Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ತುಮಕೂರು: ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ತಿಳಿಸಿದರು. ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು ವರ್ಷಗಳ ಹಿಂದೆ ಕುಷ್ಠರೋಗವು ಯಾವುದೇ ಔಷಧೋಪಚಾರವಿಲ್ಲದೆ ಗುಣಮುಖವಾಗದ ಖಾಯಿಲೆಯಾಗಿತ್ತು. ಪ್ರಸ್ತುತ ಕುಷ್ಠರೋಗಕ್ಕೆ ಉಚಿತ ಔಷಧಿ ಲಭ್ಯವಿದ್ದು, ಸಕಾಲದಲ್ಲಿ ಚಿಕಿತ್ಸೆ ಪಡೆಯುವುದರಿಂದ ಕುಷ್ಠರೋಗದಿಂದ ಗುಣಮುಖ ಹೊಂದಬಹುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಶೇ.0.06ರಷ್ಟು ಮಾತ್ರ ಕುಷ್ಠರೋಗದ ಪ್ರಕರಣಗಳಿವೆ. ರಾಜ್ಯದಲ್ಲಿ 1,785 ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೇವಲ 40 ಕುಷ್ಠರೋಗ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಗುಣಮುಖರಾಗುತ್ತಿದ್ದಾರೆ ಎಂದು ಅವರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿ, ಹಿಂದಿನ ಕಾಲದಲ್ಲಿ ಕುಷ್ಠರೋಗವನ್ನು ಶಾಪಗ್ರಸ್ಥ ರೋಗವೆಂದು ಪರಿಗಣಿಸಲಾಗುತ್ತಿತ್ತು. ಜಿಲ್ಲೆಯ ಇತರೆ ತಾಲ್ಲೂಕುಗಳಿಗಿಂತ ಶಿರಾ, ಪಾವಗಡ, ಮಧುಗಿರಿ ತಾಲ್ಲೂಕಿನಲ್ಲಿ ಕುಷ್ಠರೋಗ…
ತುಮಕೂರು: ಅವಶ್ಯಕತೆಗಳನ್ನು ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಗಳಿಗೆ ಅಸಲು ಹಣಕ್ಕಿಂತ ಬಡ್ಡಿಯನ್ನೇ ಹೆಚ್ಚಾಗಿ ಕಟ್ಟಬೇಕಾಗುತ್ತದೆ. ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವ ಮುನ್ನ ಜನರು ಆಲೋಚಿಸಬೇಕು ಎಂದು ತಿಳಿಸಿದರು. ಸಾರ್ವಜನಿಕರು ತಮ್ಮ ಖರ್ಚು–ವೆಚ್ಚಗಳು ಇತಿ–ಮಿತಿಯೊಳಗಿರುವಂತೆ ಎಚ್ಚರವಹಿಸಬೇಕು. ಮೈಕ್ರೋ ಫೈನಾನ್ಸ್ ನಿಂದ ತಾವು ಸಾಲ ಪಡೆಯುವುದಲ್ಲದೆ ಸ್ನೇಹಿತರು, ಬಂಧುಗಳ ಹೆಸರಲ್ಲಿಯೂ ತೆಗೆದುಕೊಳ್ಳುತ್ತಿರುವುದು ಪರಿಶೀಲನೆ ವೇಳೆಯಲ್ಲಿ ಗಮನಕ್ಕೆ ಬಂದಿದೆ. ಸ್ನೇಹಿತರ ಸಾಲಕ್ಕೆ ಜಾಮೀನು ಹಾಕುವ ಮುನ್ನ ಯೋಚಿಸಬೇಕು. ಇದರಿಂದ ಸಾಲ ಪಡೆದವರು ಹಾಗೂ ಜಾಮೀನು ಹಾಕಿದವರೂ ಸಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿ ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಸ್ವ– ಸಹಾಯ ಗುಂಪುಗಳ ಸದಸ್ಯರಿಗೆ ಸರ್ಕಾರದ…
ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಕೋಚಿಂಗ್ ಸೆಂಟರ್ ನ ದಶಮಾನೋತ್ಸವ ಸಮಾರಂಭವು ತುಮಕೂರು ನಗರದ ಅಮಾನಿ ಕೆರೆ ಎದುರಿನ ಕನ್ನಡ ಭವನದಲ್ಲಿ ಫೆಬ್ರವರಿ 1ರಂದು ಅದ್ಧೂರಿಯಾಗಿ ನಡೆಯಲಿದೆ. ದೇಶದ ನಂಬರ್ 1 IAS ತರಬೇತುದಾರ ಹಾಗೂ ಅಕ್ಕ IAS ಅಕಾಡೆಮಿಯ ನಿರ್ದೇಶಕ ಡಾ.ಶಿವಕುಮಾರ್ ಮತ್ತು ಕನ್ನಡ–ತೆಲುಗು ಚಲನಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. BVS (ಭಾರತೀಯ ವಿದ್ಯಾರ್ಥಿ ಸಂಘ) ಸದಸ್ಯರು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು, ಹಾಗೂ ಅಂಬೇಡ್ಕರ್ ತತ್ವದಲ್ಲಿ ನಂಬಿಕೆ ಹೊಂದಿರುವ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದಾಗಿದೆ. ಬೆಳಿಗ್ಗೆ 10:30ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭಗೊಳ್ಳಲಿದೆ. IAS ತರಬೇತಿ ಹಾಗೂ ಸಾಮಾಜಿಕ ನ್ಯಾಯದ ಹೋರಾಟದ ಬಗ್ಗೆ ಮಹತ್ವದ ವಿಷಯಗಳು ಕಾರ್ಯಕ್ರಮದಲ್ಲಿ ಚರ್ಚೆಯಾಗಲಿವೆ. ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು : ಇತ್ತೀಚೆಗೆ ವಿಜಯಪುರ ಜಿಲ್ಲೆಯ ಗಾಂಧಿನಗರದಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕರ ಮೇಲೆ ನಡೆಸಲಾದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಇಂದು ತುಮಕೂರು ಜಿಲ್ಲೆಯ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ತಮ್ಮ ಮನವಿ ಪತ್ರದಲ್ಲಿ, ಪರಿಶಿಷ್ಟ ಜಾತಿ ಕೂಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಹಾಗೂ ಜಾತಿನಿಂದನೆಯ ಮಾಡಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ವಹಿಸುವುದಲ್ಲದೇ ಹಲ್ಲೆಗೊಳಗಾದ ವ್ಯಕ್ತಿಗಳ ಕುಟುಂಬಕ್ಕೆ ಸರ್ಕಾರ ನೆರವನ್ನು ನೀಡಬೇಕು, ಕೂಲಿ ಕಾರ್ಮಿಕರ ಕುಟುಂಬಕ್ಕೆ ಉದ್ಯೋಗ, ಪರಿಹಾರ, ಮೂಲಭೂತ ಸೌಕರ್ಯಗಳು ಹಾಗೂ ಸೂಕ್ತ ರಕ್ಷಣೆ ಕೊಡುವಂತೆ ನಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದೇವೆಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ತಿಳಿಸಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಊರಿನಲ್ಲಿ ನಡೆಯುವ ಜಾತ್ರೆಗೆಂದು ಉಮೇಶ್ ಮಾದಾರ, ಸದಾಶಿವ ಮಾದಾರ, ಸದಾಶಿವ ಬಬಲಾದಿ…
ಬೀದರ್: ನಗರದ ಭೀಮನಗರ ನಿವಾಸಿಯಾದ ಆರುತಿ (28) ಎಂಬ ಯುವತಿ ಕಾಣೆಯಾಗಿದ್ದು, ಅವರ ಮಾಹಿತಿ ದೊರೆತಲ್ಲಿ ತಿಳಿಸುವಂತೆ ಎಂದು ಬೀದರ್ ಉಪನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಆರುತಿ ಅವರು ಜ.24 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿದ್ದು, ಅವರು 5 ಅಡಿ ಎತ್ತರವಾಗಿದ್ದು ಸಾಧಾರಣ ಮೈಕಟ್ಟು , ಗೋಧಿ ಮೈಬಣ್ಣ, ಕಪ್ಪು ಕೂದಲು, ಉದ್ದ ಮುಖ, ಅಗಲ ಹಣೆ ಉಳ್ಳವರಾಗಿದ್ದಾರೆ. ಕಾಣೆಯಾದ ಸಮಯದಲ್ಲಿ ಮೈಮೇಲೆ ಚಾಕಲೇಟ್ ಕಲರ್ ಚೆಕ್ಸ್ ಚೂಡಿದಾರ ಸಲ್ವಾರ್ ಮತ್ತು ಟಾಪ್ ಧರಿಸಿರುವ ಇವರು ಕನ್ನಡ, ಹಿಂದಿ, ಮಾರಾಠಿ ಭಾಷೆಯಲ್ಲಿ ಮಾತನಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ ಈ ಕಾಣೆಯಾದ ಮಹಿಳೆ ಬಗ್ಗೆ ಮಾಹಿತಿ ದೊರೆತಲ್ಲಿ ಬೀದರ್ ನಗರ ಪೊಲೀಸ್ ಠಾಣೆಯ ಪಿ ಎಸ್ ಐ ಮೊಬೈಲ್ ಸಂಖ್ಯೆ: 9480803445 ಗೆ ಸಂಪರ್ಕಿಸುವಂತೆ ಕೋರಲಾಗಿದೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ನಗರದಲ್ಲಿ ಮಾದಕ ವಸ್ತುಗಳನ್ನಾಗಿ ಟೈಡಾಲ್ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆಡ್ ಪ್ಲಸ್ ನಲ್ಲಿ ಕೆಲಸ ಮಾಡುತ್ತಿದ್ದ ಭಾನುಪ್ರಕಾಶ್, ಮೆಡಿಕಲ್ ರೆಪ್ರೆಸೆಂಟಿವ್ ಕೆಲಸ ಮಾಡುತ್ತಿದ್ದ ರಾಘವೇಂದ್ರ, ಆಟೋ ಪ್ಲಾಸ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ, ಮೊಹಮ್ಮದ್ ಸೈಪ್ , ಸೈಯದ್ ಲುಕ್ಮಾನ್ , ಅಫ್ತಬ್ ಬಿನ್ ಹಮ್ಜು, ಗುರುರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ತುಮಕೂರು ನಗರದ ಹೊಸಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಐ.ಟಿ. ಬಡಾವಣೆ, ರೈಲ್ವೆ ಹಳಿಗಳ ಪಕ್ಕ, ಹಾಗೂ ಉಪ್ಪಾರಹಳ್ಳಿ ಬ್ರೀಡ್ಜ್, ಶ್ರೀದೇವಿ ಕಾಲೇಜುಗಳ ಬಳಿ , ಕೆಲ ಹುಡುಗರು ಮೆಡಿಕಲ್ ಶಾಪ್ ಗಳಲ್ಲಿ ಹೋಗಿ ಸದರಿ ಟೈಡಾಲ್ ಮಾತ್ರೆಗಳನ್ನು ಕೊಡುವಂತೆ ಕೇಳುತ್ತಿದ್ದರು. ಇದರಿಂದ ಪ್ರೇರೇಪಿತರಾದ ತುಮಕೂರು ನಗರದ ಮಧುಗಿರಿ ರಸ್ತೆಯಲ್ಲಿರುವ ಮೆಡ್ ಪ್ಲಸ್ ಮೆಡಿಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಭಾನು ಪ್ರಕಾಶ್ ಎಂಬುವನು ಮೆಡಿಕಲ್ ಗಳಿಗೆ ಬರುವವರುಗಳಿಗೆ ಟೈಡಾಲ್ ಮಾತ್ರೆಗಳನ್ನು ತಂದುಕೊಡುವಂತೆ ತಿಳಿಸಿದ್ದನು. ಅದರಲ್ಲಿ ಬೆಂಗಳೂರಿನಲ್ಲಿ ವಾಸವಾಗಿರುವ ರಾಘವೇಂದ್ರ…
ತುಮಕೂರು: ನಗರ ವ್ಯಾಪ್ತಿಯಲ್ಲಿರುವ ಸದಾಶಿವನಗರದ ಎಸ್.ಜಿ.ಆರ್. ಪ್ರೌಢಶಾಲೆ, ಶಿರಾ ಗೇಟ್ ನ ಶ್ರೀ ಕಾಳಿದಾಸ ಪದವಿಪೂರ್ವ ಕಾಲೇಜು, ಆದರ್ಶ ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆ, ಹೊರಪೇಟೆಯ ಶ್ರೀ ಚೈತನ್ಯ ಟೆಕ್ನೋಶಾಲೆ ಹಾಗೂ ಲೂರ್ದು ಮಾತಾ ಪ್ರೌಢಶಾಲೆಯಲ್ಲಿ ಫೆಬ್ರವರಿ 2ರಂದು ಬೆಳಿಗ್ಗೆ 10:30 ರಿಂದ 12 ಗಂಟೆ ಹಾಗೂ ಮಧ್ಯಾಹ್ನ 2 ರಿಂದ 3:30 ಗಂಟೆವರೆಗೆ ಎನ್‌ಎಂಎಂಎಸ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಆಯಾ ಪ್ರೌಢಶಾಲೆಗಳಿಂದ ಪಡೆದು, ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳಿಗೆ ಅರ್ಧ ಗಂಟೆ ಮುಂಚಿತವಾಗಿ ಹಾಜರಾಗಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನವರಿ 31ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದ್ದ ಕೆಡಿಪಿ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸ್ಥಳೀಯ ಸಂಸ್ಥೆಗಳಿಗೆ ಕಾಲ–ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ತಿಳಿಸಿದರು. ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ 5ನೇ ರಾಜ್ಯ ಹಣಕಾಸು ಆಯೋಗದ ವಿಷಯಗಳ ಕುರಿತು ಜಿಲ್ಲಾ ಪಂಚಾಯತಿಯಲ್ಲಿ ಬುಧವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೇಂದ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಗಮನದಲ್ಲಿಟ್ಟುಕೊಂಡು ಹಂಚಿಕೆ ಮಾಡಲಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ನಿರ್ಮಾಣ, ವಿದ್ಯುತ್ ಸೇರಿದಂತೆ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. “ತೆರಿಗೆ ಮೊದಲು–ಸೇವೆ ನಂತರ” ಎಂಬ ಧ್ಯೇಯವಾಕ್ಯದಡಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸಿ ಸರ್ಕಾರದ ಸೇವೆಗಳನ್ನು ಪಡೆಯಬೇಕೆಂಬ ಸಂದೇಶವನ್ನು…
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ತಿಳಿಸಿದ್ದಾರೆ. ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸಂಜೆ 4 ಗಂಟೆಗೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ ಎಂದು…