Author: admin

ಬೆಂಗಳೂರು: ಜನ ಸಾಮಾನ್ಯರ ಪರವಾಗಿ  ಎಂದಿಗೂ ಕೆಲಸ ಮಾಡದೇ ಬರೀ ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಲೇ ಬಂದಿರುವ ಕೇಂದ್ರ ಸರ್ಕಾರವು  ಶ್ರಮಿಕ ವರ್ಗವನ್ನು ವಂಚಿಸುವ ತನ್ನ ಹೀನ ಪ್ರವೃತ್ತಿಯನ್ನು ಮುಂದುವರೆಸಿದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು,  50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಜನಪರವಾಗಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲದ ಕೇಂದ್ರದ ಬಜೆಟ್ ಕರ್ನಾಟಕ ವಿರೋಧಿಯಾಗಿದ್ದು ರಾಜ್ಯ ನೀಡುವ ತೆರಿಗೆ ಹಣಕ್ಕೆ ಪ್ರತಿಯಾಗಿ ಅವಮಾನವನ್ನು ನಮಗೆ ಉಡುಗೊರೆಯಾಗಿ ನೀಡಿದೆ,  ಮಧ್ಯಮ ವರ್ಗಕ್ಕೆ 12 ಲಕ್ಷದ ವರೆಗೆ ಆದಾಯ ತೆರಿಗೆ ವಿನಾಯ್ತಿ ಎಂದು ಹೇಳಿ ಆ ಮೂಲಕ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ತೆರಿಗೆ ಮಿತಿಯ slab ನಲ್ಲಿ 8 ರಿಂದ 12 ಲಕ್ಷದವರೆಗಿನ ಆದಾಯ ತೆರಿಗೆಗೆ 10% ತೆರಿಗೆ ಎಂದು ನಮೂದಿಸಿದ್ದು ಜನರನ್ನು ಅಸ್ಪಷ್ಟತೆಗೆ ನೂಕುವ ಕೆಲಸ ಮಾಡಿದೆ…

Read More

ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಾಮೂಹಿಕ ಶ್ರೀ ಶನಿಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಅದ್ದೂರಿಯಿಂದ ನೆರವೇರಿತು. ಕಾರ್ಯಕ್ರಮದ ಮೊದಲಿಗೆ ಸ್ವಾಮಿಯ ಅರ್ಚಕರಾದ ಶ್ರೀ ಅಡವೀಶಪ್ಪನವರ ನೇತೃತ್ವದಲ್ಲಿ ಹೊನ್ನವಳ್ಳಿಯ ನೂರೈವತ್ತೊಂದು  ದಂಪತಿಗಳ ಸಮಕ್ಷಮದಲ್ಲಿ ಶ್ರೀ ಸ್ವಾಮಿ ಶನಿದೇವರ ಪೂಜೆ, ನವಗ್ರಹಗಳ ಪೂಜೆ ನೆರವೇರಿತು. ಬಳಿಕ ಕೀರ್ತನಕಾರರಾದ ಡಾ.ಅಶೋಕ್ ಕೆ.ಪಿ.ರವರು ಶನಿದೇವರ ಹುಟ್ಟು, ದೇವರು ಹಾಗೂ ಮಾನವನ ಜೀವನದಲ್ಲಿ ಶನಿಮಹಾತ್ಮರ ಪಾತ್ರದ ಬಗ್ಗೆ ಸವಿಸ್ತಾರವಾಗಿ ಕಥಾ ಪರಾಯಣವು ನಡೆಸಿಕೊಟ್ಟರು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ತಿಪಟೂರು ಶಾಸಕರಾದ ಷಡಕ್ಷರಿಯವರು ಉದ್ಘಾಟಿಸಿ ಮಾತನಾಡಿ,  ರಾಜ್ಯದ ಜನತೆಗೆ ಸರ್ಕಾರದ ಒಟ್ಟೊಟ್ಟಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಜನ ಸಂಘಟನೆಯ ಮುಖೇನ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನಮನ್ನಣೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು. 13 ವರ್ಷದ ಹಿಂದೆ ತಾಲ್ಲೂಕಿಗೆ ಯೋಜನೆಯು ಕಾಲಿಟ್ಟಾಗ  ತಿಪಟೂರಿನ  ವ್ಯಾಪ್ತಿಯಲ್ಲಿ ಮಾತ್ರ ಇದ್ದು, ಪ್ರಸ್ತುತ ಶ್ರೀ ಕೆಂಪಮ್ಮ ದೇವಿಯ ಕೃಪೆಯೊಂದಿಗೆ ಯೋಜನೆ ತಾಲ್ಲೂಕಿನ ಪ್ರತಿ ಮೂಲೆ ಮೂಲೆಗೂ ತಲುಪಿ ಬಡ ಜನತೆಗೆ ಆರ್ಥಿಕ…

Read More

ವೈ.ಎನ್.ಹೊಸಕೋಟೆ : ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಳಿಯು ಪ್ರತಿವರ್ಷ ಕಸ್ತೂರಿ ತಿಲಕ, ಕಲಾಸಿರಿ ಮತ್ತು ಲೇಖಸಿರಿ ಎಂಬ ಮೂರು ಪ್ರಶಸ್ತಿಗಳನ್ನು ಕೊಡ ಮಾಡಲು ತೀರ್ಮಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸುವಂತೆ ಮಂಡಲಿಯ ಅಧ್ಯಕ್ಷ ಎ.ಓ.ನಾಗರಾಜು ತಿಳಿಸಿದರು. ಪಾವಗಡ ತಾಲ್ಲೂಕಿಗೆ ಸೀಮಿತವಾದಂತೆ ಕನ್ನಡ ಸೇವೆ ಮತ್ತು ಸಂಘಟನೆಗಾಗಿ ಕಸ್ತೂರಿ ತಿಲಕ ಪ್ರಶಸ್ತಿಯನ್ನು, ರಂಗಭೂಮಿ, ಲಲಿತಕಲೆ ಸೇರಿದಂತೆ ಸಾಂಸ್ಕೃತಿಕ ಸೇವೆಗಾಗಿ ಕಲಾಸಿರಿ ಮತ್ತು ಸಾಹಿತ್ಯ ಸೇವೆಗಾಗಿ ಲೇಖಸಿರಿ ಪ್ರಶಸ್ತಿಗಳನ್ನು ನೀಡಲಾಗುವುದು. ಪ್ರಶಸ್ತಿಯು ಪ್ರಶಸ್ತಿ ಫಲಕ, ಅಭಿನಂದನಾ ಪತ್ರ ಮತ್ತು ನಗದು ಬಹುಮಾನವನ್ನು ಒಳಗೊಂಡಿರುತ್ತದೆ. 50 ವರ್ಷಕ್ಕಿಂತ ಹೆಚ್ಚು ವಯಸ್ಸಿರುವ ಪಾವಗಡ ತಾಲ್ಲೂಕಿನ ಆಯಾ ಕ್ಷೇತ್ರದಲ್ಲಿ ಸೇವೆ ಸಾಧನೆ ಮಾಡಿದ ಅರ್ಹರು ಫೆಬ್ರವರಿ 28 ಒಳಗೆ ತಮ್ಮ ವಿವರವನ್ನು ಮಂಡಳಿಯ ಅಧ್ಯಕ್ಷರು ಅಥವಾ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9980957846 ಅಥವಾ 9844220129 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರು ಗ್ರಾಮದ ಬಳಿ ಸಂಭವಿಸಿದ ಸರಣಿ‌ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮಹಾಂತೇಶ್ ಹೊನಕಟ್ಟಿ (35), ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (42), ಜಮಖಂಡಿ ತಾಲ್ಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ (22) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇಂದು ನಸುಕಿನ ಜಾವ ಜಮಖಂಡಿ‌ಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಹಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ.  ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಜಮಖಂಡಿ‌ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್​​ ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್:  ಜಿಲ್ಲೆಯ ಕಮಲನಗರ ತಾಲ್ಲೂಕಿನ ಕುಶನೂರ ಪೊಲೀಸ್ ಠಾಣೆಯ ವತಿಯಿಂದ ಕುಶನೂರ ಗ್ರಾಮದ ಬಸವೇಶ್ವರ ವೃತ್ತದ  ಬಳಿ  ಪೊಲೀಸರು ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದರು. ಕಮಲನಗರ ತಾಲೂಕು ಸಿಪಿಐ  ಅಮರಪ್ಪ ಶಿವಬಲ್ ನೇತೃತ್ವದಲ್ಲಿ ಕುಶನೂರ  ಪಿಎಸ್ ಐ ಸುಖಾನಂದ  ಹಾಗೂ ಪೊಲೀಸರ ತಂಡ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುತ್ತಿರುವವರನ್ನು ತಡೆದು ದಂಡ ವಿಧಿಸುವ ಬದಲು, ಹೆಲ್ಮೆಟ್ ನೀಡಿ ಅವರಿಗೆ ರಸ್ತೆ ಸುರಕ್ಷತೆ ಹಾಗೂ ಹೆಲ್ಮೆಟ್ ಧರಿಸುವಿಕೆಯ ಮಹತ್ವವನ್ನು ತಿಳಿಸಿಕೊಟ್ಟರು. ಹೆಲ್ಮೆಟ್ ಧರಿಸದ ಹಿನ್ನೆಲೆ ಸಾಕಷ್ಟು ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಹಾಗಾಗಿ, ಪೊಲೀಸರು ಕೇವಲ ದಂಡ ಹಾಕುವುದಕ್ಕೆ ಮಾತ್ರ ಸೀಮಿತವಾಗದೇ, ಜಾಗೃತಿಯೂ ಮೂಡಿಸುವ ಮೂಲಕ ಜನಸ್ನೇಹಿಯಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯ್ತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿ ಶರಣಾಗಿದ್ದಾರೆ. ಎಸ್ಪಿ ವಿಕ್ರಂ ಅಮಟೆ ಮುಂದೆ ನಕ್ಸಲ್ ರವೀಂದ್ರ ಶರಣಾಗಿದ್ದು, ನಾಗರಿಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ ಪೊಲೀಸರಿಗೆ ಶರಣಾಗಿದ್ದಾರೆ. ಜಿಲ್ಲೆಯಲ್ಲಿ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಮೇಲೆ 14 ಕೇಸ್ ಗಳಿವೆ, ಒಂದೂವರೆ ದಶಕದಿಂದ ಭೂಗತನಾಗಿದ್ದ ರವೀಂದ್ರ ಇದೀಗ ಮುಖ್ಯವಾಹಿನಿಗೆ ಆಗಮಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ದಾರರರಿಗೆ ಬಂಪರ್ ಆಫರ್ ನೀಡಲಾಗಿದೆ. 12 ಲಕ್ಷದವರೆಗೆ ಸಂಪೂರ್ಣ ತೆರಿಗೆಯಲ್ಲಿ ಡೊಡ್ಡ ವಿನಾಯತಿ ನೀಡಲಾಗಿದೆ. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಇರಲಿದೆ. ಟಿವಿ, ಮೊಬೈಲ್, ಎಲೆಕ್ಟ್ರಿಕ್ ಕಾರುಗಳು, ಔಷಧಿ ಮತ್ತು ಭಾರತದಲ್ಲಿ ತಯಾರಿಸಿದ ಬಟ್ಟೆಗಳು, ಚರ್ಮದ ವಸ್ತುಗಳೂ ಅಗ್ಗವಾಗಲಿವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಳಿಯ ಪದಾಧಿಕಾರಿಗಳು ಶುಕ್ರವಾರ ಸಂಜೆ ಕನ್ನಡ ಭವನದಲ್ಲಿ ವರಕವಿ ದ.ರಾ.ಬೇಂದ್ರೆಯವರ 129ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ಸಾಹಿತಿ ಡಾ.ಎಚ್.ಕೆ. ನರಸಿಂಹಮೂರ್ತಿ ಅವರು ಬೇಂದ್ರೆ ಅವರ ಕಾವ್ಯ ವೈಶಿಷ್ಟತೆಯ ಬಗ್ಗೆ ತಿಳಿಸಿದರು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷ ಹೋ.ಮ. ನಾಗರಾಜು, ಮಂಡಳಿಯ ಅಧ್ಯಕ್ಷ ಎ.ಓ. ನಾಗರಾಜು, ಕಾರ್ಯದರ್ಶಿ ಪಿಬಿ ವಿಶ್ವನಾಥ್, ಪದಾಧಿಕಾರಿಗಳಾದ ನಾಗಪ್ಪ ನೂರುದ್ದೀನ್ ಪ್ರಶಾಂತ್ ಕಲಾವಿದ ಶಿವಣ್ಣ ಇದ್ದರು. ವರದಿ: ನಂದೀಶ್ ನಾಯ್ಕ ಪಿ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ ಇದರ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಕಿರಣ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಕಿರಣ್ ಸಿಂಗ್ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್ ಎನ್. ಅವರ ಆದೇಶದಂತೆ ನಾನು ನುಡಿ ಗಡಿ ರಕ್ಷಣೆ ಹಾಗೂ ಸಂಘಟನೆ ಬಲಪಡಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲೆಯ ಪಾವಗಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದಿದೆ. ಈ ಅಪಘಾತದಲ್ಲಿ ಹತ್ತಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತಕ್ಷಣವೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ವಿವರ: ಬಿ.ಹೊಸಳ್ಳಿ ತಾಂಡ ಗ್ರಾಮದ ಲಂಬಾಣಿ ಸಮುದಾಯದ ಪುರುಷರು ಹಾಗೂ ಮಹಿಳಾ ಕಾರ್ಮಿಕರು ತಿರುಮಣಿ ಭಾಗದಲ್ಲಿ ಶುಕ್ರವಾರ ಸೆಂಟ್ರಿಂಗ್ ಕೆಲಸಕ್ಕೆ ತೆರಳಿ, ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಮರಳಿ ಬರುವ ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ 55 ವರ್ಷದ ತಿಪ್ಪ ನಾಯಕ್ ಅವರ ಒಂದು ಕೈ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಕ್ಷಮ್ಮ, ಅರುಣಾ, ಕಾವೇರಿ, ಶಾಂತಮ್ಮ, ಶಾಂತಾಬಾಯಿ, ಪ್ರಕಾಶ್, ದೇವಿ ಬಾಯಿ, ಸಕ್ಕಬಾಯಿ ಸೇರಿದಂತೆ ಹಲವರ ತಲೆ, ಸೊಂಟ ಹಾಗೂ ಇತರ ಅಂಗಾಂಗಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಪಾವಗಡ ಸಾರ್ವಜನಿಕ…

Read More