊಸ್ತಿನಲ್ಲಿರುವ ಬಿಹಾರಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ಬಂಪರ್ ಕೊಡುಗೆ ನೀಡಿದೆ. ಆದರೆ ಕರ್ನಾಟಕಕ್ಕೆ ಮತ್ತೆ ಚೊಂಬು ನೀಡಿದೆ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ ಕೊಳ್ಳುರ ಟೀಕಿಸಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಹೊಸ ಯೋಜನೆಗಳ ಮಳೆ ಅಲ್ಲಿ, ಇಲ್ಲಿ ಬರಡು ನೆಲ ಎಂದು ಬೇಸರ ವ್ಯಕ್ತಪಡಿಸಿದ್ದು, ಜಿಡಿಪಿ ಹಂಚಿಕೆ ಸಮಾನವಿಲ್ಲ, ಅಭಿವೃದ್ಧಿಯೂ ಏಕಪಕ್ಷೀಯ! ಎಂದು ಟೀಕಿಸಿದರು. 2025ರ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕವನ್ನು ಮತ್ತೆ ನಿರ್ಲಕ್ಷಿಸಲಾಗಿದ್ದು, ಯಾವುದೇ ದೊಡ್ಡ ಅಭಿವೃದ್ಧಿ ಯೋಜನೆ ಘೋಷಣೆ ಆಗಿಲ್ಲ. ಪೂರಕ ಅನುದಾನವಿಲ್ಲ, ಮಹತ್ತರ ಯೋಜನೆಗಳೆಂದರೆ ಖಾಲಿ ಭರವಸೆ! ನಮ್ಮ ತೆರಿಗೆ ಹಣದಿಂದ ಇತರ ರಾಜ್ಯಗಳಿಗೆ ಕೋಟಿ ಕೋಟಿ ಅನುದಾನ, ಆದರೆ ಕರ್ನಾಟಕಕ್ಕೆ ಮಾತ್ರ ಕೈಲಾದಷ್ಟು ಕಡಿತ ಮಾಡಲಾಗಿದೆ. ಇದು ನಿರಾಶದಾಯಕ ಬಜೆಟ್ ಎಂದು ಅವರು ಹೇಳಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…