Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಭೋಪಾಲ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ವೈರಲ್ ಆಗಿದ್ದ 16 ವರ್ಷದ ಮೊನಾಲಿಸಾಗೆ ಸಿನಿಮಾ ಕ್ಷೇತ್ರದಲ್ಲಿ ಅವಕಾಶ ದೊರಕಿದೆ. ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಮತ್ತು ಅವರ ತಂಡ ಬುಧವಾರ ಮಧ್ಯಪ್ರದೇಶದ ಮಹೇಶ್ವರದಲ್ಲಿರುವ ಮೊನಾಲಿಸಾ ಅಲಿಯಾಸ್ ಮೋನಿ ಭೋನ್ಸಾಲೆ ಅವರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ತಮ್ಮ ಮುಂಬರುವ ‘ದಿ ಡೈರಿ ಆಫ್ ಮಣಿಪುರ’ ಚಿತ್ರಕ್ಕಾಗಿ ಮೊನಾಲಿಸಾ ಅವರನ್ನು ಆಯ್ಕೆ ಮಾಡಿದ್ದಾರೆ. ಮೊನಾಲಿಸಾ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುವ ಪ್ರಸ್ತಾಪವನ್ನು ಆಕೆಯ ಕುಟುಂಬ ಒಪ್ಪಿಕೊಂಡಿದೆ ಎಂದು ಸನೋಜ್ ಮಿಶ್ರಾ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎನ್.ಧರಂ ಸಿಂಗ್ ಅವರ ಸುಪುತ್ರ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಸಿಂಗ್ ಅವರ ಹುಟ್ಟುಹಬ್ಬವನ್ನು ಬೀದರ್ ಜಿಲ್ಲಾ ಬಸವಕಲ್ಯಾಣದ ಅವರ ನಿವಾಸದಲ್ಲಿ ಆಚರಿಸಲಾಯಿತು. ಕಾಂಗ್ರೆಸ್ ಮುಖಂಡರಾದ ಜೇಮ್ಸ್ ತಾರೆ ಅವರು ಶಾಲು ಹೊದಿಸಿ, ಹೂಗುಚ್ಛ ನೀಡಿ ಸನ್ಮಾನಿಸಿ ವಿಜಯ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಔರಾದ್ ತಾಲ್ಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ಸದಸ್ಯರಾದ ದತ್ತು ಗ್ರಾ.ಪಂ. ಸದಸ್ಯರಾದ ಶಿವಕುಮಾರ ಮೇತ್ರೆ, ಪವನ್ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿರುವುದಕ್ಕೆ ಉತ್ತರ ಪ್ರದೇಶದ ನಿರ್ಲಕ್ಷ್ಯ ಮತ್ತು ಆಡಳಿತದ ಸಂಪೂರ್ಣ ವೈಫಲ್ಯವೇ ಕಾರಣ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಆಯಾ ರಾಜ್ಯಗಳಿಂದ ಕುಂಭಕ್ಕೆ ಪ್ರಯಾಣಿಸುವ ಜನರ ಸುರಕ್ಷತೆ ಮತ್ತು ಭದ್ರತೆಯ ಖಾತ್ರಿಗೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಹಾಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಭಕ್ತರ ಸುರಕ್ಷತೆ ಮತ್ತು ಭದ್ರತೆ ಖಾತ್ರಿಗೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕು. ಎಲ್ಲಾ ರಾಜ್ಯಗಳು ಪ್ರಯಾಗ್ ರಾಜ್ ನಲ್ಲಿ ಸರಿಯಾದ ಸೌಲಭ್ಯ ಕೇಂದ್ರ ಸ್ಥಾಪಿಸಬೇಕು. ಈ ಕೇಂದ್ರಗಳು ತಮ್ಮ ರಾಜ್ಯಗಳಿಂದ ಬರುವ ಜನರಿಗೆ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳ ಬಗ್ಗೆ ಮೂಲಭೂತ ಮಾಹಿತಿಯನ್ನು ಒದಗಿಸಬೇಕು. ಒಂದು ವೇಳೆ ತುರ್ತು ವೇಳೆಯಲ್ಲಿ ನೆರವು ಕಲ್ಪಿಸಲು ಸಿದ್ಧರಾಗಬೇಕು ಎಂದು ಅವರು PILನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು : ಜಿಲ್ಲೆಯ ಮಧುಗಿರಿ ತಾಲೂಕಿನ ಚೋಳೋನಹಳ್ಳಿ ಕೆರೆಯಲ್ಲಿ ಕಳೆದ 24ರಂದು ಅದ್ದೂರಿ ತೆಪ್ಪೋತ್ಸವ ನಡೆದಿದ್ದು, ಇದೇ ಕೆರೆಯಲ್ಲಿ ಇದೀಗ ಸಹಕಾರ ಸಚಿವ ಕೆ.ಎನ್. ರಾಜಣ್ಣ 15 ದಿನಗಳ ಕಾಲ ಬೋಟಿಂಗ್ ಗೆ ಚಾಲನೆ ನೀಡಿದ್ದಾರೆ. ಸಚಿವರು ಕೆರೆಯನ್ನು ಖುದ್ದಾಗಿ ಪರಿಶೀಲಿಸಿ, ಏರಿಯನ್ನು ಅಗಲೀಕರಣಗೊಳಿಸುವುದು, ಬಂದೋಬಸ್ತ್ ವ್ಯವಸ್ಥೆ ಮಾಡುವುದು ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಜನರ ಪ್ರತಿಕ್ರಿಯೆಯನ್ನು ಆಧರಿಸಿ, ಭವಿಷ್ಯದಲ್ಲಿ ಈ ಕೆರೆಯಲ್ಲಿ ಶಾಶ್ವತ ಬೋಟಿಂಗ್ ವ್ಯವಸ್ಥೆಯನ್ನು ಸ್ಥಾಪಿಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಸ್ಥಳೀಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ಕೆರೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಯೋಜನೆಯನ್ನು ಸಚಿವರು ಹಾಕಿಕೊಂಡಿದ್ದಾರೆ. ಇದೆ ವೇಳೆ ಕೆರೆಯಲ್ಲಿ ಬೋಟಿಂಗ್ ಮಾಡಿ ಜಾಲಿ ಮೂಡ್ ನಲ್ಲಿ ಸಚಿವ ರಾಜಣ್ಣ ಸುತ್ತಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ತಾಲೂಕಿನ ಶಾಸಕರು ಹಾಗೂ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ನೂತನ ತುಮೂಲ್ ಅಧ್ಯಕ್ಷರಾಗಿ ಆಯ್ಕೆಯಾದ ಎಚ್.ವಿ.ವೆಂಕಟೇಶ್ ಅವರನ್ನು ಬುಧವಾರ ತುಮಕೂರು ನಗರದಲ್ಲಿ ಪಾವಗಡ ತಾಲೂಕಿನ ವಿವಿಧ ಲಂಬಾಣಿ ತಾಂಡಗಳ ಮುಖಂಡರು ಹಾಗೂ ಯುವಕರು ತೆರಳಿ ಅವರನ್ನು ಸನ್ಮಾನಿಸಿದರು. ಪಾವಗಡ ತಾಲೂಕಿನ ತಾಂಡಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವುದರ ಜೊತೆಗೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಇದೇ ವೇಳೆ ವಿನಂತಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಚ್ ವಿ ವೆಂಕಟೇಶ್ ಮಾತನಾಡಿ, ಈಗಾಗಲೇ ಪಾವಗಡ ತಾಲೂಕಿನ ಎಲ್ಲಾ ತಾಂಡಗಳ ಸಮಗ್ರ ಅಭಿವೃದ್ಧಿಗೆ ಭದ್ಧನಾಗಿದ್ದೇನೆ. ಜೊತೆಗೆ ಮುಂದಿನ ತಿಂಗಳು ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜಯಂತಿ ದಿನ ಸೇವಾಲಾಲ್ ವೃತ್ತ ನಿರ್ಮಾಣ ಬಗ್ಗೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಾವಗಡ ತಾಲ್ಲೂಕು ಎಲ್ಲಾ ತಾಂಡಾದ ಯುವಕರು ಹಾಜರಿದ್ದರು. ವರದಿ : ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು. ಪಟ್ಟಣದ ನವೀನ್ ಕಂಫಟ್‍ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನೂತನವಾಗಿ ಕೊರಟಗೆರೆ ಮಂಡಲ ಅಧ್ಯಕ್ಷರಿಗೆ ಅಭಿನಂದನಾ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ಮಂಡಲ ಅಧ್ಯಕ್ಷ ಎನ್ನವುದು ಒಂದು ಹುದ್ದೆ ಪ್ರೋಟೋಕಾಲ್ ಅಷ್ಟೇ. ನಾನು ಕೂಡ ಒಬ್ಬ ಬೂತ್ ಸದಸ್ಯನಾಗಿ ಕೆಲಸ ಮಾಡುತ್ತೇನೆ. ಇಲ್ಲಿ ಯಾರು ಅಧ್ಯಕ್ಷರಲ್ಲ ಎಲ್ಲರೂ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿ ಮುಂದೆ ಬರುವ ಜಿಪಂ, ತಾ.ಪಂ. ಹಾಗೂ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸ್ಪರ್ಧಿಸಿ ಬಿಜೆಪಿ ಪಕ್ಷವನ್ನ ನಮ್ಮ ಕ್ಷೇತ್ರದಲ್ಲಿ ಸದೃಢಗೊಳಿಸೋಣ ಎಂದು ತಿಳಿಸಿದರು. ನನಗೆ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಮುಖಂಡು ಹಾಗೂ ಕೊರಟಗೆರೆ ವಿಧಾನಸಭಾದ ಬಿಜೆಪಿ ಅಭ್ಯರ್ಥಿಯಾದ ಹಾಗೂ ನಿವೃತ್ತ ಐಎಎಸ್…
ತುಮಕೂರು: ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ (ರಿ), ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆ, ಹಿರೇಹಳ್ಳಿ, ತುಮಕೂರು ತಾಲ್ಲೂಕು 2024–25 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರೋಪ, ಪರಮ ಗುರುವಿನ ಪುತ್ಥಳಿ ಸ್ಥಾಪನಾ ದ್ವಿತೀಯ ವರ್ಷದ ವಾರ್ಷಿಕೋತ್ಸವ, ವಿದ್ವಾನ್ ಹರಳೂರು ಶಿವಕುಮಾರರ 51ನೇ ಕೃತಿ ಪ್ರದರ್ಶನ ಪರಿಚಯ, ಪ್ರತಿಭಾನ್ವಿತ ಮಕ್ಕಳನ್ನು “ಬೆಳ್ಳಿರಥ’’ದಲ್ಲಿ ಮೆರವಣಿಗೆ, ಶಾಲಾ ಹಿತೈಷಿಗಳಿಗೆ ಗೌರವ ಶ್ರೀರಕ್ಷೆ, ಸಾಂಸ್ಕೃತಿಕ ಸಂಭ್ರಮ ಸಮಾರಂಭವನ್ನು ಜನವರಿ 30ರಂದು 3 ಗಂಟೆಗೆ ಶ್ರೀ ಶಿವಕುಮಾರ ಮಹಾಶಿವಯೋಗಿಗಳ ವೇದಿಕೆ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ. ಶ್ರೀ ಸಿದ್ಧಗಂಗಾ ಸುಕ್ಷೇತ್ರದ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀಸಿದ್ಧಲಿಂಗ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ. ಬೆಂಗಳೂರು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಡಾ. ಶ್ರೀ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು ಉಪಸ್ಥಿತರಿರುವರು. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಿ. ಸುರೇಶ್‌ಗೌಡರವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕರಾದ ವಿದ್ವಾನ್ ಹರಳೂರು ಶಿವಕುಮಾರರವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಖ್ಯಾತ ಚಲನಚಿತ್ರ ನಟರಾದ ಹನುಮಂತೇಗೌಡರು ಉದ್ಘಾಟಿಸಲಿದ್ದಾರೆ. ಶ್ರೀ…
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ(ದಿನಾಂಕ: 10.01.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಹೆಚ್.ಡಿ. ಪ್ರಾರಂಭಿಸಿರಬೇಕು) ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ–1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್–ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕಡೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತುಮಕೂರು ಅಥವಾ ಇಲಾಖಾ ವೆಬ್ ಸೈಟ್ https://bcwd.karnataka.gov.in ಅಥವಾ ದೂ.ವಾ.ಸಂ 080–8050770004/ 0816–2955528ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು 1 ತಿಂಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲಾಗುವುದು. ಅರ್ಜಿದಾರರು ಪ.ಜಾತಿ ಅಥವಾ ಪ.ಪಂಗಡಕ್ಕೆ ಸೇರಿದವರಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಲಘು ವಾಹನ ಚಾಲನಾ ಪರವಾನಗಿಯನ್ನು ಪಡೆದಿರಬೇಕು. ನಗರ ಪ್ರದೇಶದವರ ವಾರ್ಷಿಕ ಆದಾಯ 2 ಲಕ್ಷ ರೂ. ಹಾಗೂ ಗ್ರಾಮಾಂತರ ಪ್ರದೇಶದವರ ವಾರ್ಷಿಕ ಆದಾಯ 1.50ಲಕ್ಷ ರೂ.ಗಳನ್ನು ಮೀರಬಾರದು. ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ/ಆದಾಯ ಪ್ರಮಾಣಪತ್ರ, ಖಾಯಂ ಲಘು ವಾಹನ ಚಾಲನಾ ಪರವಾನಗಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್, ಯಾವುದೇ ಸರ್ಕಾರಿ ಇಲಾಖೆ/ನಿಗಮ/ಮಂಡಳಿಗಳಲ್ಲಿ ಖಾಯಂ…
ಮಹಾರಾಷ್ಟ್ರ: ತಾಯಿಯ ಗರ್ಭದೊಳಗಿರುವ ಪುಟ್ಟ ಮಗುವಿನೊಳಗೂ ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ಗರ್ಭಿಣಿ ಮಹಿಳೆಯೊಬ್ಬರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸೋನೋಗ್ರಫಿ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಭಾರತದಲ್ಲಿ ಕೇವಲ 15ರಿಂದ 20 ಇಂತಹ ಪ್ರಕರಣಗಳು ಈವರೆಗೆ ವರದಿಯಾಗಿವೆ. ಮಹಿಳೆಗೆ 9 ತಿಂಗಳುಗಳಾಗಿವೆ, ಆಕೆ ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಹಿಂದೆ ಮಾಡಲಾದ ಯಾವುದೇ ಸ್ಕ್ಯಾನಿಂಗ್ ಗಳಲ್ಲೂ ಇದು ಪತ್ತೆಯಾಗಿರಲಿಲ್ಲ ಎಂದು ವೈದ್ಯರಾದ ಡಾ.ಪ್ರಸಾದ್ ಅಗರ್ವಾಲ್ ತಿಳಿಸಿದ್ದಾರೆ. ಅವಳಿಗಳ ಬೆಳವಣಿಗೆಯ ಸಂದರ್ಭಗಳಲ್ಲಿ ಈ ರೀತಿಯ ಸ್ಥಿತಿಗಳು ಉಂಟಾಗುತ್ತವೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4